Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಅಂಕಣರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಕೇಂದ್ರ ಗೃಹ ಸಚಿವರಿಂದ ಶಾಮನೂರು ಅತಿಥಿ ಗೃಹ ಉದ್ಘಾಟನೆ: ಮುಖ್ಯಮಂತ್ರಿ ಅವರಿಗೆ ಆಹ್ವಾನ ಇಲ್ಲ

by KM Shivaraju February 5, 2024
written by KM Shivaraju February 5, 2024 0 comments 1 minutes read
1FacebookTwitterPinterestEmail
262


ಬೆಂಗಳೂರು:ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದಿಂದ ಹಿಂದೆ ಸರಿದಿದ್ದ ವೀರಶೈವ ಹಾಗೂ ನಾಯಕ ಸಮುದಾಯದವರ ಮನ ಗೆಲ್ಲಲು ಕೇಂದ್ರ ಗೃಹ ಸಚಿವ ಅಮಿತ್ ಷಾ ರಾಜ್ಯದಲ್ಲಿ ಎರಡು ದಿನಗಳ ಪ್ರವಾಸ ಕೈಗೊಳ್ಳುತ್ತಿದ್ದಾರೆ.

ಇದೇ 9ರಂದು ನಗರಕ್ಕೆ ಆಗಮಿಸುವ ಅವರು, ಬೆಂಗಳೂರು ಹಾಗೂ ಮೈಸೂರಿನಲ್ಲಿ ಈ ಸಮಾಜಗಳಿಗೆ ಸೇರಿದ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದಲ್ಲದೆ, ಲೋಕಸಭಾ ಚುನಾವಣೆ ಸಿದ್ಧತೆಗೆ ಸಂಬಂಧಿಸಿದಂತೆ ಪಕ್ಷದ ರಾಜ್ಯ ಮುಖಂಡರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಶಾಸಕ ಶಾಮನೂರು ಶಿವಶಂಕರಪ್ಪ ಕಾರ್ಯಕ್ರಮ

ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಪದೇ ಪದೇ ಹೇಳಿಕೆಗಳನ್ನು ನೀಡುತ್ತಿರುವ ಹಾಗೂ ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಮತ್ತೆ ಲೋಕಸಭೆಗೆ ಆಯ್ಕೆಗೊಳ್ಳಬೇಕೆಂದು ಹೇಳಿಕೆ ನೀಡಿದ್ದ ಕಾಂಗ್ರೆಸ್‌ನ ಹಿರಿಯ ಮುತ್ಸದ್ಧಿ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಆಯೋಜಿಸಿರುವ ಕಾರ್ಯಕ್ರಮದಲ್ಲೂ ಭಾಗವಹಿಸುತ್ತಿದ್ದಾರೆ.

ಮೈಸೂರಿನ ಸುತ್ತೂರು ಕ್ಷೇತ್ರದಲ್ಲಿ ಶಾಮನೂರು ಅವರು ತಮ್ಮ ಕುಟುಂಬದ ವತಿಯಿಂದ ನಿರ್ಮಿಸಿರುವ ಅತಿಥಿಗೃಹದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಉದ್ದೇಶದಿಂದಲೇ ಷಾ ಈ ಪ್ರವಾಸ ಕೈಗೊಂಡಿದ್ದಾರೆ.

ಅಂದಿನ ಸಮಾರಂಭಕ್ಕೆ ಯಾರನ್ನು ಆಹ್ವಾನಿಸಬೇಕು ಎಂಬುದನ್ನು ಕೇಂದ್ರ ಗೃಹ ಸಚಿವಾಲಯ, ಶ್ರೀಕ್ಷೇತ್ರದ ಪ್ರಮುಖರು ತೀರ್ಮಾನಿಸಿದ್ದಾರೆ. ಆದರಲ್ಲೂ ಶಾಮನೂರು ಅವರ ನಿರ್ಧಾರಕ್ಕೆ ಹೆಚ್ಚು ಒತ್ತು ಕೊಡಲಾಗಿದೆ ಎನ್ನಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿಲ್ಲ

ಈ ಸಮಾರಂಭಕ್ಕೆ ಜಿಲ್ಲೆ, ಕ್ಷೇತ್ರವನ್ನು (ವರುಣ) ಪ್ರತಿನಿಧಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿಲ್ಲ, ಅಷ್ಟೇ ಅಲ್ಲ, ಸ್ಥಳೀಯ ಉಸ್ತುವಾರಿ ಸಚಿವರಿಗೂ ವೇದಿಕೆಯಲ್ಲಿ ಅವಕಾಶವಿಲ್ಲ. ಶಾಮನೂರು ಕುಟುಂಬದ ಸ್ನೇಹಿತರಾಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮಾತ್ರ ಆಹ್ವಾನ ನೀಡಲಾಗಿದೆ.

ಸಿರಿಗೆರೆ ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಸಿದ್ದಗಂಗಾ ಕ್ಷೇತ್ರದ ಸಿದ್ದಲಿಂಗ ಸ್ವಾಮೀಜಿಗಳ ಸಮ್ಮುಖದಲ್ಲಿ ಅಮಿತ್ ಷಾ ಅವರು, ಪಾರ್ವತಮ್ಮ ಮತ್ತು ಡಾ.ಶಾಮನೂರು ಶಿವಶಂಕರಪ್ಪ ಅತಿಥಿ ಗೃಹವನ್ನು ಉದ್ಘಾಟಿಸಲಿದ್ದಾರೆ.

ಎಲ್ಲದಕ್ಕೂ ಮಿಗಿಲಾಗಿ ಈ ಸಮಾರಂಭಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವೇದಿಕೆ ಹಂಚಿಕೊಳ್ಳಲಿದ್ದಾರೆ.

ಶಾಮನೂರು ಅವರಿಗೆ ಅಮಿತ್ ಷಾರಿಂದ ಸನ್ಮಾನ

ಉಳಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್, ಬಿಜೆಪಿ ಮುಖಂಡರಾದ ಸಿ.ಟಿ, ರವಿ, ಡಾ.ಪ್ರಭಾಕರ್ ಕೋರೆ, ಉದ್ಯಮಿ ಎಸ್.ಎಸ್. ಗಣೇಶ್ ಉಪಸ್ಥಿತರಿರಲಿದ್ದಾರೆ. ಸಮಾರಂಭದಲ್ಲಿ ಶಾಮನೂರು ಶಿವಶಂಕರಪ್ಪ ಅವರನ್ನು ಅಮಿತ್ ಷಾ ಸನ್ಮಾನಿಸಲಿದ್ದಾರೆ.

ಲೋಕಸಭಾ ಚುನಾವಣೆಗೂ ಮುನ್ನವೋ, ನಂತರವೋ ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರ ಪತನಗೊಂಡು ಮಹಾರಾಷ್ಟ್ರ ಮಾದರಿಯಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂಬ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿಬರುತ್ತಿರುವ ಬೆನ್ನಲ್ಲೇ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹಾಗೂ ಕೇಂದ್ರದ ಮಾಜಿ ಸಚಿವ ಪ್ರಫುಲ್ ಪಟೇಲ್, ರಾಜ್ಯದ ಇಬ್ಬರು ಕಾಂಗ್ರೆಸ್ ದುರೀಣರೊಟ್ಟಿಗೆ ಸಂಪರ್ಕ ಇಟ್ಟುಕೊಂಡಿರುವ ಬೆನ್ನಲ್ಲೇ ಅಮಿತ್ ಷಾ ಅವರ ಈ ಭೇಟಿ ರಾಜಕೀಯ ತಿರುವಿಗೆ ವೇದಿಕೆ ಆಗಲಿದೆಯೇ ಎಂಬ ಮಾತುಗಳು ಕೇಳಿಬರುತ್ತಿವೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
amith shah two day visit to karnatakabjpcongresno invitation to cm siddaramaiahparticipate in mysuru programmes
1 FacebookTwitterPinterestEmail
KM Shivaraju

previous post
ಕೈ ಪಾಳಯಕ್ಕೆ ಖರ್ಗೆ ವಾರ್ನಿಂಗು
next post
ಪ್ರಧಾನಮಂತ್ರಿ ಗ್ಯಾರಂಟಿ ಭರವಸೆಗೆ ಜನ ಮರುಳಾಗಬಾರದು: ಬಿಜೆಪಿ ಕೇವಲ ಸುಳ್ಳು ಹೇಳುತ್ತದೆ – ಸಿದ್ದರಾಮಯ್ಯ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ