Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ದೆಹಲಿಯ ಪ್ರತಿಭಟನೆಗೆ ಬಿಜೆಪಿ ಸಂಸದರು, ಶಾಸಕರು, ನಾಯಕರಿಗೂ ಆಹ್ವಾನ.

by admin February 5, 2024
written by admin February 5, 2024 0 comments 2 minutes read
1FacebookTwitterPinterestEmail
174
ರಾಜ್ಯದ ಹಿತಕ್ಕಾಗಿ ಫೆಬ್ರವರಿ 7 ರಂದು ಜಂತರ್ ಮಂತರ್ ನಲ್ಲಿ ಪ್ರತಿಭಟನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯ, ತಾರತಮ್ಯ, ಮಲತಾಯಿ ಧೋರಣೆ ವಿರೋಧಿಸಿ ರಾಜ್ಯದ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವಿರುದ್ದ ಫೆಬ್ರವರಿ 7 ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಬೆಳಿಗ್ಗೆ 11 ಗಂಟೆಗೆ  ಪ್ರತಿಭಟನೆ ಹಮ್ಮಿಕೊಳ್ಳಾಗಿದೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಜನತೆ ನಮಗೆ ಕೊಟ್ಟ ಅವಕಾಶಕ್ಕೆ ನ್ಯಾಯ ಒದಗಿಸಬೇಕಾದುದ್ದು ನಮ್ಮ ಕರ್ತವ್ಯ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ  ನ್ಯಾಯ ಒದಗಿಸಿಕೊಡಲಿದೆ ಎಂದು ಇಲ್ಲಿಯವರೆಗೂ ತಾಳ್ಮೆ ಯಿಂದ ಕಾಯುತ್ತಿದ್ದೆವು.

ಕಳೆದ ಸಾಲಿನ ಬಜೆಟ್ ನಲ್ಲಿ ಹೇಳಿದಂತೆ ನಡೆದುಕೊಳ್ಳುತ್ತಾರೆ ಎಂದು ಕಾದಿದ್ದೆವು. ಆದರೆ ಇದುವರೆಗೂ ಅನ್ಯಾಯ ಸರಿಪಡಿಸಿಲ್ಲ. ಇದರ ವಿರುದ್ಧ ಧ್ವನಿ ಎತ್ತಲೇಬೇಕಾಗಿದೆ. ಹೋರಾಟಕ್ಕೆ ಜೊತೆ ನೀಡಲು  ಇಡೀ ಸರ್ಕಾರ ಪಕ್ಷ ಭೇದ ಮರೆತು ಆಹ್ವಾನ ನೀಡಿದ್ದೇವೆ. ಕನ್ನಡಿಗರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕಿದೆ. ಕೇಂದ್ರದ ಕಿವಿಯನ್ನು ತೆರೆಸಲು ಹೋರಾಡುತ್ತಿದ್ದೇವೆ ಎಂದರು.

ರಾಜ್ಯಕ್ಕೆ ನಿರಂತರ ಅನ್ಯಾಯ

ಭದ್ರಾ ಯೋಜನೆಗೆ 5300 ಕೋಟಿ ರೂ. ಕೊಡುತ್ತೇವೆ ಎಂದು ಕಳೆದ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿ ಈವರಗೆ ಒಂದು ರೂ. ಕೂಡ ಬಿಡುಗಡೆ ಮಾಡಿಲ್ಲ. ಬರಗಾಲ ಪರಿಹಾರದ  ಹಣವೂ ಇಲ್ಲ. 150 ಮಾನವ ದಿನಗಳಿಗೆ ಕೂಲಿ ಕೊಡಲು ಕೂಡ ಅನುಮತಿ ನೀಡಿಲ್ಲ ಎಂದು ಹೇಳಿದರು.

ಇಂಥ ಹಲವು ಕಾರಣಗಳಿಗಾಗಿ ಅನಿವಾರ್ಯವಾಗಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ದೇಶದ ಜನರ ಗಮನ ಸೆಳೆಯಬೇಕು, ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಬಗ್ಗೆ, ಹಣಕಾಸು ಹಂಚಿಕೆಯಲ್ಲಾಗಿರುವ ತಾರತಮ್ಯ, ಬರಗಾಲದ  ಬಗ್ಗೆ ತೋರಿರುವ ಮಲತಾಯಿ ಧೋರಣೆ  ಕುರಿತು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.  ಎಲ್ಲಾ ಶಾಸಕರು, ಮೇಲ್ಮನೆ ಶಾಸಕರು ಭಾಗವಹಿಸುತ್ತಿದ್ದಾರೆ ಎಂದರು.

ತೆರಿಗೆ ಪಾಲಿನಲ್ಲಿ ರಾಜ್ಯಕ್ಕೆ ನಷ್ಟ

ಒಕ್ಕೂಟ ವ್ಯವಸ್ಥೆಯಲ್ಲಿ ಸಂವಿಧಾನದ ಮೂಲಕ  ಕೇಂದ್ರ ಮತ್ತು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ಸೇರಿ ಜನರ ಸೇವೆಯನ್ನು ಮಾಡಲು ಒಪ್ಪಿಕೊಂಡಿದ್ದೇವೆ. ಕೇಂದ್ರ ಸರ್ಕಾರದ ತೆರಿಗೆ ಹಣವೆಂದರೆ  ರಾಜ್ಯಗಳಿಂದ ಬರುವ ತೆರಿಗೆ ಹಣ. ಸೆಸ್, ಪೆಟ್ರೋಲ್ ಡೀಸೆಲ್, ಸರ್ಚಾರ್ಜ್.

ಇವುಗಳಿಂದ ಸಂಗ್ರಹವಾಗುವ ಹಣವನ್ನು ಕೇಂದ್ರ ಮತ್ತು ರಾಜ್ಯಗಳಿಗೆ ಹಂಚಿಕೆಯಾಗಬೇಕೆಂದು ಹಣಕಾಸು ಆಯೋಗ ರಚನೆಯಾಗಿದೆ. ಸಂವಿಧಾನದ 7 ನೇ ಪರಿಚ್ಛೇಧ ಅದನ್ನು ಸ್ವತಂತ್ರ ಸಂಸ್ಥೆಯಾಗಿಸಿದೆ. ಇಲ್ಲಿಯವರೆಗೆ 15 ಹಣಕಾಸು ಆಯೋಗಗಳು ಆಗಿವೆ. ಪ್ರಸ್ತುತ 16 ನೇ ಹಣಕಾಸು ಆಯೋಗ ರಚನೆಯಾಗಿದ್ದು, ಅಧ್ಯಕ್ಷರ ನೇಮಕವಾಗಿದೆ.

14 ನೇ ಹಣಕಾಸು ಆಯೋಗದಲ್ಲಿ ರಾಜ್ಯದ ತೆರಿಗೆಯ ಪಾಲು ಶೇ 4.71 ಇದ್ದದ್ದು, 15 ನೇ ಹಣಕಾಸು ಆಯೋಗದಲ್ಲಿ ಶೇ.3.64ಕ್ಕೆ ಇಳಿಕೆಯಾಯಿತು. ಅಂದರೆ ಶೇ. 1.07 ರಷ್ಟು ಕಡಿಮೆಯಾಗಿದೆ. ಅದರಿಂದ 4 ವರ್ಷಗಳಲ್ಲಿ 45,000 ಕೋಟಿ ರೂ. ರಾಜ್ಯಕ್ಕೆ ಕಡಿತ ಆಯಿತು. ಇದು ಕೇವಲ ನಗದು ಹಂಚಿಕೆಯೊಂದರಲ್ಲೇ ಆಗಿರುವ ಅನ್ಯಾಯ. ಅಂದಾಜಿನ ಪ್ರಕಾರ ಈ ವರ್ಷ ನಗದು ಹಂಚಿಕೆಯಲ್ಲಿ 62098 ಕೋಟಿ ರೂ.ಗಳು  ಕರ್ನಾಟಕಕ್ಕೆ ಕಡಿಮೆಯಾಗಲಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ರಾಜ್ಯಕ್ಕೆ 73,593 ಕೋಟಿ ರೂ.ಗಳು ತೆರಿಗೆ ಪಾಲು ಕಡಿಮೆ

ಹಣಕಾಸು ಆಯೋಗ ನಗದು ಹಂಚಿಕೆ ಮಾಡುವಾಗ ಶೇ. 4.71 ರಿಂದ ಶೇ. 3.74 ಕ್ಕೆ ಇಳಿಕೆ ಮಾಡಿದ್ದರಿಂದ ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಲು 5495 ಕೋಟಿ ರೂ.ಗಳ ವಿಶೇಷ ಅನುದಾನ ನೀಡಲು ಶಿಫಾರಸ್ಸು ಮಾಡಲಾಗಿತ್ತು.  ಮಧ್ಯಂತರ ಬಜೆಟ್ ನಲ್ಲಿ ಈ ಬಗ್ಗೆ  ಶಿಫಾರಸ್ಸು ಮಾಡಿದರು. ಈ ಹಣವೂ ರಾಜ್ಯಕ್ಕೆ ಬರಲಿಲ್ಲ.

ಈ ಮೊತ್ತವನ್ನು  ಕೇಂದ್ರ ಸರ್ಕಾರವನ್ನು ಕೇಳಿ ಪಡೆಯಲು ವಿಧಾನಸಭೆಯಲ್ಲಿ  ವಿಷಯ ಮಂಡಿಸಿದ್ದೆ.  ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇದನ್ನು ತಿರಸ್ಕರಿಸಿದರು. ಅಂತಿಮ ವರದಿಯಲ್ಲಿ 3000 ಕೋಟಿ ರೂ. ಫೆರಿಫೆರಲ್ ರಿಂಗ್ ರಸ್ತೆಗೆ, ಕೆರೆಗಳನ್ನು ಅಭಿವೃದ್ಧಿ ಪಡಿಸಲು 3000  ಸೇರಿ 6000 ಕೋಟಿ ರೂ. ಗಳನ್ನು ಹೆಚ್ವರಿಯಾಗಿ ಕೊಡಲು ಶಿಫಾರಸು ಮಾಡಲಾಯಿತು. ಈ ಹಣವೂ ಬರಲಿಲ್ಲ.

ನರೇಂದ್ರ ಮೋದಿ ಅವರು ಪ್ರಧಾನಿ ಆದ ಬಳಿಕ 2020-21 ರಿಂದ 2025-26 ರವೆಗಿನ ಅವಧಿಗೆ ರಚನೆಯಾದ 15 ನೇ ಹಣಕಾಸು ಆಯೋಗದ ತೆರಿಗೆ ಪಾಲು ಹಂಚಿಕೆಯಲ್ಲಿ 62,098 ಕೋಟಿ ರೂ.ಗಳಷ್ಟು ರಾಜ್ಯಕ್ಕೆ ನಷ್ಟವಾಗಿದೆ ಎಂದರು.

ಅಂತೆಯೇ 2020-21 ಹಾಗೂ 2021-22 ನೇ ಸಾಲಿಗೆ ವಿಶೇಷ ಅನುದಾನ ಕೊಡದೆ ರಾಜ್ಯಕ್ಕೆ  11,495 ಕೋಟಿ ರೂ.ಗಳು ನಷ್ಟವಾಗಿದೆ. ಒಟ್ಟಾರೆ 15ನೇ ಹಣಕಾಸು ಆಯೋಗದಲ್ಲಿ ರಾಜ್ಯದ ಪಾಲಿನಲ್ಲಿ 73,593 ಕೋಟಿ ರೂ.ಗಳು ಕಡಿಮೆಯಾಯಿತು ಎಂದರು.

ಜಿಎಸ್ ಟಿಯಲ್ಲಿ ರಾಜ್ಯಕ್ಕೆ ಅನ್ಯಾಯ

ಜಿಎಸ್ ಟಿ ಜಾರಿಗೆ ಬಂದಾಗ ಇದು ಅವೈಜ್ಞಾನಿಕ ಎಂದು ನಾವು ಸಾರಿ ಸಾರಿ ಹೇಳಿದೆವು. ಆಗ ರಾಜ್ಯದ ತೆರಿಗೆ ಬೆಳವಣಿಗೆ ದರ ಶೇ.15 ರಷ್ಟಿತ್ತು.  ಇದರಿಂದ ತೆರಿಗೆ, ಕೇಂದ್ರದ ಅನುದಾನವೂ ಹೆಚ್ಚಾಗತ್ತದೆ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಆದರೆ ಅದನ್ನೂ ಪರಿಹಾರ ರೂಪದಲ್ಲಿ ರಾಜ್ಯಕ್ಕೆ ತುಂಬಿ ಕೊಡುವುದಾಗಿ ಕೇಂದ್ರ ಹೇಳಿತ್ತು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
1 FacebookTwitterPinterestEmail
admin

previous post
ಜೆಡಿಎಸ್ ಸೇರಿದ ತಕ್ಷಣ ಜ್ಯೋತಿ ಪ್ರಕಾಶ್ ಮಿರ್ಜಿಗೆ ಹಿರಿಯ ಉಪಾಧ್ಯಕ್ಷ ಸ್ಥಾನ
next post
ದಿನ ಭವಿಷ್ಯ : ಮಂಗಳವಾರ, 06 ಫೆಬ್ರವರಿ 2024

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ