Saturday, July 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, July 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಅಂಕಣರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ರಾಜ್ಯಸಭೆ ಚುನಾವಣೆ: ಕುದುರೆ ವ್ಯಾಪಾರಕ್ಕೆ ರಹದಾರಿ

by KM Shivaraju February 15, 2024
written by KM Shivaraju February 15, 2024 0 comments 2 minutes read
1FacebookTwitterPinterestEmail
470

ಬೆಂಗಳೂರು:ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇದೇ 27 ರಂದು ನಡೆಯಲಿರುವ ಚುನಾವಣೆಗೆ ಐದನೇ ಅಭ್ಯರ್ಥಿಯಾಗಿ ಜೆಡಿಎಸ್‌ನ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು ವಿವಿಧ ಪಕ್ಷಗಳ ಬಲಾಬಲದ ಆಧಾರದ ಮೇಲೆ ಕಾಂಗ್ರೆಸ್ ಮೂರು ಮತ್ತು ಬಿಜೆಪಿಗೆ ಒಂದು ಸ್ಥಾನದಲ್ಲಿ ಗೆಲವು ಖಚಿತ.

ಆಡಳಿತಾರೂಢ ಕಾಂಗ್ರೆಸ್‌ಗೆ ಸೆಡ್ಡು ಹೊಡೆಯುವ ಉದ್ದೇಶದಿಂದ ಬಿಜೆಪಿ ವರಿಷ್ಠರ ಅಣತಿಯಂತೆ ಐದನೇ ಅಭ್ಯರ್ಥಿಯಾಗಿ ರೆಡ್ಡಿ ಅವರನ್ನು ಕಣಕ್ಕಿಳಿಸಿದೆ.

ರಂಗೇರಿದ ಚುನಾವಣಾ ಅಖಾಡ

ರೆಡ್ಡಿ ಅವರು ಕಣಕ್ಕಿಳಿದಿರುವುದರಿಂದ ಚುನಾವಣಾ ಅಖಾಡ ರಂಗೇರಿದ್ದು ಅವಿರೋಧ ಆಯ್ಕೆಗೆ ಅವಕಾಶ ಇಲ್ಲದಂತಾಗಿದೆ.

ರಾಜ್ಯಸಭೆಗೆ ಆಯ್ಕೆಗೊಳ್ಳಲು ಸ್ಪರ್ಧಿಸಿರುವ ಅಭ್ಯರ್ಥಿ ಕನಿಷ್ಠ 45 ಮತಗಳನ್ನು ಪಡೆಯಬೇಕಿದೆ, ಕಾಂಗ್ರೆಸ್ ವಿಧಾನಸಭಾಧ್ಯಕ್ಷರೂ ಸೇರಿ 135 ಮತಗಳನ್ನು ಹೊಂದಿದೆ. ಪ್ರತಿಪಕ್ಷ ಬಿಜೆಪಿ 66, ಜೆಡಿಎಸ್ 19 ಮತಗಳನ್ನು ಹೊಂದಿವೆ.

224 ಸದಸ್ಯರಿರುವ ಸದನದಲ್ಲಿ ನಾಲ್ವರು ಪಕ್ಷೇತರರಿದ್ದಾರೆ, ಇವರ ಮತಗಳೇ ಚುನಾವಣೆಯಲ್ಲಿ ಭಾರೀ ತಿರುವಿಗೆ ಕಾರಣವಾಗಲಿದೆ.

ಕಾಂಗ್ರೆಸ್ ತನ್ನ ಮೂವರು ಅಭ್ಯರ್ಥಿಗಳ ಗೆಲುವಿಗೆ ಅಗತ್ಯವಿರುವ 135 ಮತಗಳನ್ನು ಹೊಂದಿದೆ. ಬಿಜೆಪಿ 66 ಸದಸ್ಯರನ್ನು ಹೊಂದಿದ್ದು ತನ್ನ ಅಭ್ಯರ್ಥಿಗೆ 45 ಮತಗಳು ನೀಡಿದ ನಂತರ ಉಳಿದ 21 ಮತಗಳನ್ನು ಎನ್‌ಡಿಎ ಅಭ್ಯರ್ಥಿ ರೆಡ್ಡಿ ಅವರಿಗೆ ನೀಡಲಿದೆ.

ಜೆಡಿಎಸ್‌ನ 19 ಹಾಗೂ ಬಿಜೆಪಿಯ ಉಳಿದ 21 ಮತಗಳು ಸೇರಿ 40 ಮತಗಳು ರೆಡ್ಡಿ ಅವರಿಗೆ ಲಭಿಸಲಿವೆ.

ಇಬ್ಬರು ಪಕ್ಷೇತರರು ಕುಪೇಂದ್ರ ಬೆಂಬಲಕ್ಕೆ

ಗೆಲುವಿನ ಗುರಿ ಮುಟ್ಟಲು ಇನ್ನೂ ಐದು ಮತಗಳ ಅಗತ್ಯವಿದೆ, ಅದರಲ್ಲಿ ಜನಾರ್ದನ ರೆಡ್ಡಿ ಸೇರಿದಂತೆ ಇಬ್ಬರು ಪಕ್ಷೇತರರು ಕುಪೇಂದ್ರ ಅವರನ್ನು ಬೆಂಬಲಿಸಲಿದ್ದಾರೆ.

ಮ್ಯಾಜಿಕ್ ಸಂಖ್ಯೆ ಮುಟ್ಟಲು ಕುಪೇಂದ್ರ ರೆಡ್ಡಿ ಇನ್ನೂ ಮೂರು ಮತಗಳನ್ನು ಗಳಿಸಬೇಕಿದೆ, ಆ ಮತಗಳನ್ನು ಬಿಜೆಪಿ ವರಿಷ್ಠರು ದೊರಕಿಸಿಕೊಡುತ್ತಾರೆಂಬ ನಿರೀಕ್ಷೆಯಲ್ಲಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಕಲಿಕೆ ಸೌಲಭ್ಯ

ಕಳೆದ ಅನೇಕ ಚುನಾವಣೆಗಳಲ್ಲಿ ಅಡ್ಡ ಮತದಾನದಿಂದ ಐದನೇ ಅಭ್ಯರ್ಥಿ ಆಯ್ಕೆಗೊಂಡು ಅಧಿಕೃತ ಅಭ್ಯರ್ಥಿಗಳು ಸೋತಿರುವುದು ಕರ್ನಾಟಕದ ಇತಿಹಾಸದ ಪುಟಗಳಲ್ಲಿದೆ.

ಕುಪೇಂದ್ರ ರೆಡ್ಡಿ ಅಲ್ಲದೆ, ಕಾಂಗ್ರೆಸ್‌ನ ಅಜಯ್ ಮಾಕೆನ್, ಜಿ.ಸಿ.ಚಂದ್ರಶೇಖರ್, ಡಾ. ಸಯ್ಯದ್ ನಾಸಿರ್ ಹುಸೇನ್ ನಾಮಪತ್ರ ಸಲ್ಲಿಸಿದ್ದರೆ, ಬಿಜೆಪಿಯ ನಾರಾಯಣಸಾ ಕೆ. ಬಾಂಡಗೆ ಅವರು ಪಕ್ಷದ ಅಧಿಕೃತ ಅಭ್ಯರ್ಥಿಗಳಾಗಿ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಆತ್ಮಸಾಕ್ಷಿ ಮತ

ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಕೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ನಮ್ಮ ಅಭ್ಯರ್ಥಿಗೆ ಎಲ್ಲಾ ಪಕ್ಷಗಳಲ್ಲೂ ಸ್ನೇಹಿತರಿದ್ದಾರೆ, ಅವರು ಆತ್ಮಸಾಕ್ಷಿ ಮತಗಳನ್ನು ಪಡೆದು ಗೆಲುವಿನ ಗಡಿ ದಾಟಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಉಭಯ ನಾಯಕರ ಮಾತಿಗೆ ತಿರುಗೇಟು ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ನಮಗೂ ಎಲ್ಲ ಪಕ್ಷಗಳಲ್ಲಿ ಸ್ನೇಹಿತರಿದ್ದಾರೆ, ನಮ್ಮ ಮೂವರು ಅಭ್ಯರ್ಥಿಗಳಿಗೂ ಆತ್ಮಸಾಕ್ಷಿ ಮತಗಳು ಬೀಳಲಿವೆ ಎಂದರು.

ಬಿಜೆಪಿ ಮತ್ತು ಜೆಡಿಎಸ್‌ನವರು ಕುದುರೆ ವ್ಯಾಪಾರ ಮಾಡುತ್ತಾರೆ, ಅವರು ಅದಕ್ಕೆ ಹೆಸರುವಾಸಿ, ಫೆಬ್ರವರಿ 27 ರಂದು ಫಲಿತಾಂಶ ಹೊರಬೀಳುತ್ತದೆ.

ಎಷ್ಟು ಮತಗಳು ಬಿಜೆಪಿ ಅವರಿಗೆ ಸಿಗಲಿದೆ ಎಂಬುದನ್ನು ಕಾದುನೋಡಿ ಎಂದು ಮಾರ್ಮಿಕವಾಗಿ ನುಡಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjpcongresfour seats-five candidatesjdsrajya sabha election
1 FacebookTwitterPinterestEmail
KM Shivaraju

previous post
ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಕಲಿಕೆ ಸೌಲಭ್ಯ
next post
ತೆರಿಗೆ ವಿಧಿಸಿ ಜನರ ರಕ್ತ ಹೀರುತ್ತಿರುವ ʼಸಿದ್ದನಾಮಿಕ್ಸ್ʼ

You may also like

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

July 24, 2026

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026

Categories

  • Special Story (522)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,016)
  • ರಾಜ್ಯ (2,330)
  • ರಾಷ್ಟ್ರ (2,295)
  • ವಿಶ್ಲೇಷಣೆ (199)
  • ಶಿಕ್ಷಣ (402)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026

KMS Special

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ...

July 24, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ