Monday, May 19, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, May 19, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆಶಿಕ್ಷಣ

ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿ

by admin February 6, 2024
written by admin February 6, 2024 1 comment 3 minutes read
Share 2FacebookTwitterPinterestEmail
157

ರಾಜ್ಯಸಭೆಯಲ್ಲಿ ಕೈಜೋಡಿಸಿ ಮನವಿ ಮಾಡಿದ ಹೆಚ್.ಡಿ.ದೇವೇಗೌಡರು

ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿಗಳನ್ನು ʼಸೋ ಕಾಲ್ಡ್‌ ಗ್ಯಾರಂಟಿಗಳುʼ ಎಂದು ಕಟುವಾಗಿ ಟೀಕಿಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ತಾತ್ಕಾಲಿಕ ರಾಜಕೀಯ ಲಾಭಕ್ಕಾಗಿ ಇಂಥ ಕಾರ್ಯಕ್ರಮಗಳನ್ನು ಜಾರಿ ಮಾಡುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು.

ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅನಗತ್ಯ ವೆಚ್ಚದ ಅನುತ್ಪಾದಕ, ಅಲ್ಪಾವಧಿ ಲಾಭದ ಗ್ಯಾರಂಟಿಗಳು ಇವಾಗಿವೆ ಎಂದು ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳ ಬಗ್ಗೆ ದೇಶದ ಜನರ ಗಮನ ಸೆಳೆದರು.

ಅನುದಾನ ರಾಜಕೀಯ..!

ಕಾಂಗ್ರೆಸ್‌ ಪಕ್ಷದ ಸದಸ್ಯರ ಆಕ್ಷೇಪಣೆ, ಗದ್ದಲದ ನಡುವೆಯೂ ತಮ್ಮ ಮಾತುಗಳನ್ನು ಮುಂದುವರಿಸಿದ ಅವರು, ಜಂತರ್‌ಮಂತರ್‌ನಲ್ಲಿ ಕಾಂಗ್ರೆಸ್‌ನವರು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಅವರು ನನ್ನನ್ನೂ ಸೇರಿ ಎಲ್ಲರನ್ನೂ ಬರುವಂತೆ ಕರೆದಿದ್ದಾರೆ.

ಈ ದೇಶದ ರಾಜಕೀಯ ಪರಿಸ್ಥಿತಿ ಹೇಗಾಗಿದೆ ಎಂದರೆ, ರಾಜಕೀಯ ಲಾಭಕ್ಕಾಗಿ ಅನಗತ್ಯ ವೆಚ್ಚದ ಅನುತ್ಪಾದಕ ವೆಚ್ಚಗಳನ್ನು ಯಥೇಚ್ಛವಾಗಿ ಮಾಡಲಾಗುತ್ತಿದೆ. ನಾನೆಂದೂ ಇಂಥದ್ದನ್ನು ಮಾಡಿಲ್ಲ ಎಂದರು.

ಮೋದಿ ಗ್ಯಾರಂಟಿ ವಿಭಿನ್ನ ಎಂಬುದು ನನಗೆ ಗೊತ್ತಿದೆ

ಈ ಸಂದರ್ಭದಲ್ಲಿ ಕಾಂಗ್ರೆಸ್‌ ಸದಸ್ಯರೊಬ್ಬರು ಪ್ರಧಾನಿ ಮೋದಿ ಗ್ಯಾರಂಟಿಗಳ ಬಗ್ಗೆ ಏನು ಹೇಳುತ್ತೀರಿ ಎಂದಾಗ, “ನಾನು ಹೇಳುತ್ತಿರುವುದು ಕರ್ನಾಟಕ ಸರ್ಕಾರದ ಗ್ಯಾರಂಟಿಗಳ ಬಗ್ಗೆ. ಮೋದಿ ಗ್ಯಾರಂಟಿಗಳು ಬಹಳ ವಿಭಿನ್ನವಾಗಿವೆ. ಅವುಗಳ ಬಗ್ಗೆ ನನಗೆ ಗೊತ್ತಿದೆ” ಎಂದು ಗುಡುಗಿದರು.

ಅಲ್ಲದೆ, “ನಾನು ತಪ್ಪು ಮಾಹಿತಿ ಹೇಳಿದ್ದರೆ ಕ್ಷಮೆ ಕೇಳುತ್ತೇನೆ. ಯಾರಿಗೂ, ಯಾವುದಕ್ಕೂ ಅಪಖ್ಯಾತಿ ತರುವ ಉದ್ದೇಶ ನನ್ನದಲ್ಲ. ಕರ್ನಾಟಕ ಸರ್ಕಾರ ಒಳ್ಳೆಯದು ಮಾಡಿದರೆ ಮೆಚ್ಚುಗೆ ವ್ಯಕ್ತಪಡಿಸುತ್ತೇನೆ. ನನಗೆ ಅದರಿಂದ ಏನೂ ಆಗಬೇಕಿಲ್ಲ” ಎಂದರು.

ಸಿದ್ದರಾಮಯ್ಯ ಅವರಿಗೆ 10 ಸಾವಿರ ರೂ. ದಂಡ

ಹಣ ಇಲ್ಲ, ಪ್ರತಿಭಟನೆ ಮಾಡುತ್ತೇವೆ ಎಂದು ನಮ್ಮನ್ನೆಲ್ಲ ಕರೆಯುತ್ತಾರೆ. ಆದರೆ, ಕೇರಳದಲ್ಲಿ ಇದೇ ಉದ್ದೇಶಕ್ಕೆ ಅಲ್ಲಿನ ಎಲ್ ಡಿಎಫ್ ಸರ್ಕಾರ ಕರೆದರೆ ಕಾಂಗ್ರೆಸ್ ನವರು ಬಹಿಷ್ಕಾರ ಹಾಕುತ್ತಾರೆ. ಇದು ರಾಜಕೀಯ ಪರಿಸ್ಥಿತಿ ಎಂದು ಅವರು ಬೇಸರಿಸಿದರು.

ಮನ ಕಲಕುವ ಘಟನೆ ವಿವರಿಸಿದ ಮಾಜಿ ಪ್ರಧಾನಿಗಳು

ಗ್ಯಾರಂಟಿಗಳ ಹೆಸರಿನಲ್ಲಿ ಕರ್ನಾಟಕದಲ್ಲಿ ಏನಾಗಿದೆ? ಒಂದು ಘಟನೆ ಬಗ್ಗೆ ವಿವರಿಸುತ್ತೇನೆ. “ಹಾವೇರಿ ಜಿಲ್ಲೆ ಯಲಗಚ್ಚು ಗ್ರಾಮದ ಬಸವರಾಜ ವೆಂಕಟ ಎಂಬ ಯುವಕನ ಆತ್ಮಾಹುತಿ ಆಘಾತಕಾರಿ. ನಿಮ್ಮ ಪ್ರಚಾರಪ್ರಿಯ, ಖೊಟ್ಟಿ ಗ್ಯಾರಂಟಿಗಳ ಸರ್ಕಾರದ ಆತ್ಮಸಾಕ್ಷಿಗೆ ಎದುರಾದ ದೊಡ್ಡ ಸವಾಲು” ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮಾಡಿದ್ದ ಟ್ವೀಟ್‌ʼನ ಒಂದು ತುಣುಕನ್ನು ಓದಿದರು ಹಾಗೂ ಆ ಬಗ್ಗೆ ವರದಿ ಮಾಡಿದ್ದ ಪತ್ರಿಕೆಯ ತುಣುಕನ್ನು ಪ್ರದರ್ಶಿಸಿದರು.

 “ಆ ಯುವಕ ಕೆಲಸಕ್ಕಾಗಿ ತಾಯಿಯೊಂದಿಗೆ ರೈಲಿನಲ್ಲಿ ಪ್ರಯಾಣ ಮಾಡುತ್ತಿರುತ್ತಾನೆ. ಟಿಕೆಟ್ ಇಲ್ಲದ ಕಾರಣಕ್ಕೆ ಅವರಿಬ್ಬರನ್ನು ಧಾರವಾಡದ ಬಳಿ ಕೆಳಗಿಳಿಸಲಾಗುತ್ತದೆ. ಅಲ್ಲಿ ತಾಯಿ ಮತ್ತು ತನಗೆ ಊಟಕ್ಕಾಗಿ ಆ ಯುವಕ ಅಲೆಯುತ್ತಾನೆ. ಕೆಲಸ ಹುಡುಕುತ್ತಾನೆ. ಸಿಗುವುದಿಲ್ಲ. ಕೊನೆಗೆ ಆ ನತದೃಷ್ಟ ಯುವಕ ಆತ್ಮಹತ್ಯೆ ಮಾಡಿಕೊಳ್ಳುತ್ತಾನೆ. ಇದು, ಕರ್ನಾಟಕದ ಗ್ಯಾರಂಟಿಗಳ ನೈಜಸ್ಥಿತಿ” ಎಂದು ದೇವೇಗೌಡರು ಅತೀವ ಬೇಸರ ವ್ಯಕ್ತಪಡಿಸಿದರು.

ಕಾಂಗ್ರೆಸ್‌ ಗೆ ಕೇರಳಕ್ಕೊಂದು ನೀತಿ; ಕರ್ನಾಟಕಕ್ಕೆ ಇನ್ನೊಂದು ನೀತಿ

ನಾನು ಕರ್ನಾಟಕದ ಮುಖ್ಯಮಂತ್ರಿ  ಆಗಿದ್ದಾಗ ಒಬ್ಬ ಶಾಸಕರನ್ನೂ ನಿಗಮ ಮಂಡಳಿಗಳಿಗೆ ನೇಮಕ ಮಾಡಲಿಲ್ಲ. ಜನರ ತೆರಿಗೆ ಹಣದ ಪ್ರತಿ ಪೈಸೆಯನ್ನೂ ನೀರಾವರಿ ಯೋಜನೆಗಳಿಗೆ ತೆಗೆದಿಟ್ಟೆ. ಜನರ ದುಡ್ಡಿನಲ್ಲಿ ಒಂದು ಪೈಸೆಯನ್ನೂ ಅನಗತ್ಯವಾಗಿ ವೆಚ್ಚ ಮಾಡಲಿಲ್ಲ. ಮುಖ್ಯಮಂತ್ರಿಯಾಗಿ, ಪ್ರಧಾನಿಯಾಗಿ ಹಾಗೆಯೇ ಕೆಲಸ ಮಾಡಿದ್ದೇನೆ ಎಂದು ಅವರು ಸದನದಲ್ಲಿ ಒತ್ತಿ ಹೇಳಿದರು.

ಕಾಡುಗೊಲ್ಲ ಸಮುದಾಯದ ಬಗ್ಗೆ ಪ್ರಸ್ತಾಪ

ನರೇಂದ್ರ ಮೋದಿ ಅವರು ಪ್ರಧಾನಿಗಳಾಗಿ ಹತ್ತು ವರ್ಷ ಪೂರೈಸಿದ್ದಾರೆ. ನಾನು ಕೇವಲ ಹತ್ತು ತಿಂಗಳು ಮಾತ್ರ ಆ ಹುದ್ದೆಯಲ್ಲಿದ್ದೆ. ಆದರೆ, ನಾನು ಅವರಿಗೆ ಹೋಲಿಕೆ ಮಾಡಿಕೊಳ್ಳುತ್ತಿಲ್ಲ. ನನ್ನ ಅರವತ್ತು ವರ್ಷಗಳ ಸಾರ್ವಜನಿಕ ಜೀವನದ ಅನುಭವದ ಆಧಾರದ ಮೇಲೆ ಹೇಳುತ್ತಿದ್ದೇನೆ, ಅಷ್ಟೇ.

ಕರ್ನಾಟಕದಲ್ಲಿ ಕಳೆದ ಏಳು ತಿಂಗಳಿಂದ ರಾಜ್ಯ ಸರ್ಕಾರ ಹಲವಾರು ವಿಚಾರಗಳನ್ನು ಮುಂಚೂಣಿಗೆ ತಂದಿದೆ. ಮೀಸಲಾತಿ ಬಗ್ಗೆ ನಾನು ಯಾರನ್ನೂ ದೂರುವುದಿಲ್ಲ. ಅನೇಕ ಮೀಸಲಾತಿ ವರದಿಗಳ ಬಗ್ಗೆ ನನಗೆ ಗೊತ್ತಿದೆ. ಅದೇ ರೀತಿ ಕರ್ನಾಟಕದಲ್ಲಿಯೂ ಕಾಂತರಾಜು ಸಮಿತಿ ವರದಿ ಬಗ್ಗೆ ಚರ್ಚೆ ನಡೆಯುತ್ತಿದೆ.

ರಾಜ್ಯದಲ್ಲಿ ಕಾಡುಗೊಲ್ಲ ಸಮುದಾಯ ಮೀಸಲು ಸೌಲಭ್ಯದಿಂದ ವಂಚಿತರಾಗಿ ಅನ್ಯಾಯಕ್ಕಾಗಿ ತುತ್ತಾಗಿದೆ. 2014 ರಿಂದಲೂ ಇವರನ್ನು ಎಸ್ಟಿ ಪ್ರವರ್ಗಕ್ಕೆ ಸೇರಿಸುವ ಪ್ರಸ್ತಾವನೆ ಇತ್ತು. ಈಗ 2024. ಪ್ರಧಾನಮಂತ್ರಿಗಳು ನಾಳೆ ಸದನದಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಗೆ ಉತ್ತರ ನೀಡಲಿದ್ದಾರೆ. ಅವರ ಗಮನ ಸೆಳೆಯುವುದಕ್ಕಾಗಿ ಈ ವಿಚಾರವನ್ನು ಪ್ರಸ್ತಾಪ ಮಾಡಿದ್ದೇನೆ ಎಂದು ದೇವೇಗೌಡರು ಹೇಳಿದರು.

ಪ್ರತಿಭಟನೆಯಲ್ಲಿ ನೀವೂ ಪಾಲ್ಗೊಳ್ಳಿ: ಕೇಂದ್ರ ಸಚಿವರಿಗೆ ಸಿದ್ದರಾಮಯ್ಯ ಮನವಿ

ಈ ಸಮುದಾಯದ ಪರವಾಗಿ ನೂತನ ಸಂಸತ್ ಭವನದಲ್ಲಿ ಪ್ರಧಾನಿಗಳನ್ನು ಪ್ರತ್ಯೇಕವಾಗಿ ಭೇಟಿ ಮಾಡಿದ್ದೆ. ನನ್ನ ಬಗ್ಗೆ ಅವರು ಅತೀವ ಪ್ರೀತಿ ವಾತ್ಸಲ್ಯ ತೋರಿದರು. ನನಗೀಗ 91 ವರ್ಷ ವಯಸ್ಸು. ಹಿಂದೆ ಅನೇಕ ಪ್ರಧಾನಿಗಳನ್ನು ನೋಡಿದ್ದೇನೆ, ಭೇಟಿಯಾಗಿದ್ದೇನೆ. ಯಾರೂ ನನ್ನ ಬಗ್ಗೆ ಇಷ್ಟೊಂದು ಪ್ರೀತಿ ತೋರಿಸಿರಲಿಲ್ಲ.

ಅಂದು ಕಾಡುಗೊಲ್ಲ ಸಮುದಾಯವನ್ನು ಎಸ್ ಟಿ ಪ್ರವರ್ಗಕ್ಕೆ ಸೇರಿಸಬೇಕು ಎಂದು ಅವರಲ್ಲಿ ಮನವಿ ಮಾಡಿದ್ದೆ. ತಕ್ಷಣವೇ ಅವರು ಹೇಳಿದರು, ಈ ಬೇಡಿಕೆಯನ್ನು ಈಡೇರಿಸಲಾಗುವುದು ಎಂದು. 2022-2023ರಲ್ಲಿ ಕರ್ನಾಟಕದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರವೂ ಈ ಬಗ್ಗೆ ಕೇಂದ್ರಕ್ಕೆ ಶಿಫಾರಸು ಮಾಡಿತ್ತು. ಕರ್ನಾಟಕದ 13 ಜಿಲ್ಲೆಗಳಲ್ಲಿರುವ ಕಾಡುಗೊಲ್ಲ ಸಮುದಾಯದ ಹಿತಕ್ಕಾಗಿ ಪ್ರಧಾನಿಗಳು ನಿರ್ಧಾರ ಪ್ರಕಟಿಸಬೇಕು ಎಂದು ಸದನದ ಮೂಲಕ ಮನವಿ ಮಾಡುತ್ತೇನೆ ಎಂದು ಮಾಜಿ ಪ್ರಧಾನಿಗಳು ಹೇಳಿದರು.

ಮಾಲಿನ್ಯ ನಿಯಂತ್ರಣ ಮಸೂದೆಗೆ ಸ್ವಾಗತ

ಸದನದಲ್ಲಿ ಮಂಡಸಲಾಗಿದ್ದ ಮಾಲಿನ್ಯ ನಿಯಂತ್ರಣ ಮಸೂದೆಯನ್ನು ಸ್ವಾಗತಿಸಿದ ಅವರು, ಮಾಲಿನ್ಯ ನಿಯಂತ್ರಣದ ಹೆಸರಿನಲ್ಲಿ ಕರ್ನಾಟಕವೂ ಸೇರಿದಂತೆ ಎಲ್ಲೆಡೆ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ನನಗೆ ಗೊತ್ತಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ತಮ್ಮ ಸ್ವಾರ್ಥಕ್ಕಾಗಿ, ಸ್ವಹಿತಕ್ಕಾಗಿ ಹೇಗೆ ದುರ್ಬಳಕೆ ಮಾಡಿಕೊಳ್ಳುತ್ತಾರೆ ಎಂಬ ಬಗ್ಗೆ ಮುಖ್ಯಮಂತ್ರಿ ಆಗಿದ್ದ ನನಗೆ ಚನ್ನಾಗಿ ಗೊತ್ತಿದೆ ಎಂದರು ಅವರು.

ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿ

ಮೇಕೆದಾಟು ಯೋಜನೆಯ ವಿಷಯವನ್ನು ಪ್ರಸ್ತಾಪ ಮಾಡಿದ ಮಾಜಿ ಪ್ರಧಾನಿಗಳು, ತಮಿಳುನಾಡು ಸ್ನೇಹಿತರು ಅನ್ಯತಾ ಭಾವಿಸಬಾರದು ಎನ್ನುತ್ತಲೇ ರಾಜ್ಯದ ಕುಡಿಯುವ ನೀರಿನ ಸಮಸ್ಯೆಯನ್ನು ಎಳೆಎಳೆಯಾಗಿ ಬಿಡಿಸಿಟ್ಟರಲ್ಲದೆ, ಕೇಂದ್ರ ಸರ್ಕಾರವು 30 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡಬೇಕು ಎಂದು ಮನವಿ ಮಾಡಿದರು.

ಸುಪ್ರೀಂ ಕೋರ್ಟ್ ನಲ್ಲಿ ತಮಿಳುನಾಡು ಪರ ವಾದ ಮಂಡಿಸಿದ ಹಿರಿಯ ವಕೀಲರೇ ಮೆಟ್ಟೂರು ಜಲಾಶಯಕ್ಕೆ ಮೇಲ್ಭಾಗದಲ್ಲಿ ಕರ್ನಾಟಕ ಜಲಾಶಯ ನಿರ್ಮಾಣ ಮಾಡಬಹುದು ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ದಯಮಾಡಿ ಪ್ರಧಾನಿಗಳು ಮಧ್ಯಪ್ರವೇಶ ಮಾಡಬೇಕು. ಕರ್ನಾಟಕದ ಕುಡಿಯುವ ನೀರಿನ ಸಂಕಷ್ಟವನ್ನು ಪರಿಹಾರ ಮಾಡಬೇಕು. ಇದಷ್ಟೇ ಎಲ್ಲರಿಗೂ ನನ್ನ ಪ್ರಾರ್ಥನೆ ಎಂದು ಮಾಜಿ ಪ್ರಧಾನಿಗಳು ಕೈ ಜೋಡಿಸಿ ಮನವಿಕೊಂಡರು.

Share this:

  • WhatsApp
  • Post
  • Tweet
  • Print
  • Email
Agreeappealed Rajya SabhaDeve GowdaFormer Prime MinisterHdMekedatu Projectreality of guaranteesrevealed
Share 2 FacebookTwitterPinterestEmail
admin

previous post
ಅನುದಾನ ರಾಜಕೀಯ..!
next post
ದಿನ ಭವಿಷ್ಯ : ಬುಧವಾರ, 07 ಫೆಬ್ರವರಿ 2024

You may also like

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

1 comment

ಕರ್ನಾಟಕ, ಕನ್ನಡಿಗರ ಹಿತ ಕಾಪಾಡುವ ಚಳವಳಿ – KMS February 7, 2024 - 7:22 am

[…] Special Story […]

Reply

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (180)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,583)
  • ರಾಜ್ಯ (1,872)
  • ರಾಷ್ಟ್ರ (1,844)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025

KMS Special

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ