ಸಕಲ ಸಿದ್ಧತೆ ಮಾಡಿಕೊಳ್ಳುತ್ತಿರುವ ಆಯೋಗ
ಬೆಂಗಳೂರು: ಮುಂಬರುವ ಮಾರ್ಚ್ ಮೊದಲ ವಾರ ರಾಷ್ಟದ ಲೋಕಸಭೆ ಸಾರ್ವತ್ರಿಕ ಚುನಾವಣೆ- 2024ರ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆಗಳಿವೆ
ಭಾರತದ ಚುನಾವಣಾ ಆಯೋಗವು ಮುಕ್ತ ಮತ್ತು ಶಾಂತಿಯುತ ಚುನಾವಣೆ ನಡೆಸಲು ತಯಾರಿ ಆರಂಭಿಸಿದೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಏಳರಿಂದ ಹನ್ನೊಂದು ಹಂತಗಳಲ್ಲಿ ಮತದಾನ ನಡೆಸಲು ಉದ್ದೇಶಿಸಲಾಗಿದೆ, ಲೋಕಸಭೆಯ 543 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಂಡಿದೆ.
ಕರ್ನಾಟಕದಲ್ಲಿ ಆರ್‌ಎಸ್‌ಎಸ್ ಸರ್ಕಾರವೇ!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿ, ಫೆಬ್ರವರಿ 23ರ ಒಳಗೆ 2024-25ನೇ ಸಾಲಿನ ಮುಂಗಡಪತ್ರಕ್ಕೆ ಅನುಮತಿ ಪಡೆದುಕೊಳ್ಳಬೇಕು ಎಂದಿದ್ದಾರೆ.
ಫೆಬ್ರವರಿಯಲ್ಲೇ ಕರ್ನಾಟಕ ಬಜೆಟ್ ಗೆ ಒಪ್ಪಿಗೆ
ಚುನಾವಣಾ ಆಯೋಗವು ಎಲ್ಲಾ ರಾಜ್ಯಗಳಿಗೆ ಮಾಹಿತಿ ನೀಡಿ, ಫೆಬ್ರವರಿ ಮೂರನೇ ವಾರದ ವೇಳೆಗೆ ಮುಂಗಡಪತ್ರ ಮಂಡಿಸಿ ಅನುಮೋದನೆ ಪಡೆದುಕೊಳ್ಳುವಂತೆ ಮತ್ತು ಸರ್ಕಾರದ ಯೋಜನೆಗಳ ಅನುಷ್ಟಾನಕ್ಕೆ ಗಡುವು ನೀಡಿದೆ.
ಆಯೋಗದ ಸಲಹೆಯಂತೆ ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಫೆಬ್ರವರಿ 12 ರಂದು ವಿಧಾನಮಂಡಲದ ಅಧಿವೇಶನ ಕರೆದು ಫೆಬ್ರವರಿ 16ರಂದು ಬಜೆಟ್ ಮಂಡನೆ ಮಾಡುವ ತೀರ್ಮಾನವನ್ನು ಸರ್ಕಾರ ಕೈಗೊಂಡಿತು.
ಈ ಬಾರಿಯೂ ಕರ್ನಾಟಕದಲ್ಲಿ ಎರಡು ಹಂತದ ಮತದಾನ
ಸರ್ಕಾರಕ್ಕೆ ಬಂದಿರುವ ಉನ್ನತ ಮೂಲಗಳ ಮಾಹಿತಿ ಪ್ರಕಾರ ಕರ್ನಾಟಕದ 28 ಲೋಕಸಭಾ ಸ್ಥಾನಗಳಿಗೆ ಈ ಬಾರಿಯೂ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ.
ಏಪ್ರಿಲ್ ಅಂತ್ಯದ ವೇಳೆಗೆ ನಮ್ಮಲ್ಲಿ ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ. ಆದರೆ ಮತ ಎಣಿಕೆ ಮೇ ಮೂರನೇ ವಾರದಲ್ಲಿ ನಡೆಯುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಧಾನಿಗೆ ಡಿಕೆಶಿ ಹಾರ್ದಿಕ ಸ್ವಾಗತ
ಚುನಾವಣಾ ಆಯೋಗದ ಸಲಹೆಯಂತೆ ಜನವರಿ ಮೂರನೇ ವಾರದ ನಂತರ ಸರ್ಕಾರ ಯಾವುದೇ ವರ್ಗಾವರ್ಗಿಗಳನ್ನು ಮಾಡುವಂತಿಲ್ಲ. ಆ ನಂತರ ಆಯೋಗ ತನಗೆ ಬೇಕಾದಂತೆ ಅಧಿಕಾರಿಗಳನ್ನು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ನಿಯೋಜಿಸಿಕೊಳ್ಳಬಹುದು, ಇದರಲ್ಲಿ ಸರ್ಕಾರಕ್ಕೆ ಯಾವುದೇ ಅಧಿಕಾರ ಇರುವುದಿಲ್ಲ.
ಮಾರ್ಚ್ ಮೊದಲ ವಾರದಲ್ಲಿ ವೇಳಾಪಟ್ಟಿ ಪ್ರಕಟಗೊಂಡ ನಂತರ ಫಲಿತಾಂಶ ಹಾಗೂ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.
ಕ್ಷೇತ್ರಾಭಿವೃದ್ಧಿಗಾಗಿ ಶಾಸಕರಿಗೆ ತಲಾ 25 ಕೋಟಿ ರೂ.
ನೀತಿ ಸಂಹಿತೆ ಜಾರಿಗೆ ಮುನ್ನ ಶಾಸಕರ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಿ ಪ್ರಮುಖ ಮೂಲಸೌಕರ್ಯ ಕಾಮಗಾರಿಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಅವರು ಪ್ರತಿ ಕ್ಷೇತ್ರಕ್ಕೆ ತಲಾ 25 ಕೋಟಿ ರೂ. ಬಿಡುಗಡೆಗೆ ಮುಂದಾಗಿದ್ದಾರೆ.
17ನೇ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕರ್ನಾಟಕದ 28 ಕ್ಷೇತ್ರಗಳಿಗೆ ಏಪ್ರಿಲ್ 18 ಮತ್ತು 23ರಂದು ಎರಡು ಹಂತಗಳಲ್ಲಿ ಮತದಾನ ನಡೆದಿತ್ತು.
ಫಲಿತಾಂಶ ಪ್ರಕಟಗೊಂಡ ನಂತರ ಬಿಜೆಪಿ ಮೊದಲ ಬಾರಿಗೆ 25 ಸ್ಥಾನಗಳಲ್ಲೂ, ಕಾಂಗ್ರೆಸ್, ಜೆಡಿಎಸ್ ಮತ್ತು ಪಕ್ಷೇತರರು ತಲಾ ಒಂದು ಸ್ಥಾನಗಳಲ್ಲಿ ಜಯ ಗಳಿಸಿದ್ದರು.
ಅಂದು ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಇತ್ತು, ಅಂದಿನ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಹಿರಿಯ ನಾಯಕರಾದ ಕೆ.ಎಚ್.ಮುನಿಯಪ್ಪ, ವೀರಪ್ಪ ಮೊಯಿಲಿ, ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಬಿಜೆಪಿ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ವಿರುದ್ಧ ಸೋಲನ್ನು ಅನು ಭವಿಸಿದ್ದರು.