ವಿಧಾನಸೌಧಕ್ಕೆ ಮುತ್ತಿಗೆ ಯತ್ನಿಸಿ ಬಂಧನ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಬರ ಪರಿಸ್ಥಿತಿ ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿಂದು ಪ್ರತಿಭಟನೆ ನಡೆಸಿ, ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ರಾಜ್ಯ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಸೇರಿದಂತೆ ಹಲವು ಬಿಜೆಪಿ ನಾಯಕರು ಬಂಧನಕ್ಕೊಳಗಾದರು.
ಇದಕ್ಕೂ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿ, ರೈತರು ಹಾಗೂ ಜನರ ಪಾಲಿಗೆ ಕಾಂಗ್ರೆಸ್ ಸರ್ಕಾರ ಸತ್ತು ಹೋಗಿದೆ, ಆದ್ದರಿಂದ ವಿಧಾನಸೌಧದಲ್ಲಿನ ಸಚಿವರ ಕಚೇರಿಗಳಿಗೆ ಬೀಗ ಹಾಕಲು ಹೋಗುತ್ತಿದ್ದೇವೆ ಎಂದರು.
ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, ರಾಜ್ಯ ಸರ್ಕಾರ ಜನತೆಗೆ ಅನ್ಯಾಯ ಮಾಡಿದೆ, ರೈತರಿಗೆ ಬರ ಪರಿಹಾರ ನೀಡಿಲ್ಲ, ಕೇಂದ್ರದ ವಿರುದ್ಧ ಸುಮ್ಮನೆ ಆರೋಪ ಹೊರಿಸುತ್ತಿದೆ, ಜನರ ಸಮಸ್ಯೆ ಪರಿಹರಿಸುವುದನ್ನು ಬಿಟ್ಟು ಎಲ್ಲ ಜನಪ್ರತಿನಿಧಿಗಳು ದೆಹಲಿಗೆ ಹೋಗಿ ಕುಳಿತಿದ್ದಾರೆ, ರಾಜ್ಯದಲ್ಲಿ ಸರ್ಕಾರ ಇಲ್ಲ, ಅದಕ್ಕಾಗಿಯೇ ವಿಧಾನಸೌಧಕ್ಕೆ ಬೀಗ ಹಾಕಲು ಹೊರಟಿದ್ದೇವೆ ಎಂದರು.
ನಂತರ ವಿಧಾನಸೌಧದ ಬಳಿ ತೆರಳಿ ಗೇಟ್‌ಗೆ ಬೀಗ ಹಾಕುವುದಾಗಿ ಪಟ್ಟುಹಿಡಿದಾಗ ಪೊಲೀಸರು ಬಿಜೆಪಿ ನಾಯಕರನ್ನು ವಶಕ್ಕೆ ಪಡೆದರು.
1 comment
[…] All ರಾಜಕೀಯ ರಾಜಕೀಯ […]