Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಅಂಕಣರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಬಿಜೆಪಿ 20 ಅಭ್ಯರ್ಥಿಗಳ ಪಟ್ಟಿ ಪ್ರಕಟ

by admin March 13, 2024
written by admin March 13, 2024 0 comments 2 minutes read
0FacebookTwitterPinterestEmail
198
ಡಾ. ಮಂಜುನಾಥ್, ಯದುವೀರ್, ಬೊಮ್ಮಾಯಿಗೆ ಟಿಕೆಟ್: ಸದಾನಂದಗೌಡ, ಪ್ರತಾಪಸಿಂಹ, ಕಟೀಲ್ ಸೇರಿದಂತೆ 9 ಸಂಸದರಿಗೆ ಕೊಕ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಪ್ರತಾಪಸಿಂಹ ಸೇರಿದಂತೆ 9 ಮಂದಿ ಸಂಸದರಿಗೆ ಲೋಕಸಭಾ ಚುನಾವಣೆ ಸ್ಪರ್ಧೆಗೆ ಟಿಕೆಟ್ ನಿರಾಕರಿಸಿರುವ ಬಿಜೆಪಿಯು ಹಳೆಯ ಮುಖಗಳ ಜೊತೆಗೆ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ಅವಕಾಶ ಕಲ್ಪಿಸಿದೆ.

ಪ್ರಕಟಿಸಿರುವ 20 ಕ್ಷೇತ್ರಗಳ ಅಭ್ಯರ್ಥಿಗಳ ಪೈಕೆ 9 ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡಿದ್ದು, ಒಂದು ಕ್ಷೇತ್ರದಲ್ಲಿ ಮಾತ್ರ ಅಭ್ಯರ್ಥಿ ಬದಲಾಯಿಸಿದೆ.

ಸರ್ಕಾರಕ್ಕೆ ರೈತರು, ಕೃಷಿ ಕಾರ್ಮಿಕರು, ನೇಕಾರರು ಕಾಣಿಸುತ್ತಿಲ್ಲ

ರಾಜಮನೆತನದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರಕ್ಕೆ, ಡಾ. ಸಿ.ಎನ್. ಮಂಜುನಾಥ್ ಅವರಿಗೆ ಬೆಂಗಳೂರು ಗ್ರಾಮಾಂತರ, ಮಾಜಿ ಶಾಸಕ ಎಸ್.ಬಾಲರಾಜ್ ಅವರನ್ನು ಚಾಮರಾಜನಗರದಿಂದ ಬಿಜೆಪಿ ಕಣಕ್ಕಿಳಿಸಿದೆ.

ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ಅವರಿಗೆ ಈ ಬಾರಿ ಉಡುಪಿ – ಚಿಕ್ಕಮಗಳೂರು ಬದಲಾಗಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡಲಾಗಿದೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಧಾರವಾಡದಿಂದ ಕಣಕ್ಕಿಳಿಸಿದರೆ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಹಾವೇರಿಯಿಂದ ಸ್ಪರ್ಧೆಗಿಳಿಸಿದೆ.

ಮಾಜಿ ಸಚಿವ ವಿ.ಸೋಮಣ್ಣ ಅವರಿಗೆ ತುಮಕೂರು ಟಿಕೆಟ್

ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸಪೂಜಾರಿ ಅವರಿಗೆ ಉಡುಪಿ-ಚಿಕ್ಕಮಗಳೂರು, ಪಕ್ಷದ ಕೆಲವರ ವಿರೋಧಕ್ಕೂ ಮಣಿಯದೇ ಮಾಜಿ ಸಚಿವ ವಿ.ಸೋಮಣ್ಣ ಅವರಿಗೆ ತುಮಕೂರು ಟಿಕೆಟ್ ನೀಡಲಾಗಿದೆ. ದಾವಣಗೆರೆಯಿಂದ ಸಂಸದ ಜಿ.ಎಂ.ಸಿದ್ದೇಶ್ವರ್ ಬದಲು  ಅವರ ಪತ್ನಿ ಗಾಯಿತ್ರಿ ಸಿದ್ದೇಶ್ವರ ಅವರಿಗೆ  ಅವಕಾಶ ಕಲ್ಪಿಸಿದೆ.

ಮಂಜುನಾಥ್ ಅಧಿಕೃತವಾಗಿ ಬಿಜೆಪಿಗೆ

ಉಳಿದಂತೆ ಮಾಜಿ ಮುಖ್ಯಮಂತ್ರ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ.ರಾಘವೇಂದ್ರ ಅವರಿಗೆ ಶಿವಮೊಗ್ಗ, ಚಿಕ್ಕೋಡಿಯಿಂದ ಅಣ್ಣಾ ಸಾಹೇಬ್ ಶಂಕರ್ ಜೊಲ್ಲೆ, ಬಾಗಲಕೋಟೆಯಿಂದ ಪಿ.ಸಿ.ಗದ್ದಿಗೌಡರ್, ಬಿಜಾಪುರದಿಂದ ರಮೇಶ್ ಜಿಗಜಿಣಗಿ, ಗುಲ್ಬರ್ಗಾದಿಂದ ಡಾ.ಉಮೇಶ್ ಜಿ.ಜಾದವ್, ಬೀದರ್ ನಿಂದ ಕೇಂದ್ರ ಸಚಿವ ಭಗವಂತ್ ಖೂಬಾ, ಬೆಂಗಳೂರು ಸೆಂಟ್ರಲ್ ನಿಂದ ಪಿ.ಸಿ.ಮೋಹನ್, ಬೆಂಗಳೂರು ದಕ್ಷಿಣದಿಂದ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ನೀಡಿ ಮರು ಸ್ಪರ್ಧೆಗೆ ಅವಕಾಶ ನೀಡಲಾಗಿದೆ.

ಪರೀಕ್ಷೆ ನಂತರವೇ ದೇವಸ್ಥಾನ ಪ್ರಸಾದ ವಿತರಣೆ

ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ನಳಿನ್ ಕುಮಾರ್ ಕಟೀಲ್ ಗೆ ಟಿಕೆಟ್ ನಿರಾಕರಿಸಿದ್ದು, ಅವರು ಪ್ರತಿನಿಧಿಸುತ್ತಿದ್ದ ದಕ್ಷಿಣ ಕನ್ನಡ ಕ್ಷೇತ್ರಕ್ಕೆ ಮಾಜಿ ಯೋಧ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ನೀಡಲಾಗಿದೆ. ಇನ್ನೂ ಕೊಪ್ಪಳದಿಂದ ಕರಡಿ ಸಂಗಣ್ಣ ಅವರಿಗೆ ಟಿಕೆಟ್ ತಪ್ಪಿಸಿ, ಡಾ. ಬಸವರಾಜ್ ಕ್ಯಾವಟೂರು ಅವರಿಗೆ ಟಿಕೆಟ್ ನೀಡಲಾಗಿದೆ.

5 ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕಗ್ಗಂಟು

ಬಳ್ಳಾರಿಯಿಂದ  ದೇವೆಂದ್ರಪ್ಪ ಅವರ ಬದಲಿಗೆ ಮಾಜಿ ಸಚಿವ ಬಿ.ಶ್ರೀರಾಮುಲು ಅವರಿಗೆ ಅವಕಾಶ ನೀಡಿದೆ.

ಕರ್ನಾಟಕದ 28 ಕ್ಷೇತ್ರಗಳಲ್ಲಿ ಎನ್ ಡಿಎ ಮೈತ್ರಿಕೂಟದ ಜೆಡಿಎಸ್ ಗೆ ಹಾಸನ, ಮಂಡ್ಯ, ಕೋಲಾರ ಬಿಟ್ಟುಕೊಟ್ಟಿದ್ದು, ಉಳಿದ 5 ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕಗ್ಗಂಟ್ಟಾಗಿದೆ. ರಾಜ್ಯದ ನಾಯಕರೊಂದಿಗೆ ಕೆಂದ್ರದ ಬಿಜೆಪಿ ನಾಯಕರು ಮತ್ತೊಂದು ಸುತ್ತಿನ ಮಾತುಕತೆ ನಡೆಸಿ  ಉಳಿದ ಕ್ಷೇತ್ರಗಳ ಪಟ್ಟಿ ಬಿಡುಗಡೆ ಮಾಡಲಿದೆ.

ಪಂಚ ಮಂತ್ರಿಗಳ ವಕ್ತಾರರ ತಂಡ ರಚನೆ

ಮೈಸೂರು, ಚಾಮರಾಜನಗರ, ದಾವಣಗೆರೆ, ಕೊಪ್ಪಳ, ಬಳ್ಳಾರಿ, ಬೆಂಗಳೂರು ಉತ್ತರ, ಚಿಕ್ಕಮಗಳೂರು-ಉಡುಪಿ, ದಕ್ಷಿಣ ಕನ್ನಡ, ತುಮಕೂರು, ಹಾವೇರಿ ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಟಿಕೆಟ್ ನೀಡಲಾಗಿದೆ.

ಹೃದಯ ತಜ್ಞ ಡಾ. ಮಂಜುನಾಥ್, ಡಾ. ಬಸವರಾಜ್ ಅವರು ಅಧಿಕೃತ ಬಿಜೆಪಿ ಸದಸ್ಯರಲ್ಲ. ಆದರೂ ಅವರಿಗೂ ಪಕ್ಷ ಸೇರುವ ಮುನ್ನವೇ ಟಿಕೆಟ್  ಘೋಷಣೆ ಮಾಡಲಾಗಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
20 candidatesannouncedbjpBommaiKateelManjunathPratapasimhaSadananda GowdaTicketYaduveer
0 FacebookTwitterPinterestEmail
admin

previous post
ಮಂಜುನಾಥ್ ಅಧಿಕೃತವಾಗಿ ಬಿಜೆಪಿಗೆ
next post
ದಿನ ಭವಿಷ್ಯ : ಗುರುವಾರ, 14 ಮಾರ್ಚ್ 2024

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ