Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮಂಡ್ಯ ಅಭ್ಯರ್ಥಿ ಆಯ್ಕೆ ಅಧಿಕಾರ ಹೆಚ್.ಡಿ.ಕುಮಾರಸ್ವಾಮಿಗೆ

by admin February 13, 2024
written by admin February 13, 2024 0 comments 2 minutes read
3FacebookTwitterPinterestEmail
141

ಮಂಡ್ಯ ಜೆಡಿಎಸ್ ನಾಯಕರ ಜತೆ ಚರ್ಚೆ ನಡೆಸಿದ ದೊಡ್ಡಗೌಡರು

ಬೆಂಗಳೂರು: ಮಂಡ್ಯ ಲೋಕಸಭೆ ಚುನಾವಣೆ ಹಾಗೂ ಅಲ್ಲಿನ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ಪಕ್ಷ ರಾಜ್ಯಾಧ್ಯಕ್ಷರೂ ಆಗಿರುವ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ನೀಡಲಾಗಿದೆ ಎಂದು ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ತಿಳಿಸಿದರು.

ತಮ್ಮ ನಿವಾಸದಲ್ಲಿ ಮಂಡ್ಯ ಜಿಲ್ಲೆಯ ನಾಯಕರು ಹಾಗೂ ಇನ್ನಿತರೆ ಹಿರಿಯ ನಾಯಕರ ಜತೆ ಸಮಾಲೋಚನೆ ನಡೆಸಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಎರಡು ಚುನಾವಣೆಗಳಿಗೆ ಮಂಡ್ಯದಲ್ಲಿ ಯಾರು ಅಭ್ಯರ್ಥಿ ಆಗಬೇಕು ಎಂದು ನಾನು ಚರ್ಚೆ ಮಾಡಿದ್ದೇನೆ. ಎಲ್ಲಾ ನಾಯಕರ ಅಭಿಪ್ರಾಯ ಆಲಿಸಿದ್ದೇನೆ. ಈ ಬಗ್ಗೆ ಕುಮಾರಸ್ವಾಮಿ ಅವರು ಕೋರ್ ಕಮಿಟಿ ಹಾಗೂ ಪಕ್ಷದ ಎಲ್ಲಾ ನಾಯಕರ ಜತೆ ಸಮಾಲೋಚನೆ ನಡೆಸಿ ನಿರ್ಧಾರ ಮಾಡುತ್ತಾರೆ ಎಂದರು ಅವರು.

ಶಿಕ್ಷಕರ ಕ್ಷೇತ್ರದಲ್ಲಿ ಕೆ.ಟಿ.ಶ್ರೀಕಂಠೇಗೌಡರು ಹಾಗೂ ವಿವೇಕ್ ಅವರ ಹೆಸರುಗಳಿವೆ. ಇಬ್ಬರಲ್ಲಿ ಒಬ್ಬರಿಗೆ ಅವಕಾಶ ಸಿಗುತ್ತದೆ. ಇನ್ನೊಬ್ಬರಿಗೆ ಬೇರೆ ಕಡೆ ಅವಕಾಶ ಕಲ್ಪಿಸಲಾಗುವುದು. ಇಬ್ಬರಲ್ಲಿ ಯಾರು ಎನ್ನುವ ನಿರ್ಧಾರವನ್ನು ಕುಮಾರಸ್ವಾಮಿ ಅವರಿಗೇ ಬಿಡುತ್ತೇನೆ. ಅವರು ಏನು ಹೇಳುತ್ತಾರೋ ಅದರಂತೆ ಇಬ್ಬರೂ ನಡೆದುಕೊಳ್ಳಬೇಕು ಎಂದು ಗೌಡರು ಹೇಳಿದರು.

ಲೋಕಸಭೆಗೆ ಕುಮಾರಸ್ವಾಮಿ ನಿಲ್ಲೋದಿಲ್ಲ

ಲೋಕಸಭೆಗೆ ಯಾರು ಅಭ್ಯರ್ಥಿ ಆಗಬೇಕು ಎನ್ನುವ ಬಗ್ಗೆ ಎಲ್ಲಾ ನಾಯಕರು ಬಹಳ ಸದ್ಭಾವನೆ ವ್ಯಕ್ತ ಮಾಡಿದ್ದಾರೆ. ನೀವು ನಿಲ್ಲಬೇಕು ಅಥವಾ ಕುಮಾರಸ್ವಾಮಿ ಅವರು ನಿಲ್ಲಬೇಕು ಇಲ್ಲವೇ ನಿಖಿಲ್ ನಿಲ್ಲಬೇಕು ಎಂದು ಅಪೇಕ್ಷೆ ವ್ಯಕ್ತಪಡಿಸಿದ್ದಾರೆ.

ಆದರೆ, ನಾನು ನಿಲ್ಲುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದೇನೆ. ನಿಖಿಲ್ ಅವರು ಕೂಡ ನಾನು ನಿಲ್ಲೋದಿಲ್ಲ, ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ. ಕುಮಾರಸ್ವಾಮಿ ಅವರು ನಮ್ಮ ಪಕ್ಷದ ಶಾಸಕಾಂಗ ಪಕ್ಷದ ನಾಯಕರು. ಇಲ್ಲಿ ಅವರು ಸದನದ ಒಳಗೆ, ಹೊರಗೆ ಹೋರಾಟ ನಡೆಸಬೇಕಿದೆ. ಹೀಗಾಗಿ ಅವರು ಲೋಕಸಭೆಗೆ ಹೋಗುವೆ ಎಂದು ಹೇಳಲ್ಲ. ಇರುವ ವಾಸ್ತವಾಂಶವನ್ನು ಹೇಳುತ್ತೇನೆ ಎಂದು ಮಾಜಿ ಪ್ರಧಾನಿಗಳು ಸ್ಪಷ್ಟವಾಗಿ ಹೇಳಿದರು.

ಕುಮಾರಸ್ವಾಮಿ ಅವರು ಲೋಕಸಭೆಗೆ ಹೋಗುತ್ತಾರೆ ಎಂದು ವಿನಾಕಾರಣ ಊಹಾಪೋಹ ಸೃಷ್ಟಿ ಮಾಡಲಾಯಿತು. ಆದರೆ, ಅವರು ಎಂದೂ ಲೋಕಸಭೆಗೆ ಹೋಗುವೆ ಎಂದು ಹೇಳಿಲ್ಲ ಎಂದು ಅವರು ಒತ್ತಿ ಹೇಳಿದರು.

ಮೂರು ದಿನ ಮಂಡ್ಯದಲ್ಲಿ ಪ್ರವಾಸ

ಪಕ್ಷ ಸಂಘನೆ ದೃಷ್ಟಿಯಿಂದ ಮುಂದಿನ ವಾರದಿಂದ ಮಂಡ್ಯ ಜಿಲ್ಲೆಯ ಎಲ್ಲಾ 8 ವಿಧಾನಸಭೆ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಳ್ಳುತ್ತೇವೆ. ಆಗ ಎಲ್ಲಾ ಕಾರ್ಯಕರ್ತರು, ಮುಖಂಡರು, ಸಂಘ ಸಂಸ್ಥೆಗಳ ಮುಖಂಡರ ಅಭಿಪ್ರಾಯ ಸಂಗ್ರಹ ಮಾಡುತ್ತೇವೆ. ಆಮೇಲೆ ಅಭ್ಯರ್ಥಿ ಬಗ್ಗೆ ನಮ್ಮ ಪಕ್ಷದ ನಾಯಕರೆಲ್ಲ ಸೇರಿ ಒಂದು ಅಭಿಪ್ರಾಯಕ್ಕೆ ಬರುತ್ತೇವೆ.

ನಾವು ಎನ್ ಡಿಎ ಮೈತ್ರಿಕೂಟದಲ್ಲಿ ಇರುವುದರಿಂದ ನಮ್ಮ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ನಾಯಕರಾದ ಅಮಿತ್ ಶಾ, ಜಿಪಿ ನಡ್ಡಾ ಹಾಗೂ ರಾಜ್ಯ ಬಿಜೆಪಿ ನಾಯಕರಿಗೆ ತಿಳಿಸುತ್ತೇವೆ. ಆಮೇಲೆ ಕುಮಾರಸ್ವಾಮಿ ಅವರು ಅವರೆಲ್ಲರ ಜತೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತಾರೆ ಎಂದು ಅವರು ತಿಳಿಸಿದರು.

ಕ್ಷೇತ್ರ ಹಂಚಿಕೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಮಾಜಿ ಪ್ರಧಾನಿಗಳು, ಇಲ್ಲಿ ಜೆಡಿಎಸ್ – ಬಿಜೆಪಿ ಎನ್ನುವುದಲ್ಲ. ಎನ್ ಡಿಎ ಅಷ್ಟೇ ಮುಖ್ಯ. ಅಂತಿಮವಾಗಿ ಮೋದಿ ಅವರು, ಅಮಿತ್ ಶಾ, ನಡ್ಡಾ ಮತ್ತು ಕುಮಾರಸ್ವಾಮಿ, ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರು ಅಂತಿಮ ನಿರ್ಧಾರಕ್ಕೆ ಬರುತ್ತಾರೆ. ಈಗಾಗಲೇ ಬಿಜೆಪಿ ನಾಯಕರಿಗೆ ಕುಮಾರಸ್ವಾಮಿ ಅವರು ಎಲ್ಲಾ ಮಾಹಿತಿ ನೀಡಿದ್ದಾರೆ. ಬಹುಶಃ ಇನ್ನೊಂದು ವಾರದಲ್ಲಿ ತೀರ್ಮಾನ ಮಾಡುತ್ತಾರೆ ಎಂದರು.

ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ, ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ಸಾ.ರಾ.ಮಹೇಶ್, ಶಾಸಕರಾದ ಮಂಜುನಾಥ್, ಮಂಜೇಗೌಡ, ಮಾಜಿ ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಸುರೇಶ್ ಗೌಡ, ಡಾ.ಕೆ.ಅನ್ನದಾನಿ, ಕೆ.ಟಿ.ಶ್ರೀಕಂಠಗೌಡರು, ಜಿಲ್ಲಾಧ್ಯಕ್ಷ ರಮೇಶ್, ರಾಮಚಂದ್ರ ಹಾಗೂ ವಿವೇಕ್ ಮುಂತಾದವರು ಸಭೆಯಲ್ಲಿ ಭಾಗಿಯಾಗಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
authority HDcandidate selectiondiscussionsFormer Prime MinisterHD Deve GowdaJDS leaderskumaraswamymandya
3 FacebookTwitterPinterestEmail
admin

previous post
ಕೆರೆ,ಕಾಲುವೆಗೆ ನೀರು ಹರಿಸಲು ಮೊದಲ ಆದ್ಯತೆ
next post
ದಿನ ಭವಿಷ್ಯ : ಬುಧವಾರ, 14 ಫೆಬ್ರವರಿ 2024

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ