ಎಲ್ಲ ಮುನ್ನೆಚ್ಚರಿಕೆ ಕ್ರಮ
ಬೆಂಗಳೂರು: ಹೈಕೋರ್ಟ್ ಆದೇಶದ ಪ್ರಕಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪಿಎಸ್‌ಐ ಮರುಪರೀಕ್ಷೆಯನ್ನು ಎಲ್ಲ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ನಡೆಸಲಾಗುತ್ತಿದ್ದು, ಅಭ್ಯರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಇಂದಿಲ್ಲಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹಳ ದಿನದಿಂದ ನೆನೆಗುದಿಗೆ ಬಿದ್ದಿದ್ದ ಪಿಎಸ್‌ಐ ಪರೀಕ್ಷೆಯನ್ನ ಈ ಬಾರಿ ಎಚ್ಚರಿಕೆಯಿಂದ ನಡೆಸುತ್ತಿದ್ದೇವೆ, ಯಾವುದೇ ಸಮಸ್ಯೆ ಆಗುವುದಿಲ್ಲವೆಂಬ ವಿಶ್ವಾಸವಿದೆ ಎಂದರು.
ವರದಿ ಶಿಫಾರಸು ಪರಿಶೀಲಿಸಿ ಕ್ರಮ
ಕಳೆದ ಬಾರಿ ಅಕ್ರಮದ ಕುರಿತು ನ್ಯಾಯಮೂರ್ತಿ ವೀರಪ್ಪ ಆಯೋಗ ಮುಖ್ಯಮಂತ್ರಿ ಅವರಿಗೆ ವರದಿ ನೀಡಿದೆ, ವರದಿಯಲ್ಲಿನ ಶಿಫಾರಸು ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು.
ಗಾಂಧಿ ಹೇಳಿದ ರಾಮಾಯಣದ ರಾಮನನ್ನು ಪೂಜಿಸುತ್ತೇವೆ
ಮುಖ್ಯಮಂತ್ರಿ ಜೊತೆ ಕುಳಿತು ವರದಿ ವಿಶ್ಲೇಷಣೆ ಮಾಡಲಾಗುವುದು, ಪರೀಕ್ಷೆ ಅಕ್ರಮ ಕುರಿತು ಬಹಿರಂಗ ಆರೋಪ ಮಾಡಿದವರು ಆಯೋಗದ ಮುಂದೆ ಹಾಜರಾಗಲಿಲ್ಲ.
ಆಡಿಯೋ ವೈರಲ್‌ಗೂ ಮರುಪರೀಕ್ಷೆಗೂ ಸಂಬಂಧವಿಲ್ಲ
ಆಡಿಯೋ ವೈರಲ್ ಪ್ರಕರಣಕ್ಕೂ ಪಿಎಸ್‌ಐ ಮರುಪರೀಕ್ಷೆಗೂ ಯಾವುದೇ ಸಂಬಂಧವಿಲ್ಲ, ಈಗಾಗಲೇ ಎಸ್‌ಐ ಲಿಂಗಯ್ಯ ಎಂಬುವರನ್ನು ಸಿಸಿಬಿ ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ, ಆರೋಪಿತ ಎಸ್‌ಐ ಇಂಟಲಿಜೆನ್ಸ್‌ನಲ್ಲಿ ಕರ್ತವ್ಯನಿರ್ವಹಿಸುತ್ತಿದ್ದರು, ಈ ಪರೀಕ್ಷೆಯಲ್ಲಿಯೂ ಅಕ್ರಮ ನಡೆಯುತ್ತಿರಬಹುದು ಎಂಬ ಸಂಶಯದಿಂದ ನಕಲಿ ಕರೆ ಮಾಡಿದ್ದಾಗಿ ಹೇಳಿಕೆ ನೀಡಿದ್ದು, ಸಿಸಿಬಿ ತನಿಖೆ ಮುಂದುವರಿಸಿದೆ ಎಂದರು.
ನಿಗಮ-ಮಂಡಳಿಗಳಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ನೇಮಕ ವಿಚರದಲ್ಲಿ ತಮ್ಮ ಅಭಿಪ್ರಾಯ ಕೇಳಿಲ್ಲ, ಒಂದೆರಡು ಹೆಸರು ಕೊಡಿ ಅಂದಾಗ ಕೊಟ್ಟಿದ್ದೇನೆ, ನಮ್ಮ ಜತೆ ಚರ್ಚಿಸಿ ಪಟ್ಟಿ ಸಿದ್ಧ ಮಾಡಿಲ್ಲ.
ಪಟ್ಟಿ ಸಿದ್ಧಪಡಿಸುವುದು ನಿಧಾನವಾಗಿದೆ
ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಜಿಲ್ಲಾ ನಾಯಕರ ಜತೆ ಚರ್ಚಿಸಿ ಪಟ್ಟಿ ಸಿದ್ಧಪಡಿಸಬೇಕು. ಅದರೆ, ಪಕ್ಷದ ಪ್ರಧಾನ ಕಾರ್ಯದರ್ಶಿಯವರೇ ಮಾಡುತ್ತಿದ್ದಾರೆ, ಪಟ್ಟಿ ಸಿದ್ಧಪಡಿಸುವುದು ನಿಧಾನವಾಗಿದೆ, ಏನು ಮಾಡುತ್ತಾರೆ ನೋಡೋಣ ಎಂದರು.
ಕನಕಪುರ, ರಾಮನಗರದಲ್ಲಿ ತಲಾ ಒಂದು ಮೆಡಿಕಲ್ ಕಾಲೇಜು
ನಾನು 8 ವರ್ಷ ಪಕ್ಷದ ರಾಜ್ಯಾಧ್ಯಕ್ಷನಾಗಿದ್ದೆ, ಯಾರ‍್ಯಾರು ಕೆಲಸ ಮಾಡಿದ್ದಾರೆ ಎಂಬುದು ಗೊತ್ತಿದೆ, ಹತ್ತಾರು ವರ್ಷ ಪಕ್ಷಕ್ಕೆ ದುಡಿದವರಿದ್ದಾರೆ, ಅವರಿಗೆ ಅಧಿಕಾರ ಕೊಡಬೇಕು. ಕೆಲಸ ಮಾಡದವರಿಗೆ ಅಧಿಕಾರ ಕೊಟ್ಟರೆ, ಕೆಲಸ ಮಾಡಿದವರಿಗೆ ನೋವು, ಅಸಮಾಧಾನ ಆಗುವುದು ಸಹಜ.
ನಾವೆಲ್ಲ ಶ್ರೀರಾಮನ ಭಕ್ತರೇ
ಮುಖ್ಯಮಂತ್ರಿ ಸಿದ್ದರಾಮಯ್ಯ ಜೈ ಶ್ರೀರಾಮ್ ಅಂದರೆ ತಪ್ಪೇನು, ನಾವೆಲ್ಲರೂ ಜೈ ಶ್ರೀರಾಮ್ ಅಂತ ಹೇಳಿದ್ದೇವೆ, ನಾವೆಲ್ಲ ಶ್ರೀರಾಮನ ಭಕ್ತರೇ.
ಶ್ರೀರಾಮ ನಾಲ್ಕು ಜನಕ್ಕೆ ಸೀಮಿತವಲ್ಲ, ನಮಗೆ ದಶರಥ ರಾಮ ಬೇಕು, ಮೋದಿಯ ರಾಮ ಬೇಕಾಗಿಲ್ಲ. ಈ ದೇಶವನ್ನು ರಾಮರಾಜ್ಯ ಮಾಡಿದ ದಶರಥ ರಾಮ ಬೇಕೆ ಹೊರತು, ರಾಮನ ಹೆಸರು ಹೇಳಿಕೊಂಡು ಒಡೆದಾಳುವ ನೀತಿ ಆಚರಣೆ ಮಾಡುವವರು ಬೇಕಿಲ್ಲ ಎಂದರು.
ರಾಹುಲ್ ಗಾಂಧಿ ಅವರು ಹಿಂದೆ ಭಾರತ್ ಜೋಡೋ ಪಾದ ಯಾತ್ರೆಗೆ ಅಸ್ಸಾಂ ಮುಖ್ಯಮಂತ್ರಿ ಉದ್ದೇಶ ಪೂರ್ವಕವಾಗಿ ಅಡ್ಡಿ ಪಡಿಸುತ್ತಿದ್ದಾರೆ, ಬಿಜೆಪಿಯವರು ಪಾದಯಾತ್ರೆ ತಡೆಯುವ ಹಾಗೂ ಯಾತ್ರಿಗಳ ಮೇಲೆ ಗಲಾಟೆ ನಡೆಸುವ ಕೆಲಸ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಅವರಿಗೇ ಈ ರೀತಿ ಆದರೆ, ಜನಸಾಮಾನ್ಯ ಗತಿ ಏನು ಎಂದರು.
3 comments
[…] ರಾಜಕೀಯ […]
[…] ರಾಜಕೀಯ […]
[…] ರಾಜಕೀಯ […]