Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪಂಚಾಯತ್ ಬಜೆಟ್

by admin February 17, 2024
written by admin February 17, 2024 2 comments 1 minutes read
2FacebookTwitterPinterestEmail
465

ವಾರ್ಷಿಕ ಅನುದಾನದ ಪಕ್ಷಿ ನೋಟ ಜನರಿಗೂ ತಿಳಿಯಲಿ

ಬೆಂಗಳೂರು: ಹಣಕಾಸು ಸಚಿವರು ರಾಜ್ಯ ಬಜೆಟ್ ತಯಾರು ಮಾಡುವ ಮಾದರಿಯಲ್ಲೇ ಗ್ರಾಮ ಪಂಚಾಯತ್‌ಗಳೂ ತಮ್ಮ ವಾರ್ಷಿಕ ಖರ್ಚು-ವೆಚ್ಚಗಳಿಗೆ ಪಂಚಾಯತ್ ಮುಂಗಡಪತ್ರ ಮಂಡಿಸಿ ಅನುಮೋದನೆ ಪಡೆದು ಅಭಿವೃದ್ಧಿ ಕಾರ್ಯಗಳಿಗೆ ಮುಂದಾಗುವಂತೆ ಸರ್ಕಾರ ಆದೇಶ ಮಾಡಿದೆ.

ಈ ಸಂಬಂಧ ಗ್ರಾಮೀಣಾಭಿವೃದ್ಧಿ ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯದ ಎಲ್ಲಾ ಪಂಚಾಯತ್‌ಗಳ ಅಧ್ಯಕ್ಷರಿಗೆ ಪತ್ರ ಬರೆದು, ಕಡ್ಡಾಯವಾಗಿ ಆರ್ಥಿಕ ಸ್ಥಿತಿಗತಿ ಮತ್ತು ಯಾವ ಬಾಬ್ತು, ಎಷ್ಟು ವೆಚ್ಚ ಮಾಡುತ್ತೀರಿ ಎಂಬುದನ್ನು ಬಜೆಟ್‌ನಲ್ಲಿ ಘೋಷಿಸಿ, ಸಾರ್ವಜನಿಕಗೊಳಿಸಬೇಕು ಎಂದಿದ್ದಾರೆ.

ನಾನು ಲೋಕಸಭಾ ಅಭ್ಯರ್ಥಿ ಅಲ್ಲ

ರಾಜ್ಯದ ಗಮನಕ್ಕೂ ಬಾರದೆ ಕೇಂದ್ರ ಸರ್ಕಾರ ನೇರವಾಗಿ ನಿಮ್ಮ ಕೆಲವು ಯೋಜನೆಗಳಿಗೆ ಆರ್ಥಿಕ ನೆರವು ನೀಡುತ್ತದೆ, ಇದಲ್ಲದೆ, ರಾಜ್ಯವೂ ವಾರ್ಷಿಕ ಹಣ ನಿಗದಿಪಡಿಸಿದೆ.

ಇದೆಲ್ಲದಕ್ಕೂ ಮಿಗಿಲಾಗಿ ಸ್ಥಳೀಯವಾಗಿ ನೀವು ಸಂಗ್ರಹಿಸುವ ಸಂಪನ್ಮೂಲವೂ ಸೇರಿದಂತೆ ಎಲ್ಲವನ್ನೂ ಕ್ರೂಡೀಕರಿಸಿ ಬಜೆಟ್ ಸಿದ್ಧಪಡಿಸಿ.

ಕೆಲವು ಪಂಚಾಯತ್‌ಗಳಲ್ಲಿ ಆರ್ಥಿಕ ಶಿಸ್ತು ಇಲ್ಲದಿರುವುದು ಲೆಕ್ಕ ಪರಿಶೋಧನಾ ವರದಿಗಳಿಂದ ತಿಳಿದುಬಂದಿದೆ. ಅಧಿಕಾರ ವಿಕೇಂದ್ರೀಕರಣ ದೃಷ್ಟಿಯಿಂದ ಮೂರು ಹಂತದ ಆಡಳಿತವನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದ್ದರೂ, ನೀವು ಆರ್ಥಿಕ ಶಿಸ್ತಿನಲ್ಲಿ ಎಡವುತ್ತಿದ್ದೀರಿ.

ಸ್ಥಳೀಯ ಅಭಿವೃದ್ಧಿ ಸೇರಿದಂತೆ ಯಾವುದೇ ಆಡಳಿತಾತ್ಮಕ ವಿಷಯಗಳು ನಿಮ್ಮ ಗಮನಕ್ಕೆ ಮತ್ತು ಅನುಮೋದನೆಗೆ ಬರುತ್ತವೆ, ವಾರ್ಷಿಕ ಅನುದಾನದಲ್ಲಿ ನೀವು ಮುಂದೇನು ಮಾಡುತ್ತೀರಿ ಎಂಬ ಪಕ್ಷಿ ನೋಟ ನಿಮ್ಮ ಪಂಚಾಯತ್ ವ್ಯಾಪ್ತಿಯ ಜನರಿಗೂ ಮತ್ತು ಇಲಾಖೆಗೂ ತಿಳಿಯಬೇಕಿದೆ.

ಸಂಪನ್ಮೂಲಕ್ಕೆ ತಕ್ಕಂತೆ ಅಭಿವೃದ್ಧಿ ಕಾರ್ಯ

ಗುರಿಯಿಟ್ಟುಕೊಂಡು ಸಂಪನ್ಮೂಲವನ್ನು ಕ್ರೋಡೀಕರಿಸಿ ಮತ್ತು ಅದಕ್ಕೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಂಡು ಹಣ ವೆಚ್ಚ ಮಾಡಿ.

ಇದನ್ನು ಬಿಟ್ಟು ಒತ್ತಡ, ಬಲವಂತಕ್ಕೆ ಮಣಿದು ಹಣ ದುರುಪಯೋಗ ಆಗುವುದು ಬೇಡ. ನಿಮ್ಮ ಖಜಾನೆಯ ಮಾಹಿತಿ ಸಾರ್ವಜನಿಕರಿಗೆ ತಿಳಿದರೆ, ಅವರು ಸ್ಥಳೀಯ ಸಮಸ್ಯೆಗಳನ್ನು ಹೇಳಿಕೊಂಡು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತದೆ.

ಇನ್ನು ಮುಂದೆ ಬಜೆಟ್ ಮಂಡನೆ ಕಡ್ಡಾಯ

ರಾಜ್ಯ ಸರ್ಕಾರ ಹೇಗೆ ತನ್ನ ಆರ್ಥಿಕ ಸ್ಥಿತಿಗತಿಗಳನ್ನು ಜನರ ಮುಂದಿಟ್ಟು ಖರ್ಚು-ವೆಚ್ಚಗಳನ್ನು ತೋರಿಸುತ್ತದೆಯೋ ಅದೇ ರೀತಿ ನೀವು ಇನ್ನು ಮುಂದೆ ಕಡ್ಡಾಯವಾಗಿ ಮಾಡಬೇಕು ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಮಾದರಿಯಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳೂ ಬಜೆಟ್ ಸಿದ್ಧಪಡಿಸಿ ಗ್ರಾಮಸಭೆಯಲ್ಲಿ ಅನುಮೋದನೆ ಪಡೆದುಕೊಳ್ಳಬೇಕು.

ಮುಂದಿನ ಆರ್ಥಿಕ ವರ್ಷದಲ್ಲಿ ವಿವಿಧ ಬಾಬ್ತುಗಳಡಿ ಲಭ್ಯವಾಗುವ ಅನುದಾನ ಹಾಗೂ ಕೈಗೊಳ್ಳಬೇಕಾದ ಅಭಿವೃದ್ಧಿ ಯೋಜನೆ ಒಳಗೊಂಡಂತೆ ಗ್ರಾಮ ಪಂಚಾಯತ್ ಆಯವ್ಯಯ (ಪಂಚಾಯತ್ ಬಜೆಟ್) ಕಡ್ಡಾಯವಾಗಿ ತಯಾರಿಸಿ ಮಾರ್ಚ್ 10ರೊಳಗೆ ಗ್ರಾಮ ಪಂಚಾಯತ್ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳಬೇಕು, ಪಂಚಾಯತ್‌ಗಳು ಬಜೆಟ್ ಮಂಡಿಸುವುದು ಕಡ್ಡಾಯವಾಗಿರುತ್ತದೆ. 

ಗ್ರಾಮ ಪಂಚಾಯತ್‌ಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ನೀಡುವ ಶಾಸನಬದ್ಧ ಅನುದಾನ, ವಿವಿಧ ಯೋಜನೆಗಳಡಿ ದೊರೆಯುವ ಅನುದಾನದ ಜೊತೆಗೆ ಸ್ವಂತ ಸಂಪನ್ಮೂಲ ಸಂಗ್ರಹಿಸಲು ಅವಕಾಶವಿರುವುದರಿಂದ ಎಲ್ಲ ಮೂಲಗಳನ್ನು ಕ್ರೋಡೀಕರಿಸಿ ಗ್ರಾಮ ಪಂಚಾಯತ್ ಸಭೆಯಲ್ಲಿ ಅನುಮೋದನೆ ಪಡೆದು ತಾಲ್ಲೂಕು ಪಂಚಾಯತ್‌ಗೆ ಕಳುಹಿಸಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
letters to panchayat presidentspanchayat budgetPriyank Kharge
2 FacebookTwitterPinterestEmail
admin

previous post
ನಾನು ಲೋಕಸಭಾ ಅಭ್ಯರ್ಥಿ ಅಲ್ಲ
next post
ದಿನ ಭವಿಷ್ಯ : ಭಾನುವಾರ, 18 ಫೆಬ್ರವರಿ 2024

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ