Friday, July 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, July 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜ್ಯ

ದಲಿತ ಉದ್ಯಮಿಗಳಿಗೆ 24.1% ಕೈಗಾರಿಕಾ ಪ್ರದೇಶ ಮೀಸಲು

by admin February 26, 2024
written by admin February 26, 2024 1 comment 1 minutes read
0FacebookTwitterPinterestEmail
212

ಕೆಐಎಡಿಬಿಯಿಂದ ಅಭಿವೃದ್ಧಿಪಡಿಸುವ ಕೈಗಾರಿಕಾ ಪ್ರದೇಶದಲ್ಲಿ

ಬೆಂಗಳೂರು: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಲಿಯಿಂದ ಅಭಿವೃದ್ಧಿಪಡಿಸಲಾಗಿರುವ ಕೈಗಾರಿಕಾ ಪ್ರದೇಶಗಳಲ್ಲಿ ಇನ್ನು ಮುಂದೆ ದಲಿತ ಉದ್ಯಮಿಗಳಿಗೆ ನಿಯಮಾನುಸಾರವಾಗಿ ಶೇ. 24.1ರಷ್ಟು ಜಾಗವನ್ನು ಮೀಸಲಿಡಲಾಗುವುದು. ಈ ವಿಚಾರದಲ್ಲಿ ನಿಯಮಗಳ ಉಲ್ಲಂಘನೆಗೆ ಅವಕಾಶ ಕೊಡುವುದಿಲ್ಲ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

 ಖನಿಜ ಭವನದಲ್ಲಿ ತಮ್ಮನ್ನು ಭೇಟಿಯಾಗಿ ಈ ವಿಚಾರವನ್ನು ಪ್ರಸ್ತಾಪಿಸಿದ ಕರ್ನಾಟಕ ದಲಿತ ಉದ್ದಿಮೆದಾರರ ಸಂಘದ ಕಾರ್ಯಾಧ್ಯಕ್ಷ ಶ್ರೀನಿವಾಸನ್ ನೇತೃತ್ವದ ನಿಯೋಗಕ್ಕೆ ಅವರು ಈ ಭರವಸೆ ನೀಡಿದರು.

ನಿಯೋಗವು ಸಚಿವರ ಬಳಿ ಮಾತನಾಡಿ, `ಕೆಐಎಡಿಬಿ ಅಭಿವೃದ್ಧಿಪಡಿಸುವ ಕೈಗಾರಿಕಾ ಪ್ರದೇಶಗಳಲ್ಲಿ ದಲಿತ ಉದ್ಯಮಗಳಿಗೆ ನಿಯಮಾನುಸಾರ ಶೇ. 24.1ರಷ್ಟು ಜಾಗವನ್ನು ಮೀಸಲಿಡಬೇಕು. ಆದರೆ ವಾಸ್ತವದಲ್ಲಿ ಇದು ಶೇ.16ರಷ್ಟು ಮಾತ್ರ ಜಾರಿಯಲ್ಲಿದೆ. ವಿಶೇಷವಾಗಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ ಜಿಲ್ಲೆಯ 12 ಕೈಗಾರಿಕಾ ಪ್ರದೇಶಗಳಲ್ಲಿ ದಲಿತ ಉದ್ಯಮಿಗಳಿಗೆ 653 ಎಕರೆ ಜಾಗ ಕೊಡುವುದು ಬಾಕಿ ಇದೆ ಎಂದು ಶ್ರೀನಿವಾಸ ಅವರು ಸಚಿವರ ಗಮನಕ್ಕೆ ತಂದರು.

ಹಾಲಿ ಬಿಜೆಪಿ ಸಂಸದರಿಗೆ ಲೋಕಸಭಾ ಟಿಕೆಟ್!

ಇದಕ್ಕೆ ಸ್ಪಂದಿಸಿದ ಸಚಿವರು, ಈಗಾಗಲೇ ಉದ್ದಿಮೆಗಳು ನೆಲೆಯೂರಿರುವ ಕೈಗಾರಿಕಾ ಪ್ರದೇಶಗಳಲ್ಲಿ ಏನನ್ನೂ ಮಾಡುವ ಸ್ಥಿತಿಯಲ್ಲಿಲ್ಲ. ಆದರೆ, ಅಕ್ಕಪಕ್ಕದ ಕೈಗಾರಿಕಾ ಪ್ರದೇಶಗಳಲ್ಲಿ ದಲಿತ ಉದ್ಯಮಿಗಳಿಗೆ ಶೇ. 24.1ರಷ್ಟು ಜಾಗವನ್ನು ಮೀಸಲಿಡಲಾಗುವುದು. ಈ ವಿಷಯದಲ್ಲಿ ಸರ್ಕಾರದ ಬದ್ಧತೆಯ ಬಗ್ಗೆ ಅನುಮಾನ ಬೇಡ. ಅಧಿಕಾರಿಗಳಿಗೆ ಈ ಬಗ್ಗೆ ತಕ್ಷಣವೇ ಸೂಚನೆ ಕೊಡಲಾಗುವುದು. ಜತೆಗೆ ನಿಮ್ಮ ಸಂಘದ ಜೊತೆ ಇನ್ನೊಂದು ಸುತ್ತಿನ ಸಭೆ ನಡೆಸಲಾಗುವುದು ಎಂದು ಆಶ್ವಾಸನೆ ನೀಡಿದರು.

ಯುವಜನರಿಗೆ ಯುವನಿಧಿ ಜೊತೆ ಉದ್ಯೋಗ ಸೃಷ್ಟಿ

ದಲಿತ ಉದ್ಯಮಿಗಳಿಗೆ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಅನ್ಯಾಯವಾಗಿಲ್ಲ. ಹಿಂದಿನ ಸರ್ಕಾರಗಳ ಅವಧಿಯಲ್ಲಿ ಈ ಸಮಸ್ಯೆ ಉಂಟಾಗಿದೆ. ನಮ್ಮ ಸರ್ಕಾರವು ದಲಿತರ ಪರವಾಗಿದೆ. ಇದಕ್ಕೆ ತಕ್ಕಂತೆ ಮುಂದಿನ ಹೆಜ್ಜೆ ಇಡಲಾಗುವುದು ಎಂದು ಅವರು ನುಡಿದರು.

ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಕೆಐಎಡಿಬಿ ಸಿಇಒ ಡಾ.ಮಹೇಶ್, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜ ಉಪಸ್ಥಿತರಿದ್ದರು.

 

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
as per normsAssuresDalit EntrepreneursHeavy and MediumIndustrial AreasIndustries Ministermb patilreservation
0 FacebookTwitterPinterestEmail
admin

previous post
ಹಾಲಿ ಬಿಜೆಪಿ ಸಂಸದರಿಗೆ ಲೋಕಸಭಾ ಟಿಕೆಟ್!
next post
ಅದೃಷ್ಟದ ಫಲಿತಾಂಶ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ