ಕುಮಾರಸ್ವಾಮಿಗೆ ಕೇಂದ್ರ ಗೃಹಸಚಿವ ಅಮಿತ್ ಷಾ ಕಿವಿ ಮಾತು
ಬೆಂಗಳೂರು:ಕರ್ನಾಟಕ ಕಾಂಗ್ರೆಸ್‌ನ ಓಟಕ್ಕೆ ಕಡಿವಾಣ ಹಾಕಲು ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಯುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಲಹೆ ನೀಡಿದ್ದಾರೆ.
ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಕುಮಾರಸ್ವಾಮಿ ದೆಹಲಿಯಲ್ಲಿ ಈ ನಾಯಕರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ ಸಂದರ್ಭದಲ್ಲಿ ಅಮಿತ್ ಷಾ, ನಾಲ್ಕು ಕ್ಷೇತ್ರಗಳನ್ನು ಹೆಸರಿಸಿ, ಇವುಗಳ ಪೈಕಿ ಒಂದರಲ್ಲಿ ಕಣಕ್ಕಿಳಿಯುವಂತೆ ಹೇಳಿದ್ದಾರೆ.
ರಾಜ್ಯದ28ಲೋಕಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಬಿಜೆಪಿ ನಡೆಸಿರುವ ಚುನಾವಣಾ ಪೂರ್ವ ಸಮೀಕ್ಷೆಯನ್ನು ಮುಂದಿಟ್ಟುಕೊಂಡು ಚರ್ಚೆ ಮಾಡಿರುವ ನಾಯಕರು ಕೆಲವು ಕ್ಷೇತ್ರಗಳಲ್ಲಿ ವರ್ಚಸ್ವಿ ಮತ್ತು ಪ್ರಭಾವಿ ನಾಯಕರನ್ನು ಕಣಕ್ಕಿಳಿಸುವ ಬಗ್ಗೆಯೂ ತೀರ್ಮಾನ ಕೈಗೊಂಡಿದ್ದಾರೆ.
28ಕ್ಷೇತ್ರಗಳ ಪೈಕಿ ಜೆಡಿಎಸ್‌ಗೆ ಹಾಸನ, ಮಂಡ್ಯ, ತುಮಕೂರು ಹಾಗೂ ಕೋಲಾರ ಕ್ಷೇತ್ರಗಳನ್ನು ನೀಡಿರುವ ಮುಖಂಡರು ಚಿಕ್ಕಬಳ್ಳಾಪುರ ಇಲ್ಲವೇ ಬೆಂಗಳೂರು ಗ್ರಾಮಾಂತರ ಕೊನೆ ಗಳಿಗೆಯಲ್ಲಿ ಈ ಪಕ್ಷಕ್ಕೆ ದಕ್ಕುವ ಸಾಧ್ಯತೆ ಇದೆ.
ಕರ್ನಾಟಕದಲ್ಲಿ ಗೆಲುವೇ ಮಾನದಂಡ ಎಂಬುದನ್ನು ಆಧಾರವಾಗಿಟ್ಟುಕೊಂಡೇ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಗ್ಗೆ ತೀರ್ಮಾನ ಕೈಗೊಂಡಿದ್ದಾರೆ. ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ನಂತರ ದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ಜೆಡಿಎಸ್ ಅಧಿಕೃತವಾಗಿ ಎನ್‌ಡಿಎ ಮೈತ್ರಿಕೂಟ ಸೇರಲಿದೆ. ಅಂದಿನ ಸಮಾರಂಭದಲ್ಲೇ ಕರ್ನಾಟಕದಲ್ಲಿ ಸೀಟು ಹಂಚಿಕೆ ಹಾಗೂ ಯಾರಿಗೆ ಯಾವ ಕ್ಷೇತ್ರ ಎಂಬ ಪಟ್ಟಿಯೂ ಹೊರಬೀಳಿಲಿದೆ.
ವಿಧಾನಸೌಧ ಮೆಟ್ಟಿಲ ಮೇಲೆ ಜನತಾದರ್ಶನ
ಕೇಂದ್ರ ನಾಯಕರೊಂದಿಗೆ ಚರ್ಚೆ ನಡೆಸಿದ ನಂತರ ಇಂದು ದೆಹಲಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಬಲಪಡಿಸಿ ಎಲ್ಲಾ 28ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವುದೇ ಮುಂದಿನ ಗುರಿ. ಬಿಜೆಪಿ ಗುರಿಯೂ ಇದೇ ಆಗಿದೆ, ರಾಜ್ಯಕ್ಕೆ ಒಳ್ಳೆಯದಾಗಬೇಕು ಎಂಬ ಏಕೈಕ ಉದ್ದೇಶದಿಂದ ಎನ್‌ಡಿಎ ಮೈತ್ರಿಕೂಟವನ್ನು ಜೆಡಿಎಸ್ ಸೇರಿದೆ ಎಂದರು.
ಕ್ಷೇತ್ರ ಹಂಚಿಕೆ ಬಗ್ಗೆ ಎರಡೂ ಪಕ್ಷಗಳಲ್ಲಿ ಗೊಂದಲವಿಲ್ಲ
ರಾಜ್ಯದ ಸ್ಥಿತಿಗತಿ, ಕ್ಷೇತ್ರಾವಾರು ಪರಿಸ್ಥಿತಿ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಬಳಿ ಸಮೀಕ್ಷಾ ವರದಿಗಳಿವೆ, ನಮ್ಮ ಪಕ್ಷವೂ ವರದಿ ಸಿದ್ಧ ಮಾಡಿದೆ, ಎರಡೂ ಕಡೆಯ ಮಾಹಿತಿ ಹಾಗೂ ವರದಿಗಳ ಬಗ್ಗೆ ಸುದೀರ್ಘ ಮತ್ತು ಮುಕ್ತ ಚರ್ಚೆ ಮಾಡಿದ್ದೇವೆ.
ಕ್ಷೇತ್ರಗಳ ಹಂಚಿಕೆ ಬಗ್ಗೆ ಎರಡೂ ಪಕ್ಷಗಳಲ್ಲಿ ಅತ್ಯಂತ ಸೌಹಾರ್ದ ಮನೋಭಾವನೆ ಇದೆ, ಯಾವುದೇ ಗೊಂದಲ ಇಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳಬಯಸುತ್ತೇನೆ ಎಂದು ಹೇಳಿದರು.
ನೇಮಕಾತಿ ಆದೇಶ ಪತ್ರ ನೀಡಿದ ರಾಮಲಿಂಗಾರೆಡ್ಡಿ
ಜೆಡಿಎಸ್ ಚಿಕ್ಕ ಪಕ್ಷ, ಬಿಜೆಪಿ ದೊಡ್ಡ ಪಕ್ಷ ಎಂಬ ಬೇಧ-ಭಾವವಿಲ್ಲದೆ, ಕೇಂದ್ರ ಗೃಹ ಸಚಿವ ಅಮಿತ್ ಷಾ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅತ್ಯಂತ ಪ್ರೀತಿ, ವಿಶ್ವಾಸ ಹಾಗೂ ಸ್ನೇಹಪೂರ್ವಕವಾಗಿ ಮಾತುಕತೆ ನಡೆಸಿದರು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮೇಲೆ ಬಿಜೆಪಿ ಕೇಂದ್ರ ನಾಯಕರು ಅಪಾರ ಗೌರವ ಇಟ್ಟುಕೊಂಡಿದ್ದಾರೆ. ನಮ್ಮ ಹಾಗೂ ಪಕ್ಷದ ನಡವಳಿಕೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ, ಅವರ ನಂಬಿಕೆ, ವಿಶ್ವಾಸಕ್ಕೆ ಧಕ್ಕೆ ಬಾರದ ರೀತಿಯಲ್ಲಿ ನಡೆದುಕೊಳ್ಳುತ್ತೇವೆ, ಪರಸ್ಪರ ವಿಶ್ವಾಸ, ನಂಬಿಕೆ ತಳಹದಿಯ ಮೇಲೆ ಮೈತ್ರಿ ಚಿರಕಾಲ ಮುಂದುವರಿಯುತ್ತದೆ ಎಂಬ ವಿಶ್ವಾಸವಿದೆ ಎಂದರು.
ಕೇಂದ್ರ ಸಚಿವರಾಗುವುದನ್ನು ಅಲ್ಲಗಳೆದ ಕುಮಾರಸ್ವಾಮಿ
ತಾವು ಕೇಂದ್ರ ಸಚಿವರಾಗುವ ವದಂತಿಗಳನ್ನು ಸಾರಾಸಗಟಾಗಿ ಅಲ್ಲಗಳೆದ ಕುಮಾರಸ್ವಾಮಿ, ಯಾವ ಕಾರಣಕ್ಕೆ ಈ ಸುದ್ದಿ ಹುಟ್ಟಿಕೊಂಡಿತು ಎನ್ನುವುದು ಈಗಲೂ ಯಕ್ಷ ಪ್ರಶ್ನೆಯಾಗಿಯೇ ಉಳಿದಿದೆ, ಯಾವ ಮೂಲಗಳಿಂದ ಇದು ಅಷ್ಟು ಪ್ರಾಮುಖ್ಯತೆ ಪಡೆಯಿತು ಎನ್ನುವುದೂ ಗೊತ್ತಿಲ್ಲ, ಎಲ್ಲಿಂದ ಹುಟ್ಟಿತು ಎನ್ನುವುದೂ ತಿಳಿದಿಲ್ಲ, ಮಾಧ್ಯಮಗಳ ಮೂಲಕವೇ ತಮಗೂ ಗೊತ್ತಾಯಿತು ಎಂದರು.
ಲೋಕಸಭಾ ಚುನಾವಣೆ ಹತ್ತಿರದಲ್ಲಿರುವಾಗ ಕೇಂದ್ರ ಮಂತ್ರಿಯಾಗಿ ಮಾಡುವುದೇನಿದೆ, ಇಷ್ಟು ಅಲ್ಪ ಅವಧಿಯಲ್ಲಿ ರಾಜ್ಯಕ್ಕೆ, ರಾಷ್ಟ್ರಕ್ಕೆ ಏನು ಸೇವೆ ಮಾಡಲು ಸಾಧ್ಯ, ಚುನಾವಣಾ ನೀತಿ ಸಂಹಿತೆ ಜಾರಿಯಾದ ಮೇಲೆ ಏನನ್ನೂ ಮಾಡಲು ಸಾಧ್ಯವಿಲ್ಲ, ಅದರಿಂದ ಉಪಯೋಗವೂ ಇಲ್ಲ. ಯಾವ ಕಾರಣಕ್ಕೆ ಆ ಸುದ್ದಿ ಹುಟ್ಟಿಕೊಂಡಿತು ಎನ್ನುವುದು ಅರ್ಥವಾಗುತ್ತಿಲ್ಲ. ಕೇಂದ್ರ ಸಚಿವನಾಗಬೇಕು ಎನ್ನುವ ಆಸಕ್ತಿಯೂ ಇಲ್ಲ. ನನಗಿರುವ ಉದ್ದೇಶ ಒಂದೇ, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಎಲ್ಲಾ ೨೮ ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಬೇಕು ಎಂಬುದೇ ಮುಂದಿರುವ ಎಕೈಕ ಅಜೆಂಡಾ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದರು.