Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ನಾಳೆಯಿಂದ ಮೂರು ದಿನ ಬಿಜೆಪಿ ’ಗ್ರಾಮ ಚಲೋ’ ಅಭಿಯಾನ

by admin February 8, 2024
written by admin February 8, 2024 1 comment 2 minutes read
3FacebookTwitterPinterestEmail
133


ಕೇಂದ್ರದ ಜನಪರ ಯೋಜನೆ ಮನೆ-ಮನೆಗೆ ತಲುಪಿಸುವ ಗುರಿ

ಬೆಂಗಳೂರು: ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸವಲತ್ತುಗಳು ಸಿಗಬೇಕೆಂಬ ಉದ್ದೇಶದೊಂದಿಗೆ ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಮನೆ-ಮನೆಗೆ ತಲುಪಿಸುವ ಬಿಜೆಪಿಯ ’ಗ್ರಾಮ ಚಲೋ’ ಅಭಿಯಾನ ನಾಳೆಯಿಂದ ಮೂರು ದಿನಗಳ ಕಾಲ ನಡೆಯಲಿದೆ.

ರಾಜ್ಯದ 28 ಸಾವಿರಕ್ಕೂ ಹೆಚ್ಚು ಹಳ್ಳಿ ಹಾಗೂ 19 ಸಾವಿರ ನಗರ ಬೂತ್‌ಗಳ ವ್ಯಾಪ್ತಿಯಲ್ಲಿ ’ಗ್ರಾಮ ಚಲೋ’ ಅಭಿಯಾನ ನಡೆಯಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

ಯಶವಂತಪುರ ವಿಧಾನಸಭಾ ಕ್ಷೇತ್ರದ ಹೆಚ್.ಗೊಲ್ಲಹಳ್ಳಿಯಲ್ಲಿ ‘ಗ್ರಾಮ ಚಲೋ’ ಅಭಿಯಾನಕ್ಕೆ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಅಪೇಕ್ಷೆಯಂತೆ ‘ಗ್ರಾಮ ಚಲೋ’ ಅಭಿಯಾನಕ್ಕೆ ಚಾಲನೆ ನೀಡಿದ್ದೇವೆ ಎಂದರು.

ಅಭಿಯಾನದಲ್ಲಿ 42 ಸಾವಿರ ಕಾರ್ಯಕರ್ತರು

ಅಭಿಯಾನದಲ್ಲಿ 42 ಸಾವಿರ ಕಾರ್ಯಕರ್ತರು ಮೂರು ದಿನ ನಿರಂತರ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದು, 2047 ರ ವೇಳೆಗೆ ‘ವಿಕಸಿತ ಭಾರತ’ ಕನಸು ನನಸಾಗಲು ಗ್ರಾಮಗಳ ಅಭಿವೃದ್ಧಿ ಅಗತ್ಯವಿದೆ ಎಂದರು.

ಕಳೆದ 10 ವರ್ಷಗಳಲ್ಲಿ ಕೇಂದ್ರ ಸರ್ಕಾರ ಮಾಡಿರುವ ಅಭಿವೃದ್ಧಿ ಕಾರ್ಯಗಳು ದೇಶದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕೆಂಬ ಅಭಿಯಾನ ಇದಾಗಿದೆ.

ಮಾಂಸಾಹಾರ ಸೇವಿಸಿ ಗದ್ದುಗೆ ಭೇಟಿ ದುರದೃಷ್ಟಕರ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ನಿನ್ನೆ ಮಧ್ಯಾಹ್ನ ಮಾಂಸಾಹಾರ ಸೇವಿಸಿ ರಾತ್ರಿ ಸುತ್ತೂರು ಜಗದ್ಗುರುಗಳ ಗದ್ದುಗೆಗೆ ಭೇಟಿ ಕೊಟ್ಟ ವಿಚಾರ ಬಹಳ ದುರದೃಷ್ಟಕರ, ಇದು ಮೊದಲ ಬಾರಿಯಲ್ಲ. ಹಲವು ಸಂದರ್ಭಗಳಲ್ಲಿ ಈ ರೀತಿ ಘಟನೆಗಳು ಪುನರಾವರ್ತನೆ ಆಗಿವೆ.

ರಾಜ್ಯದ ಮುಖ್ಯಮಂತ್ರಿಗಳು ಎಲ್ಲೋ ಒಂದು ಕಡೆ ತಮ್ಮನ್ನು ಮರೆಯುತ್ತಿದ್ದಾರೆ ಎಂಬುದು ನಮ್ಮ ಭಾವನೆ. ದೇವರ ಬಗ್ಗೆ ಅವರು ಎಷ್ಟು ಭಕ್ತಿ ಭಾವನೆ ಇಟ್ಟುಕೊಂಡಿದ್ದಾರೆ ಎಂಬುದು ಬೇರೆ ವಿಚಾರ, ಆದರೆ, ರಾಜ್ಯದ ಮುಖ್ಯಮಂತ್ರಿಯಾಗಿ ಅವರ ನಡವಳಿಕೆಯನ್ನು ಸಮಾಜ, ಪ್ರತಿಯೊಬ್ಬರೂ ಗಮನಿಸುತ್ತಾರೆ, ಈ ಘಟನೆ ನಿಜವಾಗಿಯೂ ಖಂಡನೀಯ, ಅದರಲ್ಲೂ ಸುತ್ತೂರಿನ ಪವಿತ್ರ ಗದ್ದುಗೆಗೆ ಭೇಟಿ ಕೊಟ್ಟದ್ದು ನಿಜವಾಗಲೂ ಒಂದು ದುರಂತ’ ಎಂದರು.

ಕೇಂದ್ರದ ವಿರುದ್ಧ ಸಿದ್ದು ರಣಕಹಳೆ

ಒಂದು ಕಡೆ, ಅಣ್ಣ ಬಸವಣ್ಣನನ್ನು ನೆನಪು ಮಾಡಿಕೊಳ್ಳುತ್ತಾರೆ, ಅವರ ನಡೆಗೂ, ನುಡಿಗೂ ಅಜಗಜಾಂತರ ವ್ಯತ್ಯಾಸವಿದೆ, ಎಲ್ಲ ಭಕ್ತರ ಭಾವನೆಗೆ ಧಕ್ಕೆ ಬರುವಂತೆ ಮುಖ್ಯಮಂತ್ರಿಗಳು ನಡೆದುಕೊಂಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಲೋಕಸಭಾ ಚುನಾವಣಾ ಪೂರ್ವ ಸಮೀಕ್ಷೆಯೊಂದು ದೇಶದಲ್ಲಿ ನರೇಂದ್ರ ಮೋದಿಜೀ ಅವರ ಪರವಾದ ಅಲೆ ಇದೆ ಎಂಬುದು ತಿಳಿದು ಬರುತ್ತಿದ್ದು, ದೇಶದ ಭವಿಷ್ಯದ ದೃಷ್ಟಿಯಿಂದ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ದೇಶದ ಜನರ ಆಶಯವಾಗಿದೆ ಎಂದರು.

ಕರ್ನಾಟಕದಲ್ಲಿ ಎಲ್ಲ ಕ್ಷೇತ್ರಗಳನ್ನು ಗೆಲ್ಲಬೇಕೆಂಬ ಗುರಿಯನ್ನು ಬಿಜೆಪಿ-ಜೆಡಿಎಸ್ ಇಟ್ಟುಕೊಂಡಿದೆ, ಕಾಂಗ್ರೆಸ್ ಒಂದೊಂದು ಸೀಟು ಗೆಲ್ಲಲು ಪರಿತಪಿಸಲಿದ್ದಾರೆ, ಅಂತಹ ವಾತಾವರಣ ಈಗಾಗಲೇ ನಿರ್ಮಾಣವಾಗಿದೆ, ಪಕ್ಷದ ಕಾರ್ಯಕರ್ತರು ರಣೋತ್ಸಾಹದಲ್ಲಿದ್ದಾರೆ ಎಂದರು.

10ರಂದು ಅಮಿತ್ ಷಾ ಆಗಮನ

ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ರಾಜ್ಯ ಭೇಟಿ ಕಾರ್ಯಕ್ರಮದಲ್ಲಿ ಸ್ವಲ್ಪ ಬದಲಾವಣೆ ಆಗಿದ್ದು, ಈ ತಿಂಗಳ 10ರಂದು ರಾತ್ರಿ ದೆಹಲಿಯಿಂದ ನೇರವಾಗಿ ಮೈಸೂರಿಗೆ ಆಗಮಿಸಲಿರುವ ಅವರು, 11ರ ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ನಂತರ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಸಂಜೆ ಸುತ್ತೂರು ಜಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂದು ಸಂಜೆ ಬಿಜೆಪಿ ಕಾರ್ಯಕರ್ತರ ಸಭೆಯೂ ನಡೆಯಲಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
19 city boot limits will cover28 thousand villages42 thousand party workers will take part in the abhiyanabjp grama chalo abhiyanaby vijayendra
3 FacebookTwitterPinterestEmail
admin

previous post
ದಿನ ಭವಿಷ್ಯ : ಗುರುವಾರ, 08 ಫೆಬ್ರವರಿ 2024
next post
ದೊರೆಗೆ ದೂರುಗಳ ಸುರಿಮಳೆ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ