Thursday, April 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, April 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಜಾತಿಗಣತಿ ವರದಿ ಪರಶೀಲನೆಗೆ ಸಂಪುಟ ಉಪಸಮಿತಿ?

by admin February 29, 2024
written by admin February 29, 2024 0 comments 2 minutes read
2FacebookTwitterPinterestEmail
246

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ

ಬೆಂಗಳೂರು: ಪ್ರಬಲ ಸಮುದಾಯಗಳ ತೀವ್ರ ವಿರೋಧದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿ ಸ್ವೀಕಾರ ಮಾಡಿದ್ದಾರೆ.

ವರದಿಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಪರಿಶೀಲನೆಗಾಗಿ ಸಂಪುಟ ಉಪ ಸಮಿತಿಗೆ ವಹಿಸುವ  ಉದ್ದೇಶ ಮುಖ್ಯಮಂತ್ರಿ  ಅವರಿಗಿದೆ. ಪ್ರಬಲ ಸಮುದಾಯಗಳು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕಾಂತರಾಜ್  ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಆಯೋಗದಿಂದ ಸಿದ್ದಪಡಿಸಲಾದ ಮೂಲ ವರದಿಯಲ್ಲಿ ಹಾಲಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಆಮೂಲಾಗ್ರ ಬದಲಾವಣೆ ಮಾಡಿದ್ದಾರೆ.

ಕಾಂತರಾಜ್ ವರದಿಯಲ್ಲಿನ ದತ್ತಾಂಶಗಳನ್ನು ಆಧಾರವಾಗಿಟ್ಟುಕೊಂಡು ಹಾಲಿ ಅಧ್ಯಕ್ಷರ ನೇತೃತ್ವದಲ್ಲಿ ಇಡೀ ರಾಜ್ಯದಲ್ಲಿ ಮತ್ತೊಮ್ಮೆ ಅಗತ್ಯ ಮಾಹಿತಿ ಪಡೆದು ಬೃಹತ್  ಗಾತ್ರದ ವರದಿ ಸಿದ್ಧ ಪಡಿಸಿ ಸಲ್ಲಿಸಲಾಗಿದೆ.

ಅಂದರೆ, ರಾಜ್ಯದಲ್ಲಿರುವ ಪ್ರಮುಖ ಸಮುದಾಯಗಳು ಸಲ್ಲಿಸಿದ್ದ ಮನವಿ ಪತ್ರಗಳನ್ನು ಆಧರಿಸಿ ವಾಸ್ತವ ಸ್ಥಿತಿಯನ್ನು ಅಧ್ಯಯನ  ಮಾಡಿ ವರದಿ ತಯಾರಿಸಿದ್ದಾರೆ ಎನ್ನಲಾಗಿದೆ.

ಕಾಂತರಾಜ್ ಅವರ ಅವಧಿಯ ವರದಿಯಲ್ಲಿ ಪ್ರಬಲ ಸಮುದಾಯಗಳನ್ನು ವಿಭಜನೆ ಮಾಡಿ ಅವರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿಗೆ ಅನುಗುಣವಾಗಿ ಜಾತಿ ಮತ್ತು ಉಪ ಪಂಗಡಗಳನ್ನು ವಿಂಗಡಿಸಲಾಗಿತ್ತು ಎಂಬ ಆರೋಪ ಕೇಳಿ ಬಂದಿತ್ತು.

ಕಾಂತರಾಜ್ ಅವಧಿಯ ವರದಿಗೆ ವೀರಶೈವ ಹಾಗೂ ಒಕ್ಕಲಿಗ ಸಮುದಾಯಗಳ ವಿರೋಧ

ವೀರಶೈವ ಹಾಗೂ ಒಕ್ಕಲಿಗ ಸಮುದಾಯಗಳು ಕಾಂತರಾಜ್ ವರದಿಯನ್ನು ಬಹಿರಂಗವಾಗಿಯೇ ವಿರೋಧ ವ್ಯಕ್ತಪಡಿಸಿದ್ದವು. ಅದೇ ಸಮಯಕ್ಕೆ ಸಿದ್ದರಾಮಯ್ಯ ಅವರ ಸಂಪುಟದ ಕೆಲವು ಸಚಿವರು ಸಹ ಆಕ್ಷೇಪ ವ್ಯಕ್ತಪಡಿಸಿ ವೈಜ್ಞಾನಿಕ ಸಮೀಕ್ಷಾ ವರದಿ ತಯಾರಾಗಬೇಕು ಎಂದಿದ್ದರು.

ಸಾರ್ವಜನಿಕವಾಗಿ ವ್ಯಕ್ತವಾದ ತೀವ್ರ ವಿರೋಧವನ್ನು ಮನಗಂಡ ಮುಖ್ಯಮಂತ್ರಿ ಅವರು ಹಾಲಿ ಅಧ್ಯಕ್ಷರಾಗಿದ್ದ ಜಯಪ್ರಕಾಶ್ ಹೆಗ್ಡೆ ಅವರಿಗೆ ಸರ್ಕಾರಕ್ಕೆ ಸಲ್ಲಿಕೆಯಾದ ಮನವಿಗಳನ್ನು ರವಾನಿಸಿ ಕಾಂತರಾಜ್ ಅಧ್ಯಕ್ಷರಾಗಿದ್ದಾಗ ಸಿದ್ಧಪಡಿಸಿದ್ದ ವರದಿಯಲ್ಲಿ ಲೋಪವಾಗಿದ್ದರೆ, ಅದನ್ನು ಸರಿಪಡಿಸುವಂತೆ ಹೇಳಿದ್ದರು ಎನ್ನಲಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆಗೆ ಸಿಸಿಟಿವಿ ಕಣ್ಗಾವಲು

ಇದೇ ಕಾರಣಕ್ಕಾಗಿ ಹೆಗ್ಡೆ ಅವರ ಕಾಲಾವಧಿ ಮುಗಿದಿದ್ದರೂ ಮತ್ತೆ ಎರಡು ಬಾರಿ ಅವಧಿ ವಿಸ್ತರಿಸಿ ಪರಿಷ್ಕೃತ ವರದಿ ಸಿದ್ಧಪಡಿಸಲು ಅವಕಾಶ ಮಾಡಿಕೊಟ್ಟಿದರು.

ಹೆಗ್ಡೆ ಅವರ ನೇತೃತ್ವದ ಆಯೋಗದ ಅವಧಿ ಮುಕ್ತಾಯಗೊಂಡಿದೆ. ಅಧಿಕಾರದಿಂದ ನಿವೃತ್ತರಾಗುವ ಮುನ್ನ ಅವರು ಮುಖ್ಯಮಂತ್ರಿ  ಹಾಗೂ ಸರ್ಕಾರದ ಉನ್ನತಾಧಿಕಾರಿಗಳಿಗೆ ಮೂಲ ವರದಿಯನ್ನು  ಸಲ್ಲಿಸಿದ್ದಾರೆ.

ವರದಿಯಲ್ಲಿ ಸರ್ಕಾರಕ್ಕೆ ಕೆಲವು ಶಿಫಾರಸ್ಸು

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ -2015ರ ಸಮಗ್ರ ವರದಿ-01, ಜಾತಿವಾರು ಜನಸಂಖ್ಯೆ ವಿವರ-01, ಜಾತಿ ವರ್ಗಗಳ ಪ್ರಮುಖ ಲಕ್ಷಣಗಳು-8 ಸಂಪುಟ. ಪರಿಶಿಷ್ಟಜಾತಿ ಮತ್ತು ವರ್ಗಕ್ಕೆ ಸಂಬಂಧಿಸಿದಂತೆ ಪ್ರತ್ಯೇಕವಾದ ತಲಾ ಒಂದು ಸಂಪುಟ. ವಿಧಾನಸಭಾ ಕ್ಷೇತ್ರವಾರು ಜಾತಿವಾರು ಸಮೀಕ್ಷೆಗಳ ಅಂಕಿ-ಅಂಶಗಳಿಗೆ ಸಂಬಂಧಿಸಿದ ಎರಡು ಸಿಡಿ ಸಲ್ಲಿಸಿಕೆಯಾದ ವರದಿಯಲ್ಲಿ ಸೇರಿವೆ.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ದತ್ತಾಂಶಗಳ ಅಧ್ಯಯನ ವರದಿಯ ಒಂದು ಸಂಪುಟ ಸೇರಿದಂತೆ ಒಟ್ಟು 13 ದಾಖಲೆಗಳನ್ನು ಎರಡು ಬಾಕ್ಸ್ ಗಳಲ್ಲಿ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಗೆ ತಂದು ಸಲ್ಲಿಸಿದ್ದಾರೆ.

ವೈಜ್ಞಾನಿಕವಾಗಿ ವರದಿ ಸಿದ್ಧಪಡಿಸಲಾಗಿದೆ : ಹೆಗ್ಡೆ

ವರದಿ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಯಪ್ರಕಾಶ್ ಹೆಗ್ಡೆ ಅವರು, ವರದಿಯನ್ನು ವೈಜ್ಞಾನಿಕವಾಗಿ ಸಿದ್ಧಪಡಿಸಲಾಗಿದೆ.  ಅದನ್ನು ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಮುಂದಿನ ತೀರ್ಮಾನ ಸರ್ಕಾರಕ್ಕೆ ಬಿಟ್ಟ ವಿಚಾರ ಎಂದರು.

ನಾವು ಸರ್ಕಾರಕ್ಕೆ ಕೆಲವು ಶಿಫಾರಸ್ಸು ಮಾಡಿದ್ದೇವೆ. ಆದರೆ, ಅದನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ವರದಿ ಸ್ವೀಕರಿಸಿರುವ ಮುಖ್ಯಮಂತ್ರಿ ಅವರು ಅನುಷ್ಠಾನ ಮಾಡುವ ಕುರಿತಂತೆ ತಕ್ಷಣದ ತೀರ್ಮಾನ ಕೈಗೊಂಡಿಲ್ಲ. ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ವರದಿ ಅನುಷ್ಠಾನಗೊಳಿಸಿದರೆ, ಕೆಲವು ಸಮುದಾಯಗಳು ಅಪಸ್ವರ ಎತ್ತಿದರೂ ಕಾಂಗ್ರೆಸ್ ಗೆ ಹಿನ್ನಡೆಯಾಗಲಿದೆ ಎಂಬ ಭಾವನೆ ಅವರಲ್ಲಿದೆ.

 ಹೆಗ್ಡೆ ಅವರು ನೀಡಿರುವ  ವರದಿ ಪರಿಶೀಲಿಸಿ ನಂತರ ತೀರ್ಮಾನ ಕೈಗೊಳ್ಳುವ ಉದ್ದೇಶದಿಂದ ಹಿರಿಯ ಸಚಿವರ ನೇತೃತ್ವದಲ್ಲಿ ಸಂಪುಟದ ಉಪ ಸಮಿತಿ ನೇಮಿಸಿದ್ದು, ಆ ಸಮಿತಿಗೆ ಕೆಲವು ತಜ್ಞರನ್ನು ನೇಮಕ ಮಾಡಲು ಮುಖ್ಯಮಂತ್ರಿ ಅವರು ಆಸಕ್ತಿ ಹೊಂದಿದ್ದಾರೆ.

ಪಡಿತರ ವಿತರಕರ ಕಮಿಷನ್ ಒಂದೂವರೆ ರೂ.ಗೆ ಹೆಚ್ಚಳ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cabinetjayaprakash hegdereportreviewSiddaramaiahsocial-educationalsub-committeesubmitted  Chief Ministersurvey
2 FacebookTwitterPinterestEmail
admin

previous post
ಪಡಿತರ ವಿತರಕರ ಕಮಿಷನ್ ಒಂದೂವರೆ ರೂ.ಗೆ ಹೆಚ್ಚಳ
next post
ದಿನ ಭವಿಷ್ಯ : ಶುಕ್ರವಾರ, 1 ಮಾರ್ಚ್ 2024

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ