Saturday, June 13, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, June 13, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಲೋಕಸಭಾ ಚುನಾವಣಾ ವೇಳಾಪಟ್ಟಿ ಪ್ರಕಟಣೆಗೆ ಕ್ಷಣಗಣನೆ

by admin March 15, 2024
written by admin March 15, 2024 0 comments 2 minutes read
0FacebookTwitterPinterestEmail
309


ನೀತಿ ಸಂಹಿತೆ ತಕ್ಷಣದಿಂದಲೇ ಜಾರಿ


ಬೆಂಗಳೂರು:ಕರ್ನಾಟಕದ 28 ಸೇರಿದಂತೆ ರಾಷ್ಟ್ರದ 543 ಲೋಕಸಭಾ ಕ್ಷೇತ್ರಗಳಿಗೆ ನಾಳೆ ಶನಿವಾರ ಕೇಂದ್ರ ಚುನಾವಣಾ ಆಯೋಗ ಚುನಾವಣಾ ವೇಳಾಪಟ್ಟಿ ಪ್ರಕಟಿಸಲಿದೆ.

ಚುನಾವಣಾ ದಿನಾಂಕ ಪ್ರಕಟವಾದ ಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ.

ಚುನಾವಣಾ ಆಯೋಗಕ್ಕೆ ಹೊಸದಾಗಿ ಇಬ್ಬರು ಚುನಾವಣಾ ಆಯುಕ್ತರು ನೇಮಕಗೊಳ್ಳುತ್ತಿದ್ದಂತೆ ಲೋಕಸಭಾ ಚುನಾವಣೆಗೆ ಅಧಿಸೂಚನೆ ಹೊರಡಿಸಲು ಮುಂದಾಗಿದೆ.

ಪ್ರಸ್ತುತ ಲೋಕಸಭಾ ಅವಧಿ ಜೂನ್ 16 ಕ್ಕೆ ಕೊನೆಗೊಳ್ಳಲಿದ್ದು, ಅದಕ್ಕೂ ಮುನ್ನ ಹೊಸ ಸದನ ರಚನೆ ಆಗಬೇಕಿದೆ.

2019 ರಲ್ಲಿ ಲೋಕಸಭಾ ಚುನಾವಣೆಗೆ ಮಾರ್ಚ್ 10 ರಂದು ಅಧಿಸೂಚನೆ ಹೊರಡಿಸಿ, ಮೇ 27ಕ್ಕೆ ಪ್ರಕ್ರಿಯೆ ಪೂರ್ಣಗೊಂಡಿತ್ತು.

ಐದು ದಿನ ತಡವಾಗಿ ದಿನಾಂಕ ಘೋಷಣೆ

ಆದರೆ ಈ ಬಾರಿ ಇಬ್ಬರು ಚುನಾವಣಾ ಆಯುಕ್ತರ ನೇಮಕಾತಿ ಹಿನ್ನೆಲೆಯಲ್ಲಿ ಐದು ದಿನ ತಡವಾಗಿ ಚುನಾವಣಾ ದಿನಾಂಕ ಘೋಷಣೆಯಾಗುತ್ತಿದೆ.

ಇಷ್ಟಾದರೂ ಪ್ರಕ್ರಿಯೆಯನ್ನು ಮೇ ಅಂತ್ಯಕ್ಕೆ ಮುಗಿಸಿ, ಹೊಸ ಸರ್ಕಾರದ ಅಸ್ತಿತ್ವಕ್ಕೆ ಅವಕಾಶ ಮಾಡಿಕೊಡಬೇಕಿದೆ.

ಕಳೆದ ಚುನಾವಣೆಯಲ್ಲಿ ರಾಷ್ಟ್ರಾದ್ಯಂತ ಏಳು ಹಂತಗಳಲ್ಲಿ ಚುನಾವಣೆ ನಡೆದಿತ್ತು. ಕರ್ನಾಟಕದ 28 ಕ್ಷೇತ್ರಗಳಿಗೆ ಎರಡು ಹಂತಗಳಲ್ಲಿ ಅಂದರೆ, ಏಪ್ರಿಲ್ 18 ಹಾಗೂ 23 ರಂದು ಮತದಾನ ನಡೆದಿತ್ತು.

ಫಲಿತಾಂಶಕ್ಕಾಗಿ ಒಂದು ತಿಂಗಳು ಕಾಯುವ ಸ್ಥಿತಿ


ರಾಜ್ಯದಲ್ಲಿ ಏಪ್ರಿಲ್ 23 ಕ್ಕೆ ಮತದಾನ ಮುಗಿದಿದ್ದರೂ ಫಲಿತಾಂಶಕ್ಕಾಗಿ ಅಭ್ಯರ್ಥಿಗಳು ಒಂದು ತಿಂಗಳು ಕಾಯುವ ಪರಿಸ್ಥಿತಿ ಒದಗಿತ್ತು.

ಕಳೆದ ಬಾರಿ ಮೇ 19 ರಂದು ಮತದಾನ ಅಂತ್ಯಗೊಂಡು, ಮೇ 23 ರಂದು ಆಯೋಗ ಮತ ಎಣಿಕೆ ನಡೆಸಿ ಫಲಿತಾಂಶ ಪ್ರಕಟಿಸಿತು.

ಬಿಜೆಪಿಗೆ ಶೇಕಡ 51.75 ರಷ್ಟು ಮತ

ಕರ್ನಾಟಕದ ಮಟ್ಟಿಗೆ 28 ಕ್ಷೇತ್ರಗಳ ಪೈಕಿ ಬಿಜೆಪಿ 27ರಲ್ಲಿ ಸ್ಪರ್ಧಿಸಿ 25 ಕ್ಷೇತ್ರಗಳನ್ನು ಬುಟ್ಟಿಗೆ ಹಾಕಿಕೊಂಡಿತ್ತು, ಒಟ್ಟಾರೆ ರಾಜ್ಯದ ಜನತೆ ಬಿಜೆಪಿಗೆ ಶೇಕಡ 51.75 ರಷ್ಟು ಮತ ಚಲಾಯಿಸಿದ್ದರು.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರನ್ನು ಬೆಂಬಲಿಸಿ, ಒಂದು ಸ್ಥಾನದ ಹೆಚ್ಚಿನ ಗೆಲುವು ಸಾಧಿಸಿತ್ತು, ನಂತರ ಅವರು ಬಿಜೆಪಿ ಸೇರ್ಪಡೆಯಾದರು.

ಅಂದು ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಕ್ಷೇತ್ರ ಹೊಂದಾಣಿಕೆ ಮಾಡಿಕೊಂಡು, ಇಬ್ಬರೂ ಕೇವಲ ತಲಾ ಒಂದೊಂದು ಕ್ಷೇತ್ರಗಳಲ್ಲಿ ಜಯ ಗಳಿಸಿದ್ದರು.

ಕಾಂಗ್ರೆಸ್‌ಗೆ ಶೇ.32.11, ಜೆಡಿಎಸ್‌ಗೆ ಶೇ. 9.74 ಮತ

ಅಂದು ಕಾಂಗ್ರೆಸ್ ಶೇಕಡ 32.11 ರಷ್ಟು, ಜೆಡಿಎಸ್‌ಗೆ ಶೇಕಡ 9.74 ರಷ್ಟು ಮತ ಗಳಿಸಿದ್ದವು.

2024 ರಲ್ಲಿ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಗೆ ಚಿತ್ರಣವೇ ಬದಲಾಗಿದ್ದು, ಈ ಬಾರಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ 25-3 ಕ್ಷೇತ್ರಗಳಲ್ಲಿ ಕಣಕ್ಕಿಳಿಯುತ್ತಿವೆ.

ಬಿಜೆಪಿ ಈಗಾಗಲೇ 20 ಕ್ಷೇತ್ರಗಳಿಗೆ, ಕಾಂಗ್ರೆಸ್ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಹೆಸರಿಸಿದ್ದರೆ, ಜೆಡಿಎಸ್ ಇನ್ನು ಅಭ್ಯರ್ಥಿಗಳನ್ನು ಪ್ರಕಟಿಸಬೇಕಿದೆ.

ಆದರೆ ಮೂರೂ ಪಕ್ಷಗಳು ಚುನಾವಣಾ ಸಿದ್ಧತೆ ಮಾಡಿಕೊಂಡು ಹೋರಾಟಕ್ಕೆ ಅಣಿಯಾಗಿವೆ.

ಅದರಲ್ಲೂ ಆಡಳಿತಾರೂಢ ಕಾಂಗ್ರೆಸ್, ಸರ್ಕಾರಿ ವೆಚ್ಚದಲ್ಲೇ ಗ್ಯಾರಂಟಿ ಯೋಜನೆಗಳ ಸಮಾವೇಶವನ್ನು ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ನಡೆಸುತ್ತಿರುವ ಜೊತೆಗೆ ಸುದ್ದಿ ಮಾಧ್ಯಮಗಳಿಗೆ ಸರ್ಕಾರದ ಜಾಹೀರಾತುಗಳ ಸುರಿಮಳೆಯೇ ಆಗುತ್ತಿದೆ.

ಈ ಬಾರಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಎನ್‌ಡಿಎ ಮೈತ್ರಿಕೂಟದ ನಡುವೆ ಜಿದ್ದಾಜಿದ್ದಿ ಹೋರಾಟ ನಡೆಯಲಿದೆ.

ಕಾಂಗ್ರೆಸ್ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದ್ದರೆ, ಮೈತ್ರಿಕೂಟ ಎಲ್ಲಾ 28 ಕ್ಷೇತ್ರಗಳ ಮೇಲೂ ಕಣ್ಣಿಟ್ಟಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
code of conduct apply the movement dates anouncedkarnataka political leaders are getting ready for the electionloka sabha election dates on 16th
0 FacebookTwitterPinterestEmail
admin

previous post
ದಿನ ಭವಿಷ್ಯ : ಶುಕ್ರವಾರ, 15 ಮಾರ್ಚ್ 2024
next post
ದಿನ ಭವಿಷ್ಯ : ಶನಿವಾರ, 16 ಮಾರ್ಚ್ 2024

You may also like

ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

June 12, 2026

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (487)
  • ಅಂಕಣ (109)
  • ಉದ್ಯೋಗ (333)
  • ದಿನ ಭವಿಷ್ಯ (110)
  • ರಾಜಕೀಯ (1,981)
  • ರಾಜ್ಯ (2,295)
  • ರಾಷ್ಟ್ರ (2,262)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

    June 12, 2026
  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026

KMS Special

  • ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

    June 12, 2026
  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

June 12, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ