Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಭಾರತ್ ಜೋಡೋ ಯಾತ್ರೆ ಮಾಡಿದವರೇ, ಭಾರತ್ ತೋಡೋ ಎನ್ನುತ್ತಾರೆ: ಇಂತಹವರಿಂದ ಇನ್ನೇನು ನಿರೀಕ್ಷೆ ಸಾಧ್ಯ – ಹೆಚ್.ಡಿ.ಕುಮಾರಸ್ವಾಮಿ

by admin February 2, 2024
written by admin February 2, 2024 0 comments 2 minutes read
2FacebookTwitterPinterestEmail
203

ನಮ್ಮ ಬೇಡಿಕೆಗಳ ಈಡೇರಿಕೆಗೆ ಕೇಂದ್ರ ಸರ್ಕಾರಕ್ಕೆ
ವಾಸ್ತವ ಮನವರಿಕೆ ಮಾಡಿಕೊಡಬೇಕು

ಬೆಂಗಳೂರು:ಭಾರತ ಒಂದಾಗಿರಬೇಕು ಎಂದು ಭಾರತ್ ಜೋಡೋ ಯಾತ್ರೆ ಮಾಡಿದವರೇ ಇವತ್ತು ಭಾರತ್ ತೋಡೋ ಎನ್ನುತ್ತಾರೆ ದೇಶ ಇಬ್ಭಾಗ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಇಂದಿಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಭಾರತ ಪ್ರತ್ಯೇಕ ರಾಷ್ಟ್ರದ ಬಗ್ಗೆ ಸಂಸದ ಡಿ.ಕೆ.ಸುರೇಶ್ ಅವರು ನೀಡಿರುವ ಹೇಳಿಕೆ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ ಬಿರಿಯಾನಿ ಊಟ ಮಾಡಿ ಭಾರತ್ ಜೋಡೋ ಯಾತ್ರೆ ಮಾಡಿದರು. ಈಗ ವಿಭಜನೆಯ ಮಾತನ್ನು ಆಡುತ್ತಿದ್ದಾರೆ. ಒಂದು ವೇಳೆ ವಿಭಜನೆ ಆಯ್ತು ಅಂತ ತಿಳಿದುಕೊಳ್ಳಿ. ತಮಿಳುನಾಡಿನಿಂದ ಕಾವೇರಿ ವಿಚಾರದಲ್ಲಿ ನ್ಯಾಯ ಪಡೆಯಲು ಸಾಧ್ಯವೇ, ಇವರು ನ್ಯಾಯ ದೊರಕಿಸಿಕೊಡುತ್ತಾರೆಯೇ ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ಕಲ್ಲು ಒಡೆದು ಲೂಟಿ ಮಾಡಿದವರು ದೇಶ ಕಟ್ಟುತ್ತಾರೆಯೇ

ಇಲ್ಲಿ ಕಲ್ಲು ಒಡೆದು ಲೂಟಿ ಮಾಡಿಕೊಂಡು ಇದ್ದೋರನ್ನು ಲೋಕಸಭೆಗೆ ಕಳುಹಿಸಿದರೆ ಇನ್ನೇನಾಗುತ್ತದೆ. ಇಲ್ಲಿ ಬಡ ಜನರನ್ನು ಲೂಟಿ ಮಾಡಿಕೊಂಡು ಸಾಕ್ಷಿಗುಡ್ಡೆ ಮಾಡಿದ್ದಾರೆ.

ಅಂತವರನ್ನು ತೆಗೆದುಕೊಂಡು ಹೋಗಿ ದೇಶ ಕಟ್ಟು ಅಂತ ಕಳುಹಿಸಿದರೆ ಕಟ್ಟುತ್ತಾರೆಯೇ, ಅವರ ಸಾಮ್ರಾಜ್ಯ ಕಟ್ಟುಕೊಳ್ತಾರೆ ಅಷ್ಟೇ. ಇವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ ಎಂದು ಅವರು ಟಾಂಗ್ ನೀಡಿದರು.

ಕೇಂದ್ರ ಸರ್ಕಾರದ ಮುಂದೆ ನಮ್ಮ ಬೇಡಿಕೆಗಳನ್ನು ಸಂಘರ್ಷದಿಂದ ಈಡೇರಿಸಿಕೊಳ್ಳಲು ಸಾಧ್ಯವಿಲ್ಲ. ವಾಸ್ತವವನ್ನು ಅವರಿಗೆ ಮನವರಿಕೆ ಮಾಡಿಕೊಡಬೇಕು. ಅವರನ್ನು ಒಪ್ಪಿಸಿ, ಮನವರಿಕೆ ಮಾಡಿಕೊಟ್ಟು ಹಣ ಪಡೆಯಬೇಕು. ಅದನ್ನು ಬಿಟ್ಟು ಇವರ ಬಾಲಿಷ ಹೇಳಿಕೆಗಳಿಂದ ಸಮಸ್ಯೆ ಬಗೆಹರಿಯಲ್ಲ ಎಂದು ಸಂಸದ ಸುರೇಶ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಆರ್ಥಿಕ ತಾರತಮ್ಯ ಆರೋಪ ಅಪ್ರಭುದ್ಧ ಹೇಳಿಕೆ

ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಆರ್ಥಿಕ ತಾರತಮ್ಯ, ಅನ್ಯಾಯ ಮಾಡುತ್ತಿದೆ ಎಂಬ ಕಾರಣ ಕೊಟ್ಟಿದ್ದಾರೆ. ಇದು ಅಪ್ರಭುದ್ಧತೆಯ ಹೇಳಿಕೆ.

ದೇಶದ ಮೊದಲನೇ ಬಜೆಟ್ ಗಾತ್ರ 174 ಕೋಟಿ ರೂ. ಆಗ ದೇಶದಲ್ಲಿ ಆಹಾರದ ಕೊರತೆ ಇತ್ತು. ಆಗಿನಿಂದಲೂ ಸರ್ಕಾರಗಳು ಬಜೆಟ್ ಮಂಡಿಸಿಕೊಂಡು ಬಂದಿವೆ. ಕಾಲಕ್ರಮೇಣ ನಾವು ಹಣಕಾಸು ಆಯೋಗಗಳನ್ನು ರಚನೆ ಮಾಡಿಕೊಂಡಿದ್ದೇವೆ. ಅವರು ಎಲ್ಲಾ ರಾಜ್ಯಕ್ಕೂ ಭೇಟಿ ಕೊಟ್ಟು ಪರಿಶೀಲನೆ ಮಾಡುತ್ತಾರೆ.

ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಹುಟ್ಟಿಸಿದ ನಡುಕ: ಅಕಾಲಿಕ ಮರಣಕ್ಕೆ ತುತ್ತಾದ ಐ.ಎನ್.ಡಿ.ಐ.ಎ.!

ಯಾವ ರಾಜ್ಯಕ್ಕೆ ಎಷ್ಟು ಹಣಬೇಕು ಎಂದು ವರದಿ ಕೊಡುತ್ತಾರೆ. ಯಾವ ರಾಜ್ಯ ಅಭಿವೃದ್ಧಿ ಆಗಿಲ್ಲ, ಯಾವ ರಾಜ್ಯ ಅಭಿವೃದ್ಧಿ ಆಗಿದೆ ಎಂಬ ಮಾನದಂಡದ ಅಡಿಯಲ್ಲಿ ಹಣ ಹಂಚಿಕೆ ಆಗುತ್ತದೆ. ಈ ಪದ್ಧತಿಯನ್ನು ಕಾಂಗ್ರೆಸ್ ಸರ್ಕಾರದ ಕಾಲದಲ್ಲಿಯೇ ಆರಂಭ ಮಾಡಲಾಯಿತು. ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ಮೇಲೆ ಪ್ರಾರಂಭ ಮಾಡಿದ್ದಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಕಾಂತರಾಜು ವರದಿಯಲ್ಲಿ ಮೆಂಬರ್ ಸೆಕ್ರೆಟರಿ ಸಹಿ ಇತ್ತಾ

ಕಾಂತರಾಜು ವರದಿ ಬಗ್ಗೆ ಬೀದಿ ಬೀದಿಯಲ್ಲಿ ಮಾತನಾಡಿದ್ದಾರೆ. ನಿಮ್ಮನ್ನು ವರದಿ ಸ್ವೀಕರಿಸಬೇಡಿ ಅಂತ ಹಿಡಿದುಕೊಂಡಿರುವವರು ಯಾರು, ನಾನು ಸಿಎಂ ಆಗಿದ್ದಾಗ ವರದಿ ತೆಗೆದುಕೊಂಡಿಲ್ಲ ಅಂದಿದ್ದಾರೆ. ಆ ವರದಿಯಲ್ಲಿ ಮೆಂಬರ್ ಸೆಕ್ರೆಟರಿ ಸಹಿ ಇತ್ತಾ, ಇವತ್ತಿನವರೆಗೂ ಆ ವರದಿಗೆ ಸಹಿ ಹಾಕಿಲ್ಲ. ಸಹಿ ಹಾಕದ ವರದಿಯನ್ನ ನಾನು ಹೇಗೆ ಸ್ವೀಕರಿಸಲಿ, ಸುಮ್ಮನೆ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.

ಕಾಂಗ್ರೆಸ್ ಸರ್ಕಾರದಲ್ಲಿ ಕಮಿಷನ್ ದಂಧೆ ನಡೆಯುತ್ತಿದೆ ಎಂಬ ಕಾಂಗ್ರೆಸ್ ಮಾಜಿ ಸಚಿವ ಗಂಡಸಿ ಶಿವರಾಂ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‌ನಲ್ಲಿ ೫೦ ಪರ್ಸೆಂಟ್ ಇದೆ ಅಂತ ಅವರು ಹೇಳಿದ್ದಾರೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಮ್ಮ ಮಾರ್ಗದರ್ಶರು ಅಂತಿದ್ದರು. ಅವರೇ ಬಾಣಲಿಯಿಂದ ಬೆಂಕಿಗೆ ಬಿದ್ದ ಹಾಗಾಗಿದೆ ಅಂತ ಹೇಳಿಕೆ ಕೊಟ್ಟಿದ್ದಾರೆ. ಇದನ್ನೆಲ್ಲಾ ಕುಮಾರಸ್ವಾಮಿ ಪ್ರಶ್ನೆ ಮಾಡಿದರೆ ಅವರಿಗೆ ಅಸಹನೆ, ಮೆಂಟಲ್ ಬ್ಯಾಲೆನ್ಸ್ ತಪ್ಪಿದೆ ಅಂತಾರೆ.

ಪ್ರತಿನಿತ್ಯ ವರ್ಗಾವಣೆ ಮಾಡುವ ಕೆಲಸವೇ ಆಗಿದೆ. ಮೋದಿ ಬಗ್ಗೆ ಸಿದ್ದರಾಮಯ್ಯ ಕಮೆಂಟ್ ಮಾಡಿದ್ದಾರೆ. ಮೊದಲು ನಿಮ್ಮ ಸ್ಥಿತಿ ನೋಡಿಕೊಳ್ಳಿ ಎಂದು ಅವರು ತಿರುಗೇಟು ನೀಡಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
dk sureshhd kumarswamykantaraju reportsaperate nation demand is foolishnesswe should convince the reality to the center
2 FacebookTwitterPinterestEmail
admin

previous post
ಸಿಬಿಐ, ಐಟಿ, ಇಡಿ, ಬಿಜೆಪಿ ಪಕ್ಷದ ಅಂಗ ಸಂಸ್ಥೆಗಳಂತೆ ಕಾರ್ಯನಿರ್ವಹಿಸುತ್ತಿವೆ – ಸಿದ್ದರಾಮಯ್ಯ
next post
ಕೇಂದ್ರದ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರದ ನೇರ ಸಂಘರ್ಷ: ಫೆಬ್ರವರಿ 7ರಂದು ನವದೆಹಲಿಯಲ್ಲಿ ಭಾರೀ ಪ್ರತಿಭಟನೆಗೆ ಸಿದ್ಧತೆ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ