Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪಾಕ್ ಜಿಂದಾಬಾದ್ ಪ್ರಕರಣ ಸರ್ಕಾರಕ್ಕೆ ಮುಜುಗರ ತಂದಿಲ್ಲ

by admin March 5, 2024
written by admin March 5, 2024 0 comments 2 minutes read
2FacebookTwitterPinterestEmail
165

ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ

ಬೆಂಗಳೂರು:ರಾಜ್ಯಸಭಾ ಚುನಾವಣಾ ಫಲಿತಾಂಶದ ನಂತರ ವಿಜಯೋತ್ಸವ ಸಂದರ್ಭದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದಿರುವುದು ಸರ್ಕಾರಕ್ಕೆ ಮುಜುಗರ ತಂದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.

ಸರ್ಕಾರ ಈ ರೀತಿ ಕೂಗಲು ಯಾರನ್ನೂ ಪ್ರಚೋದಿಸಿಲ್ಲ, ಅವನ್ಯಾರೋ ಬಂದಿದ್ದಾನೆ, ಕೂಗಿದ್ದಾನೆ, ಅವರನ್ನು ಬಂಧಿಸಿದ್ದೇವೆ. ಇದುವರೆಗೂ ಆತ ಕೂಗಿರುವುದರ ಬಗ್ಗೆ ಖಚಿತ ಪಡಿಸಿಕೊಳ್ಳಲು ಕಾಯುತ್ತಿದ್ದೆವು, ಮಾಹಿತಿ ಖಚಿತವಾಗುತ್ತಿದ್ದಂತೆ ಆರೋಪಿಗಳನ್ನು ಬಂಧಿಸಿದ್ದೇವೆ ಎಂದರು.

ಯಾರನ್ನೋ ಕೇಳಿ ಕೆಲಸ ಮಾಡುವ ಅಗತ್ಯ ಇಲ್ಲ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕೆ ಮುಜುಗರ ಆಗುವಂತದ್ದು ಏನು ಮಾಡಿಲ್ಲ, ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ತೆಗೆದುಕೊಂಡು ಒಳ್ಳೆ ಕೆಲಸ ಮಾಡಿದೆ, ಇದಕ್ಕೆ ಸರ್ಕಾರವನ್ನು ಪ್ರಶಂಶಿಸಬೇಕು, ವಿಧಾನಸೌಧದ ಭದ್ರತಾ ವೈಫಲ್ಯ ಕಂಡು ಬಂದರೆ ಇಲಾಖಾ ಅಧಿಕಾರಿಗಳು ಖಂಡಿತವಾಗಿಯೂ ಕ್ರಮ ತೆಗೆದುಕೊಳ್ಳುತ್ತಾರೆ, ಯಾರನ್ನೋ ಕೇಳಿ ಕೆಲಸ ಮಾಡುವ ಅಗತ್ಯತೆ ಇಲ್ಲ ಎಂದರು.

ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖೆಯ ಅಧಿಕೃತ ಎಫ್‌ಎಸ್‌ಎಲ್ ವರದಿಯನ್ನು ಆಧಾರವಾಗಿಟ್ಟುಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ.

ಖಚಿತ ಹಿನ್ನೆಲೆ ಆರೋಪಿಗಳ ಬಂಧನ

ಎಫ್‌ಎಸ್‌ಎಲ್ ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಸದನದಲ್ಲಿ ಉತ್ತರಿಸಿದ್ದೆನು, ವರದಿಯಲ್ಲಿ ಖಚಿತವಾದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಖಾಸಗಿಯವರೂ ಎಫ್‌ಎಸ್‌ಎಲ್ ವರದಿ ಬಿಡುಗಡೆ ಮಾಡಿದ್ದರು, ನಾವು ಅದನ್ನು ಅಧಿಕೃತ ಎಂದು ಪರಿಗಣಿಸುವುದಿಲ್ಲ, ಖಾಸಗಿಯವರಿಗೆ ಯಾವುದೇ ರೀತಿಯ ಮಾನ್ಯತೆ ನೀಡಿಲ್ಲ, ನಮ್ಮ ಇಲಾಖೆಯ ಎಫ್‌ಎಸ್‌ಎಲ್ ವರದಿಯಲ್ಲಿ ಆರೋಪಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಖಚಿತವಾಗಿದೆ, ಈ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿದ್ದಾರೆ, ಪ್ರಕರಣದ ತನಿಖೆ ಮುಂದುವರಿಯಲಿದ್ದು, ತನಿಖೆಯಿಂದ ಬರುವ ಮಾಹಿತಿ ಆಧರಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದರು.

ಸರ್ಕಾರಿ ಶಾಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ
ಸಾಕ್ಷ್ಯ ಇಲ್ಲದೆ ಯಾರನ್ನೂ ಬಂಧಿಸಲಾಗದು

ವಿರೋಧ ಪಕ್ಷದವರು ದಿನಕ್ಕೊಂದು ರೀತಿ ಹೇಳಿಕೆ ನೀಡುತ್ತಾರೆ, ಸಾಕ್ಷ್ಯ ಇಲ್ಲದೆ ಯಾರನ್ನೂ ಬಂಧಿಸಲಾಗದು, ವರದಿ ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದ್ದು ಇನ್ನೇನು ಬಹಿರಂಗಪಡಿಸಬೇಕು, ಪ್ರಕರಣವನ್ನು ಮುಚ್ಚಿಡುತ್ತಿದ್ದಾರೆ ಎಂದು ಆರೋಪಿಸುತ್ತಿದ್ದ ಬಿಜೆಪಿಯವರು ಈಗ ಏನು ಹೇಳುತ್ತಾರೆ ಎಂದು ಮರು ಪ್ರಶ್ನಿಸಿದರು.

ಮಂಡ್ಯದಲ್ಲಿ 2022 ರ ನವೆಂಬರ್‌ನಲ್ಲಿ ಬಿಜೆಪಿ ಕಾರ್ಯಕರ್ತರು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು, ಆಗ ಅಧಿಕಾರದಲ್ಲಿದ್ದ ಬಿಜೆಪಿಯವರು ಯಾಕೆ ಕ್ರಮ ತೆಗೆದುಕೊಳ್ಳಲಿಲ್ಲ.

ಹಳೆಯ ಪ್ರಕರಣ ಈಗ ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಮಂಡ್ಯ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ, ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ಮೇಲೆ ಕಾನೂನು ಎಲ್ಲರಿಗೂ ಒಂದೇ, ಯಾವ ಸಂದರ್ಭದಲ್ಲಿ ಕೂಗಿದ್ದಾರೆ ಎಂಬುದು ತನಿಖೆಯಿಂದ ಹೊರಬರುತ್ತೆ ಎಂದರು.

ನಾನು ಹೇಳುವುದು ಅಧಿಕೃತ

ಪ್ರಕರಣ ಕುರಿತು ಬೇರೆ ಇಲಾಖೆಯ ಸಚಿವರಿಗೆ ಸ್ಪಷ್ಟ ಮಾಹಿತಿ ಇರುವುದಿಲ್ಲ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಇಲಾಖೆಯ ಆಧಿಕಾರಿಗಳು ಹಾಗೂ ಸಂಬಂಧಿಸಿದ ಸಚಿವರ ಹೇಳಿಕೆ ಮಾತ್ರ ಅಧಿಕೃತ, ಈಗ ನಾನು ಹೇಳುವುದು ಅಧಿಕೃತ.

ಯುಎಪಿಎ ಪ್ರಕರಣಗಳು ನೇರವಾಗಿ ಕೇಂದ್ರದ ತನಿಖಾ ಸಂಸ್ಥೆಗಳಾದ ಎನ್‌ಐಎ ಅಥವಾ ಸಿಬಿಐಗೆ ಬರುತ್ತದೆ, ಈ ಹಿನ್ನೆಲೆಯಲ್ಲಿ ಎನ್‌ಐಎ ಅವರು ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ, ಸಿಸಿಬಿ ಪೊಲೀಸರು ಸಹ ತನಿಖೆ ಮುಂದುವರಿಸುತ್ತಾರೆ.

ನಮ್ಮಲ್ಲಿರುವ ಮಾಹಿತಿಯನ್ನು ಎನ್‌ಐಎಯೊಂದಿಗೆ ಹಂಚಿಕೊಳ್ಳಲಾಗುವುದು, ಪ್ರಕರಣ ನಡೆದ ಮರುದಿನ ಸಿಸಿಬಿ ಪೊಲೀಸರು ಜೈಲಿನಲ್ಲಿರುವವರ ವಿಚಾರಣೆಯನ್ನೂ ನಡೆಸಿದ್ದಾರೆ, ಯಾರೇ ತನಿಖೆ ನಡೆಸಿದರು ಒಟ್ಟಾರೆಯಾಗಿ ಆರೋಪಿಯನ್ನು ಪತ್ತೆ ಹಚ್ಚುವುದಷ್ಟೆ ಮುಖ್ಯ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
arrested the culprits on proofbjp also done same thing in 2022 in mandyadr. g.parameshwar to presspak slogan - no humiliation to govt.
2 FacebookTwitterPinterestEmail
admin

previous post
ಸರ್ಕಾರಿ ಶಾಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ
next post
ನಾಲ್ಕು ಕೃಷಿ ವಿವಿಗಳ ಖಾಲಿ ಹುದ್ದೆಗಳ ಭರ್ತಿ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ