Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಜಗದೀಶ್ ಶೆಟ್ಟರ್ ಪಕ್ಷ ತೊರೆಯುತ್ತಿದ್ದಂತೆ ಎಚ್ಚೆತ್ತ ಕಾಂಗ್ರೆಸ್; 34 ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕ

by admin January 26, 2024
written by admin January 26, 2024 2 comments 3 minutes read
4FacebookTwitterPinterestEmail
377

ಗಣರಾಜ್ಯ ದಿನವೇ ಶಾಸಕರಿಗೆ ಬಂಪರ್;‌ ಎಲ್ಲರಿಗೂ ಸಂಪುಟ ದರ್ಜೆ ಭಾಗ್ಯ

ಬೆಂಗಳೂರು:  ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪಕ್ಷ ತೊರೆಯುತ್ತಿದ್ದಂತೆ ಎಚ್ಚೆತ್ತ ಕಾಂಗ್ರೆಸ್ ವರಿಷ್ಠರು ಪಕ್ಷದ ಹಿರಿಯ ಶಾಸಕರಿಗೆ ನಿಗಮ-ಮಂಡಳಿಗಳ ಸ್ಥಾನ ಮಾನ ನೀಡಿ ಸರ್ಕಾರ ಗಟ್ಟಿ ಮಾಡಲು ಮುಂದಾಗಿದೆ.

ಶೆಟ್ಟರ್ ಬೆನ್ನಲ್ಲೇ ಪಕ್ಷದ ಕೆಲವು ಮುಖಂಡರು ಮತ್ತು ಶಾಸಕರು, ಪಕ್ಷ ತೊರೆಯಲಿದ್ದಾರೆ ಎಂಬ ಉದ್ದೇಶದಿಂದ ಪದೇ ಪದೇ ಮುಂದೂಡಲಾಗಿದ್ದ ನಿಗಮ-ಮಂಡಳಿ ನೇಮಕದ ಪಟ್ಟಿ ಹೊರಗೆಡವಿದ್ದಾರೆ.

ವಿಧಾನಸಭೆಗೆ ಎರಡು, ಮೂರಕ್ಕಿಂತ ಹೆಚ್ಚು ಬಾರಿ ಆಯ್ಕೆಗೊಂಡವರು ಮತ್ತು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡು ಶಾಸಕರಾದವರಿಗೂ ಅವಕಾಶ ಮಾಡಿಕೊಡಲಾಗಿದೆ. ಒಟ್ಟಾರೆ, 34ನಿಗಮ ಮತ್ತು ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ.

ಬೆಂಗಳೂರು-ಮೈಸೂರು: 10 ನಿಮಿಷಕ್ಕೆ ಒಂದು ರೈಲು

ನೇಮಕವಾಗಿರುವ ಅಧ್ಯಕ್ಷರಿಗೆ ಸಂಪುಟದರ್ಜೆಯ ಸ್ಥಾನ ನೀಡಲಾಗಿದೆ. ಅಂದರೆ, ಸಚಿವ ಸಂಪುಟದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ನೀಡಲು ಸರ್ಕಾರ ಹೊರಡಿಸಿರುವ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ನೂತನ ಅಧ್ಯಕ್ಷರ ಅವಧಿ ಎರಡು ವರ್ಷಗಳಾಗಿದೆ ಅಥವಾ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ನೇಮಕಗೊಂಡಿರುವ ಶಾಸಕರ ಪಟ್ಟಿ ಈ ಕೆಳಕಂಡಂತಿದೆ.

ಎಸ್. ಆರ್. ಶ್ರೀನಿವಾಸ್ ಗೆ ಕೆಎಸ್ಆರ್ ಟಿಸಿ; ಎನ್.ಎ.ಹ್ಯಾರೀಸ್ ಗೆ ಬಿಡಿಎ

ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ಅವರಿಗೆ ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮ, ಮುದ್ದೇಬಿಹಾಳ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ ಅವರಿಗೆ ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತ, ಕಾಗವಾಡ ಶಾಸಕ ಭರಮಗೌಡ ಅಲಗೌಡ ಕಾಗೆ ಅವರಿಗೆ ವಾಯುವ್ಯ ಸಾರಿಗೆ ನಿಗಮ ನಿಯಮಿತ, ಬಾಗಲಕೋಟೆ ಶಾಸಕ ಹುಲ್ಲಪ್ಪ ಯಮನಪ್ಪ ಮೇಟಿ ಅವರಿಗೆ ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಗುಬ್ಬಿ ಶಾಸಕ ಎಸ್. ಆರ್. ಶ್ರೀನಿವಾಸ್ ಅವರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕರನ್ನಾಗಿ ನೇಮಕ ಮಾಡಲಾಗಿದೆ.

ಬ್ಯಾಡಗಿ ಶಾಸಕ ಬಸವರಾಜ್ ನೀಲಪ್ಪ ಶಿವಣ್ಣನವರ್ ಅವರಿಗೆ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ, ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ, ಮಾಗಡಿ ಶಾಸಕ ಹೆಚ್.ಸಿ.ಬಾಲಕೃಷ್ಣ ಅವರಿಗೆ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ, ರೋಣ ಶಾಸಕ ಜಿ.ಎಸ್.ಪಾಟೀಲ್ ಅವರಿಗೆ ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತ ಮತ್ತು ಶಾಂತಿನಗರ ಶಾಸಕ ಎನ್.ಎ.ಹ್ಯಾರೀಸ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಕಲೆಕ್ಷನ್

ಬೈಲಹೊಂಗಲ ಶಾಸಕ  ಕೌಜಲಗಿ ಮಹಾಂತೇಶ್ ಶಿವಾನಂದ ಅವರಿಗೆ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ, ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್, ಬೀಳಗಿ ಶಾಸಕ ಜಿ.ಟಿ.ಪಾಟೀಲ್ ಅವರಿಗೆ ಹಟ್ಟಿ ಚಿನ್ನದ ಗಣಿ ನಿಯಮಿತ, ಶೋರಾಪುರ ಶಾಸಕ ರಾಜಾವೆಂಕಟ್ಟಪ್ಪ ನಾಯಕ್ ಅವರಿಗೆ  ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಹಾಗೂ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ ಅವರಿಗೆ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮ/ಲ್ಯಾಂಡ್ ಆರ್ಮಿ ಅಧ್ಯಕ್ಷ ಸ್ಥಾನ ನೀಡಲಾಗಿದೆ.

ಕೆ.ಎಂ.ಶಿವಲಿಂಗೇಗೌಡರಿಗೆ ಕರ್ನಾಟಕ ಗೃಹ ಮಂಡಳಿ; ಬಿ.ಶಿವಣ್ಣಗೆ ಬಿಎಂಟಿಸಿ

ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ  ಅವರಿಗೆ ಕರ್ನಾಟಕ ಗೃಹ ಮಂಡಳಿ, ಹುಬ್ಬಳ್ಳಿ-ಧಾರವಾಡ ಪೂರ್ವ ಶಾಸಕ ಅಬ್ಬಯ್ಯ ಪ್ರಸಾದ್ ಅವರಿಗೆ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ, ಸಾಗರ ಶಾಸಕ ಬಿ.ಕೆ.ಗೋಪಾಲಕೃಷ್ಣ ಬೇಳೂರು ಅವರಿಗೆ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತ, ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅವರಿಗೆ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ಹಾಗೂ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರಿಗೆ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಶ್ರೀರಂಗಪಟ್ಟಣ ಶಾಸಕ ಎ.ಬಿ.ರಮೇಶ್ ಬಂಡಿಸಿದ್ದೇಗೌಡ ಅವರಿಗೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ, ಆನೇಕಲ್ ಶಾಸಕ ಬಿ.ಶಿವಣ್ಣ ಅವರಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರಿಗೆ ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ, ಧಾರವಾಡ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಹೆಗ್ಗಡದೇವನಕೋಟೆ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಜಂಗಲ್ ಲಾಡ್ಜಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶಿಸಿದೆ.

ಸರ್ವಾಂಗೀಣ ಅಭಿವೃದ್ಧಿಗೆ ಒಟ್ಟಾಗಿ ಕೆಲಸ ಮಾಡೋಣ

ರಾಯಚೂರು ಗ್ರಾಮೀಣ ಶಾಸಕ ಬಸವನಗೌಡ ದದ್ದಲ್ ಅವರಿಗೆ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಕಲಬುರಗಿ ಉತ್ತರ ಶಾಸಕಿ ಕನೀಜ್ ಫಾತಿಮಾ ಅವರಿಗೆ ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮ ನಿಯಮಿತ, ಹುನಗುಂದ ಶಾಸಕ ಕಾಶಪ್ಪನವರ್ ವಿಜಯಾನಂದ ಶಿವಶಂಕರಪ್ಪ ಅವರಿಗೆ ಕರ್ನಾಟಕ ಕ್ರೀಡಾ ಪ್ರಾಧಿಕಾರ, ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಅವರಿಗೆ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ ನಿಯಮಿತ ಮತ್ತು ಕೆಜಿಎಫ್ ಶಾಸಕಿ ರೂಪಕಲಾ ಎಂ. ಅವರಿಗೆ ಕರ್ನಾಟಕ ಕರಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಕಾರವಾರ ಶಾಸಕ ಸತೀಶ್ ಕೃಷ್ಣ ಸೈಲ್ ಅವರಿಗೆ ಕರ್ನಾಟಕ ಮಾರ್ಕೆಟಿಂಗ್ ಕನ್ಸಲ್ವೆಂಟ್ ಅಂಡ್ ಏಜೆನ್ಸಿಸ್, ಹೊಸಕೋಟೆ ಶಾಸಕ ಶರತ್ ಕುಮಾರ್ ಬಚ್ಚೇಗೌಡ ಅವರಿಗೆ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ಕಂಪ್ಲಿ ಶಾಸಕ ಜೆ.ಎಂ.ಗಣೇಶ್ ಅವರಿಗೆ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ ಅವರಿಗೆ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ.

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಾಯಣ್ಣ ಹೆಸರಿಡಲು ಕೇಂದ್ರಕ್ಕೆ ಶಿಫಾರಸ್ಸು

ಈ ಹೊಸ ಅಧ್ಯಕ್ಷರು ಕಾರ್ಯನಿರ್ವಹಿಸಲು ಅನುಕೂಲ ವಾಗುವಂತೆ ಸಂಬಂಧಪಟ್ಟ ಆಯಾ ಇಲಾಖೆಯು ನಿಯಮಾನುಸಾರ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಆದೇಶದಲ್ಲಿ ತಿಳಿಸಲಾಗಿದೆ.

ಈ ಸುದ್ದಿಯನ್ನೂ ಓದಿ

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಕಲೆಕ್ಷನ್

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
34 AppointmentChairman Corporation-Boardscongress mlaCongress wakes upJagdish Shettar leaves the party
4 FacebookTwitterPinterestEmail
admin

previous post
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಕಲೆಕ್ಷನ್
next post
ದಿನ ಭವಿಷ್ಯ : ಶನಿವಾರ, 27ಜನವರಿ 2024

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ