Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಅಂಕಣರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ರಾಜ್ಯಸಭಾ ಚುನಾವಣೆ: ರೆಸಾರ್ಟ್‌ಗೆ ಕಾಂಗ್ರೆಸ್ ಶಾಸಕರು!

by KM Shivaraju February 22, 2024
written by KM Shivaraju February 22, 2024 1 comment 2 minutes read
1FacebookTwitterPinterestEmail
380

ಬಿಜೆಪಿ-ಜೆಡಿಎಸ್ ತಂತ್ರಗಾರಿಕೆ ಭಯ

ಬೆಂಗಳೂರು:ರಾಜ್ಯಸಭಾ ಚುನಾವಣಾ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಎಲ್ಲಾ ಸದಸ್ಯರನ್ನು ನಗರದ ಹೊರವಲಯದ ಐಷಾರಾಮಿ ರೆಸಾರ್ಟ್ ಒಂದಕ್ಕೆ ಸ್ಥಳಾಂತರಿಸಲಾಗುತ್ತಿದೆ.

ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಗೆ ಕಾಂಗ್ರೆಸ್‌ನಿಂದ ಕಣಕ್ಕಿಳಿದಿರುವ ಮೂವರು ಅಭ್ಯರ್ಥಿಗಳ ಗೆಲುವಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಕ್ಷದ ಶಾಸಕರನ್ನು ರೆಸಾರ್ಟ್‌ನಲ್ಲಿ ಹಿಡಿದಿಡುವ ತೀರ್ಮಾನಕ್ಕೆ ಬಂದಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರನ್ನು ದೆಹಲಿಗೆ ಕರೆಸಿಕೊಂಡು ಇಂದು ಚರ್ಚೆ ಮಾಡಿದ ಬೆನ್ನಲ್ಲೇ ಕಾಂಗ್ರೆಸ್ ಈ ತೀರ್ಮಾನಕ್ಕೆ ಬಂದಿದೆ.

ಅಡ್ಡ ಮತದಾನ !

ಬಿಜೆಪಿ ಹಾಗೂ ಜೆಡಿಎಸ್ ತಮಗೆ ಸಾಮರ್ಥ್ಯ ಇಲ್ಲ ಎಂದು ಅರಿತಿದ್ದರೂ ಎರಡನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಡ್ಡ ಮತದಾನ ಮಾಡಿಸಿ, ಎರಡು ಸ್ಥಾನಗಳನ್ನು ಗೆಲ್ಲುವ ಲೆಕ್ಕಾಚಾರದಲ್ಲಿದೆ.

ಅಡ್ಡ ಮತದಾನಕ್ಕೆ ತಮ್ಮ ಶಾಸಕರಿಗೆ ಅವಕಾಶ ನಿಡಬಾರದು ಮತ್ತು ವಿರೋಧಿಗಳು ತಮ್ಮ ಸದಸ್ಯರನ್ನು ಬಲೆಗೆ ಹಾಕಿಕೊಳ್ಳಬಾರದು ಎಂಬ ಉದ್ದೇಶದಿಂದ ರೆಸಾರ್ಟ್ ರಾಜಕೀಯಕ್ಕೆ ಮೊರೆ ಹೋಗಿದ್ದಾರೆ.

ಪ್ರಸಕ್ತ ಬಜೆಟ್ ಅಧಿವೇಶನ ನಾಳೆ ಅಂತಿಮಗೊಳ್ಳಲಿದೆ, ಶುಕ್ರವಾರ ಸಂಜೆಯಿಂದಲೇ ಶಾಸಕರನ್ನು ಹಿಡಿದಿಟ್ಟುಕೊಳ್ಳಬೇಕೆಂಬ ಚರ್ಚೆಯೂ ನಡೆದಿತ್ತು.

ಸದನ ಮುಗಿದ ಬಳಿಕ ಶಾಸಕರು ಊರಿಗೆ

ಹಿರಿಯ ಶಾಸಕರ ಸಲಹೆ ಮೇರೆಗೆ ಸದನ ಮುಗಿದ ಬಳಿಕ ಶಾಸಕರು ತಮ್ಮ ಊರಿಗೆ ತೆರಳಲಿ, ಸೋಮವಾರ ನಡೆಯುವ ಪಕ್ಷದ ಶಾಸಕರು, ಮುಖಂಡರ ಸಭೆಯಲ್ಲಿ ಭಾಗವಹಿಸುವಂತೆ ಕಡ್ಡಾಯವಾಗಿ ಸೂಚಿಸಲಾಗಿದೆ.

ಕಾಂಗ್ರೆಸ್ ಕಚೇರಿಯಲ್ಲಿ ನಡೆಯುವ ಸಭೆ ನಂತರ ಎಲ್ಲಾ ಶಾಸಕರನ್ನು ರೆಸಾರ್ಟ್‌ಗೆ ಕರೆದುಕೊಂಡು ಹೋಗಿ, ರಾತ್ರಿ ಅಲ್ಲೇ ತಂಗಿದ್ದು, ಮರುದಿನ ಅಂದರೆ ಫೆಬ್ರವರಿ 27 ರ ಬೆಳಗ್ಗೆ ಮತಗಟ್ಟೆಗೆ ಕರೆತರಲಿದ್ದಾರೆ.

ಅಂದಿನ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸುತ್ತಿಲ್ಲ, ಕೆಪಿಸಿಸಿ ಅಧ್ಯಕ್ಷರಾಗಿರುವ ಉಪಮುಖ್ಯಮಂತ್ರಿ ಅವರೇ ಸಭೆ ನಡೆಸಿ ಅವರ ನಾಯಕತ್ವದಲ್ಲೇ ಶಾಸಕರನ್ನು ರೆಸಾರ್ಟ್‌ಗೆ ಕರೆದೊಯ್ಯಲಿದ್ದಾರೆ.

ರೆಸಾರ್ಟ್‌ನಲ್ಲೇ ತಮ್ಮ ಪಕ್ಷದ ಯಾವ ಅಭ್ಯರ್ಥಿಗಳಿಗೆ ಯಾವ ಶಾಸಕರು ಮತ ಚಲಾಯಿಸಬೇಕೆಂಬ ಬಗ್ಗೆಯೂ ವಿಪ್ ನೀಡುವುದಲ್ಲದೆ, ಮಾದರಿ ಮತಪತ್ರವನ್ನು ನೀಡಿ, ವಿವರಿಸಲಿದ್ದಾರೆ.

ಸರ್ಕಾರಿ ಶಾಲೆಯ 55 ಲಕ್ಷ ಮಕ್ಕಳಿಗೆ ರಾಗಿ ಮಾಲ್ಟ್

ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕನಿಷ್ಠ 45 ಮತಗಳ ಅಗತ್ಯವಿದ್ದು, ತಮ್ಮ ಮೂವರು ಅಭ್ಯರ್ಥಿಗಳಿಗೂ ತಲಾ 46 ಮತಗಳನ್ನು ಹಂಚಿ ವಿಪ್ ನೀಡಲಿದ್ದಾರೆ. ರೆಸಾರ್ಟ್‌ನಿಂದ ಪ್ರತ್ಯೇಕವಾಗಿ ಮೂರು ಗುಂಪುಗಳಾಗಿ ಮತಗಟ್ಟೆಗೆ ಧಾವಿಸಿ ಮತ ಚಲಾಯಿಸುವ ವ್ಯವಸ್ಥೆಯನ್ನು ಕಾಂಗ್ರೆಸ್ ಮಾಡಿದೆ.

ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಸ್ಪಷ್ಟ ಸಂಖ್ಯಾಬಲವಿದೆ, ಬಿಜೆಪಿ ತನ್ನ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು 45 ಮತಗಳನ್ನು ನಿಗದಿ ಮಾಡಿದ ನಂತರ ಉಳಿಯುವ 21 ಮತಗಳನ್ನು ಎನ್‌ಡಿಎ ಕೂಟದ ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿಗೆ ಹಂಚಲಿದ್ದಾರೆ. ಜೆಡಿಎಸ್‌ನ ೧೯ ಮತಗಳು ಜೊತೆಗೆ ಬಿಜೆಪಿಯ 21 ಸೇರಿ 40 ಮತಗಳಾಗಲಿವೆ.

ರೆಡ್ಡಿ ಗೆಲುವಿಗೆ ಇನ್ನೂ ಐದು ಮತಗಳ ಅಗತ್ಯವಿದೆ, ಇವುಗಳನ್ನು ಪಡೆಯಲು ಪಕ್ಷೇತರರು ಮತ್ತು ಕಾಂಗ್ರೆಸ್ ಬುಟ್ಟಿಗೆ ಬಿಜೆಪಿ-ಜೆಡಿಎಸ್ ಕೈಹಾಕಿದೆ.

ಚುನಾವಣೆಗೆ ಸಂಬಂಧಿಸಿದಂತೆ ಕುಮಾರಸ್ವಾಮಿ ಜೊತೆಗೆ ಅಮಿತ್ ಷಾ ಚರ್ಚೆ ನಡೆಸಿರುವುದು ಹಾಗೂ ಬಿಜೆಪಿ-ಜೆಡಿಎಸ್ ಜಂಟಿಯಾಗಿ ತಮ್ಮ ಶಾಸಕರನ್ನು ಸೆಳೆಯಬಹುದೆಂಬ ಸುಳಿವಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ರೆಸಾರ್ಟ್ ರಾಜಕೀಯಕ್ಕೆ ಮೊರೆ ಹೋಗಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
congres mla's to be shifted to resartdk shivakumar takes the leadresart politicssiddaramaiah agrees to the plan
1 FacebookTwitterPinterestEmail
KM Shivaraju

previous post
ಸರ್ಕಾರಿ ಶಾಲೆಯ 55 ಲಕ್ಷ ಮಕ್ಕಳಿಗೆ ರಾಗಿ ಮಾಲ್ಟ್
next post
ಡಾ.ಮಂಜುನಾಥ್ ಸ್ಪರ್ಧೆಗೆ ಷಾ ಗ್ರೀನ್ ಸಿಗ್ನಲ್

You may also like

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (484)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,978)
  • ರಾಜ್ಯ (2,292)
  • ರಾಷ್ಟ್ರ (2,260)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026

KMS Special

  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ