Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಲೋಕಸಭಾ ಚುನಾವಣೆ:ಮತದಾರರ ಪಟ್ಟಿ ಸಿದ್ಧ

by admin January 22, 2024
written by admin January 22, 2024 1 comment 2 minutes read
6FacebookTwitterPinterestEmail
329

17,000ಕ್ಕೂ ಹೆಚ್ಚು ಶತಾಯುಶಿಗಳು

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯ ಮತದಾರರ ಪಟ್ಟಿ ಸಿದ್ಧಗೊಂಡಿದ್ದು, ಇದರಲ್ಲಿ 17,000 ಕ್ಕೂ ಹೆಚ್ಚು ಶತಾಯುಶಿಗಳಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಇದನ್ನು ಬಹಿರಂಗ ಪಡಿಸಿದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ, ಅಂತಿಮ ಮತದಾರರ ಪಟ್ಟಿ-2024 ರಲ್ಲಿನ ಒಟ್ಟು ಸಾಮಾನ್ಯ ಮತದಾರರ ಸಂಖ್ಯೆ5,37,85,815 ಇದ್ದು, ಇದರಲ್ಲಿ 2,69,33,750 ಪುರುಷ ಮತದಾರರು, 2,68,47,145 ಮಹಿಳಾ ಮತದಾರರು ಮತ್ತು 4,920 ಇತರೆ ಮತದಾರರು ಸೇರಿದ್ದಾರೆ ಎಂದರು.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು 7,17,201 ಮತದಾರರಿದ್ದಾರೆ. ಶೃಂಗೇರಿ ಕ್ಷೇತ್ರದಲ್ಲಿ ಅತಿ ಕಡಿಮೆ ಅಂದರೆ, 1,67,556 ಮತದಾರರನ್ನು ಹೊಂದಿದೆ.

ಮತದಾರರ ಸೇವಾ ಪೋರ್ಟಲ್

2024ರ ಜನವರಿ 1ಕ್ಕೆ ಅರ್ಹತೆ ಹೊಂದಿರುವ, ಅದರೆ ಇದುವರೆಗೆ ನೋಂದಣಿಯಾಗದೆ ಇರುವವರು ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಲು ಮತದಾರರ ಸೇವಾ ಪೋರ್ಟಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

ಅಯೋಧ್ಯೆ ರಾಮಲಲ್ಲಾಗೆ ಅಗ್ರ ಪೂಜೆ

ಅರ್ಹತಾ ದಿನಾಂಕ 2024ರ ಏಪ್ರಿಲ್ 1, ಜುಲೈ1 ಹಾಗೂ ಅಕ್ಟೋಬರ್ 1ರಂತೆ ಅರ್ಹತೆ ಹೊಂದುವ ಹೊಸ ಮತದಾರರು ಮುಂಚಿತವಾಗಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದರು.

ಶೇ.100ರಷ್ಟು ಮತದಾರರಿಗೆ ಭಾವಚಿತ್ರ ಗುರುತಿನ ಚೀಟಿ ವಿತರಿಸಲಾಗಿದೆ, ಗುರುತಿನ ಚೀಟಿಗಳನ್ನು ತ್ವರಿತ ಅಂಚೆ ಸೇವೆ ಮೂಲಕ ಮತದಾರರ ವಿಳಾಸಕ್ಕೆ ತಲುಪಿಸಲಾಗುತ್ತಿದೆ.

ಮತದಾರರ ಗುರುತಿನ ಚೀಟಿ

ಕಳೆದ ನವೆಂಬರ್ ಅಂತ್ಯಕ್ಕೆ 17,47,518 ಗುರುತಿನ ಚೀಟಿಗಳನ್ನು ಮತದಾರರಿಗೆ ತಲುಪಿಸಲಾಗಿದೆ. ಇನ್ನೂ 10,76,506 ಗುರುತಿನ ಚೀಟಿ ಮುದ್ರಿಸಿದ್ದು, ಮತದಾರರಿಗೆ ತಲುಪಿಸಲಾಗುವುದೆಂದು ತಿಳಿಸಿದರು.

ಅಂತಿಮ ಮತದಾರರ ಪಟ್ಟಿಯಲ್ಲಿ ಸೇವಾ ಮತದಾರರ ಸಂಖ್ಯೆ ಇಳಿಕೆಯಾಗಿದೆ. ಕರಡು ಪಟ್ಟಿಯಲ್ಲಿ 47,172 ಇದ್ದ ಸೇವಾ ಮತದಾರರ ಸಂಖ್ಯೆ ಅಂತಿಮ ಪಟ್ಟಿಯಲ್ಲಿ 46,501ಕ್ಕೆ ಇಳಿಕೆಯಾಗಿದೆ.

18ರಿಂದ 19 ವರ್ಷದ ಮತದಾರರ ಸಂಖ್ಯೆ ಹೆಚ್ಚಾಗಿದ್ದು, ಅಂತಿಮ ಪಟ್ಟಿಯಲ್ಲಿ 10,34,018 ರಷ್ಟು ಯುವ ಮತದಾರರಿದ್ದಾರೆ. 3,88,527 ರಷ್ಟು ಯುವ ಮತದಾರರ ಸಂಖ್ಯೆ ಹೆಚ್ಚಳವಾಗಿದೆ. ಸಾಗರೋತ್ತರ ಮತದಾರರ ಸಂಖ್ಯೆ 3,164 ರಷ್ಟಿದೆ ಎಂದು ವಿವರಿಸಿದರು.

80 ವರ್ಷ ಮೇಲ್ಪಟ್ಟ ಹಿರಿಯ ಮತದಾರರ ಸಂಖ್ಯೆ 12,71,862 ಆಗಿದ್ದು, 100 ವರ್ಷ ಮೇಲ್ಪಟ್ಟ ಮತದಾರರ ಸಂಖ್ಯೆ 17,937 ರಷ್ಟಿದ್ದಾರೆ. ವಿಕಲ ಚೇತನ ಮತದಾರರ ಸಂಖ್ಯೆ 56,2890 ರಷ್ಟಿದೆ. 58,834 ಮತಗಟ್ಟೆಗಳಿದ್ದು, 845 ಮತಗಟ್ಟೆಗಳನ್ನು ಸೇರ್ಪೆಡೆಗೊಳಿಸಿದ್ದು, 293 ಮತಗಟ್ಟೆಗಳನ್ನು ವಿಲೀನಗೊಳಿಸಲಾಗಿದೆ.

ಈ ಬಾರಿ 552 ಮತಗಟ್ಟೆಗಳ ಹೆಚ್ಚಳ

ಕಳೆದ 2016ಕ್ಕೆ ಹೋಲಿಸಿದರೆ ಈ ಬಾರಿ 552 ಮತಗಟ್ಟೆಗಳು ಹೆಚ್ಚಳವಾಗಿದೆ, ನಿಯಮಾನುಸಾರ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತೆಗೆದು ಹಾಕುವಿಕೆ ಹಾಗೂ ಮಾರ್ಪಾಡು ಮಾಡಲು ನಿಗದಿತ ನಮೂನೆಯಲ್ಲಿ ಸಲ್ಲಿಸಬಹುದಾಗಿದೆ.

ಈ ರೀತಿ 35,02,328 ಮತದರರು ಸೇರ್ಪಡೆಯಾಗಿದ್ದಾರೆ. 11,14,257 ಹೆಸರುಗಳನ್ನು ತೆಗೆದು ಹಾಕಲಾಗಿದೆ ಮತ್ತು 13,43,123 ಮತದಾರರ ವಿವರಗಳನ್ನು ಮಾರ್ಪಾಡು ಮಾಡಲಾಗಿದೆಯೆಂದು ಮಾಹಿತಿ ನೀಡಿದರು.

ಬಿಜೆಪಿ ಸಾರಥಿ ಆಗಲಿದ್ದಾರೆ ಪ್ರಲ್ಹಾದ್ ಜೋಷಿ?

ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ಇಲ್ಲದಿದ್ದರೆ, ಅವರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ತಕ್ಷಣವೇ ನೋಂದಾಯಿಸಲು ಪ್ರೋತ್ಸಾಹಿಸಲಾಗುತ್ತದೆ. ಮತದಾನದ ದಿನದಂದು ಮತದಾರರ ಪಟ್ಟಿಯಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗುವುದಿಲ್ಲ.

ಆದ್ದರಿಂದ, ಮತದಾರರು ವಿಳಂಬವಿಲ್ಲದೆ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ಪರಿಶೀಲಿಸಲು ಮತ್ತು ದೃಢೀಕರಿಸಲು ಸೂಚಿಸಲಾಗಿದೆ. ಅರ್ಹ ಮತದಾರರು ಅರ್ಜಿಗಳನ್ನು ಸಲ್ಲಿಸಲು ತಮ್ಮ ಮೊಬೈಲ್‌ನಲ್ಲಿ ವೋಟರ್ ಹೆಲ್ಪ್‌ಲೈನ್ ಅಪ್ಲಿಕೇಶನ್ ಆಯ್ಕೆಯನ್ನು ಹೊಂದಿದ್ದಾರೆ.

ಕನಕಪುರ, ರಾಮನಗರದಲ್ಲಿ ತಲಾ ಒಂದು ಮೆಡಿಕಲ್ ಕಾಲೇಜು

ಸುದ್ದಿಗೋಷ್ಠಿಯಲ್ಲಿ ಅಪರ ಮುಖ್ಯ ಚುನಾವಣಾಧಿಕಾರಿಗಳಾದ ವೆಂಕಟೇಶ್ ಕುಮಾರ್, ಕೂರ್ಮಾರಾವ್ ಉಪಸ್ಥಿತರಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
552 more polling bootbengaluru south lowest voterschief election commissioner manojkumar meenals election 2024shrungeri more votersvoter list ready
6 FacebookTwitterPinterestEmail
admin

previous post
ಕನಕಪುರ, ರಾಮನಗರದಲ್ಲಿ ತಲಾ ಒಂದು ಮೆಡಿಕಲ್ ಕಾಲೇಜು
next post
ಗಾಂಧಿ ಹೇಳಿದ ರಾಮಾಯಣದ ರಾಮನನ್ನು ಪೂಜಿಸುತ್ತೇವೆ

You may also like

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (405)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,903)
  • ರಾಜ್ಯ (2,214)
  • ರಾಷ್ಟ್ರ (2,184)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026

KMS Special

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ