Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಅನುದಾನ ರಾಜಕೀಯ..!

by admin February 6, 2024
written by admin February 6, 2024 1 comment 2 minutes read
1FacebookTwitterPinterestEmail
426

ದೆಹಲಿಯ ಜಂತರ ಮಂತರ್‌ನಲ್ಲಿ ಕರ್ನಾಟಕ ಸರ್ಕಾರದ ಧರಣಿ

ಬೆಂಗಳೂರು: ಕೇಂದ್ರದ ಮಲತಾಯಿ ಧೋರಣೆ ಪ್ರತಿಭಟಿಸಿ ಇತಿಹಾಸದಲ್ಲೇ ಮೊದಲ ಬಾರಿಗೆ ಕರ್ನಾಟಕ ರಾಜ್ಯ ಸರ್ಕಾರ ದೆಹಲಿಯಲ್ಲಿ ನಾಳೆ ಇಡೀ ದಿನ ಧರಣಿ, ಪ್ರತಿಭಟನೆ ನಡೆಸುತ್ತಿದೆ.

ಸರ್ಕಾರದ ಈ ನಿಲುವನ್ನು ಪ್ರತಿಪಕ್ಷಗಳು ರಾಜಕೀಯ ಪ್ರೇರಿತ ಎನ್ನುವುದರ ಜೊತೆಗೆ ಅಯೋಧ್ಯೆಯ ರಾಮಲಲ್ಲಾ ಪ್ರಾಣ ಪ್ರತಿಷ್ಠೆಯ ಯಶಸ್ಸು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸಿನ ಓಟಕ್ಕೆ ಕಡಿವಾಣ ಹಾಕಲು ಇಂಡಿಯಾ ಒಕ್ಕೂಟಕ್ಕೆ ಸೇರಿದ ರಾಜ್ಯಗಳ ಮುಖ್ಯಮಂತ್ರಿಗಳು ಸಾರ್ವಜನಿಕರ ಗಮನ ಬೇರೆಡೆ ಸೆಳೆಯಲು ಮಾಡುತ್ತಿರುವ ಹೋರಾಟ ಇದಾಗಿದೆ.

ಒಂದಲ್ಲಾ ಒಂದು ಕಾರಣಕ್ಕೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಇಲ್ಲವೇ ಆ ರಾಜ್ಯದ ಸಂಸದರು ಪ್ರತಿಭಟನೆಗಳನ್ನು ಸಾಂಕೇತಿಕವಾಗಿ ನಡೆಸಿರುವ ಉದಾಹರಣೆಗಳಿವೆ.

ಸಿದ್ದರಾಮಯ್ಯ ಅವರಿಗೆ 10 ಸಾವಿರ ರೂ. ದಂಡ

ಮುಖ್ಯಮಂತ್ರಿ  ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲಾ ಹಂತದ ಜನಪ್ರತಿನಿಧಿಗಳು ನಾಳೆ ಕೇಂದ್ರದ ವಿರುದ್ಧ ದೆಹಲಿಯ ಜಂತರ ಮಂತರ್‌ನಲ್ಲಿ ಧರಣಿ ನಡೆಸಿ ರಾಷ್ಟ್ರದ ಗಮನ ಸೆಳೆಯಲು ಮುಂದಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಪ್ರಸಕ್ತ ಸಾಲಿನ ಕೊನೆಯ ಮುಂಗಡಪತ್ರದಲ್ಲಿ ರಾಜ್ಯ ಸರ್ಕಾರಕ್ಕೆ ನೀಡಬೇಕಾದ ಅನುದಾನದಲ್ಲಿ ಕೊರತೆ ಮತ್ತು ತಮ್ಮ ಪಾಲಿನ ಹಣವನ್ನು ನೀಡುತ್ತಿಲ್ಲ ಎಂಬುದನ್ನೇ ಮುಖ್ಯವಾಗಿಟ್ಟುಕೊಂಡು ಈ ಪ್ರತಿಭಟನೆ ನಡೆಯುತ್ತಿದೆ.

ಕಾಂಗ್ರೆಸ್‌ ಗೆ ಕೇರಳಕ್ಕೊಂದು ನೀತಿ; ಕರ್ನಾಟಕಕ್ಕೆ ಇನ್ನೊಂದು ನೀತಿ

ಈಗಾಗಲೇ ಕೇರಳ, ಪಶ್ಚಿಮ ಬಂಗಾಳ ಹಾಗೂ ತಮಿಳುನಾಡು ಸರ್ಕಾರಗಳು ಕೇಂದ್ರದ ವಿರುದ್ಧ ತಿರುಗಿಬಿದ್ದಿದ್ದು, ಅವುಗಳು ಸಹಾ ವಿನೂತನ ಪ್ರತಿಭಟನೆ ನಡೆಸಿವೆ.

ರಾಜ್ಯ ಸರ್ಕಾರಕ್ಕೆ ಆರ್ಥಿಕ ಮುಗ್ಗಟ್ಟು

ಗ್ಯಾರಂಟಿ ಯೋಜನೆಗಳಿಗೆ ಅನುದಾನ ನೀಡುತ್ತಿರುವುದರಿಂದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದೆ.

ಇಂತಹ ಸನ್ನಿವೇಶದಲ್ಲಿ ಕೇಂದ್ರ ಸರ್ಕಾರದಿಂದ  ರಾಜ್ಯ ಸರ್ಕಾರಕ್ಕೆ ಬರಬೇಕಿರುವ ತೆರಿಗೆ ಪಾಲು, ಅನುದಾನ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೈಗೆತ್ತಿಕೊಳ್ಳುವ ಯೋಜನೆಗಳ ಅನುದಾನದಲ್ಲಿ ಭಾರೀ ಕಡಿತ ಮಾಡಿರುವುದು ಅಭಿವೃದ್ಧಿಗೆ ಅಡ್ಡಗಾಲಾಗಿ ನಿಂತಿದೆ.

ಇದರ ನಡುವೆ ರಾಜ್ಯ ಭೀಕರ ಬರಗಾಲ ಎದುರಿಸುತ್ತಿದ್ದು ರೈತರು ಕೋಟ್ಯಂತರ ರೂ. ಮೌಲ್ಯದ ಬೆಳೆ ಕಳೆದುಕೊಂಡಿರುವ ಜೊತೆಗೆ ರಾಜ್ಯ, ಬರುವ ಬೇಸಿಗೆಯಲ್ಲಿ ಕುಡಿಯುವ ನೀರು, ಮೇವು ಹಾಗೂ ವಿದ್ಯುತ್ ಸಂಕಷ್ಟಕ್ಕೆ ಸಿಲುಕುತ್ತದೆ.

ಇದನ್ನು ಎದುರಿಸಲು ರಾಜ್ಯ ಸರ್ಕಾರಕ್ಕೆ ಆರ್ಥಿಕ ಶಕ್ತಿಯ ಅಗತ್ಯವಿದೆ. ಆದರೆ, ಕೇಂದ್ರ, ರಾಜ್ಯದ ಪಾಲನ್ನು ನೀಡದಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈಕಟ್ಟಿ ಹಾಕಿದೆ.

ಪ್ರತಿಭಟನೆಯಲ್ಲಿ ನೀವೂ ಪಾಲ್ಗೊಳ್ಳಿ: ಕೇಂದ್ರ ಸಚಿವರಿಗೆ ಸಿದ್ದರಾಮಯ್ಯ ಮನವಿ

ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಬರುವ ಬೇಸಿಗೆಯನ್ನು ಸಮರ್ಪಕವಾಗಿ ನಿಭಾಯಿಸದಿದ್ದರೆ ರಾಜಕೀಯವಾಗಿ ಹಿನ್ನಡೆಯಾಗುತ್ತದೆ.

ಇದನ್ನು ಮನಗಂಡು ಮುಖ್ಯಮಂತ್ರಿ ಅವರು, ತಮ್ಮ ಮಂತ್ರಿಮಂಡಲದ ಸಚಿವರುಗಳಿಗೆ ಔತಣಕೂಟ ಏರ್ಪಡಿಸಿ ಅವರಿಂದ ಅಭಿಪ್ರಾಯ ಸಂಗ್ರಹಿಸಿ ನಂತರ ಇಲಾಖಾ ಪ್ರಧಾನಕಾರ್ಯದರ್ಶಿಗಳ ಸಭೆ ನಡೆಸಿ, ಅಭಿವೃದ್ಧಿ ಕಾರ್ಯಗಳ ಪೂರ್ಣ ಚಿತ್ರಣ ಪಡೆದು ಕೇಂದ್ರದ ವಿರುದ್ಧ ತಿರುಗಿಬೀಳಲು ತೀರ್ಮಾನಿಸಿದರು.

ಈ ತೀರ್ಮಾನವೇ ನಾಳೆ ದೆಹಲಿಯ ಜಂತರ ಮಂತರ್‌ನಲ್ಲಿ ಕರ್ನಾಟಕ ಸರ್ಕಾರ, ಕೇಂದ್ರದ ವಿರುದ್ಧ ಪ್ರತಿಭಟನೆ ಮಾಡುವ ಮೂಲಕ ಒಂದು ಇತಿಹಾಸ ಸೃಷ್ಠಿಸುತ್ತಿದೆ.

ಮಲ್ಲಿಕಾರ್ಜುನ ಖರ್ಗೆ ಮನೆಯಲ್ಲಿ ಔತಣಕೂಟ

ಪ್ರತಿಭಟನೆಯಲ್ಲಿ ಭಾಗಹಿಸಲು ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವರೂ ಮತ್ತು ಸಂಸದರಿಗೂ ಮುಖ್ಯಮಂತ್ರಿ ಅವರು ಪತ್ರ ಬರೆದು ಮನವಿ ಮಾಡಿದ್ದಾರೆ.

ಕೇಂದ್ರದ ವಿರುದ್ಧ ನಡೆಸುತ್ತಿರುವ ಪ್ರತಿಭಟನೆ ರಾಷ್ಟ್ರದ ಗಮನ ಸೆಳೆಯುವ ಉದ್ದೇಶದಿಂದ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೋಮವಾರವೇ ದೆಹಲಿಗೆ ತೆರಳಿದರೆ, ಮುಖ್ಯಮಂತ್ರಿ ಹಾಗೂ ಅವರ ಸಂಪುಟದ ಸದಸ್ಯರು ಮತ್ತು ಶಾಸಕರು ಮಂಗಳವಾರ ದೆಹಲಿ ತಲುಪಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾರ್ಗದರ್ಶನದಲ್ಲೇ ಈ ಪ್ರತಿಭಟನೆ ನಡೆಯುತ್ತಿದೆ. ಧರಣಿ ನಂತರ ಮುಖ್ಯಮಂತ್ರಿ ಸೇರಿದಂತೆ ರಾಜ್ಯದ ಎಲ್ಲಾ ಸಚಿವ, ಶಾಸಕರು ಮತ್ತು ಸಂಸದರಿಗೆ ಖರ್ಗೆ ಅವರು ತಮ್ಮ ಮನೆಯಲ್ಲಿ ಔತಣ ಕೂಟ ಏರ್ಪಡಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
CentreChief MinisterdelhiGrant politicsJantar MantarKarnataka governmentopposeSiddaramaiahstep-motherly attitude
1 FacebookTwitterPinterestEmail
admin

previous post
ಕಾಂಗ್ರೆಸ್‌ ಗೆ ಕೇರಳಕ್ಕೊಂದು ನೀತಿ; ಕರ್ನಾಟಕಕ್ಕೆ ಇನ್ನೊಂದು ನೀತಿ
next post
ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ