197
ಜನವರಿಯಿಂದಲೇ ಪೂರ್ವಾನ್ವಯ
ಬೆಂಗಳೂರು:ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ನೌಕರರಿಗೆ ರಾಜ್ಯ ಸರ್ಕಾರ ಬಂಪರ್ ಕೊಡುಗೆ ನೀಡಿದೆ.
ತನ್ನ ನೌಕರರಿಗೆ ಶೇಕಡ 3.75 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿರುವುದಲ್ಲದೆ, ಇದು ಜನವರಿಯಿಂದಲೇ ಪೂರ್ವಾನ್ವಯಗೊಳ್ಳಲಿದೆ. ಏಪ್ರಿಲ್ ತಿಂಗಳ ವೇತನದಲ್ಲಿ ಈ ತುಟ್ಟಿಭತ್ಯೆ ಹೆಚ್ಚಳ ಮತ್ತು ಬಾಕಿ ದೊರೆಯಲಿದೆ.
ಮೂಲ ವೇತನದ ಶೇಕಡ 38.75 ರಿಂದ ಶೇಕಡ 42.5ಕ್ಕೆ ಪರಿಷ್ಕರಿಸಿ ತುಟ್ಟಿಭತ್ಯೆ ಮಂಜೂರು ಮಾಡಲಾಗಿದೆ.
ತುಟ್ಟಿಭತ್ಯೆ ಹೆಚ್ಚಳದಿಂದ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ 1,792 ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದೆ.