ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ
ಬೆಂಗಳೂರು:ವಿಧಾನಮಂಡಲದ ಅಧಿವೇಶನವನ್ನು ಫೆಬ್ರವರಿ 12ರಿಂದ ಕರೆಯಲು ತೀರ್ಮಾನ ಕೈಗೊಂಡಿರುವ ರಾಜ್ಯ ಸಂಪುಟ, ಕರ್ನಾಟಕದ ಸಾಂಸ್ಕೃತಿಕ ನಾಯಕನನ್ನಾಗಿ ಬಸವಣ್ಣ ಅವರ ಹೆಸರನ್ನು ಘೋಷಣೆ ಮಾಡುವ ಮಹತ್ವದ ತೀರ್ಮಾನ ಕೈಗೊಂಡಿದೆ.
ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾನೂನು ಸಚಿವ ಎಚ್.ಕೆ.ಪಾಟೀಲ್, ಇಂದಿನ ಕಲುಷಿತ ವಾತಾವರಣದಲ್ಲಿ ಬಸವಣ್ಣ ಅವರ ತತ್ವ ಆದರ್ಶ ಎಲ್ಲಡೆ ಪಸರಿಸಬೇಕು. ಇದಕ್ಕೆ ಸರ್ಕಾರ ಎಲ್ಲಾ ರೀತಿಯ ಪ್ರೋತ್ಸಾಹ ನೀಡಲು ಸಂಪುಟ ಸಭೆ ನಿರ್ಧರಿಸಿದೆ ಎಂದರು.
ಅನುಭವ ಮಂಟಪ ಲೋಕಾರ್ಪಣೆ
ಮುಂದಿನ ವರ್ಷ ಅನುಭವ ಮಂಟಪದ ಲೋಕಾರ್ಪಣೆ ಮಾಡಲು ಸಭೆ ತೀರ್ಮಾನಿಸಿದ್ದು, ಮಂಟಪದ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸಂಬಂಧಪಟ್ಟವರಿಗೆ ಸೂಚಿಸಿದೆ.
ಫೆಬ್ರವರಿ 12 ರಂದು ವಿಧಾನಮಂಡಲದ ಜಂಟಿ ಅಧಿವೇಶನ ನಡೆಯಲಿದ್ದು, ಫೆ. 16 ರಂದು ಬಜೆಟ್ ಮಂಡನೆ ಆಗಲಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಫೆ. 23ರ ವರೆಗೆ ಉಭಯ ಸದನಗಳ ಅಧಿವೇಶನ ನಡೆಯಲಿದೆ.
ನೇಮಕಾತಿ ಆದೇಶ ಪತ್ರ ನೀಡಿದ ರಾಮಲಿಂಗಾರೆಡ್ಡಿ
ಚಿಕ್ಕಮಗಳೂರಿನ ಬಾಬಾ ಬುಡನ್‌ಗಿರಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಶಿಫಾರಸು ಮಾಡಲು ಸಚಿವ ಸಂಪುಟ ಉಪಸಮಿತಿ ರಚಿಸಲಾಗಿದೆ.
ಅಲ್ಲಮಪ್ರಭು ಹೆಸರು ನಾಮಕರಣ
ಶಿವಮೊಗ್ಗದ ಹಳೇ ಜೈಲು ಆವರಣದ ಉದ್ಯಾನವನಕ್ಕೆ ಅಲ್ಲಮಪ್ರಭು ಹೆಸರು ನಾಮಕರಣಕ್ಕೆ ನಿರ್ಣಯಿಸಲಾಯಿತು. ಬೆಳಗಾವಿಯ ಕಿತ್ತೂರು ತಾಲೂಕಿನ ಹೆಸರನ್ನು ಚೆನ್ನಮ್ಮನ ಕಿತ್ತೂರು ಎಂದು ನಾಮಕರಣ ಮಾಡಲು ನಿರ್ಧಾರ ಮಾಡಲಾಯಿತು ಎಂದರು.
ಕರ್ನಾಟಕ ವಿದ್ಯುತ್ ನಿಗಮದ 4,430 ಕೋಟಿ ರೂ. ಸಾಲಕ್ಕೆ ಸರ್ಕಾರಿ ಖಾತರಿ ನೀಡಲು ಸಂಪುಟ ಸಭೆ ನಿರ್ಣಯ ಕೈಗೊಂಡಿದ್ದು, ಗೃಹ ಜ್ಯೋತಿ ಯೋಜನೆ ಅನುಷ್ಠಾನ ಆದೇಶ ಮಾರ್ಪಡಿಸಿ ಶೇ.10 ಬದಲು ಹೆಚ್ಚುವರಿ 10 ಯೂನಿಟ್ ಒದಗಿಸಲು ಸಮ್ಮತಿಸಿದೆ.
ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಲ್ಲಿ ಸಮಗ್ರ ವಿ.ವಿ. ಮತ್ತು ಕಾಲೇಜು ನಿರ್ವಹಣಾ ತಂತ್ರಾಂಶ 15.13 ಕೋಟಿ ರೂ. ವೆಚ್ಚದಲ್ಲಿ ಸಿದ್ಧಪಡಿಸಿ ಅನುಷ್ಠಾನಕ್ಕೆ ಸಂಪುಟ ಒಪ್ಪಿಗೆ ನೀಡಿದ್ದು, 30 ಸೀಟರ್ ಕಾಲ್ ಸೆಂಟರ್ ಸ್ಥಾಪನೆಗೆ ಸಮ್ಮತಿಸಲಾಗಿದೆ.
ಸಾರಿಗೆ ಕಾರ್ಮಿಕರ ಸಾಮಾಜಿಕ ಭದ್ರತೆ
ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮತ್ತು ಕಲ್ಯಾಣ ಸುಂಕ ವಿಧೇಯಕ 2024 ಕ್ಕೆ ಅನುಮೋದನೆ ನೀಡಿದೆ.
ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆ ಅಂತರಸಂತೆಯ ಹಾಗೂ ಇತರ ಜನವಸತಿಗಳಿಗೆ ಜಲಜೀವನ ಮಿಷನ್‌ಗೆ 101.73 ಕೋಟಿ ರೂ. ಬಹುಗ್ರಾಮ ಕುಡಿಯುವ ನೀರು ಯೋಜನೆ, ಹಂಪಾಪುರ ಹಾಗೂ 48 ಜನವಸತಿಗಳಿಗೆ 65.07 ಕೋಟಿ ರೂ. ವೆಚ್ಚದ ಕುಡಿಯುವ ನೀರು ಯೋಜನೆ ಅನುಷ್ಠಾನಕ್ಕೆ ಅನುಮೋದನೆ ನೀಡಿದೆ.
ಟಿ.ನರಸೀಪುರ ತಾಲೂಕಿನ ದೊಡ್ಡ ಬಾಗಿಲು ಮತ್ತು 24 ಜನವಸತಿಗಳಿಗೆ 34 ಕೋಟಿ ರೂ. ವೆಚ್ಚದ ಬಹು ಗ್ರಾಮದ ಕುಡಿಯುವ ನೀರು ಯೋಜನೆಗೆ ಅನುಮೋದನೆ ನೀಡಲಾಗಿದೆ.
ಹಲಸೂರು ಕೆರೆ ಬಳಿ ಪ್ರವಾಸಿ ಸೌಧ ನಿರ್ಮಾಣ
ಆನೇಕಲ್‌ನ ಅಂಬೇಡ್ಕರ್ ಭವನಕ್ಕೆ ಪರಿಷ್ಕೃತ 17.40 ಕೋಟಿ ರೂ. ವೆಚ್ಚಕ್ಕೆ ಅನುಮೋದನೆ ನೀಡಿದ್ದು, ಹಲಸೂರು ಕೆರೆಯ ಬಳಿ ಪ್ರವಾಸಿ ಸೌಧ ನಿರ್ಮಾಣಕ್ಕೆ 18 ಕೋಟಿ ರೂ.ಗೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ.
ರಾಜ್ಯದಲ್ಲಿ ನೋಂದಾಯಿತ ವಾಹನಗಳ ಸ್ಕ್ಯ್ರಾಪಿಂಗ್ ನೀತಿಯ ಕ್ರಮ ಸಂಖ್ಯೆ 9ನ್ನು ಪರಿಷ್ಕರಣೆಗೆ ಅನುಮೋದನೆ ನೀಡಲಾಗಿದೆ.
ಕೊಡಗು ಜಿಲ್ಲೆಯ ಪೊನ್ನಂಪೇಟೆ ಗ್ರಾಮ ಪಂಚಾಯತ್ ಅನ್ನು ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೇಗೇರಿಸುವುದಕ್ಕೆ ನಿರ್ಧಾರ ಮಾಡಲಾಗಿದೆ ಎಂದು ಹೇಳಿದರು.
2 comments
[…] ರಾಜಕೀಯ […]
[…] ರಾಜಕೀಯ […]