ಉಡುಪಿ: ಕೇಂದ್ರ ಸರ್ಕಾರ ಕೇವಲ ಲೋಕಸಭಾ ಚುನಾವಣೆ ದೃಷ್ಟಿಯಿಂದ ಪೌರತ್ವ ಕಾಯ್ದೆ ಜಾರಿ ಮಾಡಿದ್ದು, ರಾಜ್ಯದಲ್ಲಿ ಸಿಎಎ ಅನುಷ್ಟಾನ ಕುರಿತು ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಸೋಲಿನ ಭಯ ಕಾಡುತ್ತಿರುವುದರಿಂದ ಇಂತಹ ಗಿಮಿಕ್ಸ್ಗಳನ್ನು ಮಾಡುತ್ತಿದೆ, ಪೌರತ್ವ ಕಾಯ್ದೆ ಜಾರಿ ಬಗ್ಗೆ ಇಷ್ಟು ವರ್ಷ ಮೌನವಹಿಸಿ ಚುನಾವಣೆ ಹೊಸ್ತಿಲಲ್ಲಿ ಜಾರಿಗೊಳಿಸಿದ್ದಾರೆ ಎಂದರು.
ಕರಾವಳಿ ಪ್ರದೇಶದಲ್ಲಿ ಪಕ್ಷಕ್ಕೆ ಬಲ
ಜಯಪ್ರಕಾಶ್ ಹೆಗಡೆ ಮತ್ತೊಮ್ಮೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಕರಾವಳಿ ಪ್ರದೇಶದಲ್ಲಿ ಪಕ್ಷಕ್ಕೆ ಬಲ ತುಂಬಿದಂತಾಗಿದೆ.
ಮೈಸೂರು ಸಂಸದ ಪ್ರತಾಪ್ ಸಿಂಹ ಅವರನ್ನು ಬಿಟ್ಟು, ಈ ಬಾರಿ ಲೋಕಸಭಾ ಚುನಾವಣೆಗೆ ರಾಜವಂಶಸ್ತ ಯಧುವೀರ್ ಒಡೆಯರ್ ಅವರಿಗೆ ಟಿಕೆಟ್ ನೀಡುವ ಬಿಜೆಪಿ ನಿರ್ಧಾರದ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದರು.