Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಬಿಜೆಪಿ ಶಾಸಕರಿಗೆ ಕೊಲೆ ಬೆದರಿಕೆ

by admin February 14, 2024
written by admin February 14, 2024 1 comment 2 minutes read
2FacebookTwitterPinterestEmail
142

ಬೆಂಗಳೂರು:ಮಾಜಿ ಸಚಿವ, ಹಾಲಿ ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಅವರಿಗೆ ಪ್ರಾಣ ಬೆದರಿಕೆ ಹಾಕಿದ ಕಾಂಗ್ರೆಸ್ ಮುಖಂಡ ಹಾಗೂ ಬಿಬಿಎಂಪಿ ಮಾಜಿ ಸದಸ್ಯ ಪದ್ಮರಾಜ್ ಅವರನ್ನು ಬಂಧಿಸಲಾಗಿದೆ.

ವಿಧಾನಸಭೆಯಲ್ಲಿಂದು ಶೂನ್ಯವೇಳೆಯಲ್ಲಿ, ತಮಗೆ ಪ್ರಾಣ ಬೆದರಿಕೆ ಇದ್ದು, ರಕ್ಷಣೆ ನೀಡಬೇಕು, ಕ್ಷೇತ್ರದ ಕಾಂಗ್ರೆಸ್ ಮುಖಂಡರೊಬ್ಬರು ತಮ್ಮನ್ನು ನಿಂದಿಸಿ ಕೊಲ್ಲುವುದಾಗಿ ಬೆದರಿಸಿದ್ದಾರೆ ಎಂದು ದೂರಿದರು.

ಸದಸ್ಯರ ಪ್ರಸ್ತಾವ ಮತ್ತು ವಿವರಣೆ ಕೇಳುತ್ತಿದ್ದಂತೆ ಸಭಾಧ್ಯಕ್ಷ ಯು.ಟಿ. ಖಾದರ್, ಸದನದ ಸದಸ್ಯರನ್ನು ನಿಂದಿಸಿ ಕೊಲೆ ಬೆದರಿಕೆ ಹಾಕಿದವರನ್ನು ಸಂಜೆ ವೇಳೆಗೆ ಬಂಧಿಸಬೇಕು ಇಲ್ಲದಿದ್ದರೆ, ದೂರು ದಾಖಲು ಮಾಡಿಕೊಂಡಿರುವ ಠಾಣೆಯ ಅಧಿಕಾರಿಯನ್ನು ಅಮಾನತು ಮಾಡುವಂತೆ ಕಟು ಆದೇಶ ಮಾಡಿದರು.

ವಿಧಾನಸಭೆಯ ನಡಾವಳಿ ಗೃಹ ಇಲಾಖೆಗೆ ತಲುಪುತ್ತಿದ್ದಂತೆ ಎಚ್ಚತ್ತ ಪೊಲೀಸರು, ಅಡಿವಿಕೊಂಡಿದ್ದ ಆರೋಪಿ ಪದ್ಮರಾಜ್ ಮನೆ ಬಾಗಿಲು ಒಡೆದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಸದನದಲ್ಲಿ ಪ್ರಶ್ನೋತ್ತರದ ಬಳಿಕ ಶೂನ್ಯ ವೇಳೆಯಲ್ಲಿ ಗೋಪಾಲಯ್ಯ ಅವರು ವಿಷಯ ಪ್ರಸ್ತಾಪಿಸಿ, ನಿನ್ನೆ ರಾತ್ರಿ 11 ಗಂಟೆ 1 ನಿಮಿಷಕ್ಕೆ ಬಿಬಿಎಂಪಿಯ ಮಾಜಿ ಸದಸ್ಯ ಪದ್ಮರಾಜ್ ತಮಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ, ಆ ಪದಗಳನ್ನು ಇಲ್ಲಿ ಹೇಳಲು ಸಾಧ್ಯವಿಲ್ಲ, ನನಗೆ ಮತ್ತು ನನ್ನ ಕುಟುಂಬಕ್ಕೆ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದರು.

ಪಾನಮತ್ತನಾಗಿ ಬೆದರಿಕೆ ಕರೆ

ಬಸವೇಶ್ವರ ನಗರದಲ್ಲಿ ಕ್ಲಬ್ ನಡೆಸುವ ಈ ವ್ಯಕ್ತಿ ರಾತ್ರಿಯಾಗುತ್ತಿದ್ದಂತೆ ಪಾನಮತ್ತನಾಗಿ ನನ್ನನ್ನೂ ಸೇರಿದಂತೆ ಕುಟುಂಬದ ಅನೇಕರಿಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾನೆ.

ಸುರೇಶ್‌ಕುಮಾರ್ ಅವರಂತಹ ಶಾಸಕರು ಶಕ್ತಿಯಿಲ್ಲದೆ ದೂರು ನೀಡಿಲ್ಲ, ಸದರಿ ವ್ಯಕ್ತಿಯನ್ನು ಬಂಧಿಸಲು ಪೊಲೀಸರು ರಾತ್ರಿಯಿಡೀ ಏಳೆಂಟು ಗಂಟೆ ಅವರ ಮನೆ ಎದುರು ಕಾವಲು ಕಾದಿದ್ದಾರೆ. ಬಾಗಿಲು ತೆರೆದು ಹೊರಬರದೇ ಒಳಗಿದ್ದ ವ್ಯಕ್ತಿ ಬೆಳಗ್ಗೆ 10 ಗಂಟೆಗೆ ನಿಶೆ ಇಳಿದ ಮೇಲೆ ಹೊರಹೋಗಿದ್ದಾನೆ. ಇಂತಹವರು ಸಮಾಜಕ್ಕೆ ಬೇಕೇ ಎಂದು ಪ್ರಶ್ನಿಸಿದರು.

ಸದರಿ ವ್ಯಕ್ತಿಯನ್ನು ಬಂಧಿಸಿ 6 ತಿಂಗಳ ಕಾಲ ಗಡಿಪಾರು ಮಾಡಬೇಕು, ತಮ್ಮ ಕುಟುಂಬಕ್ಕೆ ರಕ್ಷಣೆ ನೀಡಬೇಕು, ಬೆಂಗಳೂರಿನಲ್ಲಿ ಅನೈತಿಕವಾಗಿ ನಡೆಯುತ್ತಿರುವ ಕ್ಲಬ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಶಾಸಕ ಸುರೇಶ್‌ಕುಮಾರ್ ಮಾತನಾಡಿ, ಸದನದಲ್ಲಿ ಶಾಸಕರಿಗೆ ರಕ್ಷಣೆ ಇಲ್ಲ ಎಂದಾದರೆ ಜನರಿಗೆ ತಪ್ಪು ಸಂದೇಶ ಹೋಗುತ್ತದೆ, ರಾತ್ರಿ ದೂರು ಕೊಟ್ಟರೂ ಈವರೆಗೂ ಏಕೆ ಬಂಧಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉತ್ತರ ಪ್ರದೇಶದಿಂದ ತಾಯಿ-ಮಗ ಪಲಾಯನ

ಸದರಿ ವ್ಯಕ್ತಿಯ ನಡವಳಿಕೆಗೆ ನಾನು ಮತ್ತು ಅಶೋಕ್‌ರವರು ಫಲಾನುಭವಿಗಳಾಗಿದ್ದೇವೆ, ಪೊಲೀಸರು ಆತನ ಮನೆಬಾಗಿಲಿಗೆ ಹೋದಾಗ ಒಳಗಿನಿಂದಲೇ ಆತ ಪ್ರಭಾವಿಗಳಿಗೆ ಕರೆ ಮಾಡಿ ಶಿಫಾರಸ್ಸು ಮಾಡುತ್ತಿದ್ದಾನೆ, ಗೋಪಾಲಯ್ಯ ಅವರಿಗೆ ಬೆದರಿಕೆ ಹಾಕಿದ್ದಾನೆ ಎಂದಾದರೆ ಆತನ ಉದ್ಧಟತನದ ಮಟ್ಟವನ್ನು ಅಂದಾಜಿಸಬಹುದು ಎಂದು ಆರೋಪಿಸಿದರು.

ವಿರೋಧಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಬೆದರಿಕೆ ಹಾಕಿದ ವ್ಯಕ್ತಿ ಕುಡಿದಿದ್ದಾನೆ. ಆತನ ನಿಶೆ ಇಳಿಯಲಿ ಎಂದು ಪೊಲೀಸರು ಕಾದು ಕುಳಿತಿರುವುದು ಹಾಸ್ಯಾಸ್ಪದ, ಈ ರೀತಿ ಕಾನೂನಿನಲ್ಲಿ ವಿನಾಯಿತಿ ನೀಡಲು ಅವಕಾಶವಿದೆಯೇ, ಪೊಲೀಸ್ ಠಾಣೆಯಿಂದ ಸ್ವಲ್ಪವೇ ದೂರದಲ್ಲಿದ್ದರೂ ಏಕೆ ಬಂಧಿಸಿಲ್ಲ, ಆರೋಪಿಗಳಿಗೆ ಪೊಲೀಸರು ರಾಜಾತಿಥ್ಯ ನೀಡುವುದು ಅಗತ್ಯವೇ, ಅಧಿಕಾರ ಯಾರಿಗೂ ಶಾಶ್ವತ ಅಲ್ಲ, ಶಾಸಕರನ್ನು ಅವಹೇಳನ ಮಾಡಿರುವ ವ್ಯಕ್ತಿ ವಿರುದ್ಧ ಮುಲಾಜಿಲ್ಲದೇ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ತಾರತಮ್ಯ ಇಲ್ಲದೆ ಸೂಕ್ತ ಕ್ರಮದ ಭರವಸೆ

ಸರ್ಕಾರದ ಪರವಾಗಿ ಉತ್ತರಿಸಿದ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ, ಸದಸ್ಯರ ಚರ್ಚೆಗಳನ್ನು ಗೃಹಸಚಿವರ ಗಮನಕ್ಕೆ ತಂದು ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು, ಕಾನೂನು ಪಾಲನೆಯ ವಿಷಯದಲ್ಲಿ ಸರ್ಕಾರ ಯಾವುದೇ ತಾರತಮ್ಯ ಮಾಡುವುದಿಲ್ಲ, ಆ ವ್ಯಕ್ತಿ ಬಿಜೆಪಿಯಲ್ಲಿದ್ದರು, ಕಾಂಗ್ರೆಸ್‌ಗೆ ಬಂದಿದ್ದರು, ಈಗ ಯಾವ ಪಕ್ಷದಲ್ಲಿದ್ದಾರೋ ಗೊತ್ತಿಲ್ಲ, ರಾಜಕೀಯ ಹೊರತಾಗಿ ಸರ್ಕಾರ ಕ್ರಮ ಜರುಗಿಸಲಿದೆ ಎಂದು ಭರವಸೆ ನೀಡಿದರು.

ಈ ಹಂತದಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್, ನಿನ್ನೆ ರಾತ್ರಿ ಘಟನೆ ನಡೆದರೂ ಇವರನ್ನು ಏಕೆ ಬಂಧಿಸಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಆರೋಪಿಯನ್ನು ಇಂದು ಮಧ್ಯಾಹ್ನ ಇಲ್ಲ ಸಂಜೆಯೊಳಗೆ ಬಂಧಿಸಬೇಕು, ಇಲ್ಲವಾದರೆ ಸದರಿ ಠಾಣೆಯ ಇನ್ಸ್‌ಪೆಕ್ಟರ್ ಅನ್ನು ಅಮಾನತು ಮಾಡಿ ಎಂದು ಸೂಚನೆ ನೀಡಿದರು.

ಸಭಾಧ್ಯಕ್ಷರು ಆದೇಶ ನೀಡುತ್ತಿದ್ದಂತೆ ಸದನದೊಳಗೆ ಧಾವಿಸಿದ ಗೃಹ ಸಚಿವ ಪರಮೇಶ್ವರ್, ಗೋಪಾಲಯ್ಯ ಅವರ ದೂರು ಆಧರಿಸಿ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಯನ್ನು ಬಂಧಿಸಲು ಈಗಲೂ ಅವರ ಮನೆ ಮುಂದೆ ಕಾಯುತ್ತಿದ್ದಾರೆ. ಎಷ್ಟೇ ಬಾಗಿಲು ಬಡಿದರೂ ಬಾಗಿಲು ತೆಗೆಯುತ್ತಿಲ್ಲ. ಅನಿವಾರ್ಯವಾದರೆ ಬಾಗಿಲು ಒಡೆದು ಒಳಹೋಗಿ ಬಂಧಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಆ ವೇಳೆಗೆ ಅಧಿಕಾರಿಗಳ ಗ್ಯಾಲರಿಯಿಂದ ಬಂದ ಸಂದೇಶ ಪಡೆದು ಸ್ಪಷ್ಟನೆ ನೀಡಿದ ಗೃಹಸಚಿವರು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಸದನಕ್ಕೆ ತಿಳಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
acused arrestedcomplaint to speakermla gopalaiahorderd to take actionspeaker ut khadarthreat to a mlavidhana sabha
2 FacebookTwitterPinterestEmail
admin

previous post
ಉತ್ತರ ಪ್ರದೇಶದಿಂದ ತಾಯಿ-ಮಗ ಪಲಾಯನ
next post
ಕರ್ನಾಟಕ ಅಪರಾಧದ ನಾಡಾಗುತ್ತಿದೆ: ಅಶೋಕ್ ಆರೋಪ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ