Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಚುನಾವಣಾ ಬಾಂಡ್ ಹಗರಣ: ಸುಪ್ರೀಂಕೋರ್ಟ್‌ನ ಉನ್ನತಾಧಿಕಾರ ಸಮಿತಿ ತನಿಖೆಗೆ ಒತ್ತಾಯ

by admin March 16, 2024
written by admin March 16, 2024 0 comments 1 minutes read
0FacebookTwitterPinterestEmail
147

ಬಿಜೆಪಿ ಬ್ಯಾಂಕ್ ಖಾತೆಗಳ ಸ್ಥಗಿತಕ್ಕೆ ಆಗ್ರಹ

ಬೆಂಗಳೂರು:ಸುಪ್ರೀಂಕೋರ್ಟ್ ಉನ್ನತಾಧಿಕಾರ ಸಮಿತಿ ರಚಿಸಿ ಚುನಾವಣಾ ಬಾಂಡ್ ಹಗರಣದ ತನಿಖೆ ನಡೆಸಬೇಕು, ಅಲ್ಲಿಯವರೆಗೆ ಬಿಜೆಪಿಯ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಒತ್ತಾಯಿಸಿದ್ದಾರೆ.

ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ, ಜಗತ್ತಿನ ಅತ್ಯಂತ ದೊಡ್ಡ ಭ್ರಷ್ಟಾಚಾರ ಹಗರಣವಾಗಿ ಹೊರಹೊಮ್ಮುತ್ತಿರುವ ಚುನಾವಣಾ ಬಾಂಡ್ ಸುಲಿಗೆ ಬಗ್ಗೆ ಭಾರತೀಯ ಜನತಾ ಪಕ್ಷ ಏಕೆ ಮೌನವಾಗಿದೆ ಎಂದು ಪ್ರಶ್ನಿಸಿದ್ದಾರೆ.

ಬಾಂಡ್ ಹಗರಣಕ್ಕೆ ಉತ್ತರಿಸಿ

ಸ್ವಿಸ್ ಬ್ಯಾಂಕ್‌ನಲ್ಲಿರುವ ಕಪ್ಪು ಹಣ ತಂದು ಜನರಿಗೆ ಹಂಚುತ್ತೇವೆ, ನೋಟ್ ಬ್ಯಾನ್ ಮಾಡಿ ಕಪ್ಪುಹಣದ ಮೂಲೋತ್ಪಾಟನೆ ಮಾಡುತ್ತೇವೆ, ’ನಾ ಖಾವೂಂಗಾ.., ನಾ ಖಾನೆ ದೂಂಗಾ..,’ ದೇಶದ ಸಂಪತ್ತಿಗೆಲ್ಲ ನಾನೇ ಚೌಕಿದಾರ ಎಂದೆಲ್ಲ ಹೇಳಿಕೆ ನೀಡಿ, ಹತ್ತು ವರ್ಷಗಳಿಂದ ಅಧಿಕಾರದಲ್ಲಿರುವ ಮೋದಿ ಅವರೇ ಕನಿಷ್ಠ ಚುನಾವಣಾ ಬಾಂಡ್ ಹಗರಣದ ಬಗ್ಗೆಯಾದರೂ ಉತ್ತರಿಸಿ ಎಂದು ಒತ್ತಾಯಿಸಿದ್ದಾರೆ.

ಸುಪ್ರೀಂಕೋರ್ಟ್ ಆದೇಶದ ಹೊರತಾಗಿಯೂ ಭಾರತೀಯ ಸ್ಟೇಟ್ ಬ್ಯಾಂಕ್ ಸಂಪೂರ್ಣ ಮಾಹಿತಿ ನೀಡಲು ಏಕೆ ಹಿಂಜರಿಯುತ್ತಿದೆ, ಚುನಾವಣಾ ಬಾಂಡ್‌ಗಳ ಮಾರಾಟ ಮತ್ತು ಖರೀದಿ ವ್ಯವಹಾರ ಕಾನೂನುಬದ್ಧವಾಗಿ ನಡೆದಿದ್ದರೆ ಎಸ್‌ಬಿಐ ಏಕೆ ಮಾಹಿತಿ ಮುಚ್ಚಿಡಲು ಪ್ರಯತ್ನಿಸುತ್ತಿದೆ, ಎಸ್‌ಬಿಐ ಮೇಲೆ ಒತ್ತಡ ಹೇರುತ್ತಿರುವವರು ಯಾರು.

ಮಾಧ್ಯಮಗಳು ವಿಶ್ಲೇಷಿಸುತ್ತಿರುವ, ಚುನಾವಣಾ ಆಯೋಗ ಪ್ರಕಟಿಸಿರುವ ಮಾಹಿತಿ ಗಮನಿಸಿದರೆ ಕೇಂದ್ರ ಸರ್ಕಾರ ಉದ್ಯಮಿಗಳನ್ನು ಬ್ಲಾಕ್ ಮೇಲ್ ಮಾಡುತ್ತಿರುವಂತೆ ಕಾಣುತ್ತಿದೆ, ಉದ್ಯಮಿಗಳ ಮೇಲೆ ನಡೆದಿರುವ ಐಟಿ, ಇಡಿ, ಸಿಬಿಐ ದಾಳಿಗಳ ದಿನಾಂಕ ಮತ್ತು ಉದ್ಯಮಿಗಳು ಚುನಾವಣಾ ಬಾಂಡ್‌ಗಳ ಖರೀದಿ ದಿನಾಂಕಗಳನ್ನು ನೋಡಿದರೆ, ಇದೊಂದು ಪಕ್ಕಾ ಬ್ಲಾಕ್‌ಮೇಲ್ ಹಗರಣದಂತೆ ಕಾಣುತ್ತಿದೆ.

ಮೂಲವೇತನದ ಶೇ.27.5ರಷ್ಟು ಹೆಚ್ಚಳಕ್ಕೆ 7ನೇ ವೇತನ ಆಯೋಗ ಶಿಫಾರಸು
ತನಿಖಾ ಸಂಸ್ಥೆಗಳ ದುರುಪಯೋಗ ಆರೋಪ

ದೇಣಿಗೆ ವಸೂಲಿಗಾಗಿ ಕೇಂದ್ರ ಸರ್ಕಾರ ತನ್ನ ಅಧೀನದಲ್ಲಿರುವ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆಯೇ, ಚುನಾವಣಾ ಬಾಂಡ್ ಎನ್ನುವುದು ಬಿಜೆಪಿಯ ಕೈಯಲ್ಲಿರುವ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ.

ಚುನಾವಣಾ ಬಾಂಡ್ ಹಗರಣದಲ್ಲಿ ಮೂಲಭೂತ ಸೌಕರ್ಯ ನಿರ್ಮಾಣದ ಎಂಜನಿಯರಿಂಗ್ ಸಂಸ್ಥೆಗಳು ಮತ್ತು ಔಷಧಿ ಉತ್ಪಾದನಾ ಕಂಪೆನಿಗಳು ಭಾಗಿಯಾಗಿರುವ ಸಂಶಯ ಹುಟ್ಟುತ್ತದೆ, ಈ ಸಂಸ್ಥೆಗಳು ನಿರ್ಮಾಣ ಮಾಡಿರುವ ರಸ್ತೆ, ಸೇತುವೆ, ಕಟ್ಟಡಗಳು ಎಷ್ಟು ಸುಭದ್ರವಾಗಿವೆ, ಔಷಧಿಗಳು ಎಷ್ಟು ಸುರಕ್ಷಿತವಾಗಿವೆ.

ತೆರಿಗೆ ಹಣದ ದುರುಪಯೋಗ ನಡೆದಿದೆ, ಇದರಲ್ಲಿ ಕೇಂದ್ರ ಸರ್ಕಾರದ ಪಾತ್ರವಿದೆ ಎಂಬುದು ಜನತೆಯ ಸಂಶಯವಾಗಿದೆ, ಇದನ್ನು ಹೋಗಲಾಡಿಸಲು ಉನ್ನತಾಧಿಕಾರ ಸಮಿತಿ ತನಿಖೆ ನಡೆಯಬೇಕು, ಅಲ್ಲಿಯವರೆಗೆ ಬಿಜೆಪಿಯ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
conduct high power committee enquiryelection bondsiddaramaiah urged central govt.
0 FacebookTwitterPinterestEmail
admin

previous post
ಶೇ.27.5ರಷ್ಟು ರಾಜ್ಯ ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ಶಿಫಾರಸು
next post
ಕರ್ನಾಟಕದಲ್ಲಿ ಏಪ್ರಿಲ್ 26 – ಮೇ 7ರಂದು ಮತದಾನ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ