ದೇಶದ ಗಮನ ಸೆಳೆಯಲು ತೀರ್ಮಾನ
ಬೆಂಗಳೂರು: ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ವಿರೋಧಿಸಿ ನಾಳೆ ದೆಹಲಿಯ ಜಂತರ ಮಂತರ್‌ನಲ್ಲಿ ಆಯೋಜಿಸಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡು ರಾಜ್ಯದ ಪರ ನಿಲ್ಲುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕೇಂದ್ರ ಸಚಿವರು, ಸಂಸದರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದು ಆಹ್ವಾನ ನೀಡಿದ್ದಾರೆ.
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ನಿರಂತರ ಅನ್ಯಾಯ ಮತ್ತು ಅದರಲ್ಲೂ ಕರ್ನಾಟಕದ ವಿಚಾರವಾಗಿ ತೋರುತ್ತಿರುವ ಮಲತಾಯಿ ಧೋರಣೆಯು ನಿಮ್ಮಗಳಿಗೆ ತಿಳಿದ ವಿಷಯವಾಗಿದೆ, ಇದರ ವಿರುದ್ಧ ಪ್ರತಿಭಟಿಸಲು ಮತ್ತು ದೇಶದ ಗಮನ ಸೆಳೆಯಲು ತೀರ್ಮಾನಿಸಲಾಗಿದೆ.
ನಾಳೆ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಉಪಮುಖ್ಯಮಂತ್ರಿ ಸೇರಿದಂತೆ ಎಲ್ಲಾ ಸಚಿವರು, ಶಾಸಕರು ಒಂದು ದಿನದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.
ತೆರಿಗೆ ಪಾಲಿನ ಹಂಚಿಕೆಯಲ್ಲಿ ಅನ್ಯಾಯ
ಕರ್ನಾಟಕಕ್ಕೆ ತೆರಿಗೆ ಪಾಲಿನ ಹಂಚಿಕೆಯಲ್ಲಿ ಆಗುತ್ತಿರುವ ಭಾರೀ ಅನ್ಯಾಯ, ಬರ ಪರಿಹಾರ ನೀಡದಿರುವುದು, ವಿವಿಧ ಯೋಜನೆಗಳಿಗೆ ಅನುಮತಿ ನೀಡುವಲ್ಲಿ ತೋರುತ್ತಿರುವ ನಿರ್ಲಕ್ಷ್ಯ, ವಿಳಂಬ ಇತ್ಯಾದಿಗಳಿಂದ ರಾಜ್ಯದ ಜನ ಜೀವನವನ್ನು ವಿಪರೀತಾಗಿ ಬಾಧಿಸುತ್ತಿದೆ.
ಈ ವಿಚಾರವನ್ನು ಜವಾಬ್ದಾರಿಯುತ ಚುನಾಯಿತ ಪ್ರತಿನಿಧಿಗಳಾದ ತಾವು ಅರಿತಿದ್ದೀರಿ ಎಂದು ಭಾವಿಸುತ್ತೇನೆ, ಆದ್ದರಿಂದ ಈ ಧರಣಿ ಸತ್ಯಾಗ್ರಹದಲ್ಲಿ ತಾವೂ ಪಾಲ್ಗೊಂಡು ಅದರ ಯಶಸ್ವಿಗೆ ನೆರವಾಗುವಂತೆ ವಿನಂತಿಸಿದ್ದಾರೆ.
ಮುಖ್ಯಮಂತ್ರಿ ಅವರು ಇಂತಹ ಪತ್ರವನ್ನು ಖುದ್ದಾಗಿ ರಾಜ್ಯದಿಂದ ಆಯ್ಕೆಗೊಂಡಿರುವ ಸಂಸದರು ಮತ್ತು ಕರ್ನಾಟಕವನ್ನು ಪ್ರತಿನಿಧಿಸುವ ಕೇಂದ್ರ ಸಚಿವರುಗಳಿಗೆ ಬರೆದು ವಿನಂತಿ ಮಾಡಿದ್ದಾರೆ.
1 comment
[…] ರಾಜಕೀಯ […]