Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಗ್ಯಾರಂಟಿ ಯೋಜನೆಗಳ ಮುಂದುವರಿಕೆಗೆ ಸಾಲ

by KM Shivaraju February 16, 2024
written by KM Shivaraju February 16, 2024 1 comment 2 minutes read
1FacebookTwitterPinterestEmail
623

ಬೆಂಗಳೂರು:ಮುದ್ರಾಂಕ, ಅಬಕಾರಿ, ವಾಹನ ತೆರಿಗೆ ಇತ್ಯಾದಿ ಬಾಬ್ತುಗಳಿಂದ ಹೆಚ್ಚುವರಿ ಆದಾಯ ಸಂಗ್ರಹ ಪ್ರಯತ್ನ ನಡುವೆಯೂ 1.05 ಲಕ್ಷ ಕೋಟಿ ರೂ. ಸಾಲಕ್ಕೆ ಮೊರೆ ಹೋದ ಮುಖ್ಯಮಂತ್ರಿ ಸಿದ್ದರಾಮಯ್ಯ.

ವಿಧಾನಸಭೆಯಲ್ಲಿಂದು 2024-25ನೇ ಸಾಲಿನ ಮುಂಗಡಪತ್ರ ಮಂಡಿಸಿ ಐದು ಗ್ಯಾರಂಡಿ ಯೋಜನೆಗಳನ್ನು ಮುಂದುವರೆಸಿಕೊಂಡು ಹೊಸ ಕಾರ್ಯಕ್ರಮಗಳ ಅನುಷ್ಟಾನಕ್ಕಾಗಿ ಸಾಲ ಪಡೆಯಲಾಗುವುದು ಎಂದಿದ್ದಾರೆ.

ದೊಡ್ಡ ಪ್ರಮಾಣದಲ್ಲಿ ಸಾಲ

ಕರ್ನಾಟಕದ ಇತಿಹಾಸದಲ್ಲೇ ಯಾವ ಹಣಕಾಸು ಸಚಿವರೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಸಾಲ ಪಡೆಯುವ ಪ್ರಸ್ತಾಪ ಮಾಡಿರಲಿಲ್ಲ.

ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ನಮ್ಮ ಇತಿಮಿತಿಯಲ್ಲಿ ಸಾಲ ಪಡೆಯಲು ಮುಂದಾಗಿದ್ದದೇನೆ ಎಂದು ಮುಂಗಡಪತ್ರದಲ್ಲಿ ಸಮರ್ಥಿಸಿಕೊಂಡಿದ್ದಾರೆ.

ಯಾವುದೇ ಹೊಸ ಜನಪ್ರಿಯ ಯೋಜನೆಗಳು ಇಲ್ಲ, ಆದರೆ, ಕೆಲವು ಇಲಾಖೆಗಳಲ್ಲಿ ಕಾರ್ಯಕ್ರಮಗಳನ್ನು ತಂದಿದ್ದಾರೆ.

ಹಳೆ ಕಾರ್ಯಕ್ರಮಗಳಿಗೆ ಇತಿಶ್ರೀ

ಕೆಲವು ಹಳೆ ಕಾರ್ಯಕ್ರಮಗಳಿಗೆ ಇತಿಶ್ರೀ ಹಾಡಿ ತಮ್ಮ ಹಿಂದಿನ ಕಾಂಗ್ರೆಸ್ ಆಡಳಿತದಲ್ಲಿ ಕೆಲವು ಯೋಜನೆಗಳನ್ನು ಮತ್ತೆ ಮುಂದುವರೆಸುವ ಪ್ರಸ್ತಾಪ ಮಾಡಿದ್ದಾರೆ.

ಕೇಂದ್ರ ಸರ್ಕಾರದ ಯೋಜನೆಗಳ ಅಡಿಯಲ್ಲೇ ಅಭಿವೃದ್ಧಿಗೆ ಒತ್ತು ನೀಡಿರುವ ಮುಖ್ಯಮಂತ್ರಿ ಅವರು, ಯಾವುದೇ ಹೊಸ ಜನಪರ ಯೋಜನೆಗಳನ್ನು ಪ್ರಕಟಿಸಿಲ್ಲ.

ಕೃಷಿ, ನೀರಾವರಿ, ನಗರಾಭಿವೃದ್ಧಿ, ಆರೋಗ್ಯ ಮತ್ತು ಸಮಾಜ ಕಲ್ಯಾಣ ಇಲಾಖೆಗೆ ಒತ್ತು ನೀಡಿರುವ ಮುಖ್ಯಮಂತ್ರಿ ಅವರು, ಕೆಲವು ಹಳೆಯ ಯೋಜನೆಗಳಿಗೆ ಮರುಜೀವ ನೀಡುವುದರ ಜೊತೆಗೆ ಹೊಸ ಕಾರ್ಯಕ್ರಮಗಳನ್ನು ತೆಗೆದುಕೊಂಡಿದ್ದಾರೆ.

ಪೂರ್ಣ ಆಯವ್ಯಯ ಅಂಗೀಕಾರಕ್ಕೆ ಮನವಿ

ಪ್ರಸಕ್ತ ಸಾಲಿನಲ್ಲಿ 3,71,383 ಕೋಟಿ ರೂ.ಗಳ ಗಾತ್ರದ ಮುಂಗಡಪತ್ರ ಮಂಡಿಸಿ, ಪೂರ್ಣ ಆಯವ್ಯಯ ಅಂಗೀಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಮುಂಗಡಪತ್ರದಲ್ಲಿ ಘೋಷಿಸಿರುವ ಸರ್ಕಾರದ ಎಲ್ಲಾ ಕಾರ್ಯಕ್ರಮಗಳನ್ನು ಜಾರಿಗೆ ತರಲು ಇಷ್ಟು ಹಣದ ಅಗತ್ಯವಿದೆ.

ನಮ್ಮ ಸಂಪನ್ಮೂಲ ಕ್ರೂಡೀಕರಣ ಇಷ್ಟು ಇರದ ಕಾರಣ ನಮ್ಮ ಇತಿಮಿತಿಯೊಳಗೆ ಸಾಲ ಪಡೆಯುವುದಾಗಿ ಸಮರ್ಥನೆ ಮಾಡಿಕೊಂಡಿದ್ದಾರೆ.

ವಿತ್ತೀಯ ಕೊರತೆಯನ್ನು ಜಿಎಸ್‌ಡಿಪಿಯ ಶೇಕಡ 3ರೊಳಗೆ ಮತ್ತು ಒಟ್ಟು ಹೊಣೆಗಾರಿಕೆಗಳನ್ನು ಜಿಎಸ್‌ಡಿಪಿಯ ಶೇಕಡ 25ರೊಳಗೆ ಕಾಯ್ದುಕೊಳ್ಳುವ ಮೂಲಕ ವಿತ್ತೀಯ ಶಿಸ್ತನ್ನು ಪಾಲಿಸಿರುವುದಾಗಿ ಹೇಳಿಕೊಂಡಿದ್ದಾರೆ.

ನೋಂದಣಿ ಮತ್ತು ಮುದ್ರಾಂಕದಿಂದ ಹೆಚ್ಚುವರಿಯಾಗಿ 10,000ಕೋಟಿ ರೂ., ಅಬಕಾರಿ ಬಾಬ್ತಿನಿಂದ 3,000 ಕೋಟಿ ರೂ., ಸಾರಿಗೆ ಇಲಾಖೆಯಿಂದ 13,000, ಗಣಿ ಮತ್ತು ಭೂವಿಜ್ಞಾನದಿಂದ 9,000,ವಾಣಿಜ್ಯ ಮತ್ತು ತೆರಿಗೆ ಇಲಾಖೆಯಿಂದ 1,10,000 ಕೋಟಿ ರೂ. ಸಂಗ್ರಹ ಗುರಿ ನಿಗದಿ ಪಡಿಸಲಾಗಿದೆ ಎಂದರು.

ಮದ್ಯ ಸ್ಲ್ಯಾಬ್‌ಗಳ ಪರಿಷ್ಕರಣೆ

ಮದ್ಯ ಘೋಷಿತ ಸ್ಲ್ಯಾಬ್‌ಗಳನ್ನು ತರ್ಕಬದ್ಧಗೊಳಿಸುವ ಮೂಲಕ ನೆರೆ ರಾಜ್ಯದ ಮದ್ಯದ ದರಗಳಿಗೆ ಅನುಗುಣವಾಗಿ ಐಎಂಎಲ್ ಹಾಗೂ ಬಿಯರ್ ಸ್ಲ್ಯಾಬ್‌ಗಳನ್ನು ಪರಿಷ್ಕರಿಸುವುದಾಗಿ ತಿಳಿಸಿದ್ದಾರೆ.

ಹಸಿವು ಮುಕ್ತ ಕರ್ನಾಟಕ ನಿರ್ಮಾಣಕ್ಕಾಗಿ ’ಅನ್ನ-ಸುವಿಧ’ ಎಂಬ ಹೊಸ ಯೋಜನೆಯನ್ನು ಘೋಷಣೆ ಮಾಡಿರುವ ಮುಖ್ಯಮಂತ್ರಿ ಅವರು, ಇದರಡಿ 80 ವರ್ಷ ದಾಟಿದ ಹಿರಿಯ ನಾಗರಿಕರು ಮಾತ್ರ ಇರುವ ಮನೆಯ ಬಾಗಿಲಿಗೆ ಆಹಾರಧಾನ್ಯಗಳನ್ನು ಪೂರೈಸಲಾಗುವುದು.

ಸರ್ಕಾರದ ವತಿಯಿಂದಲೇ 50 ಕೆಫೆ ಹೋಟೆಲ್‌ಗಳನ್ನು ಸ್ಥಾಪಿಸಲಾಗುವುದು, ಇದಕ್ಕಾಗಿ 7.5 ಕೋಟಿ ರೂ. ಮೀಸಲಿರಿಸಿದ್ದು, ಈ ಹೋಟೆಲ್‌ಗಳಲ್ಲಿ ಸ್ಥಳೀಯ ಆಹಾರಕ್ಕೆ ಒತ್ತು ನೀಡಲಾಗುವುದು.

ಮುಖ್ಯಮಂತ್ರಿ ಅಭಿವೃದ್ಧಿ ಪ್ರಾಧಿಕಾರ

ಸಮಗ್ರ ಕೃಷಿ ಉತ್ತೇಜಿಸುವ ರೈತ ಸಮೃದ್ಧಿ ಯೋಜನೆ ಘೋಷಿಸಿರುವ ಮುಖ್ಯಮಂತ್ರಿ ಅವರು, ಇದರನ್ವಯ ಕೃಷಿ ಮತ್ತು ಪೂರಕ ಚಟುವಟಿಕೆಗಳ ನೀತಿ ಮತ್ತು ಯೋಜನೆಗಳ ಸಂಯೋಜನೆ ಹಾಗೂ ಪರಿಣಾಮಕಾರಿ ಅನುಷ್ಟಾನಕ್ಕಾಗಿ ಮುಖ್ಯಮಂತ್ರಿ ಅಭಿವೃದ್ಧಿ ಪ್ರಾಧಿಕಾರ ರಚಿಸುವುದಾಗಿ ಘೋಷಿಸಿದ್ದಾರೆ.

ಕೈಗೆಟಕುವ ದರದಲ್ಲಿ ಸಂಸ್ಕರಿಸಿದ ಸಿರಿಧಾನ್ಯಗಳು ಹಾಗೂ ಮೌಲ್ಯವರ್ಧಿತ ಸಿರಿಧಾನ್ಯ ಉತ್ಪನ್ನಗಳನ್ನು ಒದಗಿಸಲು ನಮ್ಮ ಮಿಲೆಟ್ ಎಂಬ ಹೊಸ ಕಾರ್ಯಕ್ರಮ ಪ್ರಕಟಿಸಿದ್ದಾರೆ.

ಎನ್ ಡಿಎ ಅಭ್ಯರ್ಥಿಯಾಗಿ ಡಾ. ಮಂಜುನಾಥ್ ಸ್ಪರ್ಧೆ

ಕೇಂದ್ರ ಸರ್ಕಾರದ ಜನ ವಿರೋಧಿ ನಿಲುವುಗಳಿಂದಾಗಿ ಅಸಮಾನತೆ ಹೆಚ್ಚಳ, ಕೆಲವೇ ಜನರ ಬಳಿ ಸಂಪತ್ತಿನ ಶೇಖರಣೆ ಹಾಗೂ ಪಟ್ಟಭದ್ರ ಹಿತಾಸಕ್ತಿಗಳ ಹೆಚ್ಚುತ್ತಿರುವ ಪ್ರಭಾವ ಮುಂತಾದ ಅನಪೇಕ್ಷಿತ ಬೆಳವಣಿಗೆಗೆ ಎಡೆ ಮಾಡಿದೆ ಎಂದು ಮುಖ್ಯಮಂತ್ರಿ ತಮ್ಮ ಬಜೆಟ್‌ನಲ್ಲಿ ದಾಖಲಿಸಿದ್ದಾರೆ.

ಕೇಂದ್ರದ ವಿರುದ್ಧ ತಮ್ಮ ಗದಾ ಪ್ರಹಾರವನ್ನು ಮುಂಗಡಪತ್ರದಲ್ಲೂ ಮುಂದುವರೆಸಿ, ಕೇಂದ್ರ ಮಾಡದ ಕೆಲಸವನ್ನು ರಾಜ್ಯ ಸರ್ಕಾರ ಕೈಗೆತ್ತಿಕೊಂಡಿದೆ, ನಾವು ರೂಪಿಸಿದ ಗ್ಯಾರಂಟಿ ಯೋಜನೆಗಳು ಕೇವಲ ಚುನಾವಣಾ ಗಿಮಿಕ್ ಅಲ್ಲ.

ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಸಂಗ್ರಹಿಸಿದ ಜನಭಿಪ್ರಾಯದಿಂದ ಪಂಚ ಯೋಜನೆಗಳು ಅನುಷ್ಟಾನಗೊಂಡಿವೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಸಂಪತ್ತಿನ ಮರು ಹಂಚಿಕೆ

ಇದು ಉದ್ಯೋಗ ಸೃಜಿಸಿ, ಜನರ ಕೊಳ್ಳುವ ಸಾಮರ್ಥ್ಯ ಹೆಚ್ಚಿಸುವುದಾಗಿದೆ, ನಿಷ್ಪಕ್ಷಪಾತ ಮತ್ತು ನ್ಯಾಯಯುತ ಸಮಾಜ ನಿರ್ಮಾಣಕ್ಕಾಗಿ, ಸಂಪತ್ತಿನ ಮರು ಹಂಚಿಕೆ ಮಾಡುವ ಕಾರ್ಯಕ್ರಮಗಳು ಇವಾಗಿವೆ ಎಂದಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiah presents budget in vidhana sabhamost of the scheems depending on central assistenceno new scheemsstate budget-2024-25
1 FacebookTwitterPinterestEmail
KM Shivaraju

previous post
ದಿನ ಭವಿಷ್ಯ : ಶುಕ್ರವಾರ, 16 ಫೆಬ್ರವರಿ 2024
next post
ದಿನ ಭವಿಷ್ಯ : ಶನಿವಾರ, 17 ಫೆಬ್ರವರಿ 2024

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ