Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ರಾಷ್ಟ್ರಧ್ವಜಕ್ಕೆ ಅವಮಾನ ವಿಚಾರ ಪ್ರಸ್ತಾಪ: ಸರ್ಕಾರ ಉತ್ತರ ಕೊಡಲಿದೆ

by admin February 28, 2024
written by admin February 28, 2024 1 comment 2 minutes read
1FacebookTwitterPinterestEmail
139

ಸಭಾಧ್ಯಕ್ಷ ಯು.ಟಿ.ಖಾದರ್

ಬೆಂಗಳೂರು:ರಾಜ್ಯಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಚುನಾಯಿತರಾದ ಕಾಂಗ್ರೆಸ್‌ನ ಸಯ್ಯದ್ ನಾಸಿರ್ ಹುಸೇನ್ ಪರ ಜಯಘೋಷ ಸಂದರ್ಭದಲ್ಲಿ ಪಾಕಿಸ್ತಾನದ ಪರ ಘೋಷಣೆಯನ್ನು ಕಿಡಿಗೋಡಿಯೊಬ್ಬ ಕೂಗಿದ್ದಾನೆ ಎಂಬ ಆರೋಪ ವಿಚಾರ ವಿಧಾನಸಭೆಯಲ್ಲಿಂದು ಪ್ರತಿಧ್ವನಿಸಿ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದು ಸದನವನ್ನು ಕೆಲಕಾಲ ಮುಂದೂಡಿದ ಘಟನೆ ನಡೆಯಿತು.

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಕರ್ನಾಟಕದ ಇತಿಹಾಸದಲ್ಲಿ ಇಂತಹ ಘಟನೆ ನಡೆದಿರಲಿಲ್ಲ, ರಾಜ್ಯಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಸಯ್ಯದ್ ನಾಸಿರ್ ಹುಸೇನ್ ಅವರ ವಿಜಯೋತ್ಸವ ಸಂದರ್ಭದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿರುವುದು ರಾಜ್ಯದಲ್ಲಿ ಆತಂಕ ಉಂಟಾಗಿದೆ, ಭಯದ ವಾತಾವರಣವಿದೆ, ಗಲ್ಲಿಗಲ್ಲಿಯಲ್ಲಿ ಈ ರೀತಿಯಲ್ಲಿ ಕೂಗುವುದಿಲ್ಲ ಎಂದು ನಂಬುವುದಾದರೂ ಹೇಗೆ ಎಂದು ಪ್ರಶ್ನಿಸಿದರು.

ಘೋಷಣೆ ಕೂಗಿದವರನ್ನು ವಿಧಾನಸೌಧಕ್ಕೆ ಕರೆತಂದವರು ಯಾರು

ಆ ರೀತಿ ಘೋಷಣೆ ಕೂಗಿದವರನ್ನು ರೆಡ್ ಕಾರ್ಪೆಟ್ ಹಾಕಿ ವಿಧಾನಸೌಧಕ್ಕೆ ಕರೆತಂದವರು ಯಾರು ಎಂದಾಗ, ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್, ಪಾರ್ಲಿಮೆಂಟ್‌ನಲ್ಲಿ ನುಗ್ಗಿದ್ದರಲ್ಲ ಎಂದರು. ಇದಕ್ಕೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು.

ಮಾತು ಮುಂದುವರೆಸಿದ ಅಶೋಕ್, ಸಂಸತ್‌ನಲ್ಲಿ ನುಗ್ಗಿದವರನ್ನು ಹಿಡಿದು ಚೆನ್ನಾಗಿ ರುಬ್ಬಿದರು, ನೀವ್ಯಾರಾದರೂ ಅವರಿಗೆ ಹೊಡೆದಿರಾ, ವಿಧಾನಸೌಧಕ್ಕೆ ಘೋಷಣೆ ಕೂಗಿದವರನ್ನು ಯಾರು ಕರೆತಂದವರು, 500 ಪೊಲೀಸರು, ಐಪಿಎಸ್, ಐಎಎಸ್ ಅಕಾರಿಗಳು ಇರುವ ಈ ಸ್ಥಳದಲ್ಲಿ ಆ ರೀತಿ ಘೋಷಣೆ ಕೂಗಲು ಎಷ್ಟು ಧೈರ್ಯವಿರಬೇಕು, ದೇಶದ ಗಡಿಯಲ್ಲಿ ಸೈನಿಕರು ಜೀವದ ಹಂಗು ತೊರೆದು ರಕ್ಷಣೆ ಮಾಡುತ್ತಾರೆ, ಅವರಿಗೆ ನಾವು ಯಾವ ಉತ್ತರ ಕೊಡಬೇಕು, ಅಲ್ಲಿ ಈ ರೀತಿ ಘೋಷಣೆ ಕೂಗಿದರೆ ಅವರನ್ನು ಗುಂಡಿಟ್ಟು ಕೊಲ್ಲುತ್ತಾರೆ ಎಂದರು.

ಘೋಷಣೆ ಕೂಗಿದವರು ವಿಧಾನಸೌಧದಿಂದ ಹೊರಹೋಗಲು ವಾಹನ ಮಾಡಿಕೊಟ್ಟವರು ಯಾರು, ಇಷ್ಟೆಲ್ಲಾ ನಡೆದಿದ್ದರೂ ಸರ್ಕಾರ ಏನೂ ಆಗಿಲ್ಲ ಎಂಬಂತಿದೆ, ಕಾಂಗ್ರೆಸ್‌ನ ಚಂದ್ರಶೇಖರ್ ಗೆದ್ದಾಗ ಈ ರೀತಿ ಘೋಷಣೆ ಕೂಗಿಲ್ಲ, ಬಿಜೆಪಿ ಅಭ್ಯರ್ಥಿ ಗೆದ್ದಾಗ ಭಾರತ್ ಮಾತಾ ಕೀ ಜೈ ಎಂಬ ಘೋಷಣೆ ಕೂಗಿದ್ದೇವೆ, ಆದರೆ ಸಯ್ಯದ್ ನಾಸಿರ್ ಹುಸೇನ್ ಗೆದ್ದ ಸಂದರ್ಭದಲ್ಲಿ ಯಾಕೆ ಈ ರೀತಿ ಘೋಷಣೆ ಎಂದರು.

ಅಡ್ಡಮತದ ಜನಕ ಕಾಂಗ್ರೆಸ್: ಹೆಚ್‌ಡಿಕೆ ಆಕ್ರೋಶ
ಎಲ್ಲರೂ ಒಗ್ಗಟ್ಟಿನಿಂದ ಇರಬೇಕು

ಈ ಸಂದರ್ಭದಲ್ಲಿ ಆಡಳಿತ ಪಕ್ಷದ ಹಲವು ಶಾಸಕರು ಎದ್ದು ನಿಂತು ಆಕ್ಷೇಪಿಸಲು ಮುಂದಾದಾಗ ಸಭಾಧ್ಯಕ್ಷ ಯು.ಟಿ.ಖಾದರ್ ಮಧ್ಯ ಪ್ರವೇಶಿಸಿ, ಗಂಭೀರವಾದ ವಿಚಾರ ಚರ್ಚೆ ಮಾಡುವಾಗ ಎಲ್ಲರೂ ಒಗ್ಗಟ್ಟಿನಿಂದ ಇರಬೇಕು, ರಾಜಕೀಯ ಬಿಡಬೇಕು, ರಾಷ್ಟ್ರ, ರಾಜ್ಯದ ಹಿತದ ಬಗ್ಗೆ ಮಾತನಾಡುವಾಗ ಗಂಭೀರವಾಗಿ ಆಲಿಸಬೇಕು, ಗಂಭೀರ ವಿಚಾರ ಪ್ರಸ್ತಾಪವಾಗುತ್ತಿದೆ, ಸರ್ಕಾರ ಉತ್ತರ ಕೊಡಲಿದೆ ಎಂದು ಸಲಹೆ ಮಾಡಿದರು.

ಮಾತು ಮುಂದುವರೆಸಿದ ಅಶೋಕ್, ಪಾಕಿಸ್ತಾನದ ಪರ ಘೋಷಣೆ ಕೂಗಿದ ವಿಚಾರ ಸುದ್ದಿ ವಾಹಿನಿಗಳಲ್ಲಿ ತೋರಿಸಿದ್ದಾರೆ, ಭಾರತ ಮಾತೆ ಅನ್ನ ತಿಂದವರು, ನೀರು ಕುಡಿದವರು ಆ ರೀತಿ ಕೂಗುವುದಿಲ್ಲ, ಒಂದು ವೇಳೆ ಮಾಧ್ಯಮದ ವರದಿ ಸುಳ್ಳಾಗಿದ್ದರೆ ಅವರನ್ನು ಜೈಲಿಗೆ ಹಾಕಿ, ನನ್ನ ಮೇಲೂ ಕೇಸು ಹಾಕಿ, ಈ ಘಟನೆ ಬಗ್ಗೆ ಸಣ್ಣ ಕ್ರಮವೂ ಕೈಗೊಂಡಿಲ್ಲ.

ಘೋಷಣೆ ಕೂಗಿದವರನ್ನು ಯಾರು ಕರೆದುಕೊಂಡು ಬಂದರು, ಇವರಿಗೆ ಹೇಗೆ ರಾಜ್ಯಸಭಾ ಟಿಕೆಟ್ ಕೊಟ್ಟರು, ಅವರೇ ತಾನೇ ಕರೆದುಕೊಂಡು ಬಂದದ್ದು ಎಂದಾಗ ಆಡಳಿತ ಪಕ್ಷದ ಶಾಸಕರಿಂದ ತೀವ್ರ ಆಕ್ಷೇಪ ವ್ಯಕ್ತವಾಯಿತು.

ಮಾಧ್ಯಮದವರನ್ನು ಗೆಟ್‌ಔಟ್ ಎನ್ನುತ್ತಾರೆ

ಚುನಾಯಿತ ಅಭ್ಯರ್ಥಿ ಮಾಧ್ಯಮದವರನ್ನು ಗೆಟ್‌ಔಟ್ ಎನ್ನುತ್ತಾರೆ, ಪ್ರಜಾಪ್ರಭುತ್ವದಲ್ಲಿ ಮಾಧ್ಯಮವೂ ಒಂದು ಅಂಗ ಎನ್ನುತ್ತಿದ್ದಂತೆ ಆಡಳಿತ ಪಕ್ಷದಿಂದ ನಾಸಿರ್ ಹುಸೇನ್ ಬಗ್ಗೆ ಏಕೆ ಮಾತನಾಡುತ್ತೀರಿ ಎಂಬ ತೀವ್ರ ಆಕ್ಷೇಪ ವ್ಯಕ್ತವಾಯಿತು.

ಮಧ್ಯ ಪ್ರವೇಶಿಸಿದ ಸಭಾಧ್ಯಕ್ಷರು, ರಾಜಕೀಯ ವಿಚಾರ ಪ್ರಸ್ತಾಪ ಬೇಡ, ವ್ಯಾಪ್ತಿ ಮೀರಿ ಮಾತನಾಡುವುದು ಸರಿಯಲ್ಲ ಎಂದು ಹೇಳಿದರು.

ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ ವಾಗ್ವಾದ ನಡೆದು ಸದನದಲ್ಲಿ ಗೊಂದಲದ ವಾತಾವರಣ ಉಂಟಾದಾಗ ಸಭಾಧ್ಯಕ್ಷರು ಸದನದ ಕಾರ್ಯಕಲಾಪವನ್ನು 10 ನಿಮಿಷ ಮುಂದೂಡಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
karnataka assembly sessionnational flagr ashokspeaker ut khadir
1 FacebookTwitterPinterestEmail
admin

previous post
ದಿನ ಭವಿಷ್ಯ : ಬುಧವಾರ, 28ಫೆಬ್ರವರಿ 2024
next post
ಪಾಕಿಸ್ತಾನ ಪರ ಘೋಷಣೆ ಖಚಿತವಾದರೆ ಕಾನೂನು ಕ್ರಮ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ