Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕಾಂಗ್ರೆಸ್‌ ಗೆ ಕೇರಳಕ್ಕೊಂದು ನೀತಿ; ಕರ್ನಾಟಕಕ್ಕೆ ಇನ್ನೊಂದು ನೀತಿ

by admin February 6, 2024
written by admin February 6, 2024 1 comment 1 minutes read
1FacebookTwitterPinterestEmail
182
ದೆಹಲಿಯಲ್ಲಿ ರಾಜ್ಯ ಕಾಂಗ್ರೆಸ್‌ ಪ್ರತಿಭಟನೆಗೆ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು: ತೆರಿಗೆ ಪಾಲು, ಅನುದಾನ ಅನ್ಯಾಯದ ಹೆಸರೇಳಿಕೊಂಡು ರಾಜ್ಯ ಕಾಂಗ್ರೆಸ್‌ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಕಾಂಗ್ರೆಸ್‌ ಪಕ್ಷಕ್ಕೆ ಇವೆರಡೂ ವಿಷಯದಲ್ಲ, ರಾಜ್ಯದಿಂದ ರಾಜ್ಯಕ್ಕೆ ಬೇರೆ ಬೇರೆ ರೀತಿಯ ನಿಲುವುಗಳಿವೆ ಹಾಗೂ ಅದರಲ್ಲಿ ಸ್ವಾರ್ಥ ರಾಜಕಾರಣ ಅಡಗಿದೆ ಎಂದು ಅವರು ಕಟುವಾಗಿ ಟೀಕಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ಪಕ್ಷದ ಶಾಸಕರು ನವದೆಹಲಿಯಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆ ಬಗ್ಗೆ ಟೀಕಾ ಪ್ರಹಾರ ನಡೆಸಿದಾರೆ.

ದಿಲ್ಲಿಗೆ ಯಾತ್ರೆ ಹೊರಟಿರುವ ಕಾಂಗ್ರೆಸ್‌ ಪಕ್ಷದ ಎರಡು ತಲೆ ರಾಜಕಾರಣ ಈಗ ಬೆತ್ತಲಾಗಿದೆ. ಅದರ ವರಸೆ ಹೇಗಿದೆ ಎಂದರೆ, ಕರ್ನಾಟಕಕ್ಕೆ ಒಂದು ನೀತಿ. ಕೇರಳಕ್ಕೆ ಮತ್ತೊಂದು ನೀತಿ. ಅದರ ಉದ್ದೇಶ ಲೋಕಸಭೆ ಚುನಾವಣೆ ಅಷ್ಟೇ ಎಂದಿರುವ ಅವರು, ʼರಾವಣ ತಲೆಗಳ ಕಾಂಗ್ರೆಸ್ ರಾಜಕಾರಣʼ ಎಂದು ಲೇವಡಿ ಮಾಡಿದ್ದಾರೆ.

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, “ನಮ್ಮ ರಾಜ್ಯಕ್ಕೆ ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯ ಆಗಿದೆ. ಅದಕ್ಕೆ ಕೇಂದ್ರದ ವಿರುದ್ಧ ದನಿ ಎತ್ತೋಣ ಬನ್ನಿ, ಸಹಕಾರ ನೀಡಿ” ಎಂದು ಕರೆದರೆ, ಅದಕ್ಕೆ ಕೇರಳ ಕಾಂಗ್ರೆಸ್ಸಿಗರು ಕೊಟ್ಟ ಉತ್ತರ ಹೀಗಿತ್ತು; “ಜನರ ಹಣವನ್ನು ನೀವು ಅನಗತ್ಯ ವೆಚ್ಚಗಳಿಗೆ ಪೋಲು ಮಾಡುತ್ತಿದ್ದೀರಿ, ನಾವು ಬರಲ್ಲ” ಎಂದಿದ್ದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

ವಿಜಯನ್ ಅವರು ಕರೆದಿದ್ದ ಸರ್ವಪಕ್ಷ ಸಭೆಗೂ ಅಸಹಕಾರ ತೋರಿರುವ ಕಾಂಗ್ರೆಸ್ಸಿಗರು, ಕೇಂದ್ರ ಸರ್ಕಾರದ ವಿರುದ್ಧ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸುವಾಗಲೂ ಗೈರುಹಾಜರಾಗಿದ್ದಾರೆ ಮತ್ತು ಕಲಾಪವನ್ನೇ ಬಹಿಷ್ಕರಿಸಿದ್ದಾರೆ. ಅಷ್ಟೇ ಅಲ್ಲ; ಫೆಬ್ರುವರಿ 8ನೇ ತಾರೀಖು ದಿಲ್ಲಿಯಲ್ಲಿ ವಿಜಯನ್ ಅವರು ಹಮ್ಮಿಕೊಂಡಿರುವ ಪ್ರತಿಭಟನೆಯನ್ನೂ ಕೇರಳ ಕಾಂಗ್ರೆಸ್ಸಿಗರು ಬಹಿಷ್ಕರಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಕರ್ನಾಟಕದ ಕಾಂಗ್ರೆಸ್, ಕೇರಳಕ್ಕೆ ತದ್ವಿರುದ್ಧ ದಿಕ್ಕಿನಲ್ಲಿದೆ. ಒಂದೆಡೆ ರಾಜ್ಯ ಬಿಜೆಪಿ ಸಂಸದರು ಶೋ ಪೀಸುಗಳು, ಗಂಡಸ್ತನ ಇಲ್ಲದವರು ಎಂದು ಕಾಂಗ್ರೆಸ್ ನಾಯಕರು ನಾಲಿಗೆ ಜಾರಿ ಬಿಡುತ್ತಿದ್ದಾರೆ. ಈಗ ನೋಡಿದರೆ, “ಪ್ರತಿಭಟನೆಗೆ ಬನ್ನಿ. ನಿಮ್ಮ ಸಹಕಾರವೂ ಇರಲಿ” ಎಂದು ಆ ಪಕ್ಷದ ಸಂಸದರನ್ನು ಅದೇ ನಾಲಿಗೆಯಿಂದಲೇ ಕರೆಯುತ್ತಿದ್ದಾರೆ. ಅವರು ಜೆಡಿಎಸ್ ಸಂಸದರಿಗೂ ಪತ್ರ ಬರೆದಿದ್ದಾರೆ. ಇದೆಂಥಾ ವೈರುಧ್ಯ? ಇದೆಂಥಾ ಚೋದ್ಯ? ಎಂದು ಮಾಜಿ ಮುಖ್ಯಮಂತ್ರಿಗಳು ಪ್ರಶ್ನಿಸಿದ್ದಾರೆ.

ಕೇರಳದ ಎಲ್ ಡಿಎಫ್ ಸರ್ಕಾರ ಜನರ ತೆರಿಗೆ ಹಣ ಪೋಲು ಮಾಡುತ್ತಿದೆ ಎಂದಾದರೆ, ಕರ್ನಾಟಕದಲ್ಲಿ ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ಮಾಡುತ್ತಿರುವುದೇನು? ಯೋಜನೆಗಳ ಹೆಸರಿನಲ್ಲಿ ಕೊಳ್ಳೆ ಹೊಡೆಯುತ್ತಿರುವುದೇನು?

ಕೇರಳದಲ್ಲಿ ಅಸಹಕಾರ, ಕರ್ನಾಟಕದಲ್ಲಿ ಸಹಕಾರ ಇದೆಂಥಾ ನೀತಿ? ಎರಡು ತಲೆಗಳು ಮಾತ್ರವಲ್ಲ, ರಾವಣ ತಲೆಗಳ ಕಾಂಗ್ರೆಸ್‌ ಪಕ್ಷಕ್ಕೆ ಮೈಯ್ಯೆಲ್ಲಾ ರಾಜಕೀಯವೇ ತುಂಬಿದೆ. ಅದೂ ಸ್ವಾರ್ಥ ರಾಜಕೀಯ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
congressdelhiHdkarnatakakarnataka stateKeralakumaraswamypolicyprotestssparks
1 FacebookTwitterPinterestEmail
admin

previous post
ಸಿದ್ದರಾಮಯ್ಯ ಅವರಿಗೆ 10 ಸಾವಿರ ರೂ. ದಂಡ
next post
ಅನುದಾನ ರಾಜಕೀಯ..!

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ