ಏಕವಚನದಲ್ಲಿ ಮಾತನಾಡಿದ್ದು ಮೀತಿ
ಮೀರಿದ ಭಂಡತನಕ್ಕೆ ಅತ್ಯುತ್ತಮ ಉದಾಹರಣೆ
ಬೆಂಗಳೂರು: ಭಾವುಕನಾಗಿ ಮಾತನಾಡುವ ಭರದಲ್ಲಿ ಗೌರವಾನ್ವಿತ ರಾಷ್ಟ್ರಪತಿ ಅವರನ್ನು ಏಕವಚನದಲ್ಲಿ ಸಂಬೋಧಿಸಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮಜಾಯಿಷಿ, ಶಿಷ್ಟಾಚಾರಗೆಟ್ಟ ನಡವಳಿಕೆಯನ್ನು ಸಮರ್ಥಿಸಿಕೊಳ್ಳುವ ಹಾಗೂ ಮೊಸಳೆ ಕಣ್ಣೀರ ಕಥೆಯನ್ನೂ ನಾಚಿಸುವಂತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಗೌರವಾನ್ವಿತ ರಾಷ್ಟ್ರಪತಿ ಅವರ ಬಗ್ಗೆ ಏಕವಚನದಲ್ಲಿ ಮಾತನಾಡಿದ್ದು ಮೀತಿ ಮೀರಿದ ಭಂಡತನಕ್ಕೆ ಅತ್ಯುತ್ತಮ ಉದಾಹರಣೆ ಎಂದಿದ್ದಾರೆ.
ಸಮರ್ಥನೆ ಸರಿಯಲ್ಲ,
“ಗ್ರಾಮೀಣ ಸೊಗಡಿನ ವ್ಯಕ್ತಿತ್ವ ನನ್ನದು, ನಾನು ಮಾತನಾಡುವುದೇ ಹಾಗೆ..” ಎಂದು ಸಮರ್ಥಿಸಿಕೊಂಡಿರುವುದು ಸರಿಯಲ್ಲ, ಸಮರ್ಥನೆಗೂ ಒಂದು ಅಳತೆ, ಗೌರವ ಇರುತ್ತದೆ, ಅದಾವುದೂ ಲೆಕ್ಕಕ್ಕೇ ಇಲ್ಲವಾಗಿದೆ.
ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಭಾಷೆ ವಿಚಾರದಲ್ಲಿ ಶಿಷ್ಟಾಚಾರ ಏಕೆ ಕಲಿತಿಲ್ಲ, ನಿಮ್ಮ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಿಗೂ ಏಕವಚನ ಪ್ರಯೋಗಿಸುವಿರಾ, ಈ ಸೋಗಲಾಡಿತನ ಅರ್ಥ ಮಾಡಿಕೊಳ್ಳದಷ್ಟು ಮುಗ್ಧರಲ್ಲ ನಮ್ಮ ಜನ.
ದೇಶದ ಅತ್ಯುನ್ನತ ಸ್ಥಾನದಲ್ಲಿರುವ ಗೌರವಾನ್ವಿತ ರಾಷ್ಟ್ರಪತಿಗಳ ಬಗ್ಗೆ, ಅದರಲ್ಲೂ ಮಹಿಳೆಯ ಬಗ್ಗೆ ಏಕವಚನ ಪ್ರಯೋಗಿಸುವಾಗ ಭಾವುಕತೆಯಲ್ಲಿ ನಿಮ್ಮ ವಿವೇಕ ಸತ್ತು ಹೋಗಿತ್ತಾ.
ಸುಳ್ಳು ಹೇಳಲು ಸಂಕೋಚ ಬೇಡವೇ
ಶೋಷಿತರ ಜಾಗೃತಿ ಸಮಾವೇಶದಲ್ಲಿ ನಿಮ್ಮ ಭಾಷಣದಲ್ಲಿ ಭಾವುಕತೆ, ಮುಗ್ಧತೆ ಇತ್ತೇ, ಸುಳ್ಳು ಹೇಳುವುದಕ್ಕೂ ಸಂಕೋಚ ಬೇಡವೇ, ನಿಮ್ಮ ಭಾಷಣ ದುರಾಹಂಕಾರದ ಪರಮಾವಧಿ.
ಎರಡು ಬಾರಿ ಸಿಎಂ ಆದವರು, ಡಿಸಿಎಂ, ಹಣಕಾಸು ಸಚಿವರೂ ಆಗಿದ್ದವರು, ವಕೀಲರೂ, ಸ್ವಯಂಘೋಷಿತ ಸಂವಿಧಾನ ತಜ್ಞರೂ ಆಗಿರುವ ನಿಮ್ಮಂತಹ ಪಂಡಿತರೇ ಭಾವುಕತೆಯಿಂದ ಬಾಯಿ ತಪ್ಪಿದರೆ ಹೇಗೆ, ಆ ನಿಮ್ಮ ಭಾಷಣವನ್ನು ಭಾಷಣ ಎನ್ನಲು ಸಾಧ್ಯವೇ.
ನಿಮ್ಮ ಭಾಷಣ, ನಿಮ್ಮ ಹೃದಯದಲ್ಲಿ ತುಂಬಿದ್ದ ಅಸಹನೆಯ ನಂಜು. ಅನ್ಯಜಾತಿಗಳ ಮೇಲೆ ಮಡುಗಟ್ಟಿದ ದ್ವೇಷ. ಜಾತಿ-ಧರ್ಮಗಳ ನಡುವೆ ಬೆಂಕಿ ಇಡಲು ನೀವು ಕಕ್ಕಿದ ಕಾರ್ಕೋಟಕ ವಿಷಜ್ವಾಲೆಯಾಗಿದೆ.
ಜಾತಿ ವ್ಯವಸ್ಥೆ ಇರುವರೆಗೆ ಇಂಥ ಸಮಾವೇಶಗಳು ನಡೆಯಬೇಕು ಎನ್ನುತ್ತೀರಿ, ಅಂದರೆ ಕಾರ್ಕೋಟಕ ವಿಷಜ್ವಾಲೆ ನಿರಂತರ ಇರಲಿ ಎಂದು ಬಯಸಿದಂತಾಯಿತು.
ಮೀಸಲಾತಿ ಬಗ್ಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದೇನು, ಅವರ ನಿಲುವು ಏನಾಗಿತ್ತು, ಸಂವಿಧಾನವೇ ನನ್ನ ಧರ್ಮಗ್ರಂಥ ಎನ್ನುವ ನೀವು, ಇಷ್ಟು ಬೇಗ ಸಂವಿಧಾನ ಬರೆದವರ ಮಾತನ್ನೇ ಮರೆತರೆ ಹೇಗೆ,14 ಬಜೆಟ್ ಮಂಡಿಸಿದ ಅಪರ ವಿತ್ತವಿಶಾರದ ತಮಗೆ ಮರೆವೇ, ಇನ್ನೆಷ್ಟು ವರ್ಷ ಸುಳ್ಳುಗಳನ್ನೇ ಹೇಳುತ್ತೀರಿ ಎಂದು ಟ್ವೀಟ್ನಲ್ಲಿ ಕುಟುಕಿದ್ದಾರೆ.
1 comment
[…] ರಾಜಕೀಯ […]