Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಜಾತಿ ಸಮೀಕ್ಷೆ ವರದಿ ಸ್ವೀಕಾರ: ಬೆಂಕಿ ಜೊತೆ ಸರಸ

by admin March 1, 2024
written by admin March 1, 2024 0 comments 2 minutes read
3FacebookTwitterPinterestEmail
201

ಜಾತಿ ಗಣತಿ ಅಧಿಕಾರ ವಿವಾದ ಸುಪ್ರೀಂ ಕೋರ್ಟ್ ಮುಂದಿದೆ

ಬೆಂಗಳೂರು: ಜಾತಿ ಸಮೀಕ್ಷೆ ವರದಿ ಸ್ವೀಕರಿಸುವ ಮೂಲಕ ಸರ್ಕಾರ ಬೆಂಕಿಯ ಜೊತೆ ಆಟವಾಡಲು ಹೊರಟಿದ್ದು, ಸಮಾಜದಲ್ಲಿ ಅಶಾಂತಿಗೆ ಕಾರಣವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಹತ್ತಿರ ಬಂದಾಗ ಜಾತ್ಯತೀತ ಎಂದು ಕರೆದುಕೊಳ್ಳುವ ಕಾಂಗ್ರೆಸ್ ಪಕ್ಷಕ್ಕೆ ಜಾತಿಗಳ ಮೇಲೆ ಪ್ರೀತಿ ಬಂದಿದೆ, ಜಾತಿ ಸಮಾವೇಶ ನಡೆಸುವುದು, ಸುಳ್ಳು ಆಶ್ವಾಸನೆ ಕೊಡುವುದನ್ನು ಮಾಡುತ್ತಿದೆ ಎಂದರು.

2017 ರಲ್ಲಿ ರಾಜ್ಯದಲ್ಲಿನ ಎಲ್ಲ ಜಾತಿಗಳ ಶಿಕ್ಷಣ ಮತ್ತು ಸಾಮಾಜಿಕ ಮಟ್ಟದ ಅಧ್ಯಯನ ನಡೆಸಲು ಸೂಚಿಸಿದ್ದರು, ಆಗ ಅವರ ಉದ್ದೇಶ ಬೇರೆ ಇತ್ತು, ಜಾತಿ ಗಣತಿ ನಡೆಸುವ ಅಧಿಕಾರ ಯಾರಿಗಿದೆ ಎಂಬ ವಿವಾದ ಸುಪ್ರೀಂ ಕೋರ್ಟ್ ಮುಂದಿದೆ.

ಇದರ ಕಣ್ತಪ್ಪಿಸಲು ಶೈಕ್ಷಣಿಕ, ಸಾಮಾಜಿಕ ಅಧ್ಯಯನ ಅಂತ ಹೇಳುವ ಮೂಲಕ ಉದ್ದೇಶ ಒಂದು, ಆದೇಶ ಒಂದು ಆಗಿ ಗೊಂದಲ ಸೃಷ್ಟಿಯಾಯಿತು.

ವರದಿ ಬಗ್ಗೆ ಸಾಕಷ್ಟು ಗೊಂದಲ

ಕಾಂತರಾಜ ವರದಿ ಸಿದ್ಧವಾದಾಗ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿದ್ದರು, ಆಗ ಚುನಾವಣೆ ಇದ್ದ ಕಾರಣ ವರದಿ ಸ್ವೀಕಾರ ಮಾಡಲಿಲ್ಲ, ಆಗಲೂ ವರದಿಯ ಬಗ್ಗೆ ಸಾಕಷ್ಟು ಗೊಂದಲಗಳಿತ್ತು. ಈಗ ಕೊಟ್ಟಿರುವ ವರದಿಯಲ್ಲಿಯೂ ಗೊಂದಲ ಇದೆ.

ವರದಿಯಲ್ಲಿ 5.82 ಕೋಟಿ ಜನರನ್ನು ಸಂಪರ್ಕ ಮಾಡಿದ್ದೇವೆ ಎನ್ನುತ್ತಾರೆ. ಆದರೆ, ಬಹುತೇಕ ಜನರು ತಮ್ಮನ್ನು ಸಂಪರ್ಕ ಮಾಡಿಲ್ಲ ಎಂದು ಹೇಳುತ್ತಿದ್ದಾರೆ.

ಚೌಚೌ ವರದಿ

ಈಗ ಕೊಟ್ಟಿರುವ ವರದಿ ಚೌಚೌ ವರದಿ, ಡಾಟಾ ಕಾಂತರಾಜ ಅವರದು, ಜಯಪ್ರಕಾಶ್ ಹೆಗ್ಡೆ ಅವರು ವರದಿ ನನ್ನದು ಅಂತ ಹೇಳಿದ್ದಾರೆ.

ಜಯಪ್ರಕಾಶ್ ಹೆಗ್ಡೆ ಅವರ ಆಯೋಗ ಅಧ್ಯಕ್ಷ ಸ್ಥಾನದ ಅಧಿಕಾರಾವಧಿ ವಿಸ್ತರಿಸಿ ರಾಜಕೀಯ ಕಾರಣಕ್ಕೆ ವರದಿ ಪಡೆದಿದ್ದಾರೆ ಎಂದು ಆರೋಪಿಸಿದರು.

ಜಾತಿ ಸಮೀಕ್ಷೆಗೆ ವಿರೋಧವಿಲ್ಲ, ಜಾತಿ ಗಣತಿ ಜೊತೆ ಆರ್ಥಿಕ, ಸಾಮಾಜಿಕ ಸ್ಥಿತಿಗತಿ ಮೇಲೆತ್ತಬೇಕು ಎನ್ನುವ ಬದ್ಧತೆ ನಮಗಿದೆ, ಅದಕ್ಕಾಗಿಯೇ ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳವನ್ನು ನಾವು ಮಾಡಿದ್ದೇವೆ.

ಈಗ ಸ್ವೀಕರಿಸಿದ ವರದಿ ಬಗ್ಗೆ ಸರ್ಕಾರ ಏಕೆ ಮುಚ್ಚು ಮರೆ ಮಾಡುತ್ತಿದೆ, ಇದರ ಬಗ್ಗೆ ಮುಕ್ತ ಚರ್ಚೆಯಾಗಬೇಕು.

ಹಿಂದುಳಿದ ವರ್ಗದಡಿ 150 ಜಾತಿಗಳನ್ನು ಸೇರಿಸಿದ್ದಾರೆ, ಅವರ ಮೀಸಲಾತಿ ಬಗ್ಗೆ ಚರ್ಚೆಯಾಗಬೇಕು, ಹಿಂದುಳಿದವರಲ್ಲಿ ಅತಿ ಹಿಂದುಳಿದ, ಕಟ್ಟ ಕಡೆಯ ಸಮುದಾಯಗಳಿಗೆ ಮೀಸಲಾತಿ ಪ್ರಯೋಜನ ಸಿಗುತ್ತಿಲ್ಲ, ಅವರಿಗೂ ಸೌಲಭ್ಯ ಸಿಗಬೇಕು.

ಸುಳ್ಳು ಹೇಳಲು ಬಜೆಟ್ ಅಧಿವೇಶನ ಬಳಕೆ
ಅಕ್ಷಮ್ಯ ಅಪರಾಧ

ಮುಖ್ಯಮಂತ್ರಿ ಅವರು ಇದನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು, ಅದು ಅಕ್ಷಮ್ಯ ಅಪರಾಧ ಎಂದರು.

ಸರ್ಕಾರದ ನಡವಳಿಕೆಯಿಂದ ಸಮಾಜದಲ್ಲಿ ಅಶಾಂತಿ ಮೂಡುತ್ತಿದೆ, ಸಂಪುಟದ ಸಚಿವರೆ ಅಪಸ್ವರ ಎತ್ತಿದ್ದಾರೆ, ಸಂಪುಟದಲ್ಲಿ ಒಗ್ಗಟ್ಟಿಲ್ಲವೆ, ಬದ್ಧತೆ ಇಲ್ಲವೆ.

ಡಬಲ್ ಗೇಮ್

ಜಾತಿ ಸಮೀಕ್ಷೆ ವಿಚಾರದಲ್ಲಿ ಸರ್ಕಾರ ಡಬಲ್ ಗೇಮ್ ಆಡುತ್ತಿದ್ದು, ಚಿವುಟುವವರೂ ಇವರೇ, ರಮಿಸುವವರೂ ಇವರೇ ಆಗಿದ್ದಾರೆ. ಬಡವರು, ತುಳಿತಕ್ಕೊಳಗಾದವರ ಜೊತೆ ಆಟ ಆಡುವುದು ಸರಿಯಲ್ಲ. ಸಮಾಜದಲ್ಲಿ ಗೊಂದಲ ಉಂಟು ಮಾಡುವ ಕೆಲಸ ಮಾಡಬೇಡಿ. ವರದಿ ಮಾಡಿದವರೊಬ್ಬರು, ನೀಡುವವರೊಬ್ಬರು.

ರಾಜ್ಯ ಸರ್ಕಾರ ಸ್ವೀಕಾರ ಮಾಡಿರುವ ವರದಿಯಲ್ಲಿ 70 ಲಕ್ಷ ಜನ ಮುಸ್ಲೀಮರಿದ್ದಾರೆ ಎಂಬ ಮಾಹಿತಿ ಸೋರಿಕೆಯಾಗಿದೆ. ರಾಜ್ಯದ ಬಹುಸಂಖ್ಯಾತ ಜಾತಿಗಳಿಗಿಂತ ಮುಸ್ಲೀಮ ಹೆಚ್ಚಿನ ಜನಸಂಖ್ಯೆ ಇದ್ದಾರೆ ಎಂದಾದರೆ ಅವರು ಹೇಗೆ ಅಲ್ಪಸಂಖ್ಯಾತರಾಗುತ್ತಾರೆ. ಸರ್ಕಾರ ಇದಕ್ಕೆ ಉತ್ತರ ಕೊಡಬೇಕು ಎಂದು ಆಗ್ರಹಿಸಿದರು.

ಪಾಕ್ ಪರ ಘೋಷಣೆ ಕೂಗಿರುವುದು ಎಫ್‌ಎಸ್‌ಎಲ್ ವರದಿಯಲ್ಲಿ ಸ್ಪಷ್ಟವಾಗಿದೆ ಎಂಬ ಮಾಹಿತಿ ಇದೆ, ಘೊಷಣೆ ಕೂಗಿದವರು ಭಯೋತ್ಪಾದಕರಿಗೆ ಸಹಕಾರ ನೀಡಿದ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಗಳಿವೆ, ಸರ್ಕಾರ ಯಾವ ಕಾರಣಕ್ಕೆ ವರದಿ ಮುಚ್ಚಿಡಲು ಪ್ರಯತ್ನ ಮಾಡುತ್ತಿದೆ ಎಂದು ಪ್ರಶ್ನಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
caste censusgovt. playimg double game - basavaraja bommainot good for the society
3 FacebookTwitterPinterestEmail
admin

previous post
ಅಂಗದಾನಿಗಳ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಲಿದೆ
next post
ಪ್ರಭಾವೀ ಕುಟುಂಬಗಳಿಗೆ ಕಾಂಗ್ರೆಸ್ ಟಿಕೆಟ್

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ