Thursday, June 11, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, June 11, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ರಾಜ್ಯಗಳ ತೆರಿಗೆ ಪಾಲಿನಲ್ಲಿ ವಂಚನೆ

by admin January 19, 2024
written by admin January 19, 2024 0 comments 2 minutes read
3FacebookTwitterPinterestEmail
190


ಶೇ.42 ರಿಂದ ಶೇ.32ಕ್ಕೆ ಇಳಿಸುವ ಕೇಂದ್ರದ ಸಂಚು ಬಯಲು

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಜ್ಯಗಳ ತೆರಿಗೆ ಪಾಲಿನ ಹಣವನ್ನು ಪ್ರಸ್ತಾವಿತ ಶೇಕಡ 42 ರಿಂದ ಶೇ.32ಕ್ಕೆ ಇಳಿಸಲು ನಡೆಸಿದ ಸಂಚು ಬಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಮುಖ್ಯಮಂತ್ರಿ, ರಾಜ್ಯಗಳ ಪರಿಸ್ಥಿತಿ ಏನೇ ಆದರೂ, ಕೇಂದ್ರ ಸರ್ಕಾರದ ಪಾಲಿಗೆ ಹೆಚ್ಚಿನ ತೆರಿಗೆ ಹಣ ಉಳಿಸಿಕೊಳ್ಳಬೇಕು ಎನ್ನುವ ಕುತಂತ್ರ ಫಲಿಸದೆ ಅನಿವಾರ್ಯವಾಗಿ ತಮ್ಮ ಅವಧಿಯ ಪ್ರಥಮ ಬಜೆಟ್ ಮಂಡನೆಗೆ 48 ಗಂಟೆಗಳ ಮುನ್ನ ಆಯವ್ಯಯವನ್ನು ತಿದ್ದಿಬರೆಯುವ ಕೆಲಸಕ್ಕೆ ಕೈಹಾಕಿದ್ದರು ಎನ್ನುವುದು ಜಗಜ್ಜಾಹೀರಾಗಿದೆ ಎಂದು ಟೀಕಿಸಿದ್ದಾರೆ.

ಕಳವಳಕಾರಿ ಬೆಳವಣಿಗೆ

ರಾಜ್ಯಗಳಿಗೆ ಹಂಚಿಕೆಯಾದ ಹಣವನ್ನು ಗಮನಾರ್ಹವಾಗಿ ಕಡಿತಗೊಳಿಸುವ ಏಕೈಕ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ, ಭಾರತೀಯ ಹಣಕಾಸು ಆಯೋಗದೊಂದಿಗೆ ರಹಸ್ಯ ಮಾತುಕತೆಗಳಲ್ಲಿ 2014ರಿಂದ ತೊಡಗಿಸಿಕೊಂಡಿದ್ದರು ಎನ್ನುವುದು ಕಳವಳಕಾರಿ ಬೆಳವಣಿಗೆಯಾಗಿದೆ.

ಒಳ ಮೀಸಲಾತಿ ನುಣಚಿಕೊಂಡ ರಾಜ್ಯ ಸರ್ಕಾರ

ಒಕ್ಕೂಟ ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿರುವ ಭಾರತದ ರಾಜ್ಯಗಳ ಆರ್ಥಿಕ ಸ್ವಾಯತ್ತತೆಯನ್ನೇ ಬುಡಮೇಲು ಮಾಡುವಂತಹ ಕೇಂದ್ರ ಸರ್ಕಾರದ ಗೋಪ್ಯ ಅಜೆಂಡಾವನ್ನು ನೀತಿ ಆಯೋಗದ ಸಿಇಒ ಬಿ.ವಿ.ಆರ್. ಸುಬ್ರಮಣ್ಯಂ ಬಹಿರಂಗ ಪಡಿಸಿದ್ದಾರೆ.

ಬಜೆಟ್ ಸಿದ್ಧತೆಯಲ್ಲಿ ಖುದ್ದು ಪಾಲ್ಗೊಂಡಿದ್ದ ಅವರು, ಬಹಿರಂಗಪಡಿಸಿರುವ ಕಟುಸತ್ಯಗಳು ದೇಶದ ಅಸಂಖ್ಯಾತ ಬಡಜನರ ದೈನಂದಿನ ಬದುಕು, ಭವಿಷ್ಯವನ್ನು ಮೋದಿ ಎಂತಹ ಕರಿನೆರಳಿಗೆ ದೂಡಿದ್ದರು ಮತ್ತು ತಮ್ಮ ಕುತ್ಸಿತ ಕಾರ್ಯಸಾಧನೆಗಾಗಿ ಅರ್ಥ ಸಚಿವರು ಹಾಗೂ ಅರ್ಥ ಸಚಿವಾಲಯವನ್ನೇ ಹೊರಗಿಟ್ಟು ಆತುರಾತುರವಾಗಿ ರೂಪಿಸಿದ ಬಜೆಟ್‌ನಲ್ಲಿ ಕಲ್ಯಾಣ ಕಾರ್ಯಕ್ರಮಗಳಿಗೆ ಎಳ್ಳುನೀರು ಬಿಟ್ಟಿದ್ದರು ಎನ್ನುವುದು ಸಾಭೀತಾಗಿದೆ.

ಆದ್ಯತಾ ವಲಯದ ಅನುದಾನ ಅರ್ಧಕ್ಕೆ ಕಡಿತ

ಉದಾಹರಣೆಗೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣದಂತಹ ಆದ್ಯತಾ ವಲಯಕ್ಕೆ ನಿಗದಿಪಡಿಸಲಾಗಿದ್ದ 36,000 ಕೋಟಿ ರೂ. ಅನುದಾನವನ್ನು ಸರಾಸರಿ ಅರ್ಧಕ್ಕೆ ಇಳಿಸುವ ಮೂಲಕ ಮಹಿಳೆಯರು ಮತ್ತು ಮಕ್ಕಳು ಎರಡನೇ ದರ್ಜೆ ನಾಗರಿಕರೇ ಎನ್ನುವಂತಹ ಅನುಮಾನ ಹುಟ್ಟಿಸುವ ಧೋರಣೆಯನ್ನು ಕೇಂದ್ರ ಅನುಸರಿಸಿದೆ.

ಅಲ್ಲದೆ, ಹಿಂದಿನ ವಿತ್ತೀಯ ಅವಧಿಯಲ್ಲಿ ಶಾಲಾ ಶಿಕ್ಷಣಕ್ಕೆ ನೀಡಲಾಗಿದ್ದ ಅನುದಾನದಲ್ಲಿ ಶೇಕಡ 18.4 ರಷ್ಟು ಇಳಿಕೆ ಮಾಡುವ ಮೂಲಕ ಮಕ್ಕಳ ಭವಿಷ್ಯವನ್ನು ಚಿವುಟಿಹಾಕಲಾಗಿದೆ.

ಕೇಂದ್ರ ಸರ್ಕಾರವು ಆಯವ್ಯಯೇತರ ಸಾಲದ ಮೇಲೆ ಅವಲಂಬನೆ ಹೊಂದಿತ್ತು ಎಂಬುದು ಕೇಂದ್ರದ ಆರ್ಥಿಕ ಸ್ಥಿತಿಗತಿಯ ಬಗ್ಗೆ ಗಂಭೀರ ಕಳವಳ ಉಂಟುಮಾಡುತ್ತದೆ.

ಸಾಲದ ಸತ್ಯ ದಾಖಲೆಗಳಿಂದ ಹೊರಗಿಡುವ ತಂತ್ರ

ಸಾಲದ ಸತ್ಯವನ್ನು ದಾಖಲೆಗಳಿಂದ ಹೊರಗಿಡುವ ತಂತ್ರಗಳಿಂದ ಸರ್ಕಾರದ ಮೇಲಿನ ಋಣಭಾರ ಕಮ್ಮಿಯಾಗುವುದಿಲ್ಲ, ಅಂತಿಮವಾಗಿ ಸಾಲದ ಶೂಲೆ ನಾಗರಿಕರ ಹೆಗಲ ಮೇಲೆ ಬೀಳುವುದು ಸತ್ಯ.

ಇಂತಹ ಅಪ್ರಾಮಾಣಿಕ ಆರ್ಥಿಕ ಕಸರತ್ತುಗಳು ಸರ್ಕಾರದ ಪಾರದರ್ಶಕತೆ ಮತ್ತು ಜವಾಬ್ದಾರಿಯುತ ಆಡಳಿತದ ಬಗ್ಗೆ ಗಾಢ ಸಂಶಯ ಉಂಟು ಮಾಡುತ್ತದೆ. ಅಪ್ರಾಮಾಣಿಕ ನಡೆಗಳ ಪರಿಣಾಮ ಏನಾಗುತ್ತದೆ ಎಂಬುದನ್ನು 2022ರ ಮಹಾಲೇಖಪಾಲರ ವರದಿ ವಿವರಿಸುತ್ತದೆ.

1.69 ಲಕ್ಷ ಕೋಟಿ ರೂ. ಸಾಲ

ಕೇಂದ್ರದ ಅರ್ಥ ವ್ಯವಸ್ಥೆಗೆ ಕನ್ನಡಿ ಹಿಡಿದಿರುವ ಈ ವರದಿಯಲ್ಲಿನ ಒಂದು ಪ್ರಮುಖ ಅಂಶವೆಂದರೆ, ಸರ್ಕಾರದ ಅಡಿಯಲ್ಲಿ ಬರುವ ವಿವಿಧ ಸಂಸ್ಥೆಗಳು 1.69 ಲಕ್ಷ ಕೋಟಿ ರೂ.ನಷ್ಟು ಸಾಲವನ್ನು ಮರೆಮಾಚಿರುವುದನ್ನು ಬಹಿರಂಗ ಪಡಿಸಿರುವುದಾಗಿದೆ.

ರಾಜ್ಯ ಸರ್ಕಾರಗಳ ಜೊತೆ ಹಂಚಿಕೊಳ್ಳದ ಸೆಸ್ ಮತ್ತು ಸರ್ಚಾರ್ಜ್‌ಗಳನ್ನು ನಿರಂತರವಾಗಿ ಏರಿಸುತ್ತಲೇ ಬಂದಿರುವ ಕೇಂದ್ರ ಸರ್ಕಾರ ರಾಜ್ಯಗಳಿಗೆ ದಕ್ಕಬೇಕಿರುವ ನ್ಯಾಯಯುತ ಹಕ್ಕುಗಳಿಂದ ವಂಚಿತವಾಗಿಸುವ ಹುನ್ನಾರ ನಡೆಸಿದೆ.

ಫೆ.12ರಿಂದ ವಿಧಾನಮಂಡಲ ಅಧಿವೇಶನ

ಆಯವ್ಯಯ ಮತ್ತು ಆಡಳಿತ ಕುರಿತ ಸಂಶೋಧನಾ ಸಂಸ್ಥೆ ‘ಆಯವ್ಯಯ ಮತ್ತು ಆಡಳಿತ ಹೊಣೆಗಾರಿಕಾ ಕೇಂದ್ರ’ದ ಮಾಲಿನಿ ಚಕ್ರವರ್ತಿ ಅವರು, ಕೇಂದ್ರದ ಈ ನಡೆ ರಾಜ್ಯಗಳ ಪಾಲನ್ನು ಕಸಿದು ತನ್ನ ಪಾಲನ್ನು ಹೆಚ್ಚಿಸಿಕೊಳ್ಳುವ ತಂತ್ರವಿರುವುದು ಭಾಸವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸೆಸ್ ಮತ್ತು ಸರ್ಚಾರ್ಜ್‌ಗಳ ಪಾಲು ಏರಿಕೆ

ಕೇಂದ್ರದ ಈ ದಮನಕಾರಿ ನೀತಿಯಿಂದಾಗಿ ಒಟ್ಟು ತೆರಿಗೆಯಲ್ಲಿ ಸೆಸ್ ಮತ್ತು ಸರ್ಚಾರ್ಜ್‌ಗಳ ಪಾಲು 2011-12ರಲ್ಲಿ ಶೇಕಡ 10.4 ಇದ್ದದ್ದು 2021-22 ರ ವೇಳೆಗೆ ಶೇ.18.4ಕ್ಕೆ ಏರಿಕೆಯಾಗಿದೆ.

ಇಂತಹ ಸಾರ್ವತ್ರಿಕ ಸಂಗತಿಗಳನ್ನು ಸಂವಿಧಾನಬದ್ಧವಾಗಿ ಒಕ್ಕೂಟ ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿರುವ ಎಲ್ಲರೂ ಸಾರ್ವಜನಿಕವಾಗಿ ಅತ್ಯಂತ ತುರ್ತಾಗಿ ಚರ್ಚಿಸಬೇಕಿದೆ.

ಇದು ಹೀಗೇ ಮುಂದುವರಿದರೆ ಕರ್ನಾಟಕದಂತಹ ಪ್ರಗತಿಪರ ರಾಜ್ಯಗಳು ಕೇಂದ್ರದ ಕುಟಿಲ ಆರ್ಥಿಕ ಕ್ರಮಗಳ ಹೊರೆಯನ್ನು ಹೊರುತ್ತಲೇ ಇರಬೇಕಾಗುತ್ತದೆ. ಅಲ್ಲದೆ, ಪ್ರಾಮಾಣಿಕವಾಗಿ ತೆರಿಗೆ ಕಟ್ಟುವ ಜನರಿಗೆ ಮೋಸ ಮಾಡಿದಂತಾಗುತ್ತದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಭಾರತ ಒಕ್ಕೂಟದ ಎಲ್ಲ ರಾಜ್ಯಗಳೊಂದಿಗೆ ಕೇಂದ್ರ ಸರ್ಕಾರ ತನ್ನ ಸಂಪನ್ಮೂಲವನ್ನು ನ್ಯಾಯುತವಾಗಿ, ಸಮತೆಯ ತತ್ವದಡಿಯಲ್ಲಿ ಹಂಚಿಕೊಳ್ಳಲು ಇನ್ನೂ ಕಾಲಮಿಂಚಿಲ್ಲ.

ತೆರಿಗೆಯ ಪಾಲು, ಸಂಪನ್ಮೂಲ ಹಂಚಿಕೆಯ ವಿಚಾರವಾಗಿ ಕರ್ನಾಟಕ ಸೇರಿದಂತೆ ದಕ್ಷಿಣದ ಎಲ್ಲ ರಾಜ್ಯಗಳು ಎತ್ತುತ್ತಿರುವ ನ್ಯಾಯಯುತ ದನಿಯನ್ನು ಹತ್ತಿಕ್ಕುವ ಯತ್ನವನ್ನು ಕೇಂದ್ರ ಇನ್ನಾದರೂ ಕೈಬಿಟ್ಟು, ತನ್ನ ವಿತ್ತೀಯ ನಡತೆಯನ್ನು ಸರಿಪಡಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
central share hikepmoSiddaramaiahstates loosing it's share in tax
3 FacebookTwitterPinterestEmail
admin

previous post
ಒಳ ಮೀಸಲಾತಿ ನುಣಚಿಕೊಂಡ ರಾಜ್ಯ ಸರ್ಕಾರ
next post
ಪ್ರಧಾನಿಗೆ ಡಿಕೆಶಿ ಹಾರ್ದಿಕ ಸ್ವಾಗತ

You may also like

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (486)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,980)
  • ರಾಜ್ಯ (2,294)
  • ರಾಷ್ಟ್ರ (2,262)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026

KMS Special

  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ