Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ಅರ್ಹ ರೈತರಿಗೆ ಬಗರ್‌ಹುಕುಂ ಭೂ ಮಂಜೂರು

by admin March 7, 2024
written by admin March 7, 2024 0 comments 2 minutes read
0FacebookTwitterPinterestEmail
238

ಕಂದಾಯ – ಅರಣ್ಯ ಭೂಮಿ ಗಡಿ ಗುರುತಿಸಲು ಜಂಟಿ ಸರ್ವೆ

ಬೆಂಗಳೂರು: ಫಾರಂ-57 ಅಡಿಯಲ್ಲಿ ಅರ್ಹ ರೈತರು ಅರ್ಜಿ ಸಲ್ಲಿಸಿದ್ದರೆ ಬಗರ್‌ಹುಕುಂ ಆ್ಯಪ್‌ ಮೂಲಕ ಭೂ ಮಂಜೂರು ಮಾಡುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡರು ತಿಳಿಸಿದ್ದಾರೆ.

ಸರ್ಕಾರ ಕಂದಾಯ ಹಾಗೂ ಅರಣ್ಯ ಇಲಾಖೆ ವತಿಯಿಂದ ಜಂಟಿ ಸರ್ವೇ ನಂತರ ಕಂದಾಯ ಭೂಮಿ ಮತ್ತು ಅರಣ್ಯ ಭೂಮಿ ಗಡಿಯನ್ನು ನಿಖರವಾಗಿ ಗುರುತಿಸಲಾಗುವುದು. ಗಡಿ ಗುರುತಿಸಿದ ನಂತರ ಅಂತಹ ಜಮೀನಿನಲ್ಲಿ ಒಂದು ವೇಳೆ ಕೃಷಿ ಚಟುವಟಿಕೆ ನಡೆಯುತ್ತಿದ್ದರೆ, ಅರ್ಹ ಹಿಡುವಳಿದಾರರಿಗೆ ಸಾಗುವಳಿ ಚೀಟಿ ನೀಡಲು ಕ್ರಮ ಜರುಗಿಸಲಾಗುವುದು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

 ರಾಜ್ಯಾದ್ಯಂತ ಜಂಟಿ ಸರ್ವೇ ನಡೆಸಿ  ಜನ ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕಳೆದ ಚಳಿಗಾಲದ ಅಧಿವೇಶನದಲ್ಲೇ ಸರ್ಕಾರ ಭರವಸೆ ನೀಡಿತ್ತು. ಜಂಟಿ ಸರ್ವೇ ಮೂಲಕ ಪರಿಭಾವಿತ ಅರಣ್ಯ, ಮೀಸಲು ಅರಣ್ಯದ ಮಾಹಿತಿಯನ್ನು ಸಾರ್ವಜನಿಕಗೊಳಿಸುವ ಹಾಗೂ ನಕ್ಷೆ ಇಲ್ಲದ ಜಮೀನುಗಳಲ್ಲಿ ರೈತರಿಗೆ ಸಾಗುವಳಿ ಚೀಟಿ ನೀಡಲು ಸರ್ಕಾರ ನಿಶ್ಚಯಿಸಿತ್ತು ಎಂದಿದ್ದಾರೆ.

ಕಳೆದ ಎರಡು ತಿಂಗಳುಗಳಿಂದ ಜಂಟಿ ಸರ್ವೇ ಕೆಲಸ ಪ್ರಗತಿಯಲ್ಲಿದೆ. ಈಗಾಗಲೇ ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸರ್ವೇ ಕೆಲಸ ಪ್ರಗತಿಯಲ್ಲಿದೆ. ಸರ್ಕಾರಿ ಭೂ ಮಾಪಕರು ಹಾಗೂ ಪರವಾನಗಿ ಹೊಂದಿರುವ ಭೂ ಮಾಪಕರ ಸಹಾಯದಿಂದ ಸರ್ವೇ ಕೆಲಸ ಆರಂಭಿಸಲಾಗಿದೆ.

ಕಂದಾಯ ಭೂಮಿ ಡೀನೋಟಿಫಿಕೇಷನ್ ಗೆ ಅರಣ್ಯ ಇಲಾಖೆಗೆ ಮನವಿ

ಚಾಮರಾಜನಗರ ಜಿಲ್ಲೆಯಲ್ಲಿ ಒಟ್ಟು 2845964 ಎಕರೆ ಪರಿಭಾವಿತ ಅರಣ್ಯ ಪ್ರದೇಶವಿದ್ದು, ಈ ಪೈಕಿ 12,70,847 ಎಕರೆ ಭೂಮಿಯನ್ನು ಅಳತೆ ಮಾಡಲಾಗಿದೆ. ಸರ್ವೇ ಪ್ರಕಾರ ಚಾಮರಾಜನಗರ ಜಿಲ್ಲೆಯಲ್ಲಿ ಒಟ್ಟು 7910 ಎಕರೆ ಕಂದಾಯ ಜಮೀನು ಇದ್ದು, ಈ ಜಮೀನನ್ನು ಡೀನೋಟಿಫಿಕೇಷನ್ ಮಾಡಲು ಅರಣ್ಯ ಇಲಾಖೆಗೆ ಮನವಿ ಸಲ್ಲಿಸಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಧಿಸೂಚನೆಯಂತೆ ಪರಿಭಾವಿತ ಒಟ್ಟು ಅರಣ್ಯ ಪ್ರದೇಶದ ವಿಸ್ತೀರ್ಣ 47,809.31 ಎಕರೆ. ಈ ಪೈಕಿ 21,662 ಎಕರೆ ಪ್ರದೇಶದ ಅಳತೆ ಕಾರ್ಯ ಮುಗಿದಿದ್ದು, 26,147 ಎಕರೆ ವಿಸ್ತೀರ್ಣದ ಪ್ರದೇಶ ಅಳತೆಗೆ ಕ್ರಮ ಜರುಗಿಸಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಒಟ್ಟು ಪರಿಭಾವಿತ ಅರಣ್ಯ ಪ್ರದೇಶದ ಪೈಕಿ ಈವರೆಗೆ ಒಟ್ಟು 20,769 ಎಕರೆ ಭೂಮಿಯನ್ನು ಅಳತೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಭಾವಿತ ಅರಣ್ಯ ಪ್ರದೇಶದ ವಿಸ್ತೀರ್ಣ ಒಟ್ಟು 21983 ಎಕರೆ ಎಂದು ಗುರುತಿಸಲಾಗಿದ್ದು, ಈವರೆಗೆ 800 ಎಕರೆ ಜಮೀನಿನಲ್ಲಿ ಅಳತೆ ಕಾರ್ಯ ನಡೆಸಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ 130927 ಎಕರೆ ವಿಸ್ತೀರ್ಣದ ಜಮೀನನ್ನು ಪರಿಭಾವಿತ ಅರಣ್ಯ ಪ್ರದೇಶ ಎಂದು ಗುರುತಿಸಿದ್ದು, ಈಗಾಗಲೇ 17 ಜನ ಭೂ ಮಾಪಕರನ್ನು ಸರ್ವೇ ಕೆಲಸಕ್ಕೆ ನಿಯೋಜಿಸಲಾಗಿದೆ. ಪ್ರಾಥಮಿಕವಾಗಿ 300 ಎಕರೆ ಪ್ರದೇಶದ ಸರ್ವೇ ಕಾರ್ಯವನ್ನು ಮುಗಿಸಲಾಗಿದೆ.

ಅರಣ್ಯ ಹಾಗೂ ಕಂದಾಯ ಭೂಮಿ ಗುರುತಿಸುವ ಸಂಬಂಧ ಹೆಚ್ಚು ಸಮಸ್ಯೆಗಳಿರುವ ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಬೇರೆ ಬೇರೆ ಜಿಲ್ಲೆಗಳಿಂದ ಆದ್ಯತೆ ಮೇಲೆ ಭೂ ಮಾಪಕರನ್ನು ತುರ್ತು ನಿಯೋಜನೆಗೊಳಿಸಿ ಜಂಟಿ ಸರ್ವೇ ಕೆಲಸಕ್ಕೆ ವೇಗ ನೀಡಲಾಗಿದೆ.

ರಾಜ್ಯಾದ್ಯಂತ ಜಂಟಿ ಸರ್ವೆ ವಿಸ್ತರಣೆ

ರಾಜ್ಯಾದ್ಯಂತ ಪೋಡಿ, ಹದ್ದುಬಸ್ತು, ನ್ಯಾಯಾಲಯದಲ್ಲಿರುವ ತಕರಾರು ಪ್ರಕರಣಗಳ ಇತ್ಯರ್ಥಕ್ಕೆ ಸಂಬಂಧಿಸಿದಂತೆಯೂ ಭೂ ಮಾಪಕರ ಜವಾಬ್ದಾರಿ ಪ್ರಮುಖವಾದದ್ದಾಗಿದೆ. ಉಳಿದ ಜಿಲ್ಲೆಗಳಲ್ಲೂ ಸಹ ಆದ್ಯತೆ ಮೇಲೆ ಶೀಘ್ರದಲ್ಲೇ ಜಂಟಿ ಸರ್ವೇ ಕೆಲಸಕ್ಕೆ ಹಂತಹಂತವಾಗಿ ಮುಂದಾಗುವಂತೆ ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಈಗಾಗಲೇ 991 ಪರವಾನಗಿ ಸರ್ವೇಯರ್ ಗಳನ್ನು ಎಲ್ಲಾ ಜಿಲ್ಲೆಗಳಿಗೂ ಆದ್ಯತೆ ಮೇಲೆ ಕಳುಹಿಸಿಕೊಡಲಾಗುತ್ತಿದೆ. ಅಲ್ಲದೆ,  364 ಸರ್ಕಾರಿ ಸರ್ವೇಯರ್ ಹಾಗೂ 27 ಎಡಿಎಲ್‌ಆರ್ ನೇಮಕಕ್ಕೂ ಅಧಿಸೂಚನೆ ಹೊರಡಿಸಲಾಗಿದೆ.

ಪ್ರತೀ ಜಿಲ್ಲೆಯ ವಿಸ್ತೀರ್ಣವನ್ನು ಅಳೆಯುವ ಸಲುವಾಗಿ ಡ್ರೋನ್‌ ಸರ್ವೇಗೆ ಈಗಾಗಲೇ ಚಾಲನೆ ನೀಡಲಾಗಿದೆ. ಡ್ರೋನ್ ಸರ್ವೇ ಮೂಲಕವೂ ಜಿಲ್ಲಾ ವ್ಯಾಪ್ತಿಯಲ್ಲಿ ಕಂದಾಯ ಭೂಮಿ ವಿಸ್ತೀರ್ಣದ ಪ್ರಮಾಣ ಹಾಗೂ ಅರಣ್ಯ ಪ್ರದೇಶ ವಿಸ್ತೀರ್ಣದ ನಿಖರ ಪ್ರಮಾಣ ಎಷ್ಟು? ಎಂಬ ಮಾಹಿತಿಯನ್ನು ಗುರಿತಿಸುವ ಕೆಲಸ ಚಾಲ್ತಿಯಲ್ಲಿದೆ.

ಒಂದು ವೇಳೆ ಕಂದಾಯ ಭೂಮಿಯನ್ನು ತಪ್ಪಾಗಿ ಅರಣ್ಯ ಇಲಾಖೆ ನೋಟಿಫೈ ಮಾಡಿರುವುದು ಜಂಟಿ ಸರ್ವೇ ಅಥವಾ ಟ್ರೋನ್ ಸರ್ವೇಯಿಂದ ಖಚಿತವಾದಲ್ಲಿ ಆ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಲು ಅರಣ್ಯ ಇಲಾಖೆಗೆ ಮನವಿ ಸಲ್ಲಿಸಲಾಗುವುದು. ಈ ಸಂಬಂಧ ಅರಣ್ಯ ಇಲಾಖೆ ಸಚಿವರಾದ ಮಾನ್ಯ ಈಶ್ವರ್‌ ಖಂಡ್ರೆ ಅವರ ಜೊತೆಗೂ ಸಭೆ ನಡೆಸಿ ಚರ್ಚಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Bagarhukumeligible farmersJoint surveyKrishna Byre Gowdaland allotmentland boundaryministerrevenuerevenue-forest
0 FacebookTwitterPinterestEmail
admin

previous post
ಇನ್ನೆರಡು-ಮೂರು ದಿನದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ
next post
ಸಿಇಟಿ ಅರ್ಜಿ ಸಲ್ಲಿಸಲು ಕೊನೆ ಅವಕಾಶ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ