Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಸರ್ಕಾರಿ ಶಾಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ

by admin March 5, 2024
written by admin March 5, 2024 0 comments 2 minutes read
2FacebookTwitterPinterestEmail
162

ಸರ್ಕಾರಿ ಶಾಲಾ ಮಕ್ಕಳೊಡನೆ ವಿಡಿಯೊ ಸಂವಾದ

ಬೆಂಗಳೂರು:ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು, ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಳ್ಳಬೇಕು, ಜ್ಞಾನದ ವಿಕಾಸವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ.

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಮೈಸೂರು ವತಿಯಿಂದ ’ನಮ್ಮ ಶಾಲೆ ನಮ್ಮ ಜವಾಬ್ದಾರಿ’ – ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಬಲವರ್ಧನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಚಾಲನೆ ನೀಡಿ ಮಾತನಾಡಿದರು.

ಸಂವಿಧಾನ ಪೀಠಿಕೆ ಹೇಳಿದ ಮಕ್ಕಳು

ಮುಖ್ಯಮಂತ್ರಿಗಳು ತಾವು ಕಲಿತ ಸಿದ್ದರಾಮನಹುಂಡಿ ಹಾಗೂ ಕುಪ್ಪೆಗಾಲ ಸರ್ಕಾರಿ ಶಾಲೆಯ ಮಕ್ಕಳೊಡನೆ ವಿಡಿಯೊ ಸಂವಾದ ನಡೆಸಿದರು.

ಸಂವಿಧಾನ ಏನು ಹೇಳುತ್ತದೆ ಹೇಳಿ ನೋಡೋಣ ಎಂದು ಮಕ್ಕಳನ್ನು ಕೇಳಿದಾಗ, ಮಕ್ಕಳು ಸಂವಿಧಾನದ ಪೂರ್ಣ ಪೀಠಿಕೆಯನ್ನು ಹೇಳಿದರು. ಕೇವಲ ಕಂಠಪಾಠ ಮಾಡಿದರೆ ಸಾಲದು, ಅದರ ತಿರುಳನ್ನು ಅರಿತು ಅದರಂತೆ ನಡೆಯಬೇಕು ಎಂದರು.

ಮಕ್ಕಳು ಮನುಷ್ಯತ್ವ ಬೆಳೆಸಿಕೊಳ್ಳಬೇಕು

ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಸಂವಿಧಾನದ ತಿರುಳು, ಸಮಾನತೆ, ಸಮಸಮಾಜ ನಿರ್ಮಾಣವಾಗಬೇಕು, ಬುದ್ಧ, ಬಸವ, ಅಂಬೇಡ್ಕರ್ ಅವರು ಇದನ್ನೇ ಹೇಳಿಕೊಂಡು ಬಂದಿದ್ದರಾದರೂ ಇದು ಪೂರ್ಣವಾಗಿಲ್ಲ, ಇದೆಲ್ಲ ಓದಿ ಅರ್ಥ ಮಾಡಿಕೊಂಡು ಮಕ್ಕಳು ಮನುಷ್ಯತ್ವ ಬೆಳೆಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಮಕ್ಕಳಿಗೆ ಕಿವಿಮಾತು ಹೇಳಿದರು.

ಸರ್ಕಾರಿ ಶಾಲೆಗಳಲ್ಲಿ ಕೆಲವು ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ, ಶಾಲೆಯ ಅಭಿವೃದ್ಧಿ ದೃಷಿಯಿಂದ ಸರ್ಕಾರ ಉಚಿತ ಶಿಕ್ಷಣ ನೀಡುತ್ತಿದೆ, ಸಂವಿಧಾನ ಜಾರಿಗೆ ಬಂದ ನಂತರ ಉಚಿತ ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿ ಮಾಡಿದೆ, ಎಲ್ಲರಿಗೂ ಶಿಕ್ಷಣ ಕಡ್ಡಾಯವಾಗಿದೆ ಎಂದರು.

ಶಾಲೆಗಳಲ್ಲಿ ಮೊಟ್ಟೆ, ಹಾಲು ಕೊಡ್ತಾ ಇದ್ದಾರೆಯೇ, ವಾರದಲ್ಲಿ ಎಷ್ಟು ದಿನ ಕೊಡುತ್ತಿದ್ದಾರೆ ಎಂದು ಪ್ರಶ್ನಿಸಿದಾಗ, “ಕೊಡುತ್ತಿದ್ದಾರೆ.. ವಾರದಲ್ಲಿ ಮೂರು ದಿನ ನೀಡಲಾಗುತ್ತಿದೆ” ಎಂದು ಮಕ್ಕಳು ಉತ್ತರಿಸಿದರು.

ಕುಮಾರಸ್ವಾಮಿ ಸ್ಪರ್ಧೆ: ದೆಹಲಿಯಲ್ಲಿ ನಿರ್ಧಾರ
ನೇರವಾಗಿ 5ನೇ ತರಗತಿಗೆ ಸೇರಿದೆ

“ನಾನು ಓದುವಾಗ ಸಂವಿಧಾನ ಜಾರಿಗೆ ಬಂದಿತ್ತು, ನಾನು ಹುಟ್ಟಿದ್ದು ಸ್ವಾತಂತ್ರ್ಯ ಪೂರ್ವದಲ್ಲಿ, ನಂಜೇಗೌಡ ಎಂಬುವರು ನನಗೆ ಅಕ್ಷರಾಭ್ಯಾಸ ಮಾಡಿಸಿದರು, ಕನ್ನಡ ಓದು ಬರೆಯುವುದು, ಲೆಕ್ಕ ಮಾಡುವುದನ್ನು ಹೇಳಿಕೊಟ್ಟಿದ್ದರು, ಅವರು ಶಾಲೆ ಬಿಟ್ಟ ನಂತರ ಎಮ್ಮೆ ಮೇಯಿಸುತ್ತಿದ್ದ ನನ್ನನ್ನು ರಾಜಪ್ಪ ಎಂಬ ಮೇಷ್ಟ್ರು ಮನೆಗೆ ಬಂದು ನೇರವಾಗಿ 5ನೇ ತರಗತಿಗೆ ಸೇರಿಸಿದ್ದರು ಎಂದು ಮುಖ್ಯಮಂತ್ರಿ ಸ್ಮರಿಸಿಕೊಂಡರು.

8ನೇ ತರಗತಿ ಓದಲು ಕುಪ್ಪೆಗಾಲಕ್ಕೆ ಹೋಗುತ್ತಿದ್ದೆ, ಪ್ರೌಢಶಾಲೆಗೆ ವಿದ್ಯಾವರ್ಧಕ ಶಾಲೆಗೆ ಸೇರಿದ್ದೆ, ಶಾಲೆಯ ದಾಖಲೆಗಳಲ್ಲಿ ನನ್ನ ಹುಟ್ಟಿದ ದಿನಾಂಕ 3-8-1947 ಎಂದು ನಮೂದಾಗಿದೆ, ಈಶ್ವರಾಚಾರ್ ಹೇಳಿಕೊಟ್ಟಿದ್ದ ಕನ್ನಡ ವ್ಯಾಕರಣವನ್ನು ನಾನು ಈಗಲೂ ಮರೆತಿಲ್ಲ ಎಂದರು.

ನಿಮಗಿರುವ ಸೌಲಭ್ಯ ನಮಗಿರಲಿಲ್ಲ

ಈಗ ಸರ್ಕಾರ ಹಾಲು, ಮೊಟ್ಟೆ, ಚಿಕ್ಕಿ, ಬಿಸಿಯೂಟ, ಸಮವಸ್ತ್ರ, ನೀಡುತ್ತಿದೆ, ನಿಮಗಿರುವ ಸೌಲಭ್ಯ ನಮಗಿರಲಿಲ್ಲ, ನಮ್ಮ ಕಾಲದಲ್ಲಿ ಶಿಕ್ಷಕರಿಂದ ಏಟನ್ನೂ ತಿನ್ನುತ್ತಿದ್ದೆವು, ಅಂದಿನ ಹೆಣ್ಣು ಮಕ್ಕಳು ಹೆಚ್ಚಾಗಿ ಓದುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಅಂದಿನ ತಮ್ಮ ಶಾಲಾ ದಿನಗಳನ್ನು ನೆನೆಸಿಕೊಂಡರು.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ತಾವು ಕಲಿತ ಹಾಗೂ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಪ್ಪೇಗಾಲ ಮತ್ತು ಕೆ.ಪಿ.ಎಸ್. ಸಿದ್ದರಾಮನಹುಂಡಿಗೆ 10 ಲಕ್ಷ ರೂ.ಗಳ ದೇಣಿಗೆ ನೀಡಿದರು.

ಶಾಲೆಗಳ ಅಭಿವೃದ್ಧಿಗೆ 44 ಸಾವಿರ ಕೋಟಿ ರೂ.

ಇದೇ ಸಂದರ್ಭದಲ್ಲಿ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ದೊಡ್ಡ ಗುರಿಯನ್ನು ಹೊಂದಿದ್ದೇವೆ. 44 ಸಾವಿರ ಕೋಟಿ ರೂ.ಗಳನ್ನು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮೀಸಲಿಡಲಾಗಿದೆ, ಸಿಎಸ್‌ಆರ್‌ನಿಂದಲೂ ಇತರೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದರು.

ಶಾಲೆಯ ಹಳೆಯ ವಿದ್ಯಾರ್ಥಿಗಳು 6 ಕೋಟಿ ರೂ. ನೀಡಿದ್ದಾರೆ, ಮಾಲೂರಿನಲ್ಲಿಯೂ ಹಳೆಯ ವಿದ್ಯಾರ್ಥಿಗಳು ಆರು ಕೋಟಿ ರೂ. ಸಂಗ್ರಹಿಸಿದ್ದಾರೆ, ಸಾಮಾಜಿಕ ಕಳಕಳಿಯುಳ್ಳವರು ಮಕ್ಕಳಿಗೆ ಪಾಠವನ್ನೂ ಮಾಡಿದ್ದಾರೆ, 48,000 ಸರ್ಕಾರಿ ಶಾಲೆಗಳಲ್ಲಿ 14,000 ವಾಟ್ಸಾಪ್ ಗ್ರೂಪ್‌ಗಳಿವೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm video conferencinggovt. is giving free education to childrensqualitative education to govt. school childrensunderstand constitution
2 FacebookTwitterPinterestEmail
admin

previous post
ದಿನ ಭವಿಷ್ಯ : ಮಂಗಳವಾರ, 5ಮಾರ್ಚ್ 2024
next post
ಪಾಕ್ ಜಿಂದಾಬಾದ್ ಪ್ರಕರಣ ಸರ್ಕಾರಕ್ಕೆ ಮುಜುಗರ ತಂದಿಲ್ಲ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ