136
ಆಸ್ಟ್ರೇಲಿಯಾ ಮುಕ್ತ ಟೆನಿಸ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಕರ್ನಾಟಕದ ರೋಹನ್ ಬೋಪಣ್ಣ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಅಭಿನಂದಿಸಿ, 50 ಲಕ್ಷ ರೂ.ಗಳ ಬಹುಮಾನ ಘೋಷಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಗೂ ರೋಹನ್ ಬೋಪಣ್ಣ ಕುಟುಂಬದವರು ಉಪಸ್ಥಿತರಿದ್ದರು.