ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ
ಬೆಂಗಳೂರು:ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಜನವರಿ 22ರಂದು ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕದಲ್ಲಿ ಧಾರ್ಮಿಕ ಸಭೆ, ಮೆರವಣಿಗೆಗಳನ್ನು ನಿಷೇಧಿಸಿದ್ದು, ದೇವಸ್ಥಾನದ ಆವರಣದಲ್ಲಿ ಪೂಜೆಗೆ ಮಾತ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ.
ಕಾಂಗ್ರೆಸ್ ಆಡಳಿತ ಇರುವ ಕರ್ನಾಟಕದಲ್ಲಿ ಕಿಡಿಗೇಡಿಗಳು ಈ ಸಂದರ್ಭವನ್ನು ದುರುಪಯೋಗ ಮಾಡಿಕೊಂಡು ಕಾನೂನು-ಸುವ್ಯವಸ್ಥೆ ಹಾಳು ಮಾಡಬಹುದೆಂಬ ಮಾಹಿತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉನ್ನತ ಮಟ್ಟದ ಸಭೆ ನಡೆಸಿ, ಪೊಲೀಸರಿಗೆ ಬಿಗಿ ಭದ್ರತೆ ಕೈಗೊಳ್ಳುವಂತೆ ಆದೇಶಿಸಿದ್ದಾರೆ.
ರಾಮನಿಗೂ ಕರ್ನಾಟಕಕ್ಕೂ ಯುಗ-ಯುಗಾಂತರ ಸಂಬಂಧ
ಜನವರಿ 21ರಿಂದ ಮೂರು ದಿನಗಳ ಕಾಲ ಯಾವುದೇ ಪೊಲೀಸ್ ಸಿಬ್ಬಂದಿ ರಜೆ ತೆಗೆದುಕೊಳ್ಳುವಂತಿಲ್ಲ, ರಜೆ ಮೇಲೆ ಹೋಗಿರುವವರೂ ಕರ್ತವ್ಯಕ್ಕೆ ಹಾಜರಾಗುವಂತೆ ಗೃಹ ಇಲಾಖೆ ಸೂಚಿಸಿದೆ.
ಈ ಹಿಂದಿನ ಕೋಮು ಗಲಭೆಗಳ ಬಗ್ಗೆ ಮಾಹಿತಿ ಪಡೆದಿರುವ ಪೊಲೀಸರು, ಅಂತಹ ಗಲಭೆಗಳಲ್ಲಿ ಭಾಗಿಯಾಗಿದ್ದವರ ಮೇಲೂ ಹದ್ದಿನ ಕಣ್ಣು ಇಡಬೇಕು. ಜೊತೆಗೆ ಆಯಾ ಪೊಲೀಸ್ ಠಾಣೆಗಳ ರೌಡಿಶೀಟರ್‌ಗಳು ಮತ್ತು ಹಳೆಯ ಆರೋಪಿಗಳು, ಸಮಾಜದ ಸ್ವಾಸ್ತ್ಯ ಕದಡುವ ವ್ಯಕ್ತಿಗಳ ಚಟುವಟಿಕೆಗಳ ಮೇಲೆ ನಿಗಾ ವಹಿಸಲಾಗಿದೆ.
ಕರ್ನಾಟಕದಿಂದ ಹೆಚ್ಚು ಸ್ಥಾನ ಗೆಲ್ಲಸಿ
ಕರ್ನಾಟಕದ ಕೆಲವು ಭಾಗಗಳಲ್ಲಿ ಕೋಮು ಗಲಭೆಗಳು ಮರುಕಳಿಸಬಹುದಾದ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಹೆಚ್ಚಾಗಿ ಅಳವಡಿಸುವುದು, ಕಾನೂನುಬಾಹಿರ ಚಟುವಟಿಕೆಗಳ ಮೇಲೆ ನಿಗಾ ಇಡಲು ಡ್ರೋನ್ ಕ್ಯಾಮೆರಾ ಬಳಸಿಕೊಳ್ಳುವಂತೆಯೂ ತಿಳಿಸಲಾಗಿದೆ.
ಖಾಸಗಿ ಡ್ರೋನ್ ಕ್ಯಾಮರಾ ಬಳಸದಂತೆ ಕಟ್ಟಾದೇಶ
ಖಾಸಗಿಯವರು ಯಾವುದೇ ಕಾರಣಕ್ಕೂ ಈ ದಿನಗಳಲ್ಲಿ ಡ್ರೋನ್‌ಗಳನ್ನು ಬಳಸದಂತೆ ಕಟ್ಟಾದೇಶ ಮಾಡಲಾಗಿದೆ.
ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಾಂತಿ-ಸೌಹಾರ್ದತಾ ಸಭೆಗಳನ್ನು ನಡೆಸಬೇಕು, ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಪಡೆ ನಿಯೋಜಿಸುವುದಲ್ಲದೆ, ಹಿರಿಯ ಪೊಲೀಸ್ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಗಸ್ತು ಹೆಚ್ಚಿಸುವಂತೆ ಆದೇಶಿಸಲಾಗಿದೆ.
ಶ್ರೀಗಂಧ, ಬೀಟೆ, ತೇಗಕ್ಕೆ ಜಿಯೋ ಟ್ಯಾಗ್
ವಿವಿಧ ಜಿಲ್ಲೆಗಳು, ಪಟ್ಟಣಗಳ ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳು, ಪ್ರಾರ್ಥನಾ ಮಂದಿರಗಳ ಬಳಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಿ ಭದ್ರತೆಯನ್ನು ಬಿಗಿಗೊಳಿಸಬೇಕು. ಪರಿಸ್ಥಿತಿಯ ಮೇಲೆ ಹಿರಿಯ ಪೊಲೀಸ್ ಅಧಿಕಾರಿಗಳು ನಿಗಾ ವಹಿಸಬೇಕು.
ಶಾಂತಿಪಾಲನಾ ಸಭೆ ನಡೆಸಲು ಸೂಚನೆ
ಠಾಣೆಗಳ ವ್ಯಾಪ್ತಿಯಲ್ಲಿ ಎಲ್ಲಾ ಧರ್ಮಗಳ ಮುಖಂಡರನ್ನು ಕರೆಸಿ ಶಾಂತಿಪಾಲನಾ ಸಭೆ ನಡೆಸಿ ಶಾಂತಿ, ಸುವ್ಯವಸ್ಥೆ ಕಾಪಾಡುವಂತೆ ಸೂಚಿಸಲಾಗಿದೆ. ತಮ್ಮ ಸಮುದಾಯದ ಮುಖಂಡರಿಗೆ ಸಲಹೆ ನೀಡಿ, ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುವವರ ಬಗ್ಗೆ ಮಾಹಿತಿ ನೀಡಲು ತಿಳಿಸುವಂತೆ ಮುಖಂಡರಿಗೆ ಹಿರಿಯ ಅಧಿಕಾರಿಗಳು ಸೂಚಿಸಲಿದ್ದಾರೆ.
ಕೋಮು ಸಾಮರಸ್ಯಕ್ಕೆ ಧಕ್ಕೆ ತರುವ ಕೃತ್ಯಗಳ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡುವವರ ಮೇಲೆ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಮುಖ್ಯಮಂತ್ರಿ ಅವರ ಸೂಚನೆ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಸಿಟಿ ಪೊಲೀಸ್ ಕಮೀಷನರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠರಿಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸುವಂತೆ ಆದೇಶಿಸಿದ್ದಾರೆ.
ಮಾರ್ಚ್ ಆದಿಯಲ್ಲಿ ಲೋಕಸಭೆ ಚುನಾವಣೆ ವೇಳಾಪಟ್ಟಿ
ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಸಂದರ್ಭದಲ್ಲಿ ರಾಜ್ಯದಲ್ಲೂ ಪೂಜೆ-ಪುನಸ್ಕಾರಗಳು ನಡೆಯುತ್ತವೆ. ಇದು ಸೂಕ್ಷ್ಮ ವಿಚಾರವಾಗಿದ್ದು, ಕಾನೂನುಬಾಹಿರ ಚಟುವಟಿಕೆಗಳಿಗೆ ಆಸ್ಪದ ನೀಡದಂತೆ ಕ್ರಮ ಕೈಗೊಳ್ಳಿ ಎಂದಿದ್ದಾರೆ.
ಪೊಲೀಸ್ ಹಿರಿಯ ಅಧಿಕಾರಿಗಳು, ಜಿಲ್ಲಾ ಆಡಳಿತದ ಜೊತೆ ಈ ಸಂಬಂಧ ಚರ್ಚೆ ನಡೆಸಿ ಕೆಲವು ಸಲಹೆ-ಸೂಚನೆಗಳನ್ನು ನೀಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಕಾಂಗ್ರೆಸ್‌ನ ಹಿರಿಯ ನಾಯಕ ಬಿ.ಕೆ ಹರಿಪ್ರಸಾದ್ ಅವರ ಗೋಧ್ರಾ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸರ್ಕಾರ, ಕರ್ನಾಟಕದಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ನೀಡಿದ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಗೃಹ ಸಚಿವಾಲಯ ಪೊಲೀಸ್ ಸಿಬ್ಬಂದಿಗೆ ಈ ರೀತಿ ಆದೇಶ ರವಾನಿಸಿದೆ.

1 comment
[…] All ರಾಜಕೀಯ Special Story […]