ಲೋಕಸಭೆ ಚುನಾಣೆಗೆ ಆಯೋಗದ ಸಿದ್ಧತೆ; ಮತದಾನ ಜಾಗೃತಿಗೆ ಕರೆ
ಬೆಂಗಳೂರು: ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಘೋಷಣೆಯ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಅನುಸರಿಸಬೇಕಾದ ವಿಷಯಗಳ ಕುರಿತು ಇಂದು ರಾಷ್ಟ್ರ ಹಾಗೂ ರಾಜ್ಯ ಮಟ್ಟದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯನ್ನ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ಸಭೆಯಲ್ಲಿ ಮುಖ್ಯವಾಗಿ ಪ್ರಚಾರ ಸೇರಿದಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಲವು ವಿಷಯಗಳನ್ನು ಪ್ರಸ್ತಾಪಿಸಿದರು. ಮುಖ್ಯವಾಗಿ ಮತಗಟ್ಟೆ ಮಟ್ಟದ ಪಕ್ಷದ ಏಜೆಂಟರುಗಳ ಮುಖಾಂತರ ಪ್ರಸ್ತುತ ನಡೆಯುತ್ತಿರುವ ಚುನಾವಣೆಯ ಮತದಾರರ ಪಟ್ಟಿಯಲ್ಲಿ ಸಾರ್ವಜನಿಕರು ತಮ್ಮ ಹೆಸರು ಇರುವುದನ್ನು ಪರಿಶೀಲಿಸುವಂತೆ ಜಾಗೃತಿ ಮೂಡಿಸಲು ಸಹಕರಿಸಬೇಕು ಎಂದು ಮುಖ್ಯ ಚುನಾವಣಾಧಿಕಾರಿ ರಾಜಕೀಯ ಪಕ್ಷಗಳಿಗೆ ಮನವಿ ಮಾಡಿದರು.
ಒತ್ತಡ ನಿವಾರಣೆಗೆ ಆದಿ ಮುದ್ರೆ ಸಹಕಾರಿ
ತಳಮಟ್ಟದಲ್ಲಿ ಮತದಾರರ ಮಾಹಿತಿಯನ್ನು ರಾಜಕೀಯ ಪಕ್ಷಗಳ ಪ್ರತಿನಿದಿಗಳು ಚೆನ್ನಾಗಿ ಅರಿತಿರುತ್ತಾರೆ. ತಮ್ಮ ತಮ್ಮ ವ್ಯಾಪ್ತಿಯಲ್ಲಿನ ಮತದಾರರ ಗುರುತಿನ ಚೀಟಿಗಳಲ್ಲಿ ಸಮಸ್ಯೆಗಳಿದ್ದಲ್ಲಿ, ವಿಳಾಸ ಬದಲಾದಲ್ಲಿ ಅಥವಾ ಹೊಸದಾಗಿ ಸೇರಿಸುವುದು ಸೇರಿದಂತೆ ಮತದಾರರಲ್ಲಿ ಜಾಗೃತಿ ಮೂಡಿಸಬೇಕು. ಸಮಸ್ಯೆಗಳನ್ನು ಬಗೆಹರಿಸಿಕೊಂಡಲ್ಲಿ ಚುನಾವಣಾ ಸಮಯದಲ್ಲಿ ಸಮಸ್ಯೆಗಳು ಉದ್ಭವಿಸುವುದಿಲ್ಲ. ಈ ಸಮಯವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ವೋಟರ್ ಹೆಲ್ಪ್ ಲೈನ್ ಆಪ್
ಪ್ರಸ್ತುತ ಚುನಾವಣೆಯಲ್ಲಿ ಆಯೋಗ ತಂತ್ರಜ್ಞಾನವನ್ನು ಬಳಸಿಕೊಂಡು ಚುನಾವಣೆಗೆ ಸಂಬಂಧಿಸಿದಂತೆ ಹಲವು ಆಪ್ ಗಳನ್ನು ಅಭಿವೃದ್ಧಿಪಡಿಸಿದ್ದು, ಅದರಲ್ಲೂ ಮುಖ್ಯವಾಗಿ ವೋಟರ್ ಹೆಲ್ಪ್ ಲೈನ್ ಆಪ್ ಮತದಾರರ ಸ್ನೇಹಿಯಾಗಿದೆ. ಮತದಾರರು ಕುಳಿತಲ್ಲಿಯೇ ತಮ್ಮ ಹೆಸರನ್ನು ಪರಿಶೀಲಿಸಬಹುದಾಗಿದ್ದು, ಹೊಸದಾಗಿ ಸೇರಿಸಬಹುದು ಮತ್ತು ವಿಳಾಸ ಬದಲಾಯಿಸಬಹುದಾಗಿದೆ. ಅದೇ ರೀತಿಯಲ್ಲಿ ಚುನಾವಣಾ ಅಕ್ರಮಗಳನ್ನು ತಡೆಯಲು ಸಿವಿಜಿಲ್ ಆಪ್ ಅತ್ಯಂತ ಪರಿಣಾಮಕಾರಿಯಾಗಿದ್ದು, ಸಾರ್ವಜನಿಕರು ತಮ್ಮ ಐಡೆಂಟಿಟಿಯನ್ನು ಬಿಟ್ಟುಕೊಡದೆ ಆಯೋಗಕ್ಕೆ ಸಾಕ್ಷಿ ಸಮೇತ ದೂರು ಸಲ್ಲಿಸಬಹುದು. ದಿವ್ಯಾಂಗರಿಗಾಗಿ ಸಕ್ಷಮ್ ಆಪ್ ಅಭಿವೃದ್ಧಿ ಪಡಿಸಲಾಗಿದ್ದು, ಅವರು ತಮಗೆ ಬೇಕಾದ ವಾಹನ ಅಥವಾ ಇತರೆ ಸೌಲಭ್ಯಗಳನ್ನು ಆಪ್ ಮೂಲಕ ಬುಕ್ ಮಾಡಬಹುದಾಗಿದೆ ಎಂದು ಅವರು ತಿಳಿಸಿದರು.
ಮತದಾರರ ಸಹಾಯವಾಣಿ 1950
ಚುನಾವಣೆ ಸಂಬಂಧಿತ ಯಾವುದೇ ಪ್ರಶ್ನೆಗಳಿಗಾಗಿ ಮತದಾರರ ಸಹಾಯವಾಣಿ 1950 ಗೆ ಉಚಿತವಾಗಿ ಕರೆ ಮಾಡುವ ಮೂಲಕ ಉತ್ತರ ಪಡೆದುಕೊಳ್ಳಬಹುದಾಗಿದೆ.
ಲೋಕಸಭೆ ಚುನಾವಣೆ ಧರ್ಮ ಯುದ್ಧ: ಡಾ. ಮಂಜುನಾಥ್
ಸುವಿಧಾ(Suvidha App)
ಸುವಿಧಾ ಅಭ್ಯರ್ಥಿಗಳ ಆಪ್ ಎಂಬುದು ಚುನಾವಣಾ ಅವಧಿಯಲ್ಲಿ ಅಭ್ಯರ್ಥಿಗಳಿಗೆ ನಾಮನಿರ್ದೇಶನ ಮತ್ತು ಅನುಮತಿ ಪ್ರಕ್ರಿಯೆಗೆ ಸಹಾಯ ಮಾಡಲು ಆಯೋಗ ಅಭಿವೃದ್ಧಿಪಡಿಸಿದ ಮೊಬೈಲ್ ಅಪ್ಲಿಕೇಶನ್ ಆಗಿದೆ. ಅಪ್ಲಿಕೇಶನ್ Android ವೇದಿಕೆಯಲ್ಲಿ ಲಭ್ಯವಿದೆ. ಸುವಿಧಾ ಅಭ್ಯರ್ಥಿ ಅಪ್ಲಿಕೇಶನ್ ಅನ್ನು ಬಳಸಲು, ಅಭ್ಯರ್ಥಿಗಳು ಖಾತೆಯನ್ನು ರಚಿಸಬೇಕು ಮತ್ತು ಅವರ ರುಜುವಾತುಗಳೊಂದಿಗೆ ಲಾಗ್ ಇನ್ ಮಾಡಬೇಕಾಗುತ್ತದೆ. ಒಮ್ಮೆ ಲಾಗಿನ್ ಆದ ನಂತರ, ಅಭ್ಯರ್ಥಿಗಳು ತಮ್ಮ ನಾಮನಿರ್ದೇಶನ ಮತ್ತು ಅನುಮತಿಯ ಸ್ಥಿತಿಯನ್ನು ವೀಕ್ಷಿಸಬಹುದು.
ಸುವಿಧಾ ಅಪ್ಲಿಕೇಶನ್ ಅಭ್ಯರ್ಥಿಗಳಿಗೆ ಹಲವಾರು ವೈಶಿಷ್ಟ್ಯಗಳೊಂದಿಗೆ ಒದಗಿಸುತ್ತದೆ, ಅವುಗಳೆಂದರೆ:
ಪ್ರಚಾರಕ್ಕಾಗಿ ಅಗತ್ಯವಿರುವ ಅನುಮತಿಗಳ ಪಟ್ಟಿಯನ್ನು ವೀಕ್ಷಿಸುವ, ಅವರ ಅನುಮತಿ ಅರ್ಜಿಯ ಸ್ಥಿತಿಯನ್ನು ಟ್ರ್ಯಾಕ್ ಮಾಡುವುದು. ಅನುಮತಿ ಫಾರ್ಮ್ ಅನ್ನು ಡೌನ್‌ಲೋಡ್ ಮಾಡುವ ಮತ್ತು ಅದನ್ನು ಆನ್‌ಲೈನ್‌ನಲ್ಲಿ ಸಲ್ಲಿಸುವ ಸಾಮರ್ಥ್ಯ ಹೊಂದಿದೆ. ಅಭ್ಯರ್ಥಿ ಸಲ್ಲಿಸಿದ ನಾಮಪತ್ರದ ಸ್ಥಿತಿಯನ್ನು ಟ್ರ್ಯಾಕ್ ಮಾಡಬಹುದು.
ಸುವಿಧಾ ಪ್ರಯೋಜನಗಳು
ಇದು ಅಭ್ಯರ್ಥಿಗಳಿಗೆ ಅವರ ಅಪ್ಲಿಕೇಶನ್‌ಗಳ ಸ್ಥಿತಿಯನ್ನು ಟ್ರ್ಯಾಕ್ ಮಾಡಲು ಒಂದೇ ವೇದಿಕೆಯನ್ನು ಒದಗಿಸುತ್ತದೆ. ಅಭ್ಯರ್ಥಿಗಳ ಸಮಯವನ್ನು ಉಳಿಸುತ್ತದೆ ಮತ್ತು ಸರಿಯಾದ ಮಾಹಿತಿಯನ್ನು ಒದಗಿಸುತ್ತದೆ. ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ.
ನಿಮ್ಮ ಅಭ್ಯರ್ಥಿಯನ್ನು ತಿಳಿದುಕೊಳ್ಳಿ(Know Your Candidate App)
“ನಿಮ್ಮ ಅಭ್ಯರ್ಥಿಯನ್ನು ತಿಳಿಯಿರಿ (KYC)” ಅಪ್ಲಿಕೇಶನ್ ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದ ಮೊಬೈಲ್ ಅಪ್ಲಿಕೇಶನ್ ಆಗಿದೆ, ಇದು ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಅಪರಾಧದ ಪೂರ್ವಾಪರಗಳ ಬಗ್ಗೆ ನಾಗರಿಕರಿಗೆ ತಿಳಿಯಲು ಸಹಾಯ ಮಾಡುತ್ತದೆ.
KYC ಅಪ್ಲಿಕೇಶನ್ ಯಾರಿಗೆ ಮತ ಹಾಕಬೇಕು ಎಂಬುದರ ಕುರಿತು ನಿರ್ಧಾರಗಳನ್ನು ತೆಗೆದುಕೊಳ್ಳಲು ನಾಗರಿಕರಿಗೆ ಉಪಯುಕ್ತ ಸಾಧನವಾಗಿದೆ. ಅಪರಾಧ ಚಟುವಟಿಕೆಯ ಇತಿಹಾಸ ಹೊಂದಿರುವ ಅಭ್ಯರ್ಥಿಗಳನ್ನು ಗುರುತಿಸಲು ಮತ್ತು ಅವರಿಗೆ ಮತ ಹಾಕುವುದನ್ನು ತಪ್ಪಿಸಲು ಮತದಾರರಿಗೆ ಇದು ಸಹಾಯ ಮಾಡುತ್ತದೆ. ಚುನಾವಣೆಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಉತ್ತೇಜಿಸಲು ಅಪ್ಲಿಕೇಶನ್ ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು.
ಕರ್ನಾಟಕ ಕಾಂಗ್ರೆಸ್ ಕುಟುಂಬದ ಎಟಿಎಂ ಪ್ರಧಾನಿ ಆರೋಪ
ಇದೇ ಸಂದರ್ಭದಲ್ಲಿ ಸಭೆಯಲ್ಲಿ ಭಾಗವಹಿಸಿದ್ದ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ತಮ್ಮಅಭಿಪ್ರಾಯ, ಸಲಹೆ, ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಅಪರ ಮುಖ್ಯ ಚುನಾವಣಾಧಿಕಾರಿಗಳಾದ ವೆಂಕಟೇಶ್ ಕುಮಾರ್ ಹಾಗೂ ಕೂರ್ಮಾ ರಾವ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.