ಜಲಾಶಯದ ನೀರು ಕುಡಿಯಲು ಮೀಸಲು: ಡಿಕೆಶಿ
ಬೆಂಗಳೂರು: ಕೆರೆ ಮತ್ತು ಕಾಲುವೆಗಳಿಗೆ ನೀರು ಹರಿಸುವುದಕ್ಕೆ ಮೊದಲ ಆದ್ಯತೆ ನೀಡಿದ್ದು, ನಂತರ ರಸ್ತೆ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಜಲ ಸಂಪನ್ಮೂಲ ಇಲಾಖೆ ಹೊಣೆ ಹೊತ್ತಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರುಗಳು, ಬರ, ಸುಡುವ ಬಿಸಿಲು, ಕುಡಿಯುವ ನೀರಿನ ಸಮಸ್ಯೆ, ಅಂತರ್ಜಲ ಕುಸಿಯುತ್ತಿರುವುದು ಮತ್ತು ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಬೇಕೆಂದು ಮಾಡಿದ ಪ್ರಸ್ತಾವಗಳಿಗೆ ಉತ್ತರಿಸಿದ ಉಪಮುಖ್ಯಮಂತ್ರಿಗಳು, ಇದೇ ಕಾರಣಕ್ಕೆ ನಮ್ಮ ಸರ್ಕಾರ ನೀರು ಸಂಗ್ರಹ ಹಾಗೂ ಕುಡಿಯುವ ನೀರಿನ ಯೋಜನೆಗಳಿಗೆ ಮೊದಲ ಆದ್ಯತೆ ನೀಡಲು ತೀರ್ಮಾನಿಸಿದೆ ಎಂದರು.
ಉದ್ಯೋಗ ಮೇಳ ನಾಟಕ ಬಿಡಿ: ಕೆಲಸ ಕೊಡಿ
ಮುಂಗಾರು ಮತ್ತು ಹಿಂಗಾರು ಮಳೆ ಕೊರತೆಯಿಂದ ನಮ್ಮ ಜಲಾಶಯಗಳಿಗೆ ನಿಗದಿತ ಪ್ರಮಾಣದಲ್ಲಿ ನೀರು ಹರಿದು ಬರಲಿಲ್ಲ. ಪ್ರಸಕ್ತ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದೆಂಬ ದೃಷ್ಟಿಯಿಂದಲೇ ಜಲಾಶಯದಲ್ಲಿನ ನೀರನ್ನು ಕುಡಿಯಲು ಮೀಸಲಿಟ್ಟಿದ್ದೇವೆ.
ನಗರ ಪ್ರದೇಶಗಳಲ್ಲೂ ಶೇಕಡ 25ರಷ್ಟು ಕೊಳವೆ ಬಾವಿಗಳೇ ನೀರಿನ ಮೂಲ
ಇದರಿಂದ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಪ್ರಮುಖ ಪಾಲಿಕೆ ಮತ್ತು ನಗರಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದು. ನಗರ ಪ್ರದೇಶಗಳಲ್ಲೂ ಶೇಕಡ 25ರಷ್ಟು ಕೊಳವೆ ಬಾವಿಗಳನ್ನೇ ಅವಲಂಬಿಸಲಾಗಿದೆ, ಉಳಿದ ಭಾಗಕ್ಕೆ ನಗರ, ಪಟ್ಟಣ ಸಮೀಪದ ನದಿ, ಕೆರೆ ಆಧಾರವಾಗಿವೆ ಎಂದು ಹೇಳಿದರು.
ಪ್ರತಿಪಕ್ಷದವರು ಮೇಕೆದಾಟು ಯೋಜನೆಯನ್ನು ಅನುಷ್ಟಾನಗೊಳಿಸಲು ನಮ್ಮ ಜೊತೆ ಕೈಜೋಡಿಸಿದರೆ, ಕುಡಿಯುವ ನೀರಿನ ದೊಡ್ಡ ಸಮಸ್ಯೆ ತಪ್ಪಿಸಬಹುದಾಗಿದೆ. ಇದಕ್ಕಾಗಿ ನಾವು ದೊಡ್ಡ ಹೋರಾಟ ನಡೆಸಿದ್ದೇವೆ, ಯೋಜನೆ ಅನುಷ್ಟಾನಗೊಳಿಸಲು ಕಾನೂನಾತ್ಮಕವಾಗಿ ಹೋರಾಟದ ಜೊತೆಗೆ ರಾಜಕೀಯ ಇಚ್ಛಾಶಕ್ತಿಯೂ ಬೇಕಾಗಿದೆ ಎಂದರು.
ರಾಜ್ಯಸಭಾ ಚುನಾವಣೆ: ವಲಸಿಗರಿಗೆ ಕಾಂಗ್ರೆಸ್ ಟಿಕೆಟ್
ಪ್ರತಿ ವರ್ಷ ಬೆಂಗಳೂರಿನ ಜನಸಂಖ್ಯೆ 10 ಲಕ್ಷದಷ್ಟು ಹೆಚ್ಚಾಗುತ್ತಿದೆ, ಹೆಚ್ಚುವರಿಯಾಗಿ 6.5 ಟಿಎಂಸಿ ಅಡಿ ಕಾವೇರಿ ನೀರು ಬೆಂಗಳೂರಿಗೆ ಮೀಸಲು ಇಡಬೇಕು ಎಂದು ಹೊಸದಾಗಿ ಲೆಕ್ಕಾಚಾರ ಮಾಡಲಾಗಿದೆ. ಇದರಲ್ಲಿ 1.5 ಟಿಎಂಸಿಯಷ್ಟು ನೀರು ಉಳಿಯುವ ನಿರೀಕ್ಷೆ ಇದೆ. ದಿನೇ, ದಿನೇ ನೀರಿನ ಸಮಸ್ಯೆ ಹೆಚ್ಚಾಗುತ್ತಿದ್ದು, ಬೆಂಗಳೂರಿನ ಜನತೆಗೆ ಯಾವುದೇ ತೊಂದರೆಯಾಗದಂತೆ ಕುಡಿಯುವ ನೀರು ಪೂರೈಸುವುದು ನಮ್ಮ ಕರ್ತವ್ಯ ಎಂದು ಭರವಸೆ ನೀಡಿದರು.
ಯಗಚಿ ನದಿ ಅಣೆಕಟ್ಟಿನ ಕಾಲುವೆಗಳ ಅಭಿವೃದ್ಧಿ ಬಗ್ಗೆ ಅಧಿಕಾರಿಗಳು ವರದಿ ನೀಡಿದ್ದು, ಈಗಾಗಲೇ 5.5 ಕಿ.ಮೀ.ನಷ್ಟು ಮಣ್ಣನ್ನು ತೆಗೆದಿದ್ದು, 1.5 ಕಿ.ಮೀ.ನಷ್ಟು ಕಾಮಗಾರಿ ಭೂಸ್ವಾಧೀನದ ವಿಚಾರವಾಗಿ ಸ್ಥಗಿತಗೊಂಡಿದೆ. ಎತ್ತಿನಹೊಳೆ ಯೋಜನೆಗೆ ಮಹತ್ವ ನೀಡಿದಂತೆ ಯಗಚಿ ಯೋಜನೆಗೂ ಮೊದಲ ಆದ್ಯತೆ ನೀಡುತ್ತೇವೆ ಎಂದರು.
ಕೋವಿಡ್ ಸಮಯದಲ್ಲಿ ಕಾಮಗಾರಿ ಕುಂಠಿತ
ಭದ್ರಾ ಮೇಲ್ದಂಡೆ ಯೋಜನೆಯ ಅಡಿ 856 ಕೋಟಿ ರೂ. ಮೊತ್ತದ ಕಾಮಗಾರಿಗೆ ಮಂಜೂರಾತಿ ನೀಡಲಾಗಿದೆ, ಯೋಜನೆ ಹಾದು ಹೋಗುವ ಹಲವೆಡೆ ಭೂಸ್ವಾಧೀನ ಸಮಸ್ಯೆಯಿದ್ದು, ಬಗೆಹರಿಸಲಾಗುತ್ತಿದೆ. ಕೋವಿಡ್ ಸಮಯದಲ್ಲಿ ಕಾಮಗಾರಿ ಕುಂಠಿತವಾಯಿತು. ಕೇಂದ್ರ ಸರ್ಕಾರ 5300 ಕೋಟಿ ರೂ. ಅನುದಾನ ನೀಡುವಲ್ಲಿ ವಿಳಂಬ ಮಾಡಿರುವ ಕಾರಣ ಹಿನ್ನಡೆಯಾಗಿದೆ ಎಂದು ತಿಳಿಸಿದರು.
ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್ ವಸತಿ ಕಾರ್ಯ ಎಂದಿಗೂ ಮುಗಿಯದ ಕೆಲಸ. ಈ ಹಿಂದೆ ಮೂಲಸೌರ್ಕರ್ಯಗಳ ಅಭಿವೃದ್ಧಿಗೆ 2017ರಲ್ಲಿ191 ಕೋಟಿ ರೂ. ಮೀಸಲಿಟ್ಟು ಮುಕ್ತಾಯ ಮಾಡಲಾಗುವುದು ಎಂದು ಹೇಳಲಾಗಿತ್ತು. ಈಗ ಹೊಸದಾಗಿ 2600 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಿದ್ದೀರಿ. ಮೊದಲಿಗೆ ಜಮೀನು ಕಳೆದುಕೊಂಡವರಿಗೆ ಪರಿಹಾರ ಹಣ ಮತ್ತು ಜಮೀನುಗಳಿಗೆ ನೀರು ಬಿಡುಗಡೆ ಮಾಡಬೇಕು. ಈ ಎಲ್ಲಾ ಕೆಲಸಗಳು ಆದ ನಂತರ ಮಿಕ್ಕ ವಿಚಾರಗಳ ಬಗ್ಗೆ ಗಮನ ಹರಿಸಲಾಗುವುದು ಎಂದು ತಿಳಿಸಿದರು.
ಹದಗೆಟ್ಟ ಕಾನೂನು ಸುವ್ಯವಸ್ಥೆ: ವಿಧಾನಸಭೆಯಲ್ಲಿ ಕೋಲಾಹಲ