Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಡಾ.ಮಂಜುನಾಥ್ ಸ್ಪರ್ಧೆಗೆ ಷಾ ಗ್ರೀನ್ ಸಿಗ್ನಲ್

by admin February 22, 2024
written by admin February 22, 2024 1 comment 2 minutes read
2FacebookTwitterPinterestEmail
398

ಜೆಡಿಎಸ್ ಗೆ ಹಾಸನ, ಮಂಡ್ಯ, ಕೋಲಾರ ಕ್ಷೇತ್ರಗಳು

ಬೆಂಗಳೂರು: ಜಯದೇವ ಹೃದ್ರೋಗ ಸಂಸ್ಥೆಯ ನಿವೃತ್ತ ನಿದೇರ್ಶಕ ಡಾ.ಸಿ.ಎನ್. ಮಂಜುನಾಥ್ ಅವರನ್ನು ಲೋಕಸಭಾ ಚುನಾವಣಾ ಕಣಕ್ಕಿಳಿಸಲು ಕೇಂದ್ರ ಗೃಹ ಸಚಿವ ಅಮಿತ್ ಷಾ ಹಸಿರು ನಿಶಾನೆ ತೋರಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಂಟುಂಬಕ್ಕೆ ಸೇರಿದ ಮಂಜುನಾಥ್ ಅವರನ್ನು ಬಿಜೆಪಿ ಚಿನ್ಹೆಯಡಿ ಬೆಂಗಳೂರು ಗ್ರಾಮಾಂತರ ಇಲ್ಲವೆ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ನಿರ್ಧರಿಸಲಾಗಿದೆ.
ಮಂಜುನಾಥ್ ಅವರನ್ನು ಕಣಕ್ಕಿಳಿಸುತ್ತಿರುವುದರಿಂದ ಜೆಡಿಎಸ್‌ಗೆ ನಾಲ್ಕು ಸ್ಥಾನಗಳ ಬದಲು ಮಂಡ್ಯ, ಹಾಸನ, ಕೋಲಾರ ಕ್ಷೇತ್ರ ಬಿಟ್ಟುಕೊಡುವ ನಿರ್ಧಾರವಾಗಿದೆ.
ದೆಹಲಿಯಲ್ಲಿಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಜೊತೆ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನಡೆಸಿದ ಮಾತುಕತೆ ಸಂದರ್ಭದಲ್ಲಿ ಸೀಟು ಹಂಚಿಕೆ ಸೇರಿದಂತೆ ಕರ್ನಾಟಕದಲ್ಲಿನ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ಜೆಡಿಎಸ್ ಮತ್ತೊಂದು ಕ್ಷೇತ್ರ ನೀಡುವ ಭರವಸೆ

ಚಿಕ್ಕಬಳ್ಳಾಪುರ ಇಲ್ಲವೆ ಹೈದರಾಬಾದ್ ಕರ್ನಾಟಕದಲ್ಲಿ ಮತ್ತೊಂದು ಸ್ಥಾನವನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ಷಾ ಸಮ್ಮತಿಸಿದ್ದು, ಇದು ಲೋಕಸಭಾ ಚುನಾವಣಾ ವೇಳಾಪಟ್ಟಿ ಪ್ರಕಟಗೊಂಡ ನಂತರ ಜೆಡಿಎಸ್‌ಗೆ ನಾಲ್ಕನೇ ಕ್ಷೇತ್ರ ಯಾವುದು ಎಂಬುದು ಅಂತಿಮಗೊಳ್ಳಲಿದೆ.
ಕೇಂದ್ರ ಗೃಹ ಸಚಿವ ಅಮಿತಾ ಷಾ ಅವರ ಆಹ್ವಾನದ ಮೇರೆಗೆ ನಿನ್ನೆ ದೆಹಲಿಗೆ ತೆರಳಿದ್ದ ಕುಮಾರಸ್ವಾಮಿ ಇಂದು ಸುಮಾರು 20 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ.
ಅಲ್ಲದೆ, ನಿನ್ನೆ ರಾತ್ರಿ ಕೂಡಾ ಉಭಯ ನಾಯಕರು ಚರ್ಚೆ ಮಾಡಿದ್ದರು. ಇಂದು ಎರಡನೇ ಬಾರಿ ಮಾತುಕತೆ ನಡೆಸಿ ಸೀಟು ಹಂಚಿಕೆ ಅಂತಿಮಗೊಳಿಸಿದ್ದಾರೆ.
ಮಂಜುನಾಥ್ ಅವರನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದಲೇ ಕಣಕ್ಕಿಳಿಸಲು ಷಾ ಆಸಕ್ತಿ ತೋರಿರುವ ಜೊತೆಗೆ ಬೆಂಗಳೂರು ಉತ್ತರ ಕ್ಷೇತ್ರದ ಬಗ್ಗೆ ಮುಂದೆ ಪರಿಗಣಿಸೋಣ ಎಂದಿದ್ದಾರೆ.
ಮಂಡ್ಯ, ಹಾಸನಕ್ಕೆ ಸಂಬಂಧಿಸಿದಂತೆ ಯಾರು ಏನೇ ಹೇಳಿದರೂ ಇದೇ ಅಂತಿಮ. ನಿಮ್ಮ ಮೂರು ಕ್ಷೇತ್ರಗಳಲ್ಲಿ ಚುನಾವಣಾ ಸಿದ್ಧತೆ ನಡೆಸಿ ಎಂದು ಅಮಿತ್ ಷಾ, ಕುಮಾರಸ್ವಾಮಿ ಅವರಿಗೆ ಸೂಚಿಸಿದ್ದಾರೆ.

ಎನ್ ಡಿಎ ಅಭ್ಯರ್ಥಿಯಾಗಿ ಡಾ. ಮಂಜುನಾಥ್ ಸ್ಪರ್ಧೆ

ಚರ್ಚೆ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಮುಖಂಡರ ನಡುವಿನ ಗೊಂದಲದ ಬಗ್ಗೆ ಷಾ ಮಾಹಿತಿ ಪಡೆದು ಕೆಲವು ಸಲಹೆಗಳನ್ನು ನೀಡಿದ್ದಾರೆನ್ನಲಾಗಿದೆ.
ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಎನ್‌ಡಿಎಯ ಎರಡನೇ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕುಪೇಂದ್ರ ರೆಡ್ಡಿ ಗೆಲುವಿಗೆ ನಿಮ್ಮ ಪ್ರಯತ್ನ ಮುಂದುವರೆಸಿ, ನಾವು ಏನು ಮಾಡಬೇಕೋ ಅದನ್ನು ಮಾಡುತ್ತೇವೆ ಎಂದಿದ್ದಾರೆ.
ಉಳಿದಂತೆ ಚುನಾವಣಾ ಸಿದ್ಧತೆ, ಕಾಂಗ್ರೆಸ್ ಬಲಿಷ್ಠವಾದ ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಯ ಗೆಲುವಿಗೆ ತಂತ್ರ ರೂಪಿಸುವ ಹಾಗೂ ಈ ಕ್ಷೇತ್ರಗಳಲ್ಲಿ ವರ್ಚಸ್ವಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಗ್ಗೆಯೂ ಚರ್ಚೆ ಮಾಡಿದ್ದಾರೆ.

ಜಂಟಿ ಹೋರಾಟ ನಡೆಸಲು ಷಾ ಸೂಚನೆದ

ಮಂಡ್ಯ ಹಾಗೂ ಹಾಸನ ಕ್ಷೇತ್ರಗಳಲ್ಲಿ ಬಿಜೆಪಿಯ ಸ್ಥಳೀಯ ಮುಖಂಡರು ಎತ್ತುತ್ತಿರುವ ಅಪಸ್ವರಗಳನ್ನು ಷಾ ಗಮನಕ್ಕೆ ಕುಮಾರಸ್ವಾಮಿ ತಂದಿದ್ದಾರೆ.
ಅದೆಲ್ಲವನ್ನೂ ನನಗೆ ಬಿಡಿ, ನೀವು ನಿಮ್ಮ ಕೆಲಸ ಮಾಡಿಕೊಳ್ಳಿ, ಮೈತ್ರಿ ಕೂಟದಲ್ಲಿ ಯಾರಿಂದಲೂ, ಯಾರ ಕಡೆಯಿಂದಲೂ ಅಪಸ್ವರ ಬರುವುದು ಬೇಡ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತದ ವೈಫಲ್ಯ ಹಾಗೂ ಅವರ ಮಂತ್ರಿಮಂಡಲದ ಕೆಲವು ಸಚಿವರ ವಿರುದ್ಧದ ಭ್ರಷ್ಟಾಚಾರ ಆರೋಪಗಳಿಗೆ ಸಂಬಂಧಿಸಿದಂತೆ ಜಂಟಿಯಾಗಿ ಹೋರಾಟ ನಡೆಸಿ.
ಚುನಾವಣೆಗೆ ಇನ್ನು ಸ್ವಲ್ಪ ದಿನಗಳಷ್ಟೇ ಉಳಿದಿದೆ, ಈಗಿನಿಂದಲೇ ಒಗ್ಗಟ್ಟಿನ ಬಲ ಪ್ರದರ್ಶನ ಮಾಡಿ ಮತಗಳು ಹಂಚಿ ಹೋಗದಂತೆ ನೋಡಿಕೊಳ್ಳಿ.
ನೀವು ಬಲಿಷ್ಠರಿರುವ ಕಡೆ ನಮ್ಮವರು ನಿಮಗೆ ಸಂಪುರ್ಣ ಬೆಂಬಲ ನೀಡಲಿದ್ದಾರೆ, ಅದೇ ರೀತಿ ನೀವು, ನಮ್ಮ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ ಎಂದು ಕುಮಾರಸ್ವಾಮಿ ಅವರಿಗೆ ಷಾ ಕಿವಿಮಾತು ಹೇಳಿದ್ದಾರೆ.


Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Amit ShahcompetitionDr. C.N.Manjunathgreen lightHassanjdsKolar constituenciesLok Sabha pollsmandyaunion home minister
2 FacebookTwitterPinterestEmail
admin

previous post
ರಾಜ್ಯಸಭಾ ಚುನಾವಣೆ: ರೆಸಾರ್ಟ್‌ಗೆ ಕಾಂಗ್ರೆಸ್ ಶಾಸಕರು!
next post
ದಿನ ಭವಿಷ್ಯ : ಶುಕ್ರವಾರ, 23 ಫೆಬ್ರವರಿ 2024

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ