122
ಬೆಂಗಳೂರು: ಬರ ಪರಿಸ್ಥಿತಿ ನಿರ್ವಹಣೆ ಮತ್ತಿತರ ವಿಷಯಗಳ ಪ್ರಗತಿ ಪರಿಶೀಲನೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು, ಕಾರ್ಯದರ್ಶಿಗಳು ಮತ್ತು ಇತರ ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗ್ಗೆ 11 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ವಿಡಿಯೊ ಸಂವಾದ ನಡೆಸಲಿದ್ದಾರೆ.
ವಿಡಿಯೊ ಸಂವಾದದಲ್ಲಿ ಎಲ್ಲ ಜಿಲ್ಲೆಗಳಲ್ಲಿನ “ಕುಡಿಯುವ ನೀರು, ಬರ ನಿರ್ವಹಣೆ, ಜಾನುವಾರುಗಳಿಗೆ ಮೇವು, ಉದ್ಯೋಗ ಹಾಗೂ ಕೃಷಿ” ವಿಷಯಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಅವರು ಸಂವಾದ ನಡೆಸಲಿದ್ದಾರೆ.