72
ಒಮ್ಮತದ ಅಭ್ಯರ್ಥಿ ಕಣಕ್ಕೆ
ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಹಿರಿಯ ವಕೀಲ ಎ.ಪಿ. ರಂಗನಾಥ್ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಜೆಡಿಎಸ್ ಎನ್‌ಡಿಎ ಮೈತ್ರಿಕೂಟಕ್ಕೆ ಸೇರಿದ ನಂತರ ಮೊದಲ ಸಾರ್ವತ್ರಿಕ ಚುನಾವಣೆಯಲ್ಲೇ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಿವೆ.
ರಂಗನಾಥ್ ಜೆಡಿಎಸ್‌ನ ಕಾನೂನು ಘಟಕದ ರಾಜ್ಯಾಧ್ಯಕ್ಷರಾಗಿದ್ದು, ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.
ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ, ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್ ಅಶ್ವತ್ಥನಾರಾಯಣ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ, ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಅ. ದೇವೇಗೌಡ ಉಪಸ್ಥಿತರಿದ್ದರು.
1 comment
[…] ರಾಜಕೀಯ […]