17835.9 ಕೋಟಿ ರೂ.ಮೊತ್ತದ ಯೋಜನೆಗಳಿಗೆ ಅನುಮೋದನೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ (ಎಸ್ಎಚ್ಎಲ್ಸಿಸಿ) 63ನೇ ಸಭೆಯಲ್ಲಿ, ರಾಜ್ಯದಾದ್ಯಂತ 27,067 ಉದ್ಯೋಗಗಳನ್ನು ಸೃಷ್ಟಿಸುವ 17835.9 ಕೋಟಿ ರೂ.ಮೊತ್ತದ ಯೋಜನೆಗಳಿಗೆ ಅನುಮೋದನೆ ದೊರೆತಿದೆ.
ಇದರಲ್ಲಿ 8220.05 ಕೋಟಿ ರೂ. ಮೊತ್ತದ 6 ಹೊಸ ಯೋಜನೆಗಳು ಮತ್ತು 9,615.85 ಕೋಟಿ ರೂ. ಮೊತ್ತದ ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳು ಇವೆ.
ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟು
ಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ, ಬಳ್ಳಾರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಹೊಸ ಹೂಡಿಕೆ ಮತ್ತು ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳಿಗೆ ದೊರೆತಿರುವ ಅನುಮತಿಗಳಿಂದ ಈ ಜಿಲ್ಲೆಗಳಲ್ಲಿ ಒಟ್ಟಾರೆ 10,433.72 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಕೋಲಾರ ಜಿಲ್ಲೆಯಲ್ಲಿ ಸ್ಮಾರ್ಟ್ಫೋನ್ ತಯಾರಿಕಾ ಘಟಕ
ವಿಸ್ಟ್ರಾನ್ ಇನ್ಫೊಕಾಂ ಮ್ಯಾನುಫ್ಯಾಕ್ಚರಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನಿಂದ ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ 2095 ಕೋಟಿ ರೂ. ವೆಚ್ಚದಲ್ಲಿ ಸ್ಮಾರ್ಟ್ಫೋನ್ ತಯಾರಿಕಾ ಘಟಕ ಆರಂಭಿಸಲಿದೆ. ಇದರಿಂದ 21723 ಜನರಿಗೆ ಉದ್ಯೋಗಗಳು ದೊರೆಯಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.
ನಿಗಮ- ಮಂಡಳಿಗಳ ಪರೀಕ್ಷೆ ಫಲಿತಾಂಶ ಪ್ರಕಟ
ರಾಜ್ಯದಲ್ಲಿ ಹೊಸದಾಗಿ ಬಂಡವಾಳ ಹೂಡಿಕೆ ಮಾಡಲಿರುವ ಒಟ್ಟು 6 ಕಂಪನಿಗಳಾದ – ಎಸ್ಟಿಟಿ ಗ್ಲೋಬಲ್ ಡೇಟಾ ಸೆಂಟರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಇಂಡಿಯನ್ ಕೇನ್ ಪವರ್ ಲಿಮಿಟೆಡ್, ಐ.ಸಿ.ಟಿ ಸರ್ವಿಸ್ ಮ್ಯಾನೇಜ್ಮೆಂಟ್ ಸೊಲ್ಯೂಷನ್ಸ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್, ಶ್ರೀ ಬಾಲಾಜಿ ಷುಗರ್ಸ್ ಮತ್ತು ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಏರ್ ಇಂಡಿಯಾ ಲಿಮಿಟೆಡ್ನ ಒಟ್ಟು 8220.05 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಗಳಿಗೆ ಸಮಿತಿಯು ಒಪ್ಪಿಗೆ ನೀಡಿದೆ. ಈ ಹೊಸ ಯೋಜನೆಗಳಿಂದ ರಾಜ್ಯದಲ್ಲಿ ಒಟ್ಟು 27,067 ಹೊಸ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ.
ಹೆಚ್ಚುವರಿ ಹೂಡಿಕೆಯ 8 ಪ್ರಸ್ತಾವನೆಗಳಿಗೂ ಒಪ್ಪಿಗೆ
ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಕಂಪನಿಗಳ ಸಾಮರ್ಥ್ಯ ವಿಸ್ತರಣೆ ಉದ್ದೇಶದ ಹೆಚ್ಚುವರಿ ಹೂಡಿಕೆಯ 8 ಪ್ರಸ್ತಾವನೆಗಳಿಗೂ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಅಲ್ಟ್ರಾಟೆಕ್ ಸಿಮೆಂಟ್ ಲಿಮಿಟೆಡ್, ಆರ್ಬಿಎಸ್ಎಸ್ಎನ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್, ಎಂವಿ ಎನರ್ಜಿ ಪ್ರೈವೇಟ್ ಲಿಮಿಟೆಡ್, ಇಂಡಿಯನ್ ಕೇನ್ ಪವರ್ ಲಿಮಿಟೆಡ್, ಗ್ರೀನ್ಕೊ ಕೆಎ01 ಐಆರ್ಇಪಿ ಪ್ರೈವೇಟ್ ಲಿಮಿಟೆಡ್, ಅಥಣಿ ಷುಗರ್ಸ್ ಲಿಮಿಟೆಡ್, ಉಕೆಮ್ ಅಗ್ರಿ ಇನ್ಫ್ರಾ ಲಿಮಿಟೆಡ್ ಮತ್ತು ಸ್ನೈಡರ್ ಎಲೆಕ್ಟ್ರಿಕ್ ಐಟಿ ಬಿಸಿನೆಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸೇರಿವೆ. ಇವುಗಳ ಹೆಚ್ಚುವರಿ ಹೂಡಿಕೆಯ ಮೊತ್ತವು 9,615.85 ರೂ.ಕೋಟಿಗಳಷ್ಟಿದೆ.
ಸಿಇಟಿ ಅರ್ಜಿ ಸಲ್ಲಿಸಲು ಕೊನೆ ಅವಕಾಶ
ಅಭಿವೃದ್ಧಿ ಆಯುಕ್ತೆ ಶ್ರೀಮತಿ ಡಾ.ಶಾಲಿನಿ ರಜನೀಶ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಆಯುಕ್ತರಾದ ಶ್ರೀಮತಿ ಗುಂಜನ್ ಕೃಷ್ಣ ಹಾಗೂ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.