ಬೆಂಗಳೂರು:ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಏಪ್ರಿಲ್ 6 ರೊಳಗೆ ಪೂರ್ಣಗೊಳಿಸಲು ಸರ್ಕಾರ ಅಂತಿಮ ವೇಳಾಪಟ್ಟಿ ಪ್ರಕಟಿಸಿದೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿಂದು ವೇಳಾಪಟ್ಟಿ ಪ್ರಕಟಿಸಿ, ನ್ಯಾಯಾಲಯದ ನಿರ್ದೇಶನದಂತೆ ಸಮವಸ್ತ್ರ ನಿಯಮ ಪಾಲನೆ ಮಾಡುವುದಾಗಿ ಸ್ಪಷ್ಟಪಡಿಸಿದರು.
ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ ಒಂದರಿಂದ 22 ರವರೆಗೆ, ಎಸ್ಎಸ್ಎಲ್ಸಿ ಪರೀಕ್ಷೆ ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ನಡೆಯಲಿದೆ.
ಈ ವರ್ಷ ರಾಜ್ಯದಲ್ಲಿ 8,96,271 ಮಕ್ಕಳು ಎಸ್ಎಸ್ಎಲ್ಸಿ, 6,98,624 ಮಕ್ಕಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಾರೆ. ಒಟ್ಟಾರೆ 2,741 ಪರೀಕ್ಷಾ ಕೇಂದ್ರಗಳಿರುತ್ತವೆ.
ಎಸ್ಎಸ್ಎಲ್ಸಿಯಲ್ಲಿ 20 ಅಂಕಗಳಿಗೆ ಆಂತರಿಕ ಪರೀಕ್ಷೆ ನಡೆಯಲಿದೆ, ಇನ್ನು ದ್ವಿತೀಯ ಪಿಯುಸಿ ಪರೀಕ್ಷೆ ಕಳೆದ ವರ್ಷದಂತೆ 80-20 ಅಂಕಗಳ ಮಾದರಿಯಲ್ಲಿರುತ್ತದೆ.
ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ, ಇನ್ನುಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ ಎಂದರು.
ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಪ್ರಮುಖ ಘಟ್ಟವಾಗಿರುವ ಎರಡೂ ಪರೀಕ್ಷೆಗಳ ಫಲಿತಾಂಶ ಏಪ್ರಿಲ್ ಕೊನೆ ವಾರದಲ್ಲಿ ಪ್ರಕಟಗೊಳ್ಳಲಿದೆ ಎಂದರು.
ಎಸ್ಎಸ್ಎಲ್ಸಿ ಪರೀಕ್ಷೆ ವೇಳಾಪಟ್ಟಿ:
25-03-2024 ರ ಸೋಮವಾರ ಪ್ರಥಮ ಭಾಷೆ ಪರೀಕ್ಷೆ-ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, +ಇಂಗ್ಲಿಷ್ (ಎನ್ಸಿಇಆರ್ಟಿ).
27-03-2024 ರಂದು ಸಮಾಜ ವಿಜ್ಞಾನ ಪರೀಕ್ಷೆ, 30-03-2024 ರಂದು, ವಿಜ್ಞಾನ, ರಾಜ್ಯಶಾಸ್ತ್ರ ಪರೀಕ್ಷೆ, 02-04-2024 ರಂದು ಗಣಿತ, ಸಮಾಜ ಶಾಸ್ತ್ರ ಪರೀಕ್ಷೆ, 03-04-2024 ಅರ್ಥಶಾಸ್ತ್ರ ಪರೀಕ್ಷೆ.
ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರ ವರೆಗೆ ಪರೀಕ್ಷೆ ನಡೆಯಲಿದೆ.
ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ:
01-03-2024 ರ ಶುಕ್ರವಾರ ಕನ್ನಡ ಹಾಗೂ ಅರೇಬಿಕ್ ಪರೀಕ್ಷೆ, 04-03-2024 ಸೋಮವಾರ ಗಣಿತ ಪರೀಕ್ಷೆ, 05-03-2024 ರಂದು ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ, 06-03-2024 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್ ಪರೀಕ್ಷೆ.
07-03-2024 ರಂದು ಇತಿಹಾಸ ಹಾಗೂ ಭೌತಶಾಸ್ತ್ರ ಪರೀಕ್ಷೆ, 09-03-2024 ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ ಪರೀಕ್ಷೆ, 11-03-2024 ರಂದು ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ ಪರೀಕ್ಷೆ, 13-03-2024 ರಂದು ಇಂಗ್ಲಿಷ್ ಪರೀಕ್ಷೆ.
15-03-2024 ರಂದು ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ ಪರೀಕ್ಷೆ, 16-03-2024 ರಂದು ಅರ್ಥಶಾಸ್ತ್ರ ಪರೀಕ್ಷೆ, 18-03-2024 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ.
20-03-2024 ರಂದು ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ ಪರೀಕ್ಷೆ, 22-03-2024 ರಂದು ಹಿಂದಿ ಪರೀಕ್ಷೆ.
ಪರೀಕ್ಷೆ ಬೆಳಗ್ಗೆ 10.15ಕ್ಕೆ ಆರಂಭವಾಗಿ 1.30ಕ್ಕೆ ಮುಕ್ತಾಯವಾಗಲಿದೆ.