ಇಬ್ಬರೂ ಅರ್ಧಗಂಟೆ ಕಾಲ ಗೌಪ್ಯ ಮಾತುಕತೆ
ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರದಿಂದ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜೆಡಿಎಸ್ ಟಿಕೆಟ್ ತಪ್ಪಬಹುದು ಎಂಬ ಹಿನ್ನಲೆಯಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಕುಟುಂಬ ಕಾಂಗ್ರೆಸ್ ಬಾಗಿಲು ತಟ್ಟಿದೆ.
ಹಠಾತ್ ಬೆಳವಣಿಗೆಯಲ್ಲಿ ರೇವಣ್ಣ ಅವರ ಹಿರಿಯ ಪುತ್ರ ಡಾ.ಸೂರಜ್ ರೇವಣ್ಣ ಅವರು ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಅವರ ಸರ್ಕಾರಿ ನಿವಾಸದಲ್ಲಿ ಭೇಟಿ ಮಾಡಿ ಗೌಪ್ಯ ಮಾತುಕತೆ ನಡೆಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರದ ನಂತರ ಕಿಡಿಕಾರಿದ್ದ ಶಿವಕುಮಾರ್, ನಾವು ಕೈ ಹಾಕಿದರೆ ಎಲ್ಲರ ಮನೆ ಖಾಲಿಯಾಗುತ್ತವೆ ಎಂಬ ಹೇಳಿಕೆ ನೀಡಿದ ಬೆನ್ನಲ್ಲೇ ಈ ಬೆಳವಣಿಗೆಯಾಗಿದೆ.
ಬಿಜೆಪಿ ವಿಶೇಷ ಕಾರ್ಯಕಾರಿಣಿಯಲ್ಲಿ ಒಗ್ಗಟ್ಟಿನ ಜಪ
ಜೆಡಿಎಸ್, ಎನ್ ಡಿಎ ಮೈತ್ರಿಕೂಟ ಸೇರಿದ ನಂತರ ಬಿಜೆಪಿ ಜತೆಗೂಡಿ ಲೋಕಸಭಾ ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದ್ದು, ಸಮೀಕ್ಷಾ ವರದಿಯಂತೆ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ನೀಡಿದರೆ ಸೋಲು ಎಂಬ ಮಾಹಿತಿ ಹೊರಬಿದ್ದಿರುವ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಪರ್ಯಾಯ ಅಭ್ಯರ್ಥಿ ಕಣಕ್ಕಿಳಿಸಲು ಗಮನ ಹರಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಅವರಿಗೆ ಹಾಸನ ಟಿಕೆಟ್ ಕೈ ತಪ್ಪುವ ಆತಂಕ
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಪ್ರಜ್ವಲ್ ರೇವಣ್ಣ ಅವರೇ ಅಭ್ಯರ್ಥಿ ಎಂದು ಪದೇ ಪದೇ ಹೇಳಿದ್ದರೂ ರೇವಣ್ಣ ಅವರ ಕುಟುಂಬಕ್ಕೆ ವಿಶ್ವಾಸ ಮೂಡುತ್ತಿಲ್ಲ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರದಿಂದ ರೇವಣ್ಣ ಮತ್ತು ಅವರ ಕುಟುಂಬದವರು ಭವಾನಿ ರೇವಣ್ಣ ಅವರನ್ನು ಕಣಕ್ಕಿಳಿಸಲು ಭಾರೀ ಕಸರತ್ತು ನಡೆಸಿದ್ದರು. ಆದರೆ, ತಾವು ಹಿಡಿದ ಹಠದಂತೆ ಕುಮಾರಸ್ವಾಮಿ ಅವರು, ಕಾರ್ಯಕರ್ತನಿಗೆ ಟಿಕೆಟ್ ನೀಡಿ ಆ ಕ್ಷೇತ್ರದಲ್ಲಿ ಗೆಲುವು ಸಾಧದಿಸಿದ್ದರು.
ಮತ್ತೆ ಲೋಕಸಭಾ ಚುನಾವಣೆಯಲ್ಲಿ ಇದೇ ಪುನರಾರಂಭಗೊಳ್ಳಬಹುದು ಎಂಬ ಭಯ ರೇವಣ್ಣ ಅವರ ಕುಟುಂಬದಲ್ಲಿ ಕಾಡುತ್ತಿದೆ. ಇತ್ತೀಚೆಗಂತು ರೇವಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವೇ ಸಾರ್ವಜನಿಕವಾಗಿ ನಿಂತಿದ್ದಾರೆ.
ಹಠವಿಡಿದು ಬಾಲರಾಮನ ದರ್ಶನ ಪಡೆದ ಗೌಡರು
ಕುಟುಂಬ ವರ್ಗ ಮುಂದಾಲೋಚನೆಯಿಂದ ಕಾಂಗ್ರೆಸ್ ಬಾಗಿಲು ಬಡಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ಆಗುತ್ತಿದೆ. ಸೂರಜ್ ರೇವಣ್ಣ ಅವರು ಶಿವಕುಮಾರ್ ಜೊತೆ ಮುಖಾಮುಖಿ ಬಹು ಸಮಯ ಚರ್ಚೆ ಮಾಡಿದ್ದಾರೆ.
ಇತ್ತೀಚಿನ ಬೆಳವಣಿಗೆಗಳನ್ನು ಶಿವಕುಮಾರ್ ಅವರ ಗಮನಕ್ಕೆ ಸೂರಜ್ ತಂದಿದ್ದಾರೆ ಎನ್ನಲಾಗಿದೆ. ಕುಮಾರಸ್ವಾಮಿ ರಾಜ್ಯಾಧ್ಯಕ್ಷರಾದದ್ದು, ಬಿಜೆಪಿ ಜೊತೆ ಕೈಜೋಡಿಸಿದ್ದು, ಅವರ ಇಚ್ಚೆಯಂತೆ ನಡೆದುಕೊಳ್ಳುತ್ತಿರುವುದು. ಪ್ರಧಾನಿ ಸೇರಿದಂತೆ ಬಿಜೆಪಿ ರಾಷ್ಟ್ರೀಯ ನಾಯಕರ ಭೇಟಿ ಸಂದರ್ಭದಲ್ಲಿ ತಮ್ಮ ಕುಟುಂಬದವರನ್ನುಹೊರಗಿಟ್ಟಿದ್ದಾರೆ.
ಇತ್ತೀಚೆಗೆ ಅಯೋಧ್ಯೆಯ ರಾಮದೇವರ ಪ್ರಾಣ ಪ್ರತಿಷ್ಠಾಪನೆ ಸಂದರ್ಭದಲ್ಲೂ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂಬ ಅಸಮಾಧಾನ ಸೇರಿದಂತೆ ಅನೇಕ ವಿಚಾರಗಳನ್ನು ಬಿಚ್ಚಿಟ್ಟಿದ್ದಾರೆನ್ನಲಾಗಿದೆ.
ಜಗದೀಶ್ ಶೆಟ್ಟರ್ ಪಕ್ಷ ತೊರೆಯುತ್ತಿದ್ದಂತೆ ಎಚ್ಚೆತ್ತ ಕಾಂಗ್ರೆಸ್; 34 ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕ
ಇವರಿಬ್ಬರ ಭೇಟಿ ವಿಚಾರ ದೇವೇಗೌಡರ ಕುಟುಂಬ ಹಾಗೂ ಜೆಡಿಎಸ್ ನಲ್ಲೂ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಅವರು ಯಾವುದೇ ಅನುದಾನದ ವಿಚಾರಕ್ಕೆ ಭೇಟಿಯಾಗಿದ್ದರೂ ಎಂಬ ಮಾತು ಈ ವಲಯದಿಂದ ಕೇಳಿಬಂದಿದೆ.
ಸೂರಜ್ ಜೊತೆ ಡಿ.ಕೆ.ಶಿವಕುಮಾರ್ ಮುಖಾಮುಖಿ ಮಾತನಾಡುವಾಗ ಯಾರನ್ನು ಹತ್ತಿರ ಸುಳಿಯಗೊಡಲಿಲ್ಲ. 30 ನಿಮಿಷಗಳ ಕಾಲ ಗೌಪ್ಯ ಚರ್ಚೆಯಾಗಿದೆ. ಚರ್ಚೆಯ ಫಲಿತಾಂಶವೇನು ಎಂಬುದು ಮುಂದಿನ ದಿನಗಳಲ್ಲಷ್ಟೇ ಬಹಿರಂಗಗೊಳ್ಳಬೇಕಿದೆ.

1 comment
[…] Special Story […]