ಯುವಜನರಿಗೆ ಉದ್ಯೋಗ ಕಲ್ಪಿಸಲು ಯತ್ನ
ಬೆಂಗಳೂರು:ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸುವ ಹಾಗೂ ನಿರುದ್ಯೋಗ ಸಮಸ್ಯೆ ಬಗೆಹರಿಸಿ ಯುವಜನರಿಗೆ ಉದ್ಯೋಗ ಕಲ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರು ಮತ್ತು ಅಧಿಕಾರಿಗಳ ತಂಡ ರಚಿಸಿದ್ದಾರೆ.
ಯಾವ ಇಲಾಖೆಯಲ್ಲಿ ಉದ್ಯೋಗ ಸೃಷ್ಠಿ ಮಾಡಬಹುದು ಹಾಗೂ ತಮ್ಮ ಪ್ರಭಾವದಿಂದ ಖಾಸಗಿ ಮತ್ತು ಕೇಂದ್ರದ ಉದ್ಯಮಗಳಲ್ಲಿ ರಾಜ್ಯದ ಯುವಜನತೆಗೆ ಉದ್ಯೋಗ ಕಲ್ಪಿಸುವ ಸಾಧ್ಯತೆಗಳನ್ನು ಈ ತಂಡ ಕಂಡುಕೊಳ್ಳಲಿದೆ.
ವೈದ್ಯಕೀಯ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಸಮಿತಿ ಅಧ್ಯಕ್ಷರಾಗಿದ್ದು, ಸಚಿವರಾದ ಎಂ.ಬಿ. ಪಾಟೀಲ್, ಎಚ್.ಕೆ.ಪಾಟೀಲ್, ಡಾ.ಎಂ.ಸಿ. ಸುಧಾಕರ್, ದಿನೇಶ್ ಗುಂಡೂ ರಾವ್, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್, ಡಿ.ನಾಗೇಂದ್ರ ಹಾಗೂ ಈ ಸಚಿವರ ಇಲಾಖೆಗೆ ಸೇರಿದ ಪ್ರಧಾನ ಕಾರ್ಯದರ್ಶಿಗಳು ಮತ್ತು ಕಾರ್ಯದರ್ಶಿಗಳು ತಂಡದ ಸದಸ್ಯರಾಗಿರುತ್ತಾರೆ.
ತಂಡವು ರಾಜ್ಯ, ಪ್ರಾದೇಶಿಕ ಹಾಗೂ ಜಿಲ್ಲಾ ಮಟ್ಟದಲ್ಲಿ ಬೃಹತ್, ಸಣ್ಣ ಕೈಗಾರಿಕೆ, ಸಾಫ್ಟ್‌ವೇರ್ ಉದ್ಯಮಿಗಳ ಸಹಯೋಗದೊಂದಿಗೆ ಉದ್ಯೋಗ ಮೇಳಗಳನ್ನು ಆಯೋಜನೆ ಮಾಡಲಿದೆ.
ಪ್ರಧಾನಿಗೆ ಡಿಕೆಶಿ ಹಾರ್ದಿಕ ಸ್ವಾಗತ
ಉದ್ಯೋಗ ಮೇಳ ನಡೆಸುವುದರಿಂದ ಐಟಿ-ಬಿಟಿ, ಹೋಟೆಲ್, ಉತ್ಪಾದನಾ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಗ್ರಾಮೀಣ ಭಾಗದ ಯುವಕ-ಯುವತಿಯರಿಗೆ ಹೆಚ್ಚಿನ ಅವಕಾಶ ಸಿಗಲಿದೆ.
1 comment
[…] ಉದ್ಯೋಗ […]