ಹೆಚ್ಚು ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ಸಮಿತಿ ರಚನೆ ಭರವಸೆ
ನವದೆಹಲಿ:ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿಂದು ಮಂಡಿಸಿದ 2024 ನೇ ಸಾಲಿನ ಮಧ್ಯಂತರ ಬಜೆಟ್‌ನಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು 9 ರಿಂದ 14 ವರ್ಷದ ಬಾಲಕಿಯರಿಗೆ ಲಸಿಕೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಅವರು, ದೇಶದಲ್ಲಿ ಹೆಚ್ಚು ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ಸಮಿತಿ ರಚಿಸಲಾಗುವುದು ಎಂದರು.
ವಿವಿಧ ಇಲಾಖೆಗಳ ಅಡಿಯಲ್ಲಿರುವ ಆಸ್ಪತ್ರೆ ಮೂಲಸೌಕರ್ಯಗಳನ್ನು ಬಳಸಿಕೊಂಡು ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ಸರ್ಕಾರ ಯೋಜಿಸಿದ್ದು, ಸಮಸ್ಯೆಗಳ ಪರಿಶೀಲನೆ ಮತ್ತು ಸಂಬಂಧಪಟ್ಟ ಶಿಫಾರಸುಗಳಿಗೆ ಅನುಕೂಲವಾಗುವಂತೆ ಸಹಾಯಕವಾಗಲು ಸಮಿತಿ ರಚಿಸಲಾಗುವುದು ಎಂದರು.