Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಪರಿಣಾಮ ಬೀರದ ಅಡ್ಡ ಮತದಾನ ತಂತ್ರ

by KM Shivaraju February 27, 2024
written by KM Shivaraju February 27, 2024 0 comments 2 minutes read
1FacebookTwitterPinterestEmail
507


ಕಾಂಗ್ರೆಸ್ ಜಯಭೇರಿ: ಬಿಜೆಪಿ ಅಭ್ಯರ್ಥಿ ಗೆಲುವು

ಬೆಂಗಳೂರು:ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಊಹಿಸಿದಂತೆ ಕಾಂಗ್ರೆಸ್‌ನ ಮೂವರು, ಬಿಜೆಪಿಯ ಒಬ್ಬ ಅಭ್ಯರ್ಥಿ ಜಯ ಗಳಿಸಿದ್ದಾರೆ.

ಬಿಜೆಪಿಯ ಎಸ್.ಟಿ. ಸೋಮಶೇಖರ್ ಅಡ್ಡ ಮತದಾನ ಮಾಡಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಚಲಾಯಿಸಿದರೆ, ಅದೇ ಪಕ್ಷದ ಮತ್ತೊಬ್ಬ ಶಾಸಕ ಶಿವರಾಂ ಹೆಬ್ಬಾರ್ ಮತಗಟ್ಟೆಯಿಂದಲೇ ದೂರ ಉಳಿಯುವ ಮೂಲಕ ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಜಯಗಳಿಸಲು ಪರೋಕ್ಷವಾಗಿ ಸಹಕರಿಸಿದರು.

ಪಕ್ಷೇತರರಾದ ಗಾಲಿ ಜನಾರ್ದನ ರೆಡ್ಡಿ, ದರ್ಶನ್ ಪುಟ್ಟಣ್ಣಯ್ಯ, ಪುಟ್ಟಸ್ವಾಮಿ ಗೌಡ, ಲತಾ ಮಲ್ಲಿಕಾರ್ಜುನ್ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸಿದರು.

222 ಮತ ಚಲಾವಣೆ

ವಿಧಾನಸಭೆಯಲ್ಲಿ 223 ಸದಸ್ಯರ ಬಲ ಇದ್ದು, 222 ಮತಗಳಷ್ಟೇ ಚಲಾವಣೆಗೊಂಡವು, ಅದರಲ್ಲಿ ಕಾಂಗ್ರೆಸ್‌ನ ಅಜಯ್ ಮಾಕೆನ್ (47), ನಾಸೀರ್ ಹುಸೇನ್ (47) ಹಾಗೂ ಜಿ.ಸಿ. ಚಂದ್ರಶೇಖರ್ (45) ಮತಗಳನ್ನು ಪಡೆದು ರಾಜ್ಯಸಭೆ ಪ್ರವೇಶಿಸಿದರೆ, ಬಿಜೆಪಿಯ ನಾರಾಯಣಸಾ ಬಾಂಡಗೆ (47) ಮತಗಳನ್ನು ಪಡೆದು ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದರು.

ವಿಧಾನಸಭೆಯಲ್ಲಿ ತಮಗೆ ಗೆಲುವಿನ ಗುರಿ ಮುಟ್ಟುವಷ್ಟು ಸಂಖ್ಯಾಬಲ ಇಲ್ಲ ಎಂದು ತಿಳಿದಿದ್ದರೂ ಬಿಜೆಪಿ ಜೊತೆ ಕೈಜೋಡಿಸಿ ಜೆಡಿಎಸ್‌ನಿಂದ ಕಣಕ್ಕಿಳಿದಿದ್ದ ಕುಪೇಂದ್ರ ರೆಡ್ಡಿ ಪರಾಭವಗೊಂಡಿದ್ದಾರೆ.

ಅದೃಷ್ಟ ಪರೀಕ್ಷೆಗೆ ಇಳಿದಿದ್ದ ರೆಡ್ಡಿ ಅವರಿಗೆ 36 ಮತಗಳು ಮಾತ್ರ ಲಭ್ಯವಾಗಿವೆ. ರೆಡ್ಡಿ ಅವರಿಗೆ ರಾಜ್ಯಸಭಾ ಚುನಾವಣೆಯಲ್ಲಿ ಇದು ಸತತ ಮೂರನೇ ಸೋಲಾಗಿದೆ.

ಆಡಳಿತ ಪಕ್ಷದ ಕೆಲವು ಮತಗಳನ್ನು ಪಡೆದು ಐದನೇ ಅಭ್ಯರ್ಥಿಯನ್ನು ಗೆಲ್ಲಿಸುವ ಹುಮ್ಮಸ್ಸಿನಲ್ಲಿದ್ದ ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಕಾಂಗ್ರೆಸ್ ತಕ್ಕ ಉತ್ತರ ನೀಡಿದೆ.

ಕಾಂಗ್ರೆಸ್‌ಗೆ 139 ಮತ

ವಿಧಾನಸಭೆಯಲ್ಲಿ ಸಭಾಧ್ಯಕ್ಷರೂ ಸೇರಿದಂತೆ ಕಾಂಗ್ರೆಸ್ 134 ಸದಸ್ಯ ಬಲ ಹೊಂದಿದ್ದರೂ ಅವರಿಗೆ ಚುನಾವಣೆಯಲ್ಲಿ 139 ಮತಗಳು ಲಭ್ಯವಾಗಿವೆ.

ಸದನದಲ್ಲಿ 66 ಸಂಖ್ಯಾಬಲ ಹೊಂದಿರುವ ಬಿಜೆಪಿ ಎನ್‌ಡಿಎ ಕೂಟದ ಎರಡನೇ ಅಭ್ಯರ್ಥಿಯ ಗೆಲುವು ಸಾಧ್ಯವಿಲ್ಲ ಎಂಬ ಮಾಹಿತಿ ತಿಳಿಯುತ್ತಿದ್ದಂತೆ, ಕೊನೆ ಗಳಿಗೆಯಲ್ಲಿ ತಮ್ಮ ಅಭ್ಯರ್ಥಿಗೆ ನಿಗದಿಪಡಿಸಿದ್ದ 45 ಮತಗಳ ಬದಲು 47 ಮತಗಳನ್ನು ನೀಡಿತು, ಉಳಿದ 17 ಮತಗಳು ಜೆಡಿಎಸ್ ಅಭ್ಯರ್ಥಿಗೆ ಲಭಿಸಿತು.

ಬಿಜೆಪಿಯ ಹೆಚ್ಚುವರಿ 21 ಹಾಗೂ ತಮ್ಮ ಪಕ್ಷದ 19 ಮತಗಳು ಒಗ್ಗೂಡಿಸಿ, ಪಕ್ಷೇತರರು ಹಾಗೂ ಕಾಂಗ್ರೆಸ್‌ನ ಕೆಲವರಿಂದ ಅಡ್ಡ ಮತದಾನ ಮಾಡಿಸಿ ಜಯ ಗಳಿಸುವ ಇರಾದೆ ಕುಪೇಂದ್ರ ರೆಡ್ಡಿ ಅವರಿಗೆ ಕೈಗೂಡಲಿಲ್ಲ.

ಜೆಡಿಎಸ್‌ನ ಮೂರನೇ ಎರಡು ಭಾಗದಷ್ಟು ಶಾಸಕರನ್ನು ಸೆಳೆಯುತ್ತೇವೆ ಎಂದಿದ್ದ ಕಾಂಗ್ರೆಸ್‌ಗೆ ಆ ಪಕ್ಷದ ಒಂದೂ ಮತವನ್ನು ಪಡೆಯಲಾಗಲಿಲ್ಲ, ಆ ಪಕ್ಷದ ಶಾಸಕರೆಲ್ಲರೂ ಒಗ್ಗಟ್ಟನ್ನು ಪ್ರದರ್ಶಿಸಿದರು.

ಲೆಕ್ಕಾಚಾರ ಬುಡಮೇಲು

ಇನ್ನು ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಹಿಡಿದಿಟ್ಟುಕೊಂಡು ಪಕ್ಷೇತರ 4 ಹಾಗೂ ಬಿಜೆಪಿಯ ಒಂದು ಮತ ಗಳಿಸಿ ಪ್ರತಿಪಕ್ಷಗಳ ಲೆಕ್ಕಾಚಾರವನ್ನೇ ಬುಡಮೇಲು ಮಾಡಿತು.

ಕೇಂದ್ರ ಬಿಜೆಪಿ ಬಲದಿಂದ ತಮ್ಮ ಸದಸ್ಯರ ಅಡ್ಡ ಮತದಾನದ ಆಗಬಹುದೆಂಬ ಭೀತಿಯಿಂದ ಕಾಂಗ್ರೆಸ್ ಮುಖಂಡರು ಕಳೆದ ಒಂದು ವಾರದಿಂದಲೇ ತಮ್ಮವರನ್ನು ಹಿಡಿದಿಟ್ಟುಕೊಳ್ಳುವ ಹಾಗೂ ಪಕ್ಷೇತರರು ಮತ್ತು ಬಿಜೆಪಿ ಮತಗಳನ್ನು ಸೆಳೆಯುವ ಕಾರ್ಯತಂತ್ರ ರೂಪಿಸಿದ್ದರು.

ಸ್ವತಃ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಕೆಲವು ಸಚಿವರು, ಬಿಜೆಪಿಯ ಹಾಗೂ ಜೆಡಿಎಸ್‌ನ ಕೆಲವು ಶಾಸಕರನ್ನು ಸೆಳೆಯಲು ತೆರೆಮರೆಯ ಪ್ರಯತ್ನ ಮಾಡಿದ್ದರು.

7ನೇ ವೇತನ ಆಯೋಗ: ಅಂತಿಮ ವರದಿ ನಂತರ ಸೂಕ್ತ ತೀರ್ಮಾನ

ಬಿಜೆಪಿಯತ್ತ ಮುಖ ಮಾಡಿದ್ದ ಗಾಲಿ ಜನಾರ್ದನ ರೆಡ್ಡಿ ಅವರನ್ನು ಕಡೆ ಗಳಿಗೆಯಲ್ಲಿ ತಮ್ಮೆಡೆಗೆ ಸೆಳೆದುಕೊಂಡ ಕಾಂಗ್ರೆಸ್ ತಮ್ಮ ಅಭ್ಯರ್ಥಿಗಳ ಗೆಲುವಿಗೆ ನಿನ್ನೆಯೇ ಎಲ್ಲಾ ಲೆಕ್ಕಾಚಾರ, ಗುಣಾಕಾರ ಹಾಕಿತ್ತು.

ತಮ್ಮ ಸದಸ್ಯರನ್ನು ಒಗ್ಗಟ್ಟಿನಿಂದ ಇಟ್ಟುಕೊಳ್ಳುವ ಉದ್ದೇಶದಿಂದ ಕಾಂಗ್ರೆಸ್ ನಾಯಕರು ನಿನ್ನೆಯೇ ಪಂಚತಾರಾ ಹೋಟೆಲ್ ಸೇರಿಕೊಂಡಿದ್ದರು.

ಹೋಟೆಲ್‌ನಿಂದ ಇಂದು ನೇರವಾಗಿ ಮತಗಟ್ಟೆಗೆ ಧಾವಿಸಿದ ಕಾಂಗ್ರೆಸ್ ಶಾಸಕರು ತಮ್ಮ ಅಭ್ಯರ್ಥಿಗಳಿಗೆ ಮತ ಚಲಾಯಿಸಿದರು.

ಪಕ್ಷದ ಮೂವರು ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಚುನಾವಣೆಯಲ್ಲಿ ನಡೆಸಿದ ತಂತ್ರಗಾರಿಕೆ ಯಶಸ್ಸು ತಂದು ಕೊಟ್ಟಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjp wins one seatcongres wins 3 seatskupendra reddy faces defeatrajya sabha election
1 FacebookTwitterPinterestEmail
KM Shivaraju

previous post
7ನೇ ವೇತನ ಆಯೋಗ: ಅಂತಿಮ ವರದಿ ನಂತರ ಸೂಕ್ತ ತೀರ್ಮಾನ
next post
ದಿನ ಭವಿಷ್ಯ : ಬುಧವಾರ, 28ಫೆಬ್ರವರಿ 2024

You may also like

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026

ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

September 7, 2026

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (561)
  • ಅಂಕಣ (109)
  • ಉದ್ಯೋಗ (347)
  • ದಿನ ಭವಿಷ್ಯ (110)
  • ರಾಜಕೀಯ (2,054)
  • ರಾಜ್ಯ (2,369)
  • ರಾಷ್ಟ್ರ (2,333)
  • ವಿಶ್ಲೇಷಣೆ (202)
  • ಶಿಕ್ಷಣ (409)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026
  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026

KMS Special

  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026
  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ