Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ರಾಮಪ್ರಾಣ ಪ್ರತಿಷ್ಠಾಪನೆಗೆ ಕರ್ನಾಟಕದಲ್ಲಿಲ್ಲ ರಜೆ

by admin January 21, 2024
written by admin January 21, 2024 2 comments 3 minutes read
5FacebookTwitterPinterestEmail
457
ಶಿವಕುಮಾರ ಶ್ರೀಗಳಿಗೆ ಭಾರತ ರತ್ನ ನೀಡಲು ಕೇಂದ್ರಕ್ಕೆ ಪತ್ರ

ತುಮಕೂರು: ಸಿದ್ಧಗಂಗಾಮಠ ಶ್ರೀ ಶಿವಕುಮಾರಮಹಾಶಿವಯೋಗಿ ಸ್ವಾಮೀಜಿ ಅವರು ಬಸವಾದಿ ಶರಣರ ಆಶಯಗಳನ್ನು ಆಚರಿಸಲು ಬದುಕನ್ನು ಮುಡಿಪಾಗಿಟ್ಟು ನುಡಿದಂತೆ ನಡೆದ ಮಹಾಯೋಗಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಕರ್ನಾಟಕ ರತ್ನ ಶತಾಯುಷಿ ಪರಮಪೂಜ್ಯ ಡಾ.ಶ್ರೀ ಶಿವಕುಮಾರ ಮಹಾಸ್ವಾಮಿಗಳ ಸ್ಮರಣಾರ್ಥ ನಿರ್ಮಿಸಿರುವ “ಸ್ಮೃತಿ ವನ” ವನ್ನು ಉದ್ಘಾಟಿಸಿ, ಶ್ರೀಗಳ 5 ನೇ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಶ್ರೀ ಶಿವಕುಮಾರಮಹಾಶಿವಯೋಗಿಗಳಿಗೆ ಭಾರತ ರತ್ನ ನೀಡಬೇಕು.  ಇದಕ್ಕಾಗಿ ಕೇಂದ್ರಕ್ಕೆ ಪತ್ರ ಬರೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಕಾಡಿನಿಂದ ಐಸ್ ಕ್ರೀಮ್ ವರೆಗೆ ಸೀತಾಫಲದ ಮಹಿಮೆ…!

12 ನೇ ಶತಮಾನದಲ್ಲೇ ಬಸವಾದಿ ಶರಣರು ಜಾತಿ ರಹಿತ, ವರ್ಗ ರಹಿತ ಸಮಾನತಾ ಸಮಾಜ ನಿರ್ಮಾಣಕ್ಕಾಗಿ ಕ್ರಾಂತಿಯನ್ನೇ ಮಾಡಿದ್ದರು. ಮನುಷ್ಯ ಕುಲ ಇರುವವರೆಗೂ ಶಾಶ್ವತವಾಗಿ ಉಳಿಯುವ ಸಂದೇಶ ಮತ್ತು ಮೌಲ್ಯಗಳನ್ನು ಬಿಟ್ಟು ಹೋಗಿದ್ದಾರೆ. ಈ ಮೌಲ್ಯಗಳನ್ನು ಪಾಲಿಸುವುದೇ ಬಸವಾದಿ ಶರಣರಿಗೆ ಸಲ್ಲಿಸುವ ಗೌರವ ಎಂದರು.‌

ನಮಗೆ ಸಂವಿಧಾನ ಧರ್ಮಗ್ರಂಥ

ಭಾರತ ಸಂವಿಧಾನದ ಆಶಯ ಮತ್ತು ಬಸವಾದಿ ಶರಣರ ಹೋರಾಟದ ಆಶಯ ಒಂದೇ ಆಗಿದೆ. ನಮಗೆ ಸಂವಿಧಾನ ಧರ್ಮಗ್ರಂಥ ಇದ್ದ ಹಾಗೆ. ಜನರ ಬದುಕನ್ನು ಎತ್ತಿರುವುದೇ  ಈ ಸಂವಿಧಾನ ಎಂಬ ಧರ್ಮಗ್ರಂಥದ ಆಶಯ ಎಂದು ವಿವರಿಸಿದರು.

ಕಾಯಕ ಮತ್ತು ದಾಸೋಹ ಎರಡೂ ಜೀವನ ಮೌಲ್ಯಗಳು. ಈ ಮೌಲ್ಯಗಳನ್ನು ಪೂಜ್ಯರು ತಮ್ಮ ಬದುಕಿನುದ್ದಕ್ಕೂ ಆಚರಿಸಿದ್ದರು‌. ಇಂದು 10 ಸಾವಿರ ಮಕ್ಕಳಿಗೆ ಮಠದಲ್ಲಿ ವಿದ್ಯೆ, ವಸತಿ, ಅನ್ನ ಪಡೆಯುತ್ತಿದ್ದಾರೆ ಎಂದರೆ ಶಿವಕುಮಾರಮಹಾಯೋಗಿಗಳ ಬದುಕಿನ ಆಚರಣೆಯೇ ಕಾರಣ ಎಂದು ಮುಖ್ಯಮಂತ್ರಿಗಳು ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು.

ಕೆಎಸ್ ಡಿಎಲ್ ನಿಂದ 21 ನೂತನ ಉತ್ಪನ್ನ ಬಿಡುಗಡೆ

ನಂಜುಂಡಪ್ಪ ಅವರ ವರದಿಯಂತೆ ಸರ್ಕಾರ ಕೆಲಸ ಮಾಡುತ್ತಿದೆ. ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ದಕ್ಷಿಣ ಮತ್ತು ಉತ್ತರ ಕರ್ನಾಟಕ ನಡುವಿನ ಅಭಿವೃದ್ಧಿಯ ತಾರತಮ್ಯವನ್ನು ಹೋಗಲಾಡಿಸಲು ಸರ್ಕಾರ ಶ್ರಮಿಸುತ್ತಿದೆ. ಶಿಕ್ಷಣದ ಮೂಲಕ ತಾರತಮ್ಯ ಮತ್ತು ಅಸಮಾನ ಪ್ರಜ್ಞೆಯನ್ನು ಅಳಿಸಲು ಸಾಧ್ಯವಿದೆ.  ಬಸವಾದಿ ಶರಣರ ತತ್ವಾದರ್ಶಗಳು ಸಮಾಜದಲ್ಲಿ ಜಾರಿ ಆದಾಗ ಮಾತ್ರ  ಸಮಾನ ಅವಕಾಶಗಳು ಸೃಷ್ಟಿಯಾಗಲು ಸಾಧ್ಯ ಎಂದರು.

ಶಿವಕುಮಾರ ಸ್ವಾಮಿಗಳು ಬದುಕಿನುದ್ದಕ್ಕೂ ಅಕ್ಷರ ಸಂಸ್ಕೃತಿ ಮೂಲಕ ಸಮಾಜದಲ್ಲಿ ಕ್ರಾಂತಿಕಾರಕ‌ ಬದಲಾವಣೆ ತರಲು ಶ್ರಮಿಸಿದರು‌. ಹೀಗಾಗಿ ಶ್ರೀಗಳ ಕಾರ್ಯ, ಕಾಳಜಿ ಮತ್ತು ಅವರ ನಡೆ-ನುಡಿ ಈ ಮಣ್ಣಿನಲ್ಲಿ ಅಜರಾಮರ ಆಗಿ ಉಳಿಯಲಿದೆ ಎಂದರು.

ಕೊಬ್ಬರಿ ಬೆಳೆಗಾರರಿಗೆ  ಕ್ವಿಂಟಾಲಿಗೆ 1500 ರೂ.

ರಾಜ್ಯ ಸರ್ಕಾರದಿಂದ ಕೊಬ್ಬರಿ ಬೆಳೆಗಾರರಿಗೆ  ಕೇಂದ್ರ ಸರ್ಕಾರ ನೀಡುವ   ಕನಿಷ್ಠ ಬೆಂಬಲ ಬೆಲೆ 12000 ರೂ.ಗಳೊಂದಿಗೆ   1500 ರೂ. ಗಳನ್ನು  ಹೆಚ್ಚುವರಿಯಾಗಿ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಇದೇ ಸಂದರ್ಭದಲ್ಲಿ ಸುದ್ದಿಗಾರರಿಗೆ ತಿಳಿಸಿದರು. 

ಜನವರಿ 22ರಂದು ಧಾರ್ಮಿಕ ಮೆರವಣಿಗೆ ನಿಷೇಧ

ಒಟ್ಟು ನಮ್ಮ ಸರ್ಕಾರದಿಂದ ಕ್ವಿಂಟಾಲಿಗೆ 1500 ರೂ.ಗಳನ್ನು ಒದಗಿಸಲಾಗುವುದು.   3000 ರೂ.ಗಳಿಗೆ ಬೇಡಿಕೆ ಇದ್ದರೂ ಸರ್ಕಾರದ ತನ್ನ  ಶಕ್ತ್ಯಾನುಸಾರ ಬೆಂಬಲ ಬೆಲೆ ನೀಡುತ್ತಿದ್ದು,  ಎಂ.ಎಸ್.ಪಿ ದರ ನಿಗದಿ ಮಾಡುವುದು ಕೇಂದ್ರ ಸರ್ಕಾರ.  ಕೇಂದ್ರ ಸರ್ಕಾರ ನಿಗದಿ ಮಾಡಿರುವುದಕ್ಕಿಂತ ರಾಜ್ಯ ಸರ್ಕಾರ ಕೊಬ್ಬರಿ ಬೆಳೆಗಾರರಿಗೆ 1500 ಹೆಚ್ಚಾಗಿ ನೀಡಲಿದೆ ಎಂದರು.

ಅಯೋಧ್ಯೆಯಲ್ಲಿ ರಾಮ ಪ್ರಾಣಪ್ರತಿಷ್ಠಾಪನೆಗೆ ರಜೆ ಇಲ್ಲ

 ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣಪ್ರತಿಷ್ಠಾಪನೆ  ಅಂಗವಾಗಿ  ಜನವರಿ 22ರಂದು ರಜೆ ಘೋಷಣೆ ಮಾಡುವುದಿಲ್ಲ. ಹಿಂದಿನ ಸರ್ಕಾರ ಜನವರಿ 21 ನ್ನು ದಾಸೋಹ ದಿನ ಎಂದು ಆಚರಿಸಲು ಘೋಷಣೆ ಮಾಡಿದ್ದರ ಕುರಿತು ಮಾತನಾಡಿದ ಮುಖ್ಯಮಂತ್ರಿಗಳು ಯಾವಾಗ ಮಾಡಿದರು, ಯಾವ ಸಂದರ್ಭದಲ್ಲಿ ಹಾಗೂ ಯಾಕಾಗಿ ಮಾಡಿದರು ಎಂದು ನನಗೆ ತಿಳಿದಿಲ್ಲ , ವಿಚಾರ ಮಾಡಲಾಗುವುದು ಎಂದು ಹೇಳಿದರು.

ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆಯಾಗುತ್ತಿದ್ದು ಮುಜರಾಯಿ ಇಲಾಖೆ ವತಿಯಿಂದ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ.  ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ರಾಮ ದೇವಸ್ಥಾನವನ್ನು ಅಂದು ಉದ್ಘಾಟಿಸುತ್ತಿರುವುದಾಗಿ ತಿಳಿಸಿದರು.

ತಮಿಳುನಾಡಿನಲ್ಲಿ ಅಯೋಧ್ಯೆಯ ರಾಮಮಂದಿರ ಪ್ರಾಣಪ್ರತಿಷ್ಠಾಪನೆಯ ನೆರಪ್ರಸಾರವನ್ನು  ನಿಷೇಧ ಮಾಡಿರುವ  ಬಗ್ಗೆ ಪ್ರತಿಕ್ರಿಯೆ ನೀಡಿ ತಮಿಳುನಾಡಿನ ಬಗ್ಗೆ ನಾನು ಯಾಕೆ ಮಾತನಾಡಲಿ. ಇಲ್ಲಿ ಹಾಗೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕುಣಿಗಲ್ ಸ್ಟಡ್  ಫಾರಂ ಸ್ಥಳಾಂತರಕ್ಕೆ ಸಲಹೆ

ಟಿಪ್ಪು ಸುಲ್ತಾನರ ಕಾಲದ ಕುಣಿಗಲ್ ಸ್ಟಡ್  ಫಾರಂನ್ನು ಸರ್ಕಾರ  ಮುಚ್ಚುತ್ತಿದೆ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಬೆಂಗಳೂರಿನ  ಹೃದಯ ಭಾಗದಲ್ಲಿ ರೇಸ್ ಕೋರ್ಸ್ ಇದ್ದು, ಅಲ್ಲಿಗೆ ಸ್ಥಳಾಂತರ ಮಾಡಿ ಎಂದು ಸಲಹೆ ನೀಡಿದ್ದೇನೆ ಎಂದು ತಿಳಿಸಿದರು. ಕುಣಿಗಲ್ ನಲ್ಲಿ 400 ಏಕರೆಯಷ್ಟು ಜಮೀನು ಇದ್ದು, ಇಲ್ಲಿ 80 ಏಕರೆ ಯಷ್ಟಿದೆ. ಅಲ್ಲಿ ಸ್ಥಳ ನೀಡುವುದಾಗಿ ಹೇಳಿದ್ದೇನೆ ಎಂದರು.

ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರು ಅಲ್ಲಿ ಇಂಟಿ ಗ್ರೇಟೆಡ್ ಟೌ ನ್ ಶಿಪ್ ಪ್ರಾರಂಭಿಸುವ ಬಗ್ಗೆ ಟ್ವೀಟ್ ಮಾಡಿದ್ದಾರೆ ಎಂಬ ಬಗ್ಗೆ ಅವರನ್ನೇ ಕೇಳಿ ಎಂದು ಮುಖ್ಯಮಂತ್ರಿಗಳು ಹೇಳಿದರು.

ಕರ್ನಾಟಕದಿಂದ ಹೆಚ್ಚು ಸ್ಥಾನ ಗೆಲ್ಲಸಿ

ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ, ತೋಂಟದಾರ್ಯ ಸಂಸ್ಥಾನ ಮಠದ ಡಾ.ಶ್ರೀ ತೋಂಟದ ಸಿದ್ಧರಾಮ ಮಹಾಸ್ವಾಮೀಜಿ, ಸಿದ್ಧಗಂಗಾ ಮಠದ ಉತ್ತರಾಧಿಕಾಧಿಕಾರಿಗಳಾದ ಶ್ರೀ ಶಿವ ಸಿದ್ಧೇಶ್ವರ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ಕಾರ್ಯಕ್ರಮಗಳು ನಡೆದವು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವರಾದ ಜಿ.ಪರಮೇಶ್ವರ್, ಸಹಕಾರ ಸಚಿವ ಕೆ.ರಾಜಣ್ಣ, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಶಾಸಕರುಗಳಾದ ಜ್ಯೋತಿಗಣೇಶ್, ಸುರೇಶ್ ಗೌಡ, ಶ್ರೀನಿವಾಸ್ ಹಾಗೂಕೆಆರ್ ಐಡಿಎಲ್ ನ ಮಾಜಿ ಅಧ್ಯಕ್ಷ ಎಂ. ರುದ್ರೇಶ್ ಸೇರಿ ಹಲವು ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶ್ರೀಗಂಧ, ಬೀಟೆ, ತೇಗಕ್ಕೆ ಜಿಯೋ ಟ್ಯಾಗ್

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
1500 per quintal coconutaward Bharat RatnaayodhyaBasavadi SharanChief MinisterkarnatakaKunigal stud farm relocationLetter to Centerno holidayRama PranapratisthapanaShivakumar swamijiSiddaramaiah
5 FacebookTwitterPinterestEmail
admin

previous post
ಕಾಡಿನಿಂದ ಐಸ್ ಕ್ರೀಮ್ ವರೆಗೆ ಸೀತಾಫಲದ ಮಹಿಮೆ…!
next post
ಬಿಜೆಪಿ –ಜೆಡಿಎಸ್ ನಾಯಕರ ಚುನಾವಣೆ ಸಮಾಲೋಚನೆ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ