Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

7ನೇ ವೇತನ ಆಯೋಗ: ಅಂತಿಮ ವರದಿ ನಂತರ ಸೂಕ್ತ ತೀರ್ಮಾನ

by admin February 27, 2024
written by admin February 27, 2024 1 comment 2 minutes read
1FacebookTwitterPinterestEmail
435

ಬೆಂಗಳೂರು:ಪಂಚಗ್ಯಾರಂಟಿಗಳನ್ನು ಜಾರಿ ಮಾಡುವ ಆರ್ಥಿಕ ಹೊರೆಯ ನಡುವೆಯೂ 7ನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ಬಗ್ಗೆ ಸಕಾರಾತ್ಮಕವಾಗಿ ತೀರ್ಮಾನವನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಪ್ರಕಟಿಸಿದ್ದಾರೆ.

ಅರಮನೆ ಆವರಣದಲ್ಲಿ ರಾಜ್ಯ ಮಟ್ಟದ ಸರ್ಕಾರಿ ನೌಕರರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ನಿರ್ಧರಿಸಿದಂತೆ ತುಟ್ಟಿಭತ್ಯೆಯನ್ನು ಯಾವುದೇ ವಿಳಂಬವಿಲ್ಲದೇ ರಾಜ್ಯದಲ್ಲಿ ನೀಡಲಾಗುತ್ತಿದೆ. ಎನ್‌ಪಿಎಸ್ ತೆಗೆದು ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿ ಮಾಡುವ ಬಗ್ಗೆಯೂ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಆರೋಗ್ಯ ಸಂಜೀವಿನಿ ಯೋಜನೆ

ಸರ್ಕಾರಿ ನೌಕರರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿ ಮಾಡುವ ಬಗ್ಗೆಯೂ ಶೀಘ್ರದಲ್ಲಿ ತೀರ್ಮಾನಿಸಲಾಗುವುದು ಎಂದ ಮುಖ್ಯಮಂತ್ರಿಗಳು ಸರ್ಕಾರ ಮತ್ತು ಜನರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುವ ಜವಾಬ್ದಾರಿಯುತ ಕೆಲಸವನ್ನು ಪರಿಣಾಮಕಾರಿಯಾಗಿ ಮಾಡುತ್ತಿರುವ ಸರ್ಕಾರಿ ನೌಕರರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ 7.50 ಲಕ್ಷ ಸರ್ಕಾರಿ ನೌಕರರಿದ್ದಾರೆ. ಅದರಲ್ಲಿ 5.90 ಲಕ್ಷ ಜನ ಹಾಲಿ ಕೆಲಸ ಮಾಡುತ್ತಿದ್ದಾರೆ. 2.50 ಲಕ್ಷ ಜನರನ್ನು ಭರ್ತಿ ಮಾಡಲು ಸಾಧ್ಯವಾಗಿಲ್ಲ. ಕರ್ನಾಟಕದ ಜನಸಂಖ್ಯೆ 7 ಕೋಟಿ ಇದೆ. 7.50 ಲಕ್ಷ ಮಂಜೂರಾಗಿರುವ ಹುದ್ದೆಗಳಿವೆ. 7 ಲಕ್ಷ ಜನ 7 ಕೋಟಿ ಜನರ ಕಷ್ಟ ಸುಖಗಳಲ್ಲಿ ಭಾಗಿಯಾಗುವ, ರಾಜ್ಯದ ಅಭಿವೃದ್ಧಿಯಲ್ಲಿ ಬಾಗಿಯಾಗುವ ಪ್ರಾಮಾಣಿಕ ಪ್ರಯತ್ನವನ್ನು ಮಾಡಬೇಕು ಎಂದು ಕರೆ ನೀಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ನಮ್ಮನ್ನು 5 ವರ್ಷಕ್ಕೊಮ್ಮೆ ಆಯ್ಕೆ ಮಾಡಿದರೆ, ಸರ್ಕಾರಿ ಸೇವೆಗೆ ಸೇರಿದ ಮೇಲೆ ನಿವೃತ್ತಿಯಾಗುವವರೆಗೆ ನವೀಕರಣ ಮಾಡಿಸಿಕೊಳ್ಳುವ ಪ್ರಮೇಯವಿಲ್ಲ. ರಾಜಕಾರಣಿಗಳು 5 ವರ್ಷಕ್ಕೊಮ್ಮೆ ಕರ್ನಾಟಕದ ಜನರ ಆಶೀರ್ವಾದವನ್ನು ನವೀಕರಿಸಿಕೊಳ್ಳಬೇಕು ಎಂದರು.

ಸಾಮಾಜಿಕ, ಆರ್ಥಿಕ ಸಮಾನತೆ

ರಾಜ್ಯದ ಜನ ನನಗೆ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗುವ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ. ಅದರಲ್ಲಿ ನೀವೂ, ನಿಮ್ಮ ಕುಟುಂಬದವರೂ ಇದ್ದಾರೆ. 7 ಕೋಟಿ ಕನ್ನಡಿಗರ ಭಾಗವಾದ ಸರ್ಕಾರಿ ನೌಕಕರು, ಸಾಮಾಜಿಕ ವ್ಯವಸ್ಥೆಯನ್ನು ಅರ್ಥ ಮಾಡಿಕೊಂಡಿದ್ದೀರಿ ಎಂದು ಭಾವಿಸಿದ್ದೇನೆ. ನಮ್ಮ ಸಮಾಜದಲ್ಲಿ ಸಾಮಾಜಿಕ, ಆರ್ಥಿಕ ಸಮಾನತೆ ತರಬೇಕು. ನಾವೆಲ್ಲರೂ ಪ್ರಜಾಪ್ರಭುತ್ವದ ಮಾಲೀಕರ ಪರವಾಗಿ ಕೆಲಸ ಮಾಡಲು ಇರಬೇಕು ಎಂದರು.

ಸರ್ಕಾರ ನಿಮಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು ಎನ್ನುವುದರಲ್ಲಿ ಎರಡು ಮಾತಿಲ್ಲ. ನಿಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು. ಆದರೆ ಅದೇ ಮೊದಲ ಆದ್ಯತೆ ಅಲ್ಲ. ಅನ್ಯಾಯಗಳನ್ನು ಸರಿಪಡಿಸುವುದು ಸರ್ಕಾರದ ಕರ್ತವ್ಯ. ರಾಜ್ಯದ ಜನರ ಪರವಾಗಿ ಕೆಲಸ ಮಾಡಬೇಕಾಗಿರುವುದು ಮೊದಲನೇ ಆದ್ಯತೆ. ಬೇಡಿಕೆಗಳು ನಂತರದ ಆದ್ಯತೆ. ಇದನ್ನು ಸ್ಪಷ್ಟವಾಗಿ ನೀವು ಅರ್ಥಮಾಡಿಕೊಂಡಿದ್ದೀರಿ ಎನ್ನುವುದು ನನ್ನ ಅನಿಸಿಕೆ ಎಂದರು.

ಸರ್ಕಾರಿ ನೌಕರರ ಸಮಸ್ಯೆಗಳನ್ನು ಅರಿತು 7ನೇ ವೇತನ ಆಯೋಗ ರಚಿಸಲಾಗಿದ್ದು, 6ನೇ ವೇತನ ಆಯೋಗವನ್ನು ನಮ್ಮ ಸರ್ಕಾರ ಜಾರಿಗೆ ತಂದಿತ್ತು. ಆ ಸಂದರ್ಭದಲ್ಲಿ ನೌಕರರ ವಿರುದ್ಧವಿರುವುದಾಗಿ ನನ್ನ ಮೇಲೆ ಅರೋಪ ಮಾಡಿದ್ದರು. ಆದರೆ ನಾನೇ 6ನೇ ವೇತನ ಆಯೋಗವನ್ನು ರಚಿಸಿದ್ದೆವು.

ಅಡ್ಡಮತದ ಜನಕ ಕಾಂಗ್ರೆಸ್: ಹೆಚ್‌ಡಿಕೆ ಆಕ್ರೋಶ

ಸರ್ಕಾರಿ ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ಕೆಲಸವಾಗಬೇಕು. 6ನೇ ವೇತನ ಆಯೋಗದಲ್ಲಿ ಶೇ. 30ರಷ್ಟು ಫಿಟ್ಮೆಂಟ್ ಸೌಲಭ್ಯ ನೀಡಲು 10,500 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಬಿಡುಗಡೆ ಮಾಡಿದೆ. ಈಗ 7 ನೇ ವೇತನ ಆಯೋಗದ ಮಧ್ಯಂತರ ವರದಿಯಂತೆ 17% ಹೆಚ್ಚಳ ಮಾಡಲಾಗಿತ್ತು. ಆಯೋಗದ ಅಂತಿಮ ವರದಿ ನೀಡಲು ಇನ್ನಷ್ಟು ಕಾಲಾವಕಾಶ ಬೇಕೆಂದು ಆಯೋಗದ ಅಧ್ಯಕ್ಷರು ಕೋರಿದ್ದು, ಮಾರ್ಚ್ 15 ರವರೆಗೆ ವರದಿ ನೀಡಲು ಸಮಯಾವಕಾಶ ನೀಡಲಾಗಿದೆ.

ಲೋಕಸಭಾ ಚುನಾವಣೆಯ ಹಿನ್ನಲೆ, ಆಯೋಗದ ಅಂತಿಮ ವರದಿಯನ್ನು ಆದಷ್ಟು ಜಾಗ್ರತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ. ನಾನು ಸರ್ಕಾರಿ ನೌಕರರ ಪರವಾಗಿದ್ದೇನೆ ಎಂದು ತಿಳಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
after report will take dicisioncm siddaramaiah assures 7th pay commission implimentationstate level govt. workers meet
1 FacebookTwitterPinterestEmail
admin

previous post
ಅಡ್ಡಮತದ ಜನಕ ಕಾಂಗ್ರೆಸ್: ಹೆಚ್‌ಡಿಕೆ ಆಕ್ರೋಶ
next post
ಪರಿಣಾಮ ಬೀರದ ಅಡ್ಡ ಮತದಾನ ತಂತ್ರ

You may also like

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (405)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,903)
  • ರಾಜ್ಯ (2,214)
  • ರಾಷ್ಟ್ರ (2,184)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026

KMS Special

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ